< Firistoci 19 >
1 Ubangiji ya ce wa Musa,
೧ಯೆಹೋವನು ಮೋಶೆಯೊಂದಿಗೆ ಮಾತನಾಡಿ,
2 “Yi wa taron jama’ar Isra’ila gaba ɗaya magana, ka ce musu, ‘Ku zama masu tsarki, domin Ni, Ubangiji Allahnku, mai tsarki ne.
೨“ನೀನು ಇಸ್ರಾಯೇಲರ ಸಮೂಹದವರಿಗೆ ಹೀಗೆ ಆಜ್ಞಾಪಿಸಬೇಕು, ‘ನಿಮ್ಮ ದೇವರಾದ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ನೀವೂ ಪರಿಶುದ್ಧರಾಗಿರಬೇಕು.
3 “‘Dole kowannenku yă girmama mahaifiyarsa da mahaifinsa, dole kuma ku kiyaye Asabbacina. Ni ne Ubangiji Allahnku.
೩“‘ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.
4 “‘Kada ku juyo ga gumaka, ko ku yi wa kanku allolin da aka yi zubi da ƙarfe. Ni ne Ubangiji Allahnku.
೪“‘ಸುಳ್ಳುದೇವರುಗಳ ಕಡೆಗೆ ತಿರುಗಿಕೊಳ್ಳಬಾರದು; ದೇವರೆಂದು ಎರಕದ ವಿಗ್ರಹಗಳನ್ನು ಮಾಡಿಕೊಳ್ಳಬಾರದು. ನಾನು ನಿಮ್ಮ ದೇವರಾದ ಯೆಹೋವನು.
5 “‘Sa’ad da kuka miƙa hadaya ta salama ga Ubangiji, ku miƙa ta yadda za tă karɓu a madadinku.
೫“‘ಸಮಾಧಾನಯಜ್ಞಗಳನ್ನು ಯೆಹೋವನಿಗೆ ಸಮರ್ಪಿಸುವಾಗ ಆತನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಸಮರ್ಪಿಸಬೇಕು.
6 Za a ci ta a ranar da kuka miƙa ta, ko kuwa a kashegarin; duk abin da ya rage har kwana ta uku dole a ƙone shi.
೬ನೀವು ಮಾಡುವ ಯಜ್ಞದ ಮಾಂಸವನ್ನು ಆ ದಿನದಲ್ಲಿಯಾಗಲಿ ಇಲ್ಲವೇ ಮರುದಿನದಲ್ಲಿಯಾಗಲಿ ಊಟಮಾಡಬೇಕು. ಮೂರನೆಯ ದಿನದವರೆಗೆ ಏನಾದರೂ ಉಳಿದರೆ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
7 In aka ci ta a rana ta uku, marar tsabta ce, ba kuma za a karɓe ta ba.
೭ಮೂರನೆಯ ದಿನದ ತನಕ ಉಳಿದದ್ದು ಹೇಯವಾದುದರಿಂದ ಅದರಲ್ಲಿ ಏನಾದರೂ ತಿಂದರೆ ಆ ಯಜ್ಞವು ಯೆಹೋವನಿಗೆ ಅಂಗೀಕಾರವಾಗುವುದೇ ಇಲ್ಲ.
8 Duk wanda ya ci ta zai zama da laifi domin ya ƙazantar da abin da yake da tsarki ga Ubangiji, dole a raba mutumin nan da mutanensa.
೮ಅದರಲ್ಲಿ ಏನಾದರೂ ತಿಂದವನು ಯೆಹೋವನ ಪವಿತ್ರ ದ್ರವ್ಯವನ್ನು ಹೊಲೆಮಾಡಿದವನಾದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು; ಅವನನ್ನು ಕುಲದಿಂದ ಹೊರಗೆ ಹಾಕಬೇಕು.
9 “‘Sa’ad da kuka yi girbin amfanin gonarku, kada ku girbe har zuwa gefen gonar, ko ku yi kalan girbinku.
