< Yohanna 20 >
1 Da sassafe a ranar farko ta mako, tun da sauran duhu, Maryamu Magdalin ta tafi kabarin ta kuwa tarar an kawar da dutsen daga bakin kabarin.
೧ವಾರದ ಮೊದಲನೆಯ ದಿನದಲ್ಲಿ ಮಗ್ದಲದ ಮರಿಯಳು ಬೆಳಿಗ್ಗೆ ಇನ್ನೂ ಕತ್ತಲೆ ಇರುವಾಗಲೇ ಸಮಾಧಿಯ ಬಳಿಗೆ ಬಂದು ಸಮಾಧಿಯ ಕಲ್ಲು ಅಲ್ಲಿಂದ ಉರುಳಿ ಹೋಗಿರುವುದನ್ನು ಕಂಡಳು.
2 Sai ta zo da gudu wajen Siman Bitrus da ɗayan almajirin, wanda Yesu yake ƙauna, ta ce, “Sun ɗauke Ubangiji daga kabarin, ba mu kuma san inda suka sa shi ba!”
೨ಆಗ ಆಕೆಯು ಸೀಮೋನ್ ಪೇತ್ರನ ಬಳಿಗೂ ಮತ್ತು ಯೇಸುವಿಗೆ ಪ್ರಿಯನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ, “ಕರ್ತನನ್ನು ಅವರು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲವೆಂದು” ಹೇಳಿದಳು
3 Sai Bitrus da almajirin nan suka nufi kabarin.
೩ಆಗ ಪೇತ್ರನೂ ಮತ್ತು ಇನ್ನೊಬ್ಬ ಶಿಷ್ಯನೂ ಹೊರಟು ಸಮಾಧಿಯ ಕಡೆಗೆ ಹೋದರು.
4 Dukansu biyu suna gudu, amma ɗayan almajirin ya tsere wa Bitrus ya kuma fara kai kabarin.
೪ಅವರಿಬ್ಬರೂ ಜೊತೆಯಾಗಿ ಓಡಿದರು. ಆ ಇನ್ನೊಬ್ಬ ಶಿಷ್ಯನು ಪೇತ್ರನಿಗಿಂತ ವೇಗವಾಗಿ ಓಡಿ ಮೊದಲೇ ಸಮಾಧಿಗೆ ಬಂದನು.
5 Ya sunkuya ya duba ciki ya ga ƙyallayen lilin ne kwance a can amma bai shiga ba.
೫ಅವನು ಬಗ್ಗಿ ನೋಡಿದಾಗ ನಾರುಬಟ್ಟೆಗಳು ಬಿದ್ದಿರುವುದನ್ನು ಕಂಡನು. ಆದರೂ ಅವನು ಒಳಗೆ ಹೋಗಲಿಲ್ಲ.
6 Sa’an nan Siman Bitrus, wanda yake bayansa, ya iso ya kuwa wuce cikin kabarin. Ya ga ƙyallayen lilin kwance a can,
೬ಸೀಮೋನ್ ಪೇತ್ರನು ಅವನ ಹಿಂದೆ ಬಂದು ಸಮಾಧಿಯೊಳಕ್ಕೆ ಹೋಗಿ, ಆ ನಾರುಬಟ್ಟೆಗಳು ಬಿದ್ದಿರುವುದನ್ನೂ
7 haka ma zanen binnewar da aka naɗe kan Yesu da shi. Zanen a naɗe yake shi kaɗai, a keɓe da lilin ɗin.
೭ಆತನ ತಲೆಯ ಮೇಲಿದ್ದ ಕೈವಸ್ತ್ರವು, ಆ ನಾರು ಬಟ್ಟೆಗಳೊಂದಿಗೆ ಇರದೇ, ಸುತ್ತಿ ಒಂದು ಕಡೆಯಲ್ಲಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ನೋಡಿದನು.
8 A ƙarshe sai almajirin nan, wanda ya kai kabarin da farko, shi ma ya shiga. Ya gani ya kuma gaskata.
೮ಆಗ ಸಮಾಧಿಯ ಬಳಿಗೆ ಮೊದಲು ಬಂದಿದ್ದ ಆ ಮತ್ತೊಬ್ಬ ಶಿಷ್ಯನು ಸಹ ಒಳಗೆ ಹೋಗಿ ಬಗ್ಗಿ ನೋಡಿ ನಂಬಿದನು.
9 (Har yanzu ba su fahimci Nassin nan da ya ce lalle ne Yesu yă tashi daga matattu ba.)
