< Ƙidaya 22 >

1 Sai Isra’ilawa suka kama hanya, suka tafi filayen Mowab, a wajen Urdun, a ƙetare Yeriko, suka yi sansani a can.
ತರುವಾಯ ಇಸ್ರಾಯೇಲರು ಪ್ರಯಾಣಮಾಡಿ ಯೆರಿಕೋ ಪಟ್ಟಣಕ್ಕೆ ಎದುರಾಗಿ ಯೊರ್ದನ್ ನದಿಯ ತೀರದಲ್ಲಿ ಮೋವಾಬ್ಯರ ಬಯಲಿನಲ್ಲಿ ಇಳಿದುಕೊಂಡರು.
2 To, fa, Balak ɗan Ziffor ya ga duk abin da Isra’ila suka yi da Amoriyawa.
ಇಸ್ರಾಯೇಲರು ಅಮೋರಿಯರಿಗೆ ಮಾಡಿದನ್ನೆಲ್ಲಾ ಚಿಪ್ಪೋರನ ಮಗನಾದ ಬಾಲಾಕನು ನೋಡಿದನು. ಇವನು ಮೋವಾಬ್ಯರ ಅರಸನಾಗಿದ್ದನು.
3 Sai Mowab ya firgita ƙwarai saboda yawan mutanen. Tsoron Isra’ilawa ya kama su.
ಇಸ್ರಾಯೇಲರು ಬಹಳ ಜನವಾಗಿರುವುದರಿಂದ ಮೋವಾಬ್ಯರು ಬಹಳ ಭಯಪಟ್ಟು ಹೆದರಿದರು.
4 Sai Mowabawa suka ce wa dattawan Midiyawa, “Wannan taron zai lashe duk abin da ya kewaye mu kamar yadda saniya takan lashe ciyawa a fili.” Saboda haka Balak ɗan Ziffor, wanda yake sarkin Mowab a lokacin,
ಮೋವಾಬ್ಯರ ಅರಸನು ಮಿದ್ಯಾನ್ಯರ ಹಿರಿಯರಿಗೆ, “ದನಗಳು ಅಡವಿಯ ಹುಲ್ಲನ್ನೆಲ್ಲಾ ಮೇಯುವಂತೆ ಈ ಸಮೂಹವು ನಮ್ಮನ್ನೂ, ನಮ್ಮ ಸುತ್ತಲಿರುವ ಎಲ್ಲರನ್ನೂ ನಾಶಮಾಡುವ ಹಾಗಿದೆ” ಎಂದು ಹೇಳಿದರು.
5 ya aika manzanni su zo da Bala’am ɗan Beyor, wanda yake a Fetor, kusa da Kogi, a ƙasar haihuwarsa. Balak ya ce, “Ga mutane sun fito daga Masar; sun mamaye ƙasar, suka kuma yi sansani kusa da ni.
ಅವನು ಬೆಯೋರನ ಮಗನಾದ ಬಿಳಾಮನನ್ನು ಕರೆಯಿಸುವುದಕ್ಕೆ ಸ್ವಜನರ ದೇಶವಾದ ಯೂಫ್ರೆಟಿಸ್ ನದಿಯ ತೀರದಲ್ಲಿರುವ ಪೆತೋರ್ ಎಂಬ ಊರಿಗೆ ದೂತರನ್ನು ಕಳುಹಿಸಿ ಅವನಿಗೆ, “ಒಂದು ಜನಾಂಗವು ಐಗುಪ್ತ ದೇಶದಿಂದ ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡು ನನ್ನ ಸಮೀಪಕ್ಕೆ ಬಂದಿದ್ದಾರೆ.
6 Ka zo yanzu ka la’anta waɗannan mutane, domin sun fi ƙarfina. Wataƙila zan iya cin nasara a kansu, in kuma kore su daga ƙasar. Gama na sani duk waɗanda ka sa musu albarka, sun zama masu albarka ke nan, waɗanda kuma ka la’anta, sun la’antu ke nan.”
ಆದುದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಈ ಜನರಿಗೆ ಶಾಪಕೊಡಬೇಕು. ಆಗ ಅವರನ್ನು ಸೋಲಿಸಿ ಈ ದೇಶದಿಂದ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು. ನಿನ್ನ ಆಶೀರ್ವಾದದಿಂದ ಶುಭವೂ, ನಿನ್ನ ಶಾಪದಿಂದ ಅಶುಭವೂ ಉಂಟಾಗುತ್ತದೆ ಎಂಬುದನ್ನು ನಾನು ಬಲ್ಲೆನು” ಎಂದು ಕಳುಹಿಸಿದನು.
