< Ayuba 23 >

1 Sa’an nan Ayuba ya amsa,
ಆಗ ಯೋಬನು ಇಂತೆಂದನು,
2 “Ko a yau, ina kuka mai zafi; hannunsa yana da nauyi duk da nishin da nake yi.
“ನಾನು ನನ್ನ ನರಳಾಟವನ್ನು ಎಷ್ಟು ಬಿಗಿಹಿಡಿದರೂ; ಆ ನನ್ನ ಮುಲುಗುವಿಕೆಯು ದೇವದ್ರೋಹವೆಂದು ಈಗಲೂ ಎಣಿಸುತ್ತೀರಾ?
3 Da a ce na san inda zan same shi; da a ce zan iya zuwa wurin da yake zama!
ಆಹಾ, ಆತನ ದರ್ಶನವು ಎಲ್ಲಿ ಆದೀತು, ನನಗೆ ಗೊತ್ತಾಗಿದ್ದರೆ ಎಷ್ಟೋ ಸಂತೋಷ! ಆತನ ಸನ್ನಿಧಿಯನ್ನು ಸೇರೆನು.
4 Zan kai damuwata wurinsa in yi gardama da shi.
ನನ್ನ ಬಾಯಿಯನ್ನು ತರ್ಕಗಳಿಂದ ತುಂಬಿಸಿಕೊಂಡು ನನ್ನ ನ್ಯಾಯವನ್ನು ಆತನ ಮುಂದೆ ವಿವರಿಸುವೆನು.
5 Zan nemi in san abin da zai ce mini, in kuma auna abin da zai ce mini.
ಆತನ ಪ್ರತ್ಯುತ್ತರದ ಮಾತುಗಳನ್ನು ತಿಳಿದುಕೊಂಡು ಆತನು ನನಗೆ ಹೇಳುವುದನ್ನು ವಿವೇಚಿಸುವೆನು.
6 Zai yi gardama da ni da ikonsa mai girma? Babu, ba zai zarge ni da laifi ba.
ಆತನು ತನ್ನ ಮಹಾಶಕ್ತಿಯಿಂದ ನನ್ನ ಸಂಗಡ ವ್ಯಾಜ್ಯವಾಡುವನೋ? ಇಲ್ಲವೇ ಇಲ್ಲ; ನನ್ನ ವಿಜ್ಞಾಪನೆಯನ್ನು ಗಮನಿಸುವನು.
7 Mai adalci ne zai kawo ƙara a wurinsa, kuma zan samu kuɓuta daga wurin mai shari’an nan har abada.
ಅಲ್ಲಿ ಯಥಾರ್ಥಚಿತ್ತನು ಆತನೊಂದಿಗೆ ವಾದಿಸುವನು. ನನ್ನ ನ್ಯಾಯಾಧಿಪತಿಯಿಂದ ನನಗೆ ನಿತ್ಯವಾದ ಬಿಡುಗಡೆಯಾಗುವುದು.
8 “Amma in na je gabas, ba ya wurin; in na je yamma, ba zan same shi ba.
ಅಯ್ಯೋ, ನಾನು ಮುಂದೆ ಹೋದರೂ ಆತನು ಸಿಕ್ಕುವುದಿಲ್ಲ, ಹಿಂದೆ ಹೋದರೂ ಆತನನ್ನು ತಿಳಿಯಲಾರೆನು.
9 Sa’ad da yake aiki a arewa, ba ni ganinsa; sa’ad da ya juya zuwa kudu, ba na ganinsa.
ಎಡಗಡೆಯಲ್ಲಿ ಹುಡುಕಿದರೂ ನೋಡಲಾರೆನು, ಬಲಗಡೆಗೆ ತಿರುಗಿಕೊಂಡರೂ ಆತನು ಕಾಣಿಸುವುದಿಲ್ಲ.
10 Amma ya san hanyar da nake bi; sa’ad da ya gwada ni zan fito kamar zinariya.
೧೦ಆತನಾದರೋ ನನ್ನ ದಾರಿಯನ್ನು ಬಲ್ಲನು, ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು.
11 Ƙafafuna suna bin ƙafafunsa kurkusa; na bi hanyarsa ba tare da na juya ba.
೧೧ಆತನ ಹೆಜ್ಜೆಯ ಜಾಡಿನಲ್ಲೇ ಕಾಲಿಟ್ಟಿದ್ದೇನೆ, ಓರೆಯಾಗದೆ ಆತನ ದಾರಿಯನ್ನೇ ಹಿಡಿದಿದ್ದೇನೆ.
12 Ban fasa bin dokokin da ya bayar ba; na riƙe maganarsa da muhimmanci fiye da abincin yau da gobe.
೧೨ಆತನ ತುಟಿಗಳಿಂದ ಹೊರಟ ನಿಯಮಗಳಿಗೆ ನಾನು ಹಿಂದೆಗೆಯಲಿಲ್ಲ, ಆತನ ಬಾಯಿಂದ ಬಂದ ಮಾತುಗಳನ್ನು ಎದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.
13 “Amma ya tsaya shi kaɗai, kuma wa ya isa yă ja da shi? Yana yin abin da yake so.
೧೩ಆತನಂತು ಒಂದೇ ಮನಸ್ಸುಳ್ಳವನಾಗಿದ್ದಾನೆ, ತಿರುಗಿಸಬಲ್ಲವರು ಯಾರು? ತಾನು ಬಯಸಿದ್ದನ್ನೇ ಮಾಡುತ್ತಾನೆ.
14 Yana yi mini abin da ya shirya yă yi mini, kuma yana da sauran irinsu a ajiye.
೧೪ನನ್ನ ವಿಷಯದಲ್ಲಿ ನೇಮಕವಾದದ್ದನ್ನು ಪೂರೈಸುವವನಷ್ಟೆ, ಆತನಲ್ಲಿ ಇಂಥಾ ಸಂಕಲ್ಪಗಳು ಅನೇಕವಾಗಿವೆ.
15 Shi ya sa na tsorata a gabansa; sa’ad da na yi tunanin wannan duka, nakan ji tsoronsa.
೧೫ಆದಕಾರಣ ನಾನು ಆತನ ಸನ್ನಿಧಿಯಲ್ಲಿ ಗಾಬರಿಯಾಗಿದ್ದೇನೆ; ಇದನ್ನೆಲ್ಲಾ ಯೋಚಿಸಿಕೊಳ್ಳುವಾಗ ಆತನಿಗೆ ಹೆದರುತ್ತೇನೆ.
16 Allah ya sa zuciyata ta yi sanyi; Maɗaukaki ya tsorata ni.
೧೬ನನ್ನ ಹೃದಯವನ್ನು ಕುಂದಿಸಿದವನು ದೇವರೇ, ನನ್ನನ್ನು ಗಾಬರಿಪಡಿಸಿದವನು ಸರ್ವಶಕ್ತನಾದ ದೇವರೇ.
17 Duk da haka duhun bai sa in yi shiru ba, duhun da ya rufe mini fuska.
೧೭ನಾನು ಹಾಳಾದದ್ದಕ್ಕೆ ಈ ಅಂಧಕಾರವು ಕಾರಣವಲ್ಲ, ನನ್ನ ಮುಖವನ್ನು ಕವಿದಿರುವ ಕಾರ್ಗತ್ತಲು ಕಾರಣವಲ್ಲ.”

< Ayuba 23 >