< Ƙidaya 24 >
1 To, da Bala’am ya ga cewa Ubangiji yana jin daɗin sa wa Isra’ila albarka, bai koma wajen sihiri kamar dā ba, amma ya juya fuskarsa wajen hamada.
೧ಇಸ್ರಾಯೇಲರಿಗೆ ಶುಭವಾಗಬೇಕೆಂಬುದು ಯೆಹೋವನ ಚಿತ್ತವೆಂದು ಬಿಳಾಮನು ತಿಳಿದು ಮೊದಲಿನಂತೆ ಶಕುನ ನೋಡುವುದಕ್ಕೆ ಹೋಗದೆ ಅರಣ್ಯದ ಕಡೆಗೆ ಮುಖವನ್ನು ತಿರುಗಿಸಿಕೊಂಡನು.
2 Da Bala’am ya duba sai ya ga Isra’ila sun yi sansani kabila, kabila, Ruhun Allah kuwa ya sauko masa,
೨ಬಿಳಾಮನು ಕಣ್ಣೆತ್ತಿ ನೋಡಲಾಗಿ ಕುಲಗಳ ಪ್ರಕಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಾಯೇಲರು ಅವನಿಗೆ ಕಾಣಿಸಿದರು. ಆಗ ಅವನು ದೇವರಾತ್ಮಪ್ರೇರಿತನಾಗಿ,
3 sai ya yi annabcinsa ya ce, “Maganar Bala’am ɗan Beyor, saƙon mutumin da idanunsa ke gani sarai,
೩ಹೀಗೆ ಪ್ರವಾದಿಸಿದನು, “ಬೆಯೋರನ ಮಗನಾದ ಬಿಳಾಮನು ಹೇಳಿದ್ದು, ಮನೋದೃಷ್ಟಿಯಿಂದ ನೋಡುವ ಪುರುಷನು ನುಡಿದದ್ದು.
4 maganar mutumin da ya saurari maganar Allah, maganar wanda yake ganin wahayi daga Maɗaukaki, mutumin da ya fāɗi rubda ciki, wanda kuma idanunsa suna a buɗe.
೪ದೇವರ ಮಾತುಗಳನ್ನು ಕೇಳುವವನಾಗಿಯೂ, ಸರ್ವಶಕ್ತನ ದರ್ಶನವನ್ನು ಹೊಂದುವವನಾಗಿಯೂ ಪರವಶವಾಗಿ ತೆರೆದ ಕಣ್ಣುಳ್ಳವನೂ ಹೇಳಿದ್ದು.
5 “Ina misalin kyan tentunanka, ya Yaƙub, wuraren zamanka, ya Isra’ila!
೫ಯಾಕೋಬೇ, ನಿಮ್ಮ ಡೇರೆಗಳು ಎಷ್ಟೋ ಚೆಲುವಾಗಿವೆ, ಇಸ್ರಾಯೇಲರೇ, ನಿಮ್ಮ ನಿವಾಸಗಳು ಎಷ್ಟೋ ರಮ್ಯವಾಗಿವೆ.
6 “Kamar kwaruruka suke a shimfiɗe, kamar lambu kusa da rafi, kamar itatuwan aloyes da Ubangiji ya dasa, kamar itatuwa al’ul kusa da ruwaye.
೬ಅವು ಕಣಿವೆಗಳ ಹಾಗೆಯೇ ವಿಸ್ತರಿಸಿದೆ. ನದಿಯ ಬಳಿಯಲ್ಲಿರುವ ತೋಟಗಳಂತೆಯೂ, ಯೆಹೋವನು ನೆಟ್ಟ ಅಗರು ಮರಗಳ ಹಾಗೆಯೂ ನೀರಿನ ಬಳಿಯಲ್ಲಿರುವ ದೇವದಾರುವೃಕ್ಷಗಳಿಗೂ ಸಮಾನವಾಗಿವೆ.
7 Ruwa zai kwararo daga bokitinsu; irinsu za su sami ruwa a yalwace. “Sarkinsu zai fi sarkin Agag; mulkinsu zai ɗaukaka.
೭ತನ್ನ ತೊಟ್ಟಿಗಳಿಂದ ನೀರು ಹರಿಯುತ್ತಲೇ ಇದೆ, ಅವರ ಬಿತ್ತನೆಗೆ ಬೇಕಾದಷ್ಟು ನೀರು ಇರುವುದು. ಅವರ ಅರಸನು ಅಗಾಗ್ ರಾಜನಿಗಿಂತಲೂ ದೊಡ್ಡವನಾಗಿರುವನು. ಅವರ ರಾಜ್ಯವು ಅಭಿವೃದ್ಧಿಯಲ್ಲಿರುವುದು.