7 Sai dattawan Mowab da na Midiyawa suka tashi, suka ɗauki kuɗi don duba. Da suka zo wurin Bala’am sai suka faɗa masa abin da Balak ya ce.
ಮೋವಾಬ್ಯರ ಹಿರಿಯರೂ, ಮಿದ್ಯಾನ್ಯರ ಹಿರಿಯರೂ ಶಕುನದ ಕಾಣಿಕೆಯನ್ನು ಕೈಯಲ್ಲಿ ತೆಗೆದುಕೊಂಡು ಬಿಳಾಮನ ಹತ್ತಿರಕ್ಕೆ ಬಂದು ಬಾಲಾಕನ ಮಾತುಗಳನ್ನು ತಿಳಿಸಿದರು.
8 Bala’am ya ce musu, “Ku kwana a nan, ni kuwa zan faɗa muku abin da Ubangiji ya faɗa mini.” Saboda haka dattawan sarkin Mowab suka zauna da shi.
ಬಿಳಾಮನು ಅವರಿಗೆ, “ಈ ರಾತ್ರಿ ನೀವು ಇಲ್ಲಿಯೇ ಇಳಿದುಕೊಂಡಿರಿ. ಯೆಹೋವನು ನನಗೆ ಹೇಳುವ ಮಾತುಗಳನ್ನು ನಿಮಗೆ ತಿಳಿಸುವೆನು” ಎಂದು ಹೇಳಿದನು. ಆಗ ಆ ರಾತ್ರಿ ಮೋವಾಬ್ಯರ ಪ್ರಧಾನರು ಬಿಳಾಮನ ಬಳಿಯಲ್ಲಿ ಇಳಿದುಕೊಂಡರು.
9 Sai Allah ya zo wurin Bala’am ya ce, “Su wane ne waɗannan tare da kai?”
ದೇವರು ಬಿಳಾಮನಿಗೆ, “ನಿನ್ನ ಬಳಿಯಲ್ಲಿರುವ ಆ ಮನುಷ್ಯರು ಯಾರು?” ಎಂದು ಕೇಳಲು,
10 Bala’am ya ce wa Allah, “Balak ɗan Ziffor, sarkin Mowab ne, ya aiko mini wannan saƙo cewa,
೧೦ಬಿಳಾಮನು ದೇವರಿಗೆ, “ಮೋವಾಬ್ಯರ ಅರಸನೂ, ಚಿಪ್ಪೋರನ ಮಗನಾದ ಬಾಲಾಕನು ನನ್ನ ಬಳಿಗೆ ದೂತರನ್ನು ಕಳುಹಿಸಿ,
11 ‘Ga mutane sun fito daga Masar sun mamaye ƙasar. Ka zo yanzu ka la’anta mini su. Wataƙila ta haka zan yi nasara a kansu, in kuma kore su.’”
೧೧‘ಒಂದು ಜನಾಂಗವು ಐಗುಪ್ತ ದೇಶದಿಂದ ಹೊರಟು ಬಂದಿದೆ. ಅವರು ಭೂಮಿಯನ್ನೆಲ್ಲಾ ಆವರಿಸಿಕೊಂಡಿದ್ದಾರೆ; ನೀನು ಬಂದು ಅವರಿಗೆ ಶಾಪಕೊಡಬೇಕು; ಕೊಟ್ಟರೆ ಅವರನ್ನು ಸೋಲಿಸಿ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು’” ಎಂದು ಹೇಳಿಕಳುಹಿಸಿದ್ದಾನೆ ಎಂದು ಉತ್ತರಕೊಟ್ಟನು.
12 Amma Allah ya ce wa Bala’am, “Kada ka tafi tare da su. Kada ka la’anta mutanen nan, gama su masu albarka ne.”
೧೨ಅದಕ್ಕೆ ದೇವರು ಬಿಳಾಮನಿಗೆ, “ನೀನು ಅವರ ಜೊತೆಯಲ್ಲಿ ಹೋಗಬಾರದು. ಆ ಜನಾಂಗದವರು ನನ್ನ ಆಶೀರ್ವಾದವನ್ನು ಹೊಂದಿದವರು; ಅವರನ್ನು ಶಪಿಸಬಾರದು” ಎಂದು ಹೇಳಿದನು.