೯“‘ನೀವು ಪೈರುಗಳನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿ ಇರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಕೊಯ್ದಾಗ ಹಕ್ಕಲಾಯಬಾರದು.
10 Kada ku koma gonar inabinku kuna kala, ko ku tattara’ya’yan inabin da suka fāffāɗi. Ku bar su domin matalauta da kuma baƙi. Ni ne Ubangiji Allahnku.
೧೦ದ್ರಾಕ್ಷಿಯ ತೋಟಗಳಲ್ಲಿಯೂ ಹಕ್ಕಲಾಯಬಾರದು; ಉದುರಿದ ಹಣ್ಣುಗಳನ್ನು ಆರಿಸಿಕೊಳ್ಳದೆ ಬಡವರಿಗೂ ಮತ್ತು ಪರದೇಶಿಗಳಿಗೂ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾದ ಯೆಹೋವನು.
11 “‘Kada ku yi sata. “‘Kada ku yi ƙarya. “‘Kada ku ruɗe juna.
೧೧“‘ಕದಿಯಬಾರದು, “‘ಮೋಸಮಾಡಬಾರದು, “‘ಒಬ್ಬರಿಗೊಬ್ಬರು ಸುಳ್ಳು ಹೇಳಬಾರದು.
12 “‘Kada ku rantse bisa ƙarya da sunana, ta haka har ku ƙasƙantar da sunan Allahnku. Ni ne Ubangiji.
೧೨“‘ನನ್ನ ಹೆಸರಿನ ಮೇಲೆ ಸುಳ್ಳಾಣೆಯಿಟ್ಟು ನಿಮ್ಮ ದೇವರ ನಾಮವನ್ನು ಅಪಕೀರ್ತಿಗೆ ಒಳಪಡಿಸಬಾರದು. ನಾನು ಯೆಹೋವನು.
13 “‘Kada ku zalunci maƙwabcinku, ko ku yi masa ƙwace. “‘Kada ku riƙe albashin ma’aikaci yă kwana.
೧೩“‘ಮತ್ತೊಬ್ಬನನ್ನು ಬಲಾತ್ಕರಿಸಬಾರದು ಅಥವಾ ಅವನ ಸೊತ್ತನ್ನು ಅಪಹರಿಸಬಾರದು. ಅವನ ಕೂಲಿಯನ್ನು ಮರುದಿನದ ವರೆಗೆ ನಿಮ್ಮ ಬಳಿಯಲ್ಲಿ ಇಟ್ಟುಕೊಳ್ಳಬಾರದು.
14 “‘Kada ku zagi kurma, ko ku sa abin tuntuɓe a gaban makaho, amma ku ji tsoron Allahnku. Ni ne Ubangiji.
೧೪ಕಿವುಡರನ್ನು ದೂಷಿಸಬಾರದು; ಕುರುಡರು ನಡೆಯುವ ದಾರಿಯಲ್ಲಿ ಅವರ ಕಾಲು ಎಡವುವಂತೆ ಕಲ್ಲನ್ನು ಇಡಬಾರದು; ನಿಮ್ಮ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ಯೆಹೋವನು.
15 “‘Kada ku yi rashin adalci cikin shari’a; kada ku nuna sonkai ga matalauci, ko ku goyi bayan mai arziki, amma ku shari’anta maƙwabci cikin gaskiya.
೧೫“‘ವ್ಯಾಜ್ಯವನ್ನು ವಿಚಾರಿಸುವಾಗ ಅನ್ಯಾಯವಾದ ತೀರ್ಪನ್ನು ಮಾಡಬಾರದು. ಬಡವನ ಬಡತನವನ್ನಾಗಲಿ ಅಥವಾ ದೊಡ್ಡ ಮನುಷ್ಯನ ಘನತೆಯನ್ನಾಗಲಿ ಲಕ್ಷ್ಯಮಾಡದೆ, ಪಕ್ಷಪಾತವಿಲ್ಲದೆ ತೀರ್ಪನ್ನು ಕೊಡಬೇಕು.