8 “Allah ya fitar da su daga Masar; suna da ƙarfin kutunkun ɓauna. Sun cinye abokan gāban, suka kakkarya ƙasusuwansu; da kibiyoyinsu suka sossoke su.
೮ದೇವರು ಅವನನ್ನು ಐಗುಪ್ತ ದೇಶದಿಂದ ಕರೆದುಕೊಂಡು ಬಂದನು. ಅವರು ಕಾಡುಕೋಣದಷ್ಟು ಬಲವುಳ್ಳವರು. ಅವರು ಶತ್ರುಜನರನ್ನು ನಿರ್ಮೂಲಮಾಡುವರು. ವೈರಿಗಳ ಎಲುಬುಗಳನ್ನು ಮುರಿದುಹಾಕುವರು. ಅವರನ್ನು ಬಾಣಗಳಿಂದ ಗಾಯಪಡಿಸುವರು.
9 Kamar zaki sun laɓe sun kwanta, kamar zakanya, wa zai yi ƙarfin hali yă tashe su? “Bari waɗanda suka albarkace ka, su sami albarka waɗanda kuma suka la’anta ka, su la’antu!”
೯ಆ ಜನಾಂಗವು ಸಿಂಹದಂತೆ ಕಾಲುಮುದುರಿ ಹೊಂಚುಹಾಕಿಕೊಂಡಿದೆ, ಮೃಗೇಂದ್ರನಿಗೆ ಸಮನಾದ ಆ ಜನರನ್ನು ಕೆಣಕುವುದು ಯಾರಿಂದಾದೀತು? ಇಸ್ರಾಯೇಲರೇ, ನಿಮ್ಮನ್ನು ಆಶೀರ್ವದಿಸುವವನಿಗೆ ಆಶೀರ್ವಾದವೂ, ಶಪಿಸುವವನಿಗೆ ಶಾಪವೂ ಉಂಟಾಗುವುದು” ಎಂದನು.
10 Fushin Balak ya ƙuna a kan Bala’am. Ya tafa hannunsa, ya ce masa, “Na kira ka don ka la’anta abokan gābana, amma sai ga shi ka sa musu albarka har sau uku.
೧೦ಆಗ ಬಾಲಾಕನು ಬಿಳಾಮನ ಮೇಲೆ ಕೋಪಗೊಂಡು ಚಪ್ಪಾಳೆಹೊಡೆದು ಅವನಿಗೆ, “ನನ್ನ ಶತ್ರುಗಳನ್ನು ಶಪಿಸುವುದಕ್ಕೆ ನಿನ್ನನ್ನು ಕರೆದೆನು. ಆದರೆ ಇಗೋ, ನೀನು ಅವರನ್ನು ಮೂರು ಸಾರಿಯೂ ಆಶೀರ್ವದಿಸಿದೆ.
11 Yanzu ka bar nan ka tafi gida! Na ce zan sāka maka da lada mai kyau, amma Ubangiji ya hana ka samun ladan.”
೧೧ಆದಕಾರಣ ನನ್ನನ್ನು ಬಿಟ್ಟು ನಿನ್ನ ಊರಿಗೆ ಹೋಗಿಬಿಡು. ನಿನ್ನನ್ನು ಬಹಳವಾಗಿ ಸನ್ಮಾನಿಸಿ ಘನಪಡಿಸುವೆನೆಂದು ಹೇಳಿಕೊಂಡೆನು. ಆದರೆ ನಿನಗೆ ಸನ್ಮಾನಮಾಡದಂತೆ ಯೆಹೋವನು ಅಡ್ಡಿಮಾಡಿದ್ದಾನೆ” ಎಂದು ಹೇಳಿದನು.
