< II Oihanaalii 18 >
1 A IA ia Iehosapata ka waiwai, a me ka hanohano he nui loa, a kuikahi pu ae la ia me Ahaba.
೧ಯೆಹೋಷಾಫಾಟನಿಗೆ ಧನಘನತೆಗಳು ಬಹಳವಾಗಿದ್ದವು. ಅವನು ಅಹಾಬನೊಡನೆ ನೆಂಟಸ್ಥಿಕೆಯನ್ನು ಮಾಡಿಕೊಂಡನು.
2 A pau ae la kekahi mau makahiki, iho iho la oia ilalo io Ahaba la ma Samaria: a pepebi iho la o Ahaba nana, a na na kanaka me ia i na hipa, a me na bipi he nui loa, a noi ikaika mai ia ia e pii pu me ia i Ramota-Gileada.
೨ಕೆಲವು ವರ್ಷಗಳಾದ ನಂತರ ಅವನ ಬಳಿಗೆ ಸಮಾರ್ಯಕ್ಕೆ ಹೋದನು. ಅಹಾಬನು ಅವನಿಗೂ ಅವನೊಡನೆ ಬಂದ ಜನರಿಗಾಗಿಯೂ ಹಿಂಡುಗಳಿಂದ ಅನೇಕ ದನಕುರಿಗಳನ್ನು ಕೊಯ್ದು ಔತಣವನ್ನು ಏರ್ಪಡಿಸಿದನು. ತನ್ನ ಸಂಗಡ ಯುದ್ಧಕ್ಕಾಗಿ ರಾಮೋತ್ ಗಿಲ್ಯಾದಿಗೆ ಬರಬೇಕೆಂದು ಅವನನ್ನು ಪ್ರೇರೇಪಿಸಿದನು.
3 Olelo mai la o Ahaba ke alii o ka Iseraela ia Iehosapata i ke alii o ka Iuda, Aole anei oe e hele pu me au i Ramota-Gileada? I aku la kela, E like me oe pela no au, e like me kou poe kanaka, pela ko'u poe kanaka, o kakou pu ma ke kaua.
೩ಇಸ್ರಾಯೇಲರ ಅರಸನಾದ ಅಹಾಬನು ಯೆಹೂದ್ಯರ ಅರಸನಾದ ಯೆಹೋಷಾಫಾಟನನ್ನು, “ನನ್ನ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?” ಎಂದು ಕೇಳಿದನು. ಅದಕ್ಕೆ ಅವನು, “ನಾನೂ, ನೀನೂ ನನ್ನ ಜನರೂ ನಿನ್ನ ಜನರೂ ಒಂದೇ ಅಲ್ಲವೇ? ನಿನ್ನ ಜೊತೆಯಲ್ಲಿ ಯುದ್ಧಕ್ಕೆ ಬರುವೆನು” ಎಂದು ಉತ್ತರ ಕೊಟ್ಟನು.
4 I aku la o Iehosapata i ke alii o ka Iseraela, E ninau oe i ka olelo a Iehova i keia la.
೪ಯೆಹೋಷಾಫಾಟನು ಇಸ್ರಾಯೇಲರ ಅರಸನಿಗೆ, “ಇಂದು ಯೆಹೋವನ ಆಲೋಚನೆಯನ್ನು ಕೇಳು” ಎಂದು ಕೇಳಿಕೊಂಡನು.
5 Alaila houluulu ae la ke alii o ka Iseraela i na kaula eha haneri kanaka, a olelo aku la ia lakou, E hele anei makou i Ramota-Gileada i ke kaua? a e oki paha? I mai la lakou ia ia, O pii, a na ke Akua ia e haawi mai iloko o ka lima o ke alii.
೫ಅನಂತರ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ನಾನೂರು ಮಂದಿ ಪ್ರವಾದಿಗಳನ್ನು ಸೇರಿಸಿ, “ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕೆ ಹೋಗಬಹುದೋ? ಹೋಗಬಾರದೋ?” ಎಂದು ಕೇಳಿದನು. ಅವರು, “ಹೋಗಬಹುದು, ದೇವರು ಅದನ್ನು ಅರಸನ ಕೈಗೆ ಒಪ್ಪಿಸುವನು” ಎಂದರು.
