< Yoshuwa 4 >
1 Da al’umma gaba ɗaya suka ƙetare Urdun, Ubangiji ya ce wa Yoshuwa,
೧ಜನರೆಲ್ಲರು ಯೊರ್ದನಿನ ಆಚೆಗೆ ದಾಟಿದ ಮೇಲೆ ಯೆಹೋವನು ಯೆಹೋಶುವನಿಗೆ
2 “Ka zaɓi mutum goma sha biyu daga cikin mutane, ɗaya daga kowace kabila,
೨“ನೀನು ಜನರೊಳಗಿಂದ ಕುಲಕ್ಕೆ ಒಬ್ಬನಂತೆ ಹನ್ನೆರಡು ಮಂದಿಯನ್ನು ಆರಿಸಿಕೊಂಡು
3 ka ce musu kowa yă ɗauki dutse ɗaya daga tsakiyar Urdun daidai inda firistoci suka tsaya, ku kai su, ku ajiye a inda za ku sauka yau.”
೩ಯೊರ್ದನಿನ ಮಧ್ಯದಲ್ಲಿ ಯಾಜಕರು ನಿಂತಿದ್ದ ಸ್ಥಳದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ ಅವುಗಳನ್ನು ನಿಮ್ಮ ಸಂಗಡ ಈಚೇ ದಡಕ್ಕೆ ತಂದು ನೀವು ಈ ರಾತ್ರಿ ತಂಗುವ ಸ್ಥಳದಲ್ಲಿ ನಿಲ್ಲಿಸಿರಿ” ಎಂದು ಆಜ್ಞಾಪಿಸು ಎಂದನು.
4 Sai Yoshuwa ya kira mutum goma sha biyu da ya zaɓa daga cikin Isra’ilawa, ɗaya daga kowace kabila
೪ಆಗ ಯೆಹೋಶುವನು ತಾನು ಇಸ್ರಾಯೇಲ್ಯರೊಳಗಿಂದ ಕುಲಕ್ಕೆ ಒಬ್ಬನಂತೆ ಆರಿಸಿಕೊಂಡ ಹನ್ನೆರಡು ಮಂದಿಯನ್ನು ಕರೆದು ಅವರಿಗೆ
5 ya ce musu, “Ku je tsakiyar Urdun inda akwatin alkawari na Ubangiji Allahnku yake. Kowannenku yă ɗauki dutse ɗaya a kafaɗarsa, bisa ga yawan kabilan Isra’ila,
೫“ನೀವು ನಿಮ್ಮ ದೇವರಾದ ಯೆಹೋವನ ಮಂಜೂಷದ ಮುಂದಾಗಿ ಯೊರ್ದನಿನ ಮಧ್ಯಕ್ಕೆ ಹೋಗಿ ಇಸ್ರಾಯೇಲರ ಕುಲಗಳ ಸಂಖ್ಯೆಗೆ ಸರಿಯಾಗುವಂತೆ ಪ್ರತಿಯೊಬ್ಬನು ಒಂದೊಂದು ಕಲ್ಲನ್ನು ಹೆಗಲ ಮೇಲೆ ಹೊತ್ತುಕೊಂಡು ಬನ್ನಿರಿ.
6 yă zama muku alama. Nan gaba in yaranku suka tambaye ku suka ce, ‘Mece ce ma’anar kasancewar duwatsun nan a nan?’
೬ಅವು ನಿಮ್ಮ ಮಧ್ಯದಲ್ಲಿ ಗುರುತಾಗಿರುವವು. ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ‘ಈ ಕಲ್ಲುಗಳು ಏನು ಸೂಚಿಸುತ್ತವೆ?’ ಎಂದು ನಿಮ್ಮನ್ನು ಕೇಳುವಾಗ
7 Sai ku ce musu, ruwan Urdun ya yanke a gaban akwatin alkawari na Ubangiji, a lokacin da akwatin alkawarin ya ƙetare Urdun. Waɗannan duwatsu za su zama abin tuni ga Isra’ilawa har abada.”