೯ಆತನು ಸತ್ತ ಮೇಲೆ ಜೀವದಿಂದೆದ್ದು ಬರಬೇಕೆಂಬುದಾಗಿ ಧರ್ಮಶಾಸ್ತ್ರದಲ್ಲಿ ಬರೆದಿರುವ ಮಾತು ಅವರಿಗೆ ಇನ್ನೂ ತಿಳಿದಿರಲಿಲ್ಲ.
10 Sai almajiran suka koma zuwa inda suke zama.
೧೦ತರುವಾಯ ಆ ಶಿಷ್ಯರು ಪುನಃ ತಮ್ಮ ಮನೆಗೆ ಹೋದರು.
11 Maryamu kuwa ta tsaya a bakin kabarin daga waje tana kuka. Da tana cikin kuka, sai ta sunkuya ta leƙa cikin kabarin,
೧೧ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು. ಹೀಗೆ ಆಕೆ ಅಳುತ್ತಿರುವಾಗ ಸಮಾಧಿಯೊಳಗೆ ಬಗ್ಗಿ ನೋಡಲು,
12 sai ta ga waɗansu mala’iku biyu saye da fararen tufafi, zaune a inda dā gawar Yesu take, ɗaya wajen kai ɗayan kuma wajen ƙafafu.
೧೨ಯೇಸುವಿನ ದೇಹವು ಇಟ್ಟಿದ್ದ ಸ್ಥಳದಲ್ಲಿ ಬಿಳಿವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೇವದೂತರನ್ನು ಕಂಡಳು, ಅವರಲ್ಲಿ ಒಬ್ಬನು ಯೇಸುವಿನ ತಲೆಯ ಕಡೆಯಲ್ಲಿ ಮತ್ತೊಬ್ಬನು ಆತನು ಪಾದಗಳಿದ್ದ ಕಡೆಯಲ್ಲಿ ಕುಳಿತಿದ್ದರು.
13 Suka tambaye ta cewa, “Mace, don me kike kuka?” Ta ce, “Sun ɗauke Ubangijina, ban kuma san inda suka ajiye shi ba.”
೧೩ಅವರು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತಿರುವೆ?” ಎಂದು ಕೇಳಲು, ಆಕೆಯು, “ನನ್ನ ಕರ್ತನನ್ನು ಅವರು ತೆಗೆದುಕೊಂಡು ಹೋಗಿದ್ದಾರೆ. ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ” ಎಂದಳು.
14 Da ta faɗin haka, sai ta juya ta ga Yesu tsaye, sai dai ba tă gane cewa Yesu ne ba.
೧೪ಆಕೆಯು ಹೀಗೆ ಹೇಳಿ ಹಿಂದಕ್ಕೆ ತಿರುಗಿದಾಗ ಯೇಸು ನಿಂತಿರುವುದನ್ನು ಕಂಡಳು, ಆದರೆ ಆತನು ಯೇಸುವೇ ಎಂದು ಆಕೆಗೆ ತಿಳಿಯಲಿಲ್ಲ.
15 Sai ya ce, “Mace, don me kike kuka? Wa kike nema?” Ta yi tsammani shi ne mai aikin lambun, sai ta ce, “Ranka yă daɗe, in kai ne ka ɗauke shi, gaya mini inda ka ajiye shi, in je in ɗauke shi.”
೧೫ಯೇಸು ಆಕೆಗೆ, “ಅಮ್ಮಾ, ನೀನು ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ?” ಎಂದು ಕೇಳಲು, ಆಕೆ ಆತನನ್ನು ತೋಟಗಾರನೆಂದು ನೆನಸಿ ಆತನಿಗೆ, “ಅಯ್ಯಾ, ನೀನು ಆತನನ್ನು ತೆಗೆದುಕೊಂಡು ಹೋಗಿದ್ದರೆ ಎಲ್ಲಿ ಇಟ್ಟಿದ್ದೀ ಎಂದು ನನಗೆ ಹೇಳು, ನಾನು ಆತನನ್ನು ತೆಗೆದುಕೊಂಡು ಹೋಗುತ್ತೇನೆ” ಎಂದು ಹೇಳಿದಳು.
16 Yesu ya ce mata, “Maryamu.” Sai ta juya wajensa ta ɗaga murya ta ce da Arameyanci, “Rabboni!” (Wanda yake nufin “Malam”).
೧೬ಯೇಸು ಆಕೆಗೆ, “ಮರಿಯಳೇ,” ಎಂದು ಹೇಳಲು, ಆಕೆಯು ಅವನ ಕಡೆಗೆ ತಿರುಗಿ ಇಬ್ರಿಯ ಭಾಷೆಯಲ್ಲಿ ಆತನಿಗೆ, “ರಬ್ಬೂನಿ” ಎಂದಳು. ಹಾಗೆಂದರೆ ಗುರುವೇ ಎಂದರ್ಥ.