13 Kashegari Bala’am ya tashi ya ce wa dattawan Balak, “Ku koma ƙasarku, domin Ubangiji ya hana ni in tafi tare da ku.”
೧೩ಬೆಳಿಗ್ಗೆ ಬಿಳಾಮನು ಎದ್ದು ಬಾಲಾಕನ ಪ್ರಧಾನರಿಗೆ, “ನೀವು ನಿಮ್ಮ ದೇಶಕ್ಕೆ ಹೋಗಿರಿ. ನಾನು ನಿಮ್ಮ ಜೊತೆಯಲ್ಲಿ ಬರುವುದಕ್ಕೆ ಯೆಹೋವನು ನನಗೆ ಅಪ್ಪಣೆಕೊಡಲಿಲ್ಲ” ಎಂದು ಹೇಳಿದನು.
14 Saboda haka dattawan Mowab suka koma wurin Balak suka ce, “Bala’am ya ƙi yă zo tare da mu.”
೧೪ಮೋವಾಬ್ಯರ ಪ್ರಧಾನರು ಹೊರಟು ಬಾಲಾಕನ ಬಳಿಗೆ ಬಂದು, “ಬಿಳಾಮನು ನಮ್ಮ ಜೊತೆಯಲ್ಲಿ ಬರಲ್ಲಿಲ” ಎಂದು ತಿಳಿಸಿದರು.
15 Sai Balak ya aika waɗansu dattawa masu yawa, masu daraja kuma fiye da na dā.
೧೫ಆದರೆ ಬಾಲಾಕನು ಅವರಿಗಿಂತಲೂ ಘನವಂತರಾದ ಹೆಚ್ಚು ಮಂದಿ ಪ್ರಧಾನರನ್ನು ಕಳುಹಿಸಿದನು.
16 Suka zo wurin Bala’am suka ce, “Ga abin da Balak ɗan Ziffor ya ce, Kada ka bar wani abu yă hana ka zuwa wurina,
೧೬ಇವರು ಬಿಳಾಮನ ಬಳಿಗೆ ಬಂದು ಅವನಿಗೆ, “ಚಿಪ್ಪೋರನ ಮಗನಾದ ಬಾಲಾಕನು ಹೀಗೆ ಹೇಳುತ್ತಾನೆ, ‘ನೀನು ದಯಮಾಡಿ ನನ್ನ ಬಳಿಗೆ ಬರುವುದಕ್ಕೆ ಯಾವ ಅಡ್ಡಿಯನ್ನೂ ಹೇಳಬೇಡ.
17 gama zan ba ka lada mai yawa in kuma yi duk abin da ka ce. Ka zo ka la’anta mini waɗannan mutane.”
೧೭ಏಕೆಂದರೆ ನಾನು ನಿನ್ನನ್ನು ಬಹಳವಾಗಿ ಘನಪಡಿಸುವೆನು. ನೀನು ಏನು ಹೇಳಿದರೂ ಅದನ್ನು ಮಾಡುತ್ತೇನೆ. ನೀನು ದಯಮಾಡಿ ಬಂದು ಈ ಜನರನ್ನು ನನಗಾಗಿ ಶಪಿಸಬೇಕು’” ಎಂದನು.
18 Amma Bala’am ya amsa musu ya ce, “Ko da a ce Balak zai ba ni gidansa cike da azurfa da zinariya, ba zan yi wani abu ko kaɗan saɓanin umarnin Ubangiji Allahna ba.
೧೮ಅದಕ್ಕೆ ಬಿಳಾಮನು ಬಾಲಾಕನ ಸೇವಕರಿಗೆ, “ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರ ಕೊಟ್ಟರೂ ನಾನು ನನ್ನ ದೇವರಾದ ಯೆಹೋವನ ಆಜ್ಞೆಯನ್ನು ಮೀರಿ ಸಣ್ಣ ಕೆಲಸವನ್ನಾಗಲಿ, ದೊಡ್ಡ ಕೆಲಸವನ್ನಾಗಲಿ ಮಾಡಲಾರೆನು.
