< I Na Lii 5 >
1 HOOUNA mai la o Hirama ke alii o Turo i kaua mau kauwa io Solomona la, no ka mea, ua lohe oia i ko lakou poni ana ia ia i alii ma ka hakahaka o kona makuakane; no ka mea, he hoaaloha mau o Hirama no Davida.
೧ದಾವೀದನ ಜೀವಮಾನದಲ್ಲೆಲ್ಲಾ ಅವನ ಮಿತ್ರನಾಗಿದ್ದ ತೂರಿನ ಅರಸನಾದ ಹೀರಾಮನು ಸೊಲೊಮೋನನು ಅವನ ತಂದೆಯ ನಂತರ ಅಭಿಷೇಕಿಸಲ್ಪಟ್ಟನು ಎಂಬುದಾಗಿ ಕೇಳಿದಾಗ, ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.
2 Hoouna aku la hoi o Solomona io Hirama la, i aku la,
೨ಅನಂತರ ಸೊಲೊಮೋನನು ದೂತರ ಮುಖಾಂತರವಾಗಿ ಹೀರಾಮನಿಗೆ,
3 Ua ike no oe i ko'u makuakane ia Davida aole i hiki ia ia ke kukulu i ka hale no ka inoa o Iehova kona Akua, no ua kaua e puni ana ia ia ma na aoao a pau, a hiki i ka manawa i waiho iho ai ke Akua ia lakou malalo ae o kona mau kapuwai
೩“ಯೆಹೋವನ ಅನುಗ್ರಹದಿಂದ ನಮ್ಮ ತಂದೆಯಾದ ದಾವೀದನಿಗೆ ಎಲ್ಲಾ ಶತ್ರುಗಳು ವಶವಾಗುವವರೆಗೆ ಅವನು ತನ್ನ ಸುತ್ತಲೂ ಯುದ್ಧಗಳನ್ನು ನಡೆಸಬೇಕಾಯಿತು. ಆದುದರಿಂದ ಅವನು ತನ್ನ ದೇವರಾದ ಯೆಹೋವನ ಹೆಸರಿಗೆ ಆಲಯವನ್ನು ಕಟ್ಟಿಸಲಾರದೆ ಹೋದನೆಂದು ನೀನು ಬಲ್ಲೇ.
4 Aka, ano la, ua haawi mai nei Iehova ko'u Akua i ka maha a puni, i ole he mea ku e, aole hoi mea e popilikia ai.
೪ನನಗಾದರೋ ನನ್ನ ದೇವರಾದ ಯೆಹೋವನು ಎಲ್ಲಾ ಕಡೆಗಳಲ್ಲಿಯೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ. ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ, ಆತನ ದಯೆಯಿಂದ ಆಪತ್ತು ನನ್ನಿಂದ ದೂರವಾಗಿದೆ.
5 Eia no hoi, ke manao nei au e kukulu i ka hale no ka inoa o Iehova ko'u Akua, mamuli o ka Iehova i olelo mai ai ia Davida ko'u makuakane, i ka i ana mai, O kau keiki au e hoonoho ai maluna o kou nohoalii ma kou wahi, oia ke hana mai i hale no ko'u inoa.
೫ಯೆಹೋವನು ನನ್ನ ತಂದೆಯಾದ ದಾವೀದನಿಗೆ, ‘ನಾನು ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗನು ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ’ ಎಂದು ಹೇಳಿದ್ದರಿಂದ ನಾನು ನನ್ನ ದೇವರಾದ ಯೆಹೋವನ ಹೆಸರಿಗೆ ಒಂದು ಅಲಯವನ್ನು ಕಟ್ಟಬೇಕೆಂದಿದ್ದೇನೆ,
6 Ano hoi e kauoha ae oe e kalai lakou i mau laau kedera no'u, mai Lebanona mai; a o ka'u poe kauwa kekahi pu me kau poe kauwa; a e uku aku wau ia oe no kau poe kauwa e like me kau olelo a pau; no ka mea, ua ike oe, aohe mea iwaena o makou e akamai i ke kalai laau e like me ko Sidona.