16 “‘Kada ku yi ta yawo kuna yaɗa ƙarya a cikin mutanenku. “‘Kada ku yi wani abin da zai sa ran maƙwabcinku cikin hatsari. Ni ne Ubangiji.
೧೬“‘ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. ನೆರೆಯವನಿಗೆ ಮರಣ ಶಿಕ್ಷೆಯಾಗಲೇಬೇಕು ಎಂದು ಹಠ ಹಿಡಿಯಬಾರದು. ನಾನು ಯೆಹೋವನು.
17 “‘Kada ka yi ƙiyayyar ɗan’uwanka a zuciya. Ka tsawata wa maƙwabcinka da gaske don kada ka sami rabo cikin laifinsa.
೧೭“‘ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.
18 “‘Kada ka nemi yin ramuwa, ko ka riƙe wani cikin mutanenka a zuciya, amma ka ƙaunaci maƙwabcinka kamar kanka. Ni ne Ubangiji.
೧೮“‘ನಿಮ್ಮ ಸ್ವಜನರಲ್ಲಿ ಯಾರಿಗೂ ಕೇಡಿಗೆ ಕೇಡನ್ನು ಮಾಡದೆ, ಮನಸ್ಸಿನಲ್ಲಿ ಮತ್ಸರವನ್ನು ಇಟ್ಟುಕೊಳ್ಳದೆ, ನಿಮ್ಮ ನೆರೆಯವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ನಾನು ಯೆಹೋವನು.
19 “‘Ku kiyaye farillaina. “‘Kada ku sa dabbobin da ba iri ɗaya ba su yi barbara. “‘Kada ku yi shuki iri biyu a gonarku. “‘Kada ku sa rigar da aka saƙa da yadi iri biyu.
೧೯“‘ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. “‘ನಿಮ್ಮ ಪಶುಗಳನ್ನು ಬೇರೆ ಜಾತಿಯ ಪಶುಗಳೊಂದಿಗೆ ಕೂಡಿಸಿ ತಳಿಪಡಿಯಬಾರದು; “‘ನಿಮ್ಮ ಹೊಲಗಳಲ್ಲಿ ಮಿಶ್ರಬೀಜಗಳನ್ನು ಬಿತ್ತಬಾರದು; “‘ನಾರು ಮತ್ತು ಉಣ್ಣೆ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು.
20 “‘In wani ya kwana da mace wadda take baiwa, wadda aka yi wa wani alkawari amma bai fanshe ta ba, ko kuwa ba a’yantar da ita ba, dole a yi hukuncin da ya dace. Duk da haka ba za a kashe su ba, domin ba a’yantar da ita ba.
೨೦“‘ಒಬ್ಬನ ಅಧೀನದಲ್ಲಿರುವ ದಾಸಿ ಹಣಕೊಡುವುದರಿಂದಾಗಲಿ ಅಥವಾ ಉಚಿತವಾಗಿಯಾಗಲಿ ಬಿಡುಗಡೆಯನ್ನು ಹೊಂದದೆ ಇದ್ದರೆ, ಯಾವನಾದರೂ ಅವಳನ್ನು ಸಂಗಮಿಸಿದರೆ ಅವರಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯವಾಗಿ ನ್ಯಾಯವಿಚಾರಣೆ ಆಗಬೇಕು. ಅವಳು ಸ್ವತಂತ್ರಳಲ್ಲವಾದುದರಿಂದ ಅವರಿಗೆ ಮರಣಶಿಕ್ಷೆಯನ್ನು ವಿಧಿಸಬಾರದು.
21 Dole mutumin da ya kwana da ita yă kawo rago a ƙofar Tentin Sujada domin hadaya don laifi ga Ubangiji.
೨೧ಆ ಪುರುಷನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಯೆಹೋವನ ಸನ್ನಿಧಿಗೆ ದೇವದರ್ಶನದ ಗುಡಾರದ ಬಾಗಿಲಿಗೆ ಒಂದು ಟಗರನ್ನು ತರಬೇಕು.