19 To, fa, sai ku kwana a nan kamar yadda waɗancan suka yi, ni kuma in roƙi Ubangiji, in ji, wace magana zai ce mini.”
೧೯ಆದುದರಿಂದ ನೀವೂ ಕೂಡ ಈ ರಾತ್ರಿ ಇಲ್ಲಿಯೇ ಇಳಿದುಕೊಳ್ಳಿರಿ. ಯೆಹೋವನು ಈಗ ಏನು ಹೇಳುವನೋ ಅದನ್ನು ನಿಮಗೆ ತಿಳಿಸುತ್ತೇನೆ” ಎಂದು ಉತ್ತರಕೊಟ್ಟನು.
20 A wannan dare, Allah ya zo wurin Bala’am ya ce, “Da yake waɗannan mutane sun zo su tafi da kai, to, ka tafi tare da su, sai dai ka yi abin da na ce ka yi ne kaɗai.”
೨೦ಆ ರಾತ್ರಿ ದೇವರು ಬಿಳಾಮನ ಬಳಿಗೆ ಬಂದು, “ಆ ಮನುಷ್ಯರು ನಿನ್ನನ್ನು ಕರೆಯುವುದಕ್ಕೆ ಬಂದಿರುವುದರಿಂದ ಎದ್ದು ಅವರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಆಜ್ಞಾಪಿಸುವ ಪ್ರಕಾರವೇ ನೀನು ಮಾಡಬೇಕು” ಎಂದನು.
21 Bala’am ya tashi da safe, ya ɗaura wa jakarsa sirdi, ya tafi tare da dattawan Mowab.
೨೧ಬೆಳಿಗ್ಗೆ ಬಿಳಾಮನು ತನ್ನ ಕತ್ತೆಗೆ ಕಡಿವಾಣ ಹಾಕಿಸಿ ಮೋವಾಬ್ಯರ ಪ್ರಧಾನರ ಜೊತೆಯಲ್ಲಿ ಹೊರಟನು.
22 Amma Allah ya husata sa’ad da ya tafi, mala’ikan Ubangiji kuwa ya tsaya a hanya don yă hana shi. Bala’am kuwa yana kan jakarsa tare da bayinsa biyu.
೨೨ಅವನು ಹೋದುದರಿಂದ ದೇವರಿಗೆ ಕೋಪವುಂಟಾಯಿತು. ಯೆಹೋವನ ದೂತನು ಅವನಿಗೆ ಎದುರಾಳಿಯಾಗಿ ದಾರಿಯಲ್ಲಿ ನಿಂತುಕೊಂಡನು. ಬಿಳಾಮನು ತನ್ನ ಕತ್ತೆಯ ಮೇಲೆ ಕುಳಿತುಕೊಂಡಿದ್ದನು. ಅವನ ಇಬ್ಬರು ಆಳುಗಳು ಅವನ ಸಂಗಡ ಇದ್ದರು.
23 Da jakar ta hangi mala’ikan Ubangiji tsaye a hanya da takobi a hannunsa, sai ta kauce daga hanya, ta shiga jeji. Bala’am kuwa ya buge ta don tă koma hanya.
೨೩ಯೆಹೋವನ ದೂತನು ಬಿಚ್ಚುಕತ್ತಿಯನ್ನು ಕೈಯಲ್ಲಿ ಹಿಡಿದುಕೊಂಡು ದಾರಿಯಲ್ಲೇ ನಿಂತಿರುವುದನ್ನು ಆ ಕತ್ತೆ ನೋಡಿ ದಾರಿಯನ್ನು ಬಿಟ್ಟು ಅಡವಿಯ ಕಡೆಗೆ ಹೋಯಿತು. ಕತ್ತೆಯನ್ನು ದಾರಿಗೆ ತಿರುಗಿಸುವುದಕ್ಕೆ ಬಿಳಾಮನು ಅದನ್ನು ಹೊಡೆದನು.
24 Sai mala’ikan Ubangiji ya tsaya a wata matsattsiyar hanya tsakanin gonaki inabi biyu, da bango a kowane gefe.
೨೪ಆ ಮೇಲೆ ಯೆಹೋವನ ದೂತನು ದ್ರಾಕ್ಷಿತೋಟಗಳ ಸಂದಿನಲ್ಲಿ ನಿಂತುಕೊಂಡನು. ಎರಡು ಕಡೆಯಲ್ಲಿಯೂ ಗೋಡೆಯಿತ್ತು.