6 Olelo aku la o Iehosapata, Aole anei he kaula e ae o Iehova maanei i ninau kakou ia ia?
೬ಆದರೆ ಯೆಹೋಷಾಫಾಟನು ಇಸ್ರಾಯೇಲರ ಅರಸನಿಗೆ, “ಯೆಹೋವನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೊಬ್ಬ ಪ್ರವಾದಿ ಇಲ್ಲವೇ?” ಎಂದು ಕೇಳಿದನು.
7 I mai la ke alii o ka Iseraela ia Iehosapata, Eia no kekahi kanaka i koe ma ona la e imi ai ia Iehova, o Mikaia kona inoa, ke keiki a Imela, aka, he inaina ko'u ia ia; no ka mea, aole i wanana mai ia no'u i ka pomaikai, aka, i ka poino wale no i kona mau la a pau. I aku la o Iehosapata, Mai olelo ke alii pela.
೭ಅವನು, “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸ ಬಲ್ಲವನಾದ ಒಬ್ಬ ಪ್ರವಾದಿ ಇದ್ದಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನು ನುಡಿಯದೆ, ಅಶುಭವನ್ನೇ ನುಡಿಯುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗನ್ನಬಾರದು” ಎಂದನು.
8 Kahea aku la ke alii o ka Iseraela i kekahi o na luna haku, E kii koke oe ia Mikaia ke keiki a Imela.
೮ಆಗ ಇಸ್ರಾಯೇಲರ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ, “ಬೇಗ ಹೋಗಿ ಇಮ್ಲನ ಮಗನಾದ ಮೀಕಾಯೆಹುವನ್ನು ಕರೆದುಕೊಂಡು ಬಾ” ಎಂದು ಆಜ್ಞಾಪಿಸಿದನು.
9 A noho iho la ke alii o ka Iseraela a me Iehosapata ke alii o ka Iuda, kela mea keia mea maluna o kona nohoalii, ua aahu laua i ko laua aahu alii, a noho laua ma kahi akea ma ka puka kahi e komo ai iloko o Samaria; a wanana iho la na kaula a pau imua o laua.
೯ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡಿರಲು. ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಪ್ರವಾದಿಸತೊಡಗಿದರು.
10 A o Zedakia ke keiki a Kenaana, hana iho la ia nona i mau kiwi hao, a olelo mai la, Penei i olelo mai ai o Iehova, Me keia mail mea oe e pahu aku ai i ko Suria, a pau lakou.
೧೦ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ ತಲೆಗೆ ಕಟ್ಟಿಕೊಂಡು ಬಂದು, “ಕೊಂಬುಗಳಿಂದಲೋ ಎಂಬಂತೆ ನೀನು ಅರಾಮ್ಯರನ್ನು ಇರಿದು ಕೊಂದುಹಾಕುವಿ ಎಂಬುದಾಗಿ ಯೆಹೋವನು ಹೇಳುತ್ತಾನೆ” ಎಂದನು.
11 A wanana ae la ka poe kaula a pau loa pela, i mai la, E pii i Ramota-Gileada, a lanakila; ua haawi mai o Iehova ia wahi iloko o ka lima o ke alii.
೧೧ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ನುಡಿದು, “ರಾಮೋತ್ ಗಿಲ್ಯಾದಿಗೆ ಹೋಗು; ನೀನು ಜಯಶಾಲಿಯಾಗಿ ಬರುವಿ; ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು” ಎಂದರು.
12 A o ka elele, ka mea i hele ae e kii aku ia Mikaia, olelo aku la oia ia ia, i aku la, Aia hoi, o na olelo a pau a na kaula e wanana ai, hookahi wale no ia, o ka pomaikai no ke alii; i hookahi hoi kau olelo me ka lakou, e olelo oe ma ka pomaikai.
೧೨ಇತ್ತ ಮೀಕಾಯೆಹುವನ್ನು ಕರೆಯುವುದಕ್ಕೆ ಬಂದಿದ್ದ ದೂತನು ಅವನಿಗೆ, “ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ತಿಳಿಸುತ್ತಿದ್ದಾರೆ; ದಯವಿಟ್ಟು ನೀನೂ ಅವರಂತೆ ಶುಭವನ್ನೇ ತಿಳಿಸು” ಎಂದು ಹೇಳಿದನು.