12 Bala’am ya ce wa Balak, “Ban faɗa wa’yan aikan da ka aiko wurina ba cewa,
೧೨ಅದಕ್ಕೆ ಬಿಳಾಮನು ಬಾಲಾಕನಿಗೆ, “ನೀನು ನನ್ನ ಬಳಿ ಕಳುಹಿಸಿದ ಸೇವಕನಿಗೆ,
13 ‘Ko da a ce Balak zai ba ni gidansa cike da azurfa da zinariya, ba zan yi wani abu ko kaɗan saɓanin umarnin Ubangiji Allahna ba, kuma dole in faɗa abin da Ubangiji ya ce ne kawai’?
೧೩‘ಬಾಲಾಕನು ನನಗೆ ತನ್ನ ಮನೇ ತುಂಬುವಷ್ಟು ಬೆಳ್ಳಿಬಂಗಾರವನ್ನು ದಾನಮಾಡಿದರೂ ನಾನು ಯೆಹೋವನ ಆಜ್ಞೆಯನ್ನು ಮೀರಿ ನನ್ನ ಇಷ್ಟದಂತೆ ಒಳ್ಳೇಯದನ್ನಾದರೂ, ಕೆಟ್ಟದ್ದನ್ನಾದರೂ ಮಾಡಲಾರೆ. ಯೆಹೋವನು ಏನು ಹೇಳುತ್ತಾನೋ ಅದನ್ನೇ ಮಾತನಾಡುವೆನು ಎಂದು ಹೇಳಲಿಲ್ಲವೋ?’
14 Yanzu zan koma wajen mutanena, amma bari in gargaɗe ka game da abin da mutanen nan za su yi wa mutanenka cikin kwanaki masu zuwa.”
೧೪ಈಗ ನಾನು ನನ್ನ ಜನರ ಬಳಿಗೆ ಹೋಗುತ್ತೇನೆ. ಆದರೆ ಕಡೆಗೆ ಆ ಜನರು ನಿನ್ನ ಜನರಿಗೆ ಮುಂದಿನ ದಿನಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುತ್ತೇನೆ” ಎಂದನು.
15 Sa’an nan ya furta saƙonsa. “Maganar Bala’am ɗan Beyor, saƙon mutumin da idanunsa ke gani sarai,
೧೫ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದನು, “ಬೆಯೋರನ ಮಗನಾದ ಬಿಳಾಮನಿಗುಂಟಾದ ದೈವೋಕ್ತಿ, ಮನೋದೃಷ್ಟಿಯಿಂದ ನೋಡುವ ಪುರುಷನು ನುಡಿದದ್ದು.
16 maganar mutumin da ya saurari maganar Allah, wanda yake da sani daga Mafi Ɗaukaka, wanda yake ganin wahayi daga Maɗaukaki, wanda ya fāɗi rubda ciki, wanda kuma idanunsa suna a buɗe.
೧೬ದೇವರ ಮಾತುಗಳನ್ನು ಕೇಳುವವನೂ, ಪರಾತ್ಪರನಾದ ದೇವರ ಜ್ಞಾನವನ್ನು ಪಡೆದವನೂ, ಪರವಶವಾಗಿ ಕಣ್ಣುತೆರೆದು, ಸರ್ವಶಕ್ತನ ದರ್ಶನವನ್ನು ಹೊಂದುವವನೂ ಆಗಿರುವ ಪುರುಷನು ನುಡಿದದ್ದು.
17 “Na gan shi, amma ba yanzu ba; na hange shi, amma ba kusa ba. Tauraro zai fito daga Yaƙub; sandan mulki zai fito daga Isra’ila. Zai ragargaje goshin Mowab, kawunan dukan’ya’yan Set.
೧೭ನಾನು ಅವನನ್ನು ನೋಡುವೆನು, ಈಗಲ್ಲ. ಆತನನ್ನು ದೃಷ್ಟಿಸುವೆನು, ಆದರೆ ಸಮೀಪದಲ್ಲಿ ಅಲ್ಲ. ಯಾಕೋಬ ವಂಶದವರಲ್ಲಿ ನಕ್ಷತ್ರವು ಉದಯಿಸುವುದು. ಇಸ್ರಾಯೇಲರಲ್ಲಿ ರಾಜದಂಡವು ಏಳುವುದು. ಅದು ಮೋವಾಬ್ಯರ ತಲೆಯನ್ನು ಸೀಳಿಹಾಕುವುದು ಸೇತನ ಎಲ್ಲಾ ಮಕ್ಕಳನ್ನು ಸಂಹರಿಸಿವುದು.