25 Sa’ad da jakar ta ga mala’ikan Ubangiji, sai ta matse a jikin bango, ta goge ƙafar Bala’am da bangon. Saboda haka sai Bala’am ya sāke bugunta.
೨೫ಕತ್ತೆ ಯೆಹೋವನ ದೂತನನ್ನು ಪುನಃ ನೋಡಿ ಗೋಡೆಗೆ ಒತ್ತಿಕೊಂಡು ಬಿಳಾಮನ ಕಾಲನ್ನು ಆ ಗೋಡೆಗೆ ಇರುಕಿಸಲು ಅವನು ಅದನ್ನು ತಿರುಗಿ ಹೊಡೆದನು.
26 Sai mala’ikan Ubangiji ya sha gabansa, ya tsaya a ƙunƙuntaccen wuri inda ba wurin juyawa dama ko hagu.
೨೬ಆಗ ಯೆಹೋವನ ದೂತನು ಮುಂದೆ ಹೋಗಿ ಎಡಬಲಕ್ಕೆ ತಿರುಗಲಿಕ್ಕೆ ದಾರಿಯಿಲ್ಲದ ಇಕ್ಕಟ್ಟಾದ ಸ್ಥಳದಲ್ಲಿ ನಿಂತುಕೊಂಡನು.
27 Da jakar ta ga mala’ikan Ubangiji, sai ta kwanta a ƙasa, Bala’am kuwa ya husata, sai ya buge ta da sandansa.
೨೭ಕತ್ತೆಯು ಯೆಹೋವನ ದೂತನನ್ನು ನೋಡಿ ಬಿಳಾಮನ ಕೆಳಗೆ ಬಿತ್ತು. ಬಿಳಾಮನು ಸಿಟ್ಟುಗೊಂಡು ತನ್ನ ಕೈಕೋಲಿನಿಂದ ಕತ್ತೆಯನ್ನು ಹೊಡೆದನು.
28 Ubangiji ya buɗe bakin jakar, sai jakar ta ce wa Bala’am, “Me na yi maka da ka buge ni har sau uku?”
೨೮ಆಗ ಯೆಹೋವನು ಆ ಕತ್ತೆಗೆ ಮಾತನಾಡುವ ಶಕ್ತಿಯನ್ನು ಕೊಡಲಾಗಿ ಅದು ಬಿಳಾಮನನ್ನು, “ನೀನು ಮೂರು ಸಾರಿ ನನ್ನನ್ನು ಹೊಡೆದದ್ದೇಕೆ? ನಾನು ನಿನಗೇನು ಮಾಡಿದ್ದೇನೆ” ಎಂದು ಕೇಳಿತು.
29 Bala’am ya ce wa jakar “Domin kin wulaƙanta ni! Da a ce ina da takobi a hannuna da zan kashe ki nan take.”
೨೯ಅದಕ್ಕೆ ಬಿಳಾಮನು ಕತ್ತೆಗೆ, “ನೀನು ಇಷ್ಟ ಬಂದಂತೆ ನನ್ನನ್ನು ಆಡಿಸಿದೆಯಲ್ಲಾ. ನನ್ನ ಕೈಯಲ್ಲಿ ಕತ್ತಿಯಿದ್ದರೆ ನಿನ್ನನ್ನು ಕೊಂದು ಹಾಕಿಬಿಡುತ್ತಿದ್ದೆ” ಎಂದನು.
30 Jakar ta ce wa Bala’am, “Ni ba jakarka ba ce wadda kake hawa kullum, har yă zuwa yau? Na taɓa yin maka haka?” Bala’am ya ce, “A’a.”
೩೦ಅದಕ್ಕೆ ಆ ಕತ್ತೆಯು ಬಿಳಾಮನಿಗೆ, “ನಿನ್ನ ಜೀವಮಾನವೆಲ್ಲಾ ಇಂದಿನವರೆಗೂ ನೀನು ಹತ್ತುತ್ತಾ ಇರುವ ನಿನ್ನ ಕತ್ತೆಯು ನಾನಲ್ಲವೇ? ನಾನು ಯಾವಾಗಲಾದರೂ ಈ ರೀತಿಯಾಗಿ ಮಾಡಿದ್ದುಂಟೋ?” ಎಂದಾಗ ಬಿಳಾಮನು “ಇಲ್ಲ” ಎಂದನು.
31 Sa’an nan Ubangiji ya buɗe idanun Bala’am, ya kuwa ga mala’ikan Ubangiji tsaye a hanya da takobi a zāre. Sai ya sunkuyar da kansa, ya fāɗi rubda ciki.