೭ನೀವು ಅವರಿಗೆ ಯೆಹೋವನ ಒಡಂಬಡಿಕೆಯ ಮಂಜೂಷವು ಯೊರ್ದನ್ ನದಿ ದಾಟುವಾಗ ಅದರ ಮುಂದೆ ಯೊರ್ದನಿನ ನೀರು ನಿಂತುಹೋಯಿತೆಂದು ಹೇಳಿರಿ. ಯೊರ್ದನಿನ ನೀರು ನಿಂತು ಹೋಯಿತೆಂಬುದಕ್ಕೆ ಈ ಕಲ್ಲುಗಳು ಇಸ್ರಾಯೇಲ್ಯರಿಗೆ ಸದಾಕಾಲಕ್ಕೂ ಸಾಕ್ಷಿಗಳಾಗಿರುವವು” ಅಂದನು.
8 Isra’ilawa kuwa suka yi yadda Yoshuwa ya umarce su. Suka ɗauki duwatsu guda goma sha biyu bisa ga yawan kabilan Isra’ila, yadda Ubangiji ya gaya wa Yoshuwa; suka tafi da su masauƙinsu, a can suka ajiye su.
೮ಇಸ್ರಾಯೇಲ್ಯರು ಯೆಹೋಶುವನು ಆಜ್ಞಾಪಿಸಿದಂತೆಯೇ ಮಾಡಿದರು. ಯೆಹೋವನು ಯೆಹೋಶುವನಿಗೆ ಹೇಳಿದ ಪ್ರಕಾರ ಅವರು ಇಸ್ರಾಯೇಲ್ಯರ ಕುಲಸಂಖ್ಯೆಗೆ ಅನುಸಾರವಾಗಿ ಯೊರ್ದನಿನ ಮಧ್ಯದಿಂದ ಹನ್ನೆರಡು ಕಲ್ಲುಗಳನ್ನು ಎತ್ತಿ ತಾವು ಇಳುಕೊಳ್ಳುವ ಸ್ಥಳಕ್ಕೆ ತಂದು ಅಲ್ಲಿ ಅವುಗಳನ್ನು ನಿಲ್ಲಿಸಿದರು.
9 Yoshuwa ya ɗora duwatsu goma sha biyun a tsakiyar Urdun daidai inda firistoci waɗanda suke ɗauke da akwatin alkawarin Ubangiji suka tsaya. Suna nan a can har wa yau.
೯ಇದಲ್ಲದೆ ಯೆಹೋಶುವನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು, ಯೊರ್ದನಿನ ಮಧ್ಯದಲ್ಲಿ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ನಿಂತಿದ್ದ ಸ್ಥಳದಲ್ಲಿ ನಿಲ್ಲಿಸಿದನು. ಅವು ಇಂದಿನವರೆಗೂ ಅಲ್ಲಿಯೇ ಇವೆ.
10 Firistocin da suke ɗauke da akwatin alkawari suka tsaya a tsakiyar Urdun, har aka gama dukan abin da Ubangiji ya umarci Yoshuwa yă gaya wa mutane, kamar yadda Musa ya ce Yoshuwa yă yi. Mutanen suka wuce da sauri.
೧೦ಮೋಶೆಯು ಆಜ್ಞಾಪಿಸಿದಂತೆ ಯೆಹೋಶುವನು ಜನರಿಗೆ ತಿಳಿಸಿದ ಯೆಹೋವನ ಅಪ್ಪಣೆಗಳನ್ನೆಲ್ಲಾ ಅವರು ನೆರವೇರಿಸುವ ತನಕ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲೇ ನಿಂತರು.
11 Sai da dukan mutanen suka wuce sa’an nan akwatin alkawari da firistoci suka sha gaba.
೧೧ಜನರು ಬೇಗನೆ ಹೊಳೆ ದಾಟಿದರು. ಅವರೆಲ್ಲರು ಆಚೆ ದಡ ಸೇರಿದ ಮೇಲೆ ಯಾಜಕರು ಯೆಹೋವನ ಮಂಜೂಷ ಸಹಿತವಾಗಿ ಹೊಳೆ ದಾಟಿ ಜನರ ಎದುರಿನಲ್ಲಿ ಹೋದರು.