13 I mai la o Mikaia, Ma ke ola o Iehova, o na mea a ko'u Akua i olelo mai ai, oia ka'u o olelo aku ai.
೧೩ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ನನ್ನ ದೇವರು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು.
14 A hiki ia i ke alii, olelo ke alii ia ia, E Mikaia, e pii anei makou i Ramota-Gileada, i ke kaua? a e oki paha? I mai kela, E pii, e pomaikai, a e haawiia ua poe la iloko o ko olua lima.
೧೪ಅವನು ಅರಸನ ಬಳಿಗೆ ಬಂದಾಗ ಅರಸನು, “ಮೀಕಾಯೆಹುವೇ? ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ? ಹೋಗಬಾರದೋ? ಎಂದು ಕೇಳಿದನು. ಅವನು, ಹೋಗಬಹುದು, ಕೃತಾರ್ಥನಾಗಿ ಬರುವಿರಿ, ವೈರಿಗಳು ನಿನ್ನ ಕೈವಶವಾಗುವರು” ಎಂದು ಹೇಳಿದನು.
15 Olelo aku la ke alii ia ia, Ehia la ka'u mau kauoha hoohiki aku ia oe, i ole oe e olelo mai ia'u i ka mea e, i ka mea oiaio wale no, ma ka inoa o Iehova?
೧೫ಆಗ ಅರಸನು ಅವನಿಗೆ, “ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಾನು ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು
16 I mai la kela, Ua ike au i ka Iseraela a pau e auwana ana ma na mauna e like me na hipa kahu ole; olelo mai o Iehova, aole o lakou haku, e hoi kela kanaka keia kanaka i kona hale iho me ka maluhia.
೧೬ಆಗ ಅವನು, “ಇಸ್ರಾಯೇಲರೆಲ್ಲರೂ ಕುರುಬನಿಲ್ಲದ ಕುರಿ ಹಿಂಡುಗಳಂತೆ ಬೆಟ್ಟಗಳಲ್ಲಿ ಚದರಿ ಹೋದದ್ದನ್ನು ಕಂಡೆನು; ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿ ಇರುತ್ತಾರೆ; ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’” ಎಂಬುದಾಗಿ ಉತ್ತರಕೊಟ್ಟನು.
17 I aku la ke alii o ka Iseraela ia Iehosapata, Aole anei au i olelo aku ia oe, aole wanana mai kela no'u i ka pomaikai, aka, i ka poino wale no?
೧೭ಆಗ ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, “ಈ ಪ್ರವಾದಿಯು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ, ತಿಳಿಸುತ್ತಾನೆಂದು ನಾನು ನಿನಗೆ ಹೇಳಲಿಲ್ಲವೋ?” ಎಂದನು.
18 I mai la ke kaula, No ia mea, e hoolohe mai oe i ka olelo a Iehova; ua ike au ia Iehova e noho ana maluna o kona nohoalii, a o ka poe koa a pau o na lani e ku ana ma kona lima akau, a me kona lima hema.
೧೮ಅದಕ್ಕೆ ಮಿಕಾಯೆಹುವು, “ಅದಿರಲಿ, ಯೆಹೋವನ ವಾಕ್ಯವನ್ನು ಕೇಳಿರಿ, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತಿದ್ದನ್ನೂ ಕಂಡೆನು.
19 Olelo ae la o Iehova, Owai la ka mea e hoowalewale ia Ahaba ke alii o ka Iseraela i pii aku oia a make ma Ramota-Gileada? Olelo ae la kekahi peneia, a o kekahi hoi peneia.
೧೯ಯೆಹೋವನು ತನ್ನ ಹತ್ತಿರ ನಿಂತವರನ್ನು, ‘ಇಸ್ರಾಯೇಲರ ಅರಸನಾದ ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸ ಬಲ್ಲಿರಿ?’ ಎಂದು ಕೇಳಿದಾಗ, ಒಬ್ಬನು ಒಂದು ವಿಧವಾಗಿಯೂ ಇನ್ನೊಬ್ಬನು ಇನ್ನೊಂದು ವಿಧವಾಗಿಯೂ ಉತ್ತರಕೊಟ್ಟರು.