೩೧ಅಷ್ಟರಲ್ಲೇ ಯೆಹೋವನು ಬಿಳಾಮನ ಕಣ್ಣುಗಳನ್ನು ತೆರೆದನು. ಯೆಹೋವನ ದೂತನು ಬಿಚ್ಚು ಕತ್ತಿಯನ್ನು ಹಿಡಿದು ದಾರಿಯಲ್ಲೇ ನಿಂತಿರುವುದನ್ನು ಕಂಡು ಬೋರಲುಬಿದ್ದು ನಮಸ್ಕರಿಸಿದನು.
32 Sa’an nan mala’ikan Ubangiji ya tambaye shi, “Don me ka buge jakarka har sau uku? Na fito ne don in hana ka, gama hanyarka ba daidai ba ce a gabana.
೩೨ಯೆಹೋವನ ದೂತನು ಅವನಿಗೆ, “ನೀನು ಮೂರು ಸಾರಿ ಕತ್ತೆಯನ್ನು ಹೊಡೆದದ್ದೇಕೆ? ನೀನು ನನಗೆ ವಿರುದ್ಧವಾದ ಮಾರ್ಗವನ್ನು ಹಿಡಿದುದರಿಂದ ನಿನ್ನನ್ನು ತಡೆಯುವುದಕ್ಕೆ ನಾನೇ ಬಂದಿದ್ದೇನೆ.
33 Jakar ta gan ni, ta kauce mini har sau uku. Da a ce ba tă kauce ba, lalle da na kashe ka, in kuwa bar ta da rai.”
೩೩ಆ ಕತ್ತೆ ನನ್ನನ್ನು ನೋಡಿ ಮೂರು ಸಾರಿ ನನ್ನ ಎದುರಿನಿಂದ ವಾರೆಯಾಗಿ ತಿರುಗಿಕೊಂಡಿತು. ಹಾಗೆ ತಿರುಗಿಕೊಳ್ಳದಿದ್ದರೆ ನಾನು ಕತ್ತೆಯ ಪ್ರಾಣವನ್ನು ಉಳಿಸಿ ನಿನ್ನನ್ನು ಕೊಂದು ಹಾಕಿಬಿಡುತ್ತಿದ್ದೆನು” ಎಂದು ಹೇಳಿದನು.
34 Bala’am ya ce wa mala’ikan Ubangiji, “Na yi zunubi. Ban san ka tsaya a hanya don ka hana ni ba. Yanzu in ba ka ji daɗin tafiyata, sai in koma.”
೩೪ಅದಕ್ಕೆ ಬಿಳಾಮನು ಯೆಹೋವನ ದೂತನಿಗೆ, “ನಾನು ಪಾಪಮಾಡಿದ್ದೇನೆ. ನೀನೇ ನನಗೆ ಎದುರಾಗಿ ದಾರಿಯಲ್ಲಿ ನಿಂತಿರುವುದು ನನಗೆ ತಿಳಿಯಲಿಲ್ಲ. ನಾನು ಮಾಡುವುದು ನಿನಗೆ ಕೆಟ್ಟದ್ದಾಗಿ ತೋರಿದರೆ ಹಿಂದಕ್ಕೆ ಹೋಗುತ್ತೇನೆ” ಎಂದನು.
35 Mala’ikan Ubangiji ya ce wa Bala’am, “Ka tafi tare da mutanen, amma abin da na faɗa maka ne kaɗai za ka faɗa.” Saboda haka Bala’am ya tafi tare da dattawan Balak.
೩೫ಯೆಹೋವನ ದೂತನು ಬಿಳಾಮನಿಗೆ, “ಈ ಮನುಷ್ಯರ ಜೊತೆಯಲ್ಲಿ ಹೋಗು. ಆದರೆ ನಾನು ನಿನಗೆ ಹೇಳುವ ಮಾತನ್ನೇ ಹೊರತು ಬೇರೆ ಯಾವುದನ್ನೂ ಹೇಳಬಾರದು” ಎಂದು ಹೇಳಿದನು. ಬಿಳಾಮನು ಬಾಲಾಕನ ಪ್ರಧಾನರ ಜೊತೆಯಲ್ಲಿ ಹೊರಟುಹೋದನು.