12 Mutanen Ruben, Gad da rabin kabilar Manasse suka ƙetare da shirin yaƙi, suka wuce gaban Isra’ila kamar yadda Musa ya ce su yi.
೧೨ರೂಬೇನ್ಯರೂ, ಗಾದ್ಯರೂ, ಮನಸ್ಸೆ ಕುಲದ ಅರ್ಧ ಗೋತ್ರದವರೂ ಮೋಶೆಯು ತಮಗೆ ಆಜ್ಞಾಪಿಸಿದಂತೆ ಯುದ್ಧಸನ್ನದ್ದರಾಗಿ ಇಸ್ರಾಯೇಲ್ಯರ ಮುಂದಾಗಿ ಹೊರಟು ಹೊಳೆದಾಟಿದರು.
13 Wajen mutum dubu arba’in shirye domin yaƙi, suka wuce a gaban Ubangiji zuwa filayen Yeriko.
೧೩ಸುಮಾರು ನಲವತ್ತು ಸಾವಿರ ಭಟರು ಯುದ್ಧಮಾಡುವುದಕ್ಕಾಗಿ ಯೆಹೋವನ ಸಮ್ಮುಖದಲ್ಲಿ ಯೆರಿಕೋವಿನ ಬೈಲಿಗೆ ಬಂದರು:
14 A ranan nan Ubangiji ya ɗaukaka Yoshuwa a gaban Isra’ilawa; suka kuma ba shi girma dukan kwanakin ransa, kamar yadda suka girmama Musa.
೧೪ಆ ದಿನದಲ್ಲಿ ಯೆಹೋವನು ಯೆಹೋಶುವನನ್ನು ಎಲ್ಲಾ ಇಸ್ರಾಯೇಲ್ಯರ ಮುಂದೆ ಘನಪಡಿಸಿದನು. ಅವರು ಮೋಶೆಗೆ ಹೇಗೆ ನಡೆದುಕೊಂಡರೋ ಹಾಗೆಯೇ ಯೆಹೋಶುವನು ಭಯ ಮತ್ತು ಗೌರವದಿಂದ ನಡೆದುಕೊಂಡರು.
15 Sa’an nan Ubangiji ya ce wa Yoshuwa,
೧೫ಯೆಹೋವನು ಯೆಹೋಶುವನ ಸಂಗಡ ಮಾತನಾಡಿ “ಆಜ್ಞಾಶಾಸನಗಳ ಮಂಜೂಷವನ್ನು ಹೊತ್ತ ಯಾಜಕರಿಗೆ ಯೊರ್ದನಿನ ಹೊಳೆಯಿಂದ ಮೇಲೆ ಬರಬೇಕೆಂದು ಆಜ್ಞಾಪಿಸು” ಎಂದನು.
16 “Ka umarci firistocin da suke ɗauke da akwatin Shaida su fito daga cikin Urdun.”
೧೬
17 Sai Yoshuwa ya umarci firistoci ya ce, “Ku fito daga cikin Urdun.”
೧೭ಆಗ ಯೆಹೋಶುವನು ಆ ಯಾಜಕರಿಗೆ ಯೊರ್ದನ್ ನದಿಯಿಂದ ಹೊರಕ್ಕೆ ಬರಬೇಕೆಂದು ಆಜ್ಞಾಪಿಸಿದನು.
18 Firistocin kuwa suka fito daga kogin ɗauke da akwatin alkawarin Ubangiji. Nan da nan da ƙafafunsu suka taɓa busasshiyar ƙasa, sai ruwan Urdun ya gangaro ya cika kogin kamar yadda yake a dā.