20 Alaila, hiki mai kekahi uhane, a ku ae la imua o Iehova, a olelo aku la ia, Owau ke hoowalewale ia ia. I ae la o Iehova, Pehea?
೨೦ಕಡೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಆತನಿಗೆ, ‘ನಾನು ಹೋಗಿ ಅವನನ್ನು ಪ್ರೇರೇಪಿಸುವೆನು’ ಎಂದಿತು. ‘ಹೇಗೆ ಪ್ರೇರೇಪಿಸುವಿ?’ ಎಂದು ಯೆಹೋವನು ಕೇಳಲು,
21 I aku la kela, E hele au a e lilo au i uhane wahahee iloko o na waha o kona poe kaula a pau. I ae la o Iehova, E hoowalewale oe, a e lanakila hoi; e hele oe a hana no pela.
೨೧ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳ ಒಳಗೆ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಯೆಹೋವನು ಅದಕ್ಕೆ, ‘ಹೋಗಿ ಅದರಂತೆ ಮಾಡು; ಅವನನ್ನು ಪ್ರೇರೇಪಿಸು ನೀನು ಸಫಲನಾಗುವಿ’ ಎಂದನು.
22 Ano hoi, ua haawi mai o Iehova i ka uhane wahahee iloko o ka waha o keia poe kaula au, a o Iehova hoi ua olelo mai oia nau i ka poino.
೨೨ನೋಡು, ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು, ನಿನ್ನ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ” ಎಂದು ಹೇಳಿದನು.
23 Alaila, hookokoke o Zedakia ke keiki a Kenaana, a kui mai ia Mikaia ma ka papalina, me ka i ana mai, Ma ka aoao hea i hele ai ka uhane o Iehova mai o'u aku nei e olelo aku ia oe.
೨೩ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ, “ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತನಾಡುವುದಕ್ಕಾಗಿ ಯಾವ ಮಾರ್ಗವಾಗಿ ಬಂದಿತು?” ಎಂದನು.
24 I aku la o Mikaia, E ike auanei oe, i ka la e komo ai oe iloko o ke keena iloko, e pee iho.
೨೪ಅದಕ್ಕೆ ಮೀಕಾಯೆಹುವು, “ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು” ಎಂದು ಉತ್ತರ ಕೊಟ್ಟನು.
25 Olelo aku la ke alii o ka Iseraela, E lawe oukou ia Mikaia, a e hoihoi ia ia io Amona la i ka luna iloko o ke kulanakauhale, a ia Ioasa ke keiki a ke alii.
೨೫ಆಗ ಇಸ್ರಾಯೇಲರ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪಟ್ಟಣದ ಅಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿರಿ.
26 E olelo aku ia laua penei, Ua i mai la ke alii, e hookomo i keia kanaka iloko o ka hale paahao, a e hanai ia ia i ka berena o ka pilikia a me ka wai o ka pilikia, a hoi mai au me ka maluhia.
೨೬ಅವರಿಗೆ, ‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಹೇಳಿದ್ದಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು.
27 I aku la o Mikaia, Ina e hoi io mai oe me ka maluhia, aole o Iehova i olelo mai ma o'u nei. Olelo aku la ia, E hoolohe oukou, e na kanaka a pau.
೨೭ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತನಾಗಿ ಬರುವುದಾದರೆ, ನಾನು ನುಡಿದದ್ದು ಯೆಹೋವನ ಮಾತಲ್ಲ” ಎಂದು ಹೇಳಿ, “ಮಹಾ ಜನರೇ, ನನ್ನ ಮಾತನ್ನು ಗಮನದಲ್ಲಿಟ್ಟುಕೊಳ್ಳಿರಿ” ಎಂದು ಕೂಗಿ ಹೇಳಿದನು.
28 Alaila pii aku la ke alii o ka Iseraela, a me Iehosapata, ke alii o ka Iuda, i Ramota-Gileada.
೨೮ಇಸ್ರಾಯೇಲರ ಅರಸನೂ ಹಾಗೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಮೋತ್ ಗಿಲ್ಯಾದಿಗೆ ಯುದ್ಧಕ್ಕೆ ಹೊರಟರು.