17 Yesu ya ce, “Kada ki riƙe ni, gama ban riga na koma wajen Uba tukuna ba. A maimako, ki tafi wajen’yan’uwana ki gaya musu, ‘Ina komawa wajen Ubana da Ubanku, wajen Allahna da kuma Allahnku.’”
೧೭ಯೇಸು ಆಕೆಗೆ, “ನನ್ನನ್ನು ಮುಟ್ಟಬೇಡ, ಏಕೆಂದರೆ ನಾನು ಇನ್ನೂ ತಂದೆಯ ಬಳಿಗೆ ಏರಿಹೋದವನಲ್ಲ. ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವರಿಗೆ, ನನ್ನ ತಂದೆಯೂ, ನಿಮ್ಮ ತಂದೆಯೂ, ನನ್ನ ದೇವರೂ, ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ತಿಳಿಸು” ಎಂದನು.
18 Sai Maryamu Magdalin ta wajen almajiran da labari cewa, “Na ga Ubangiji!” Ta kuma gaya musu cewa ya faɗa mata waɗannan abubuwa.
೧೮ಮಗ್ದಲದ ಮರಿಯಳು ಹೋಗಿ “ನಾನು ಕರ್ತನನ್ನು ನೋಡಿದ್ದೇನೆ,” ಆತನು ಇಂಥಿಂಥದನ್ನು ನನಗೆ ಹೇಳಿದನು ಎಂದು ಶಿಷ್ಯರಿಗೆ ತಿಳಿಸಿದಳು.
19 Da Yamman ranar farko ta mako, sa’ad da almajiran suna tare, ƙofofi kuma suna a kulle saboda tsoron Yahudawa, sai ga Yesu ya zo ya tsaya a tsakiyarsu ya ce, “Salama tă kasance tare da ku!”
೧೯ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, “ನಿಮಗೆಸಮಾಧಾನವಾಗಲಿ” ಎಂದನು.
20 Bayan ya faɗa haka, sai ya nuna musu hannuwansa da gefensa. Sai almajiran suka yi farin ciki ƙwarai da suka ga Ubangiji.
೨೦ಇದನ್ನು ಹೇಳಿದ ಮೇಲೆ ಅವರಿಗೆ ತನ್ನ ಕೈಗಳನ್ನೂ ಪಕ್ಕೆಯನ್ನೂ ತೋರಿಸಿದನು. ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು.
21 Sai Yesu ya sāke ce musu, “Salama tă kasance tare da ku! Kamar yadda Uba ya aiko ni, haka ni ma ina aikan ku.”
೨೧ಯೇಸು ಅವರಿಗೆ, “ನಿಮಗೆ ಸಮಾಧಾನವಾಗಲಿ” ಎಂದು ಪುನಃ ಹೇಳಿ, “ತಂದೆಯು ನನ್ನನ್ನು ಕಳುಹಿಸಿಕೊಟ್ಟ ಹಾಗೆಯೇ ನಾನೂ ನಿಮ್ಮನ್ನು ಕಳುಹಿಸಿಕೊಡುತ್ತೇನೆ” ಎಂದನು.
22 Da wannan sai ya hura musu numfashinsa ya ce, “Ku karɓi Ruhu Mai Tsarki.
೨೨ಆತನು ಇದನ್ನು ಹೇಳಿ ಅವರ ಮೇಲೆ ಉಸಿರೂದಿ ಅವರಿಗೆ, “ನೀವು ಪವಿತ್ರಾತ್ಮನನ್ನು ಪಡೆದುಕೊಳ್ಳಿರಿ.
23 Duk wanda kuka gafarta wa zunubansa, an gafarta masa ke nan. Duk wanda ba ku gafarta wa ba kuwa, ba a gafarta masa ba ke nan.”
೨೩ನೀವು ಯಾರ ಪಾಪಗಳನ್ನು ಕ್ಷಮಿಸಿಬಿಡುತ್ತೀರೋ, ಅವರಿಗೆ ಅವುಗಳು ಕ್ಷಮಾಪಣೆಯಾಗುತ್ತದೆ; ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಅವುಗಳು ಉಳಿಯುತ್ತವೆ” ಎಂದು ಹೇಳಿದನು.