೧೮ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನಿಂದ ಮೇಲೆ ಬಂದು ಒಣನೆಲದಲ್ಲಿ ತಮ್ಮ ಕಾಲುಗಳನ್ನಿಟ್ಟ ಕೂಡಲೇ ನೀರು ಮೊದಲಿನಂತೆ ಬಂದು, ಯೊರ್ದನ್ ನದಿಯು ದಡಮೀರಿ ಹರಿಯಿತು.
19 A rana ta goma ga wata na farko, mutane suka haura daga Urdun suka sauka a Gilgal a gabashin iyakar Yeriko.
೧೯ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೊರ್ದನನ್ನು ದಾಟಿ ಬಂದು ಯೆರಿಕೋವಿನ ಪೂರ್ವ ಗಡಿಯಲ್ಲಿರುವ ಗಿಲ್ಗಾಲಿನಲ್ಲಿ ಬಂದು ತಂಗಿದರು.
20 Sai Yoshuwa ya kafa duwatsu goma sha biyun nan da suka ɗauko daga Urdun.
೨೦ಯೆಹೋಶುವನು ಇಸ್ರಾಯೇಲರು ಯೊರ್ದನಿನಿಂದ ತೆಗೆದುಕೊಂಡು ಬಂದಿದ್ದ ಹನ್ನೆರಡು ಕಲ್ಲುಗಳನ್ನು ಗಿಲ್ಗಾಲಿನಲ್ಲೇ ನಿಲ್ಲಿಸಿದನು.
21 Ya ce wa Isra’ilawa, “Nan gaba in yaranku suka tambayi iyayensu suka ce, ‘Mece ce ma’anar waɗannan duwatsun?’
೨೧ಇಸ್ರಾಯೇಲ್ಯರಿಗೆ, “ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ಈ ಕಲ್ಲುಗಳನ್ನು ಏಕೆ ಹೀಗೆ ನಿಲ್ಲಿಸಿದ್ದಾರೆಂದು ನಿಮ್ಮನ್ನು ಕೇಳಿದರೆ ನೀವು ಅವರಿಗೆ
22 Ku ce musu, ‘Isra’ilawa sun ƙetare kogin Urdun a kan busasshiyar ƙasa.’
೨೨‘ಇಸ್ರಾಯೇಲ್ಯರು ಒಣನೆಲವಾಗಿದ್ದ ಈ ಯೊರ್ದನನ್ನು ದಾಟಿ ಬಂದ್ದದರ ಗುರುತು’ ಎಂದು ಹೇಳಿರಿ.
23 Gama Ubangiji Allahnku ya sa ruwan Urdun ya yanke a gabanku, har sai da kuka gama wucewa, kamar yadda ya yi a Jan Teku, a lokacin da ya busar da shi a gabanmu har sai da muka gama wucewa.
೨೩ನಿಮ್ಮ ದೇವರಾದ ಯೆಹೋವನು ನಮ್ಮ ಕಣ್ಣು ಮುಂದೆ ಕೆಂಪುಸಮುದ್ರವನ್ನು ಬತ್ತಿಸಿ, ನಮ್ಮನ್ನು ದಾಟಿಸಿದಂತೆ ಈಗ ನಿಮ್ಮ ಕಣ್ಣು ಮುಂದೆಯೇ ಈ ಯೊರ್ದನನ್ನು ಬತ್ತಿಸಿ, ನಿಮ್ಮನ್ನು ದಾಟಿಸಿದ್ದಾನೆ.
24 Ya yi wannan ne domin dukan mutanen duniya su san cewa Ubangiji mai iko ne, domin kuma ku zama masu tsoron Ubangiji Allahnku.”
೨೪ಇದರಿಂದ ಭೂನಿವಾಸಿಗಳೆಲ್ಲರೂ ಯೆಹೋವನ ಹಸ್ತವು ಪರಾಕ್ರಮವುಳ್ಳದ್ದೆಂದು ತಿಳಿದುಕೊಳ್ಳುವ ಹಾಗೆಯೂ ನಿಮ್ಮ ದೇವರಾದ ಯೆಹೋವನಿಗೆ ಯಾವಾಗಲೂ ಭಯಪಡುವವರಾಗಿರುವರು” ಎಂದನು.