೬ಆದುದರಿಂದ ನೀನು ನನಗೋಸ್ಕರ ಲೆಬನೋನಿನ ದೇವದಾರು ವೃಕ್ಷಗಳನ್ನು ಕೊಯ್ಯಬೇಕೆಂದು ನಿನ್ನ ಆಳುಗಳಿಗೆ ಆಜ್ಞಾಪಿಸು, ಅವರ ಜೊತೆಯಲ್ಲಿ ನನ್ನ ಆಳುಗಳನ್ನೂ ಕಳುಹಿಸುವೆನು. ಮತ್ತು ನಿನ್ನ ಆಳುಗಳಿಗೆ ನೀನು ಹೇಳುವಷ್ಟು ಸಂಬಳವನ್ನು ಕೊಡುತ್ತೇನೆ. ಚೀದೋನ್ಯರಂತೆ ಮರಕೊಯ್ಯುವುದರಲ್ಲಿ ಜಾಣರು ನಮ್ಮಲ್ಲಿರುವುದಿಲ್ಲವೆಂದು ನಿನಗೆ ಗೊತ್ತಿದೆಯಲ್ಲಾ” ಎಂದು ಹೇಳಿದನು.
7 Eia kekahi, i ka lohe ana o Hirama i na olelo a Solomona, olioli nui ae la ia, i iho la hoi ia, E hoomaikaiia o Iehova i keia la, ka mea i haawi mai ia Davida i keiki naauao maluna o keia lahuikanaka nui.
೭ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟು, “ಈ ಮಹಾ ಜನಾಂಗವನ್ನು ಆಳುವುದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತನಾದ ಮಗನನ್ನು ಅನುಗ್ರಹಿಸಿದ ಯೆಹೋವನಿಗೆ ಈಗ ಸ್ತೋತ್ರವಾಗಲಿ” ಎಂದು ನುಡಿದನು.
8 Hoouna mai la o Hirama io Solomona la, i mai la, Ua noonoo ae nei au i na mea au i kauleo mai ai ia'u; a e hana no wau i kau mea e makemake ai a pau i na laau kedera a me na laau kaa.
೮ಇದಲ್ಲದೆ ಅವನು ಸೊಲೊಮೋನನಿಗೆ, “ನೀನು ಹೇಳಿಕಳುಹಿಸಿದ್ದನ್ನು ಕೇಳಿದೆನು. ದೇವದಾರು ವೃಕ್ಷಗಳನ್ನೂ, ತುರಾಯಿ ಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು.
9 E lawe ae ka'u poe kauwa mai Lebanona ae a kahakai; a na'u no e alo aku ia mau mea ma ke kai, ma na huina laau lana, i kahi au i hoomaopopo mai ai, a e hoopae aku au ia lakou malaila, a e lawe ae oe; a e hooko ae i ko'u makemake i ka haawi ana mai i ka ai na ko ka hale o'u.
೯ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ, ಸಮುದ್ರ ಮಾರ್ಗವಾಗಿ ನೀನು ನೇಮಿಸುವ ಸ್ಥಳಕ್ಕೆ ಕಳುಹಿಸಿ, ಅಲ್ಲಿ ಬಿಚ್ಚಿಸಿಕೊಡುವೆನು. ನೀನು ಅವುಗಳನ್ನು ತೆಗೆದುಕೊಂಡು ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರ ಪದಾರ್ಥಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ” ಎಂದು ಹೇಳಿ ಕಳುಹಿಸಿದನು.
10 Pela i haawi mai ai o Hirama i na laau kedera a me na laau kaa e like me kona makemake a pau.
೧೦ಹೀಗೆ ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರು ಮರಗಳನ್ನೂ ಮತ್ತು ತುರಾಯಿ ಮರಗಳನ್ನೂ ಕೊಡುತ್ತಿದ್ದನು.
11 A haawi aku la o Solomona ia Hirama i na kora hua palaoa he iwakalua tausani i ai na ko kona hale, a me na kora aila maemae he iwakalua. Pela i haawi ai o Solomona ia Hirama i kela makahiki keia makahiki.
೧೧ಸೊಲೊಮೋನನಾದರೋ ಪ್ರತಿ ವರ್ಷ ಅವನ ಮನೆಯವರ ಆಹಾರಕ್ಕಾಗಿ ಇಪ್ಪತ್ತು ಸಾವಿರ ಕೋರ್ ಗೋದಿಯನ್ನೂ, ಇಪ್ಪತ್ತು ಕೋರ್ ನಿರ್ಮಲವಾದ ಎಣ್ಣೆಯನ್ನೂ ಕೊಡುತ್ತಿದ್ದನು.
12 Haawi mai la hoi o Iehova i ka naauao ia Solomona e like me kana olelo hoopomaikai ia ia: a he kuikahi like ko Hirama me Solomona, a hana pu iho la laua i berita.