24 Toma kuwa (wanda ake kira Didaimus), ɗaya daga cikin Sha Biyun, ba ya tare da almajiran sa’ad da Yesu ya zo.
೨೪ಯೇಸು ಬಂದಾಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ದಿದುಮನೆನಿಸಿಕೊಳ್ಳುವ ತೋಮನು ಅವರ ಜೊತೆ ಇರಲಿಲ್ಲ.
25 Saboda haka sauran almajiran suka ce masa, “Ai, mun ga Ubangiji!” Amma ya ce musu, “Ina, ai, sai na ga ramin ƙusa a hannuwansa na sa yatsata a inda ƙusoshi suka kasance, na kuma sa hannuna a gefensa, in ba haka ba, ba zan gaskata ba.”
೨೫ಉಳಿದ ಶಿಷ್ಯರು ಅವನಿಗೆ, “ನಾವು ಕರ್ತನನ್ನು ನೋಡಿದ್ದೇವೆ” ಎಂದು ಹೇಳಿದರು. ಅದಕ್ಕೆ ಅವನು, “ನಾನು ಆತನ ಕೈಗಳಲ್ಲಿ ಮೊಳೆಗಳಿಂದಾದ ಗಾಯವನ್ನು ನೋಡಿ, ಆ ಮೊಳೆಯ ಗಾಯದಲ್ಲಿ ನನ್ನ ಬೆರಳನ್ನು ಇಟ್ಟು ಆತನ ಪಕ್ಕೆಯಲ್ಲಿ ನನ್ನ ಕೈಯನ್ನು ಹಾಕದ ಹೊರತು ನಿಮ್ಮ ಮಾತನ್ನು ನಂಬುವುದೇ ಇಲ್ಲ” ಎಂದನು.
26 Bayan mako guda, har wa yau almajiransa suna cikin gidan, Toma kuwa yana tare da su. Ko da yake ƙofofi suna kulle, sai ga Yesu ya zo ya tsaya a tsakiyarsu ya ce, “Salama tă kasance tare da ku!”
೨೬ಎಂಟು ದಿನಗಳಾದ ಮೇಲೆ ಆತನ ಶಿಷ್ಯರು ಪುನಃ ಒಳಗಿದ್ದಾಗ ತೋಮನೂ ಅವರ ಜೊತೆ ಇದ್ದನು. ಬಾಗಿಲುಗಳು ಮುಚ್ಚಿದ್ದವು ಆಗ ಯೇಸು ಬಂದು ನಡುವೆ ನಿಂತು ನಿಮಗೆ “ಸಮಾಧಾನವಾಗಲಿ ಎಂದನು”
27 Sa’an nan ya ce wa Toma, “Sa yatsarka nan; dubi hannuwana. Miƙa hannunka ka sa a gefena. Ka daina shakka ka gaskata.”
೨೭ಆ ಮೇಲೆ ತೋಮನಿಗೆ, “ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಅಪನಂಬಿಕೆಯಳ್ಳವನಾಗಿರಬೇಡ, ನಂಬುವವನಾಗು” ಎಂದು ಹೇಳಿದನು.
28 Toma ya ce masa, “Ya Ubangijina da Allahna!”
೨೮ತೋಮನು ಆತನಿಗೆ, “ನನ್ನ ಕರ್ತನೇ, ನನ್ನ ದೇವರೇ” ಎಂದು ಹೇಳಿದನು.
29 Sai Yesu ya ce masa, “Wato ka gaskata saboda ka gan ni ne, masu albarka ne waɗanda ba su gan ni ba, amma suka gaskata.”
೨೯ಯೇಸು ಆತನಿಗೆ, “ನೀನು ನನ್ನನ್ನು ನೋಡಿದ್ದರಿಂದ ನಂಬಿದ್ದೀ, ನೋಡದೆ ನಂಬಿದವರು ಧನ್ಯರು” ಎಂದು ಹೇಳಿದನು.
30 Yesu ya yi waɗansu abubuwan banmamaki da yawa a gaban almajiransa da ba a rubuta a wannan littafi ba.
೩೦ಯೇಸು ಇನ್ನು ಬೇರೆ ಎಷ್ಟೋ ಸೂಚಕಕಾರ್ಯಗಳನ್ನು ತನ್ನ ಶಿಷ್ಯರ ಮುಂದೆ ಮಾಡಿದನು. ಅವುಗಳನ್ನೆಲ್ಲಾ ಈ ಗ್ರಂಥದಲ್ಲಿ ಬರೆದಿರುವುದಿಲ್ಲಾ.
31 An dai rubuta waɗannan ne don ku gaskata Yesu ne Kiristi, Ɗan Allah kuma ta wurin gaskatawa ku sami rai a cikin sunansa.
೩೧ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.