22 Da ragon hadaya don laifin ne firist zai yi kafara saboda mutumin a gaban Ubangiji saboda zunubin da ya yi, za a kuwa gafarta zunubinsa.
೨೨ಅವನ ದೋಷಪರಿಹಾರಕ್ಕಾಗಿ ಯಾಜಕನು ಆ ಟಗರನ್ನು ಪ್ರಾಯಶ್ಚಿತ್ತಯಜ್ಞವಾಗಿ ಯೆಹೋವನಿಗೆ ಸಮರ್ಪಿಸಿ, ಅವನಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.
23 “‘Sa’ad da kuka shiga ƙasar kuka kuma shuka kowane irin itace mai’ya’ya na ci, ku ɗauki’ya’yan itatuwan nan a matsayi an hana ku ci. Shekara uku za ku ɗauka a matsayi an hana ku, ba za ku ci su ba.
೨೩“‘ನೀವು ಆ ದೇಶದಲ್ಲಿ ಸೇರಿದಾಗ ಆಹಾರಕ್ಕಾಗಿ ಯಾವ ಜಾತಿಯ ಹಣ್ಣಿನ ಸಸಿಯನ್ನು ನೆಟ್ಟರೂ, ಅದರ ಫಲವನ್ನು ಮೂರು ವರ್ಷದ ತನಕ ಅಶುದ್ಧವೆಂದೆಣಿಸಿ ತಿನ್ನದಿರಬೇಕು.
24 A shekara ta huɗu, dukan’ya’yansu za su zama tsarkakakku, hadaya ta yabo ga Ubangiji.
೨೪ನಾಲ್ಕನೆಯ ವರ್ಷದಲ್ಲಿ ಅದರ ಎಲ್ಲಾ ಹಣ್ಣುಗಳೂ ದೇವರದಾಗಿರಬೇಕು; ಅವುಗಳನ್ನು ಯೆಹೋವನಿಗೆ ಕೃತಜ್ಞತೆಯ ಕಾಣಿಕೆಯನ್ನಾಗಿ ಸಮರ್ಪಿಸಬೇಕು.
25 Amma a shekara ta biyar, za ku iya cin’ya’yan itatuwan. Ta haka girbinku zai ƙaru. Ni ne Ubangiji Allahnku.
೨೫ಐದನೆಯ ವರ್ಷದಲ್ಲಿ ಅದರಿಂದ ಉಂಟಾಗುವ ಆದಾಯವು ನಿಮ್ಮದೇ ಆಗಿರುವುದು; ಅದರ ಫಲಗಳನ್ನು ನೀವು ತಿನ್ನಬಹುದು. ನಾನು ನಿಮ್ಮ ದೇವರಾದ ಯೆಹೋವನು.
26 “‘Kada ku ci wani abinci tare da jini a cikinsa. “‘Kada ku yi duba ko sihiri.
೨೬“‘ರಕ್ತಸಹಿತವಾದ ಯಾವ ಮಾಂಸವನ್ನು ತಿನ್ನಬಾರದು. “‘ಯಂತ್ರಮಂತ್ರಗಳನ್ನು ಮಾಡಬಾರದು, ಶಕುನಗಳನ್ನು ನೋಡಬಾರದು.
27 “‘Ba za ka aske gefe-gefe na gashin kanka ba, ko ku aske gemunku.
೨೭“‘ಚಂಡಿಕೆ ಬಿಡಬಾರದು ಹಾಗೂ ಗಡ್ಡವನ್ನು ವಿಕಾರಗೊಳಿಸಬಾರದು.
28 “‘Kada ku tsattsaga jikunanku saboda matattu, ba kuwa za ku yi wa kanku zāne-zāne a jiki ba. Ni ne Ubangiji.
೨೮“‘ಸತ್ತವರಿಗೋಸ್ಕರ ದುಃಖವನ್ನು ಸೂಚಿಸುವುದಕ್ಕಾಗಿ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಹಾಕಿಸಿಕೊಳ್ಳಬಾರದು. ನಾನು ಯೆಹೋವನು.