೧೨ಯೆಹೋವನು ತಾನು ವಾಗ್ದಾನ ಮಾಡಿದಂತೆ ಸೊಲೊಮೋನನಿಗೆ ಜ್ಞಾನವನ್ನು ಅನುಗ್ರಹಿಸಿದನು. ಸೊಲೊಮೋನನಿಗೂ ಹೀರಾಮನಿಗೂ ಒಳ್ಳೆಯ ಸಂಬಂಧವಿತ್ತು, ಅವರಿಬ್ಬರು ಪರಸ್ಪರವಾಗಿ ಒಡಂಬಡಿಕೆ ಮಾಡಿಕೊಂಡಿದ್ದರು.
13 A auhau ae la o Solomona ke alii i ka Iseraela a pau, a o ka auhau he kanakolu tausani kanaka.
೧೩ಅರಸನಾದ ಸೊಲೊಮೋನನು ಎಲ್ಲಾ ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಜನರನ್ನು ಬಲವಂತವಾಗಿ ಕರೆತಂದನು.
14 Hoouna aku la oia ia lakou i Lebanona he umi tausani i ka malama, ma na papa; hookahi malama i noho ai lakou ma Lebanona, a elua malama i noho ai lakou ma ko lakou mau hale iho; a o Adonirama maluna o keia auhau.
೧೪ಅವರಲ್ಲಿ ತಿಂಗಳಿಗೆ ಹತ್ತು ಸಾವಿರ ಜನರಂತೆ ಪ್ರತಿತಿಂಗಳು ಲೆಬನೋನಿಗೆ ಕಳುಹಿಸುತ್ತಿದ್ದನು. ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದರೆ ಎರಡು ತಿಂಗಳು ಮನೆಯಲ್ಲಿರುತ್ತಿದ್ದರು. ಅದೋನೀರಾಮನು ಇವರ ಮುಖ್ಯಸ್ಥನಾಗಿದ್ದನು.
15 Ia Solomona he kanahiku tausani kanaka halihali i na mea hali, a he kanawalu tausani mea kalai ma na kuahiwi.
೧೫ಇದಲ್ಲದೆ ಸೊಲೊಮೋನನಿಗೆ ಎಪ್ಪತ್ತು ಸಾವಿರ ಜನರು ಹೊರೆ ಹೊರುವವರೂ, ಎಂಭತ್ತು ಸಾವಿರ ಜನರು ಕಲ್ಲುಗಣಿಯಲ್ಲಿ ಕೆಲಸ ಮಾಡುವವರೂ ಇದ್ದರು.
16 Okoa na luna nui o ko Solomona mau luna, na mea maluna o ka hana, ekolu tausani me na haneri ekolu o na luna i hooponopono i na kanaka e hana ana i ka hana.
೧೬ಈ ಕೆಲಸದವರ ಮೇಲ್ವಿಚಾರಣೆಗಾಗಿ ಅವನು ಮೂರು ಸಾವಿರದ ಮುನ್ನೂರು ಮೇಸ್ತ್ರಿಗಳನ್ನು ನೇಮಿಸಿದನು.
17 Kauoha mai la ke alii, a lawe mai la lakou i na pohaku nui, na pohaku he nui ke kumukuai, na pohaku kalaiia e hoonoho iho i ke kumu o ka hale.
೧೭ಕೆತ್ತಿದ ಕಲ್ಲುಗಳಿಂದ ಹಾಕಬೇಕಾದ ದೇವಾಲಯದ ಅಸ್ತಿವಾರಕ್ಕಾಗಿ ಆಳುಗಳು ಸೊಲೊಮೋನನ ಅಪ್ಪಣೆಯಂತೆ ಶ್ರೇಷ್ಠವಾದ ದೊಡ್ಡ ಕಲ್ಲುಗಳನ್ನು ಕೆತ್ತುತ್ತಿದ್ದರು.
18 Na ko Solomona poe hanahale, a me ko Hirama poe hanahale i kalai, a me ko Gibela. Pela lakou i hoomakaukau ai i na laau a me na pohaku e hana'ku ai i ka hale.
೧೮ಸೊಲೊಮೋನನ ಮತ್ತು ಹೀರಾಮನ ಶಿಲ್ಪಿಗಳೂ ಹಾಗು ಗೆಬಾಲ್ಯರೂ ಅವುಗಳನ್ನು ಕೆತ್ತುತ್ತಿದ್ದರು. ದೇವಾಲಯ ಕಟ್ಟುವುದಕ್ಕಾಗಿ ಬೇಕಾಗುವ ಕಲ್ಲು ಮತ್ತು ಮರಗಳನ್ನು ಸಿದ್ಧಪಡಿಸಿದರೂ ಇವರೇ.