36 Da Balak ya ji cewa Bala’am yana zuwa, sai ya fito, ya tarye shi a garin Mowabawa da suke a iyakar Arnon, a ƙarshen yankinsa.
೩೬ಬಿಳಾಮನು ಬಂದ ವರ್ತಮಾನವನ್ನು ಬಾಲಾಕನು ಕೇಳಿ ಅವನನ್ನು ಎದುರುಗೊಳ್ಳುವುದಕ್ಕಾಗಿ ತನ್ನ ದೇಶದ ಗಡಿಯಾದ ಅರ್ನೋನ್ ನದಿಯ ತೀರದಲ್ಲಿರುವ ಮೋವಾಬ್ಯರ ಪಟ್ಟಣಕ್ಕೆ ಹೋದನು.
37 Balak ya ce wa Bala’am, “Ban aika maka saƙo cikin gagawa ba? Me ya sa ba ka zo ba? Ko ban isa in sāka maka ba ne?”
೩೭ಬಾಲಾಕನು ಬಿಳಾಮನನ್ನು ಕಂಡಾಗ, “ನಿನ್ನನ್ನು ಅವಸರದಿಂದ ಕರೆಯುವುದಕ್ಕೆ ದೂತರನ್ನು ಕಳುಹಿಸಿದೆನಲ್ಲಾ? ನೀನು ಏಕೆ ಆಗಲೇ ಬರಲಿಲ್ಲ? ನಿನ್ನನ್ನು ಘನಪಡಿಸುವುದಕ್ಕೆ ನಾನು ಸಮರ್ಥನಲ್ಲವೆಂದು ಭಾವಿಸುತ್ತೀಯೋ?” ಎಂದನು.
38 Bala’am ya amsa ya ce, “To, ai, ga shi, na zo yanzu. Ina da wani ikon yin wata magana ne? Dole in faɗa abin da Allah ya ce in faɗa ne kawai.”
೩೮ಅದಕ್ಕೆ ಬಿಳಾಮನು ಬಾಲಾಕನಿಗೆ, “ನೋಡು, ನಾನು ನಿನ್ನ ಬಳಿಗೆ ಬಂದಿದ್ದೇನೆ. ಆದರೆ ನಾನಾಗಿ ಏನಾದರೂ ಹೇಳುವುದಕ್ಕೆ ನನಗೆ ಶಕ್ತಿಯಿಲ್ಲ. ದೇವರು ನನ್ನಿಂದ ಹೇಳಿಸಿದ ಮಾತನ್ನೇ ಹೇಳುವೆನು” ಎಂದು ಹೇಳಿದನು.
39 Sa’an nan Bala’am ya tafi tare da Balak zuwa Kiriyat-Huzot,
೩೯ಆಗ ಬಿಳಾಮನು ಬಾಲಾಕನ ಜೊತೆಯಲ್ಲಿ ಹೋದನು. ಅವರು ಕಿರ್ಯತ್ ಹುಚೋತಿಗೆ ಬಂದರು.
40 a can ya yi hadaya da shanu da tumaki, ya kuwa aika wa Bala’am da dattawan da suke tare da shi.
೪೦ಬಾಲಾಕನು ಹೋರಿಗಳನ್ನೂ, ಕುರಿಗಳನ್ನೂ ವಧಿಸಿ ಯಜ್ಞಮಾಡಿ ಬಿಳಾಮನಿಗೂ, ಅವನ ಸಂಗಡ ಇದ್ದ ಪ್ರಧಾನರಿಗೂ ಊಟಕ್ಕೆ ಕಳುಹಿಸಿದನು.
41 Kashegari, Balak ya ɗauki Bala’am ya kai shi kan Bamot Ba’al, daga can ya iya ganin sassan sansanin Isra’ilawa.
೪೧ಮರುದಿನ ಬೆಳಿಗ್ಗೆ ಬಾಲಾಕನು ಬಿಳಾಮನನ್ನು ಕರೆದುಕೊಂಡು “ಬಾಳ್” ಎಂಬ ದೇವತೆಯ ಪೂಜಾಸ್ಥಳಗಳಲ್ಲಿದ್ದ ಗುಡ್ಡವನ್ನು ಹತ್ತಿ ಇಸ್ರಾಯೇಲರ ಒಂದು ಭಾಗವನ್ನು ಅಲ್ಲಿಂದ ತೋರಿಸಿದನು.

< Ƙidaya 22 >