29 “‘Kada ka ƙasƙantar da’yarka ta wurin mai da ita karuwa, in ba haka ba ƙasar za tă juya ga karuwanci tă kuma cika da mugunta.
೨೯“‘ಮಗಳನ್ನು ವೇಶ್ಯೆಯನ್ನಾಗಿ ಮಾಡಬಾರದು. ಹಾಗೆ ಮಾಡಿದರೆ ವೇಶ್ಯಾವಾಟಿಕೆ ಪ್ರಬಲವಾಗಿ ದೇಶದಲ್ಲೆಲ್ಲಾ ತುಂಬಿಹೋಗುವುದು.
30 “‘Ku kiyaye Asabbacina, ku kuma girmama wuri mai tsarkina. Ni ne Ubangiji.
೩೦“‘ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು.
31 “‘Kada ku juya ga masu duba, ko ku nemi shawarar bokaye, gama za ku ƙazantu ta wurinsu. Ni ne Ubangiji Allahnku.
೩೧“‘ಸತ್ತವರಲ್ಲಿ ವಿಚಾರಿಸುವವರ ಮತ್ತು ಮಂತ್ರವಾದಿಗಳ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.
32 “‘Ku miƙe tsaye a gaban tsofaffi, ku nuna bangirma ga waɗanda suka tsufa, ku kuma girmama Allahnku. Ni ne Ubangiji.
೩೨“‘ವಯೋ ವೃದ್ಧರ ಮುಂದೆ ಎದ್ದು ನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಯೆಹೋವನು.
33 “‘Sa’ad da baƙo yana zama tare da ku a ƙasarku, kada ku wulaƙanta shi.
೩೩“‘ನಿಮ್ಮ ದೇಶದಲ್ಲಿ ವಾಸವಾಗಿರುವ ಪರದೇಶದವರಿಗೆ ಅನ್ಯಾಯವೇನೂ ಮಾಡಬಾರದು.
34 Dole ku ɗauki baƙon da yake zama tare da ku kamar haifaffe ɗan ƙasa. Ku ƙaunace shi kamar kanku, gama dā ku ma baƙi ne a Masar. Ni ne Ubangiji Allahnku.
೩೪ಅವರು ನಿಮಗೆ ಸ್ವದೇಶದವರಂತೆಯೇ ಇರಬೇಕು; ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಐಗುಪ್ತ ದೇಶದಲ್ಲಿದ್ದಾಗ ನೀವೂ ಅನ್ಯರಾಗಿದ್ದಿರಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.
35 “‘Kada ku yi amfani da mudun ƙarya sa’ad da kuke awon tsawo, nauyi, ko yawan abu.
೩೫“‘ನ್ಯಾಯವಿಚಾರಣೆ, ತೂಕ, ಅಳತೆ ಮತ್ತು ಪರಿಮಾಣಗಳಲ್ಲಿ ನೀವು ನ್ಯಾಯವಿರುದ್ಧವಾಗಿ ನಡೆಯಬಾರದು.
36 Ku yi amfani da ma’auni na gaskiya da mudu na gaskiya, da kuma magwaji na gaskiya. Ni ne Ubangiji Allahnku, wanda ya fitar da ku daga Masar.
೩೬ತಕ್ಕಡಿ, ತೂಕದ ಕಲ್ಲು, ಕೊಳಗ ಮತ್ತು ಸೇರು ಇವುಗಳೆಲ್ಲಾ ನ್ಯಾಯವಾಗಿಯೇ ಇರಬೇಕು. ನಾನು ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ.
37 “‘Ku kiyaye dukan farillaina da kuma dukan dokokina, ku kuma bi su. Ni ne Ubangiji.’”
೩೭ಆದುದರಿಂದ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು. ನಾನು ಯೆಹೋವನು’” ಎಂದು ಹೇಳಿದನು.