18 Za a ci Edom da yaƙi; za a ci Seyir, abokiyar gābanta, amma Isra’ila zai ƙara ƙarfi.
೧೮ಅದಲ್ಲದೆ ಇಸ್ರಾಯೇಲರು ಎದೋಮ್ಯರ ದೇಶವನ್ನೂ ಸ್ವಾಧೀನಪಡಿಸಿಕೊಂಡಿದ್ದಾರೆ, ಹಗೆಗಳಾದ ಸೇಯೀರಿನವರು ಅವನಿಗೆ ಅಧೀನರಾದರು.
19 Mai mulki zai fito daga Yaƙub yă hallaka waɗanda suka ragu a birnin.”
೧೯ಇಸ್ರಾಯೇಲರೋ ಬಲಗೊಂಡವರು, ಯಾಕೋಬ್ಯರಿಗೇ ದೊರೆತನವಾಯಿತು, ಪಟ್ಟಣಗಳಿಂದ ತಪ್ಪಿಸಿಕೊಂಡವರೂ ನಾಶವಾದರು” ಎಂದನು.
20 Sai Bala’am ya ga Amalek, ya kuma furta maganarsa. “Amalek yana cikin al’ummai na fari, amma zai zama na ƙarshen da za a hallaka.”
೨೦ತರುವಾಯ ಅಮಾಲೇಕ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ, “ಅಮಾಲೇಕ್ಯರು ಜನಾಂಗಗಳಲ್ಲಿ ಪ್ರಮುಖರಲ್ಲವೇ, ಆದರೂ ನಾಶನವೇ ಅವರ ಗತಿ.”
21 Sai ya ga Keniyawa, ya kuma furta maganarsa. “Wurin zamanku lafiya yake, an kuma sa sheƙarku a cikin duwatsu;
೨೧ಬಳಿಕ ಅವನು ಕೇನ್ಯರನ್ನು ನೋಡಿ ಅವರ ವಿಷಯದಲ್ಲಿ ಪ್ರವಾದಿಸಿದ್ದೇನೆಂದರೆ, “ನಿಮ್ಮ ನಿವಾಸ ಸ್ಥಳವು ಶಾಶ್ವತವಾಗಿಯೇ ತೋರುತ್ತದೆ, ಬೆಟ್ಟದ ತುದಿಯಲ್ಲಿ ಗೂಡನ್ನು ಮಾಡಿಕೊಂಡಿದ್ದೀರಿ.
22 duk da haka, za a hallaka ku Keniyawa sa’ad da Asshur ya kame ku.”
೨೨ಆದರೂ ಕೇನ್ಯರೂ ನಾಶವಾಗುವರು. ಅದು ಎಷ್ಟು ದೂರ ಅನ್ನುತ್ತೀರೋ? ಅಶ್ಶೂರ್ಯರೇ ನಿಮ್ಮನ್ನು ಸೆರೆಹಿಡಿದುಕೊಂಡು ಹೋಗುವರು.”
23 Sai ya furta maganarsa ya ce, “Wayyo, wa zai rayu sa’ad da Allah ya yi haka?
೨೩ಅವನು ಮತ್ತೂ ಕಡೆಯದಾಗಿ ಪ್ರವಾದಿಸಿದ್ದೇನೆಂದರೆ, “ಅಯ್ಯೋ! ದೇವರು ಹೀಗೆ ಮಾಡುವಾಗ ಯಾರು ಉಳಿಯುವರು?
24 Jiragen ruwa za su zo daga Kittim; za su murƙushe Asshur da Eber, amma su ma za a hallaka su.”
೨೪ಕಿತ್ತೀಮೆಂಬ ಸ್ಥಳದಿಂದ ಜನರು ಹಡಗುಗಳಲ್ಲಿ ಬಂದು ಅಶ್ಶೂರ್ಯರನ್ನೂ ಏಬೆರ್ ಜನರನ್ನೂ ಸೋಲಿಸುವರು; ಅವರಿಗೂ ನಾಶನವುಂಟಾಗುವುದು” ಎಂದನು.
25 Sa’an nan Bala’am ya tashi ya koma gidan, Balak kuma ya yi tafiyarsa.
೨೫ತರುವಾಯ ಬಿಳಾಮನು ಸ್ವದೇಶಕ್ಕೆ ತಿರುಗಿ ಹೋದನು, ಬಾಲಾಕನೂ ಹೊರಟುಹೋದನು.