29 Olelo mai la ke alii o ka Iseraela ia Iehosapata, E huna au ia'u iho, a e komo iloko o ke kaua, aka, e komo oe i kou kapa alii. A huna iho ke alii o ka Iseraela ia ia iho, a komo iloko o ke kaua.
೨೯ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, “ನಾನು ವೇಷ ಹಾಕಿಕೊಂಡು ಯುದ್ಧ ಭೂಮಿಗೆ ಬರುತ್ತೇನೆ; ನೀನಾದರೋ ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡೇ ಬಾ” ಎಂದು ಹೇಳಿ ವೇಷ ಹಾಕಿಕೊಂಡನು; ತರುವಾಯ ಯುದ್ಧ ಭೂಮಿಗೆ ಹೋದರು.
30 Ua kauoha ke alii o Suria i na luna o kona mau hale kaa, i aku la, Mai kaua aku i kekahi mea uuku, aole i kekahi mea nui, i ke alii o ka Iseraela wale no.
೩೦ಅರಾಮ್ಯರ ಅರಸನು ತನ್ನ ರಥಬಲದ ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ, ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲರ ಅರಸನಿಗೇ ಗುರಿಯಿಡಿರಿ” ಎಂದು ಆಜ್ಞಾಪಿಸಿದ್ದನು.
31 A ike mai na luna o na hale kaa ia Iehosapata, i iho la lakou, O ke alii ia o ka Iseraela: a puana mai la lakou ia ia a puni e kaua mai ia ia; aka, kahea aku la o Iehosapata, a kokua mai o Iehova ia ia, a hoohuli ae la ke Akua ia lakou mai ona'ku.
೩೧ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನೆಂದು ನೆನೆದು, ಅವನಿಗೆ ವಿರುದ್ಧವಾಗಿ ಯುದ್ಧ ಮಾಡುವುದಕ್ಕೆ ಸುತ್ತಿಕೊಂಡರು. ಆಗ ಯೆಹೋಷಾಫಾಟನು ಯೆಹೋವನನ್ನು ಸಹಾಯಕ್ಕಾಗಿ ಕೂಗಿದನು. ಆಗ ದೇವರಾದ ಯೆಹೋವನು ಅವನ ನೆರವಿಗೆ ಬಂದು, ಶತ್ರುಗಳನ್ನು ಅವನ ಕಡೆಯಿಂದ ಹೊರಟು ಹೋಗುವಂತೆ ಮಾಡಿದನು.
32 Ike mai la na luna o na hale kaa, aole ke alii ia o ka Iseraela, huli ae la lakou mai ona aku la.
೩೨ಅವನು ಇಸ್ರಾಯೇಲರ ಅರಸನಲ್ಲವೆಂಬುದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂತಿರುಗಿದರು.
33 A pana wale mai la kekahi kanaka me kana kakaka, a ku i ke alii o ka Iseraela ma kahi ami o kona paleumauma; a olelo oia i ka mea nana e malama i kona hale kaa, E huli ae kou lima, a e lawe ia'u mai ke kaua aku, no ka mea, ua eha au.
೩೩ಅರಾಮ್ಯರ ಒಬ್ಬ ಸೈನಿಕನು ಗುರಿಯಿಡದೆ ಸುಮ್ಮನೆ ಒಂದು ಬಾಣವನ್ನೆಸೆಯಲು, ಆ ಬಾಣವು ಇಸ್ರಾಯೇಲರ ಅರಸನಿಗೆ, ಅವನ ಕವಚದ ಸಂದಿನಲ್ಲಿ ತಾಕಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ತೆಗೆದುಕೊಂಡು ಹೋಗು; ನನಗೆ ದೊಡ್ಡ ಗಾಯವಾಗಿದೆ” ಎಂದು ಹೇಳಿದನು.
34 Mahuahua ae la ke kaua ia la; aka, noho iho la ke alii o ka Iseraela iloko o kona hale kaa, e ku e i ko Suria, a ahiahi; a i ka napoo ana o ka la, make iho la ia.
೩೪ಆ ದಿನ ಯುದ್ಧವು ಬಹು ಘೋರವಾಗಿದ್ದುದರಿಂದ ಇಸ್ರಾಯೇಲರ ಅರಸನು ಸಾಯಂಕಾಲದವರೆಗೂ ಅರಾಮ್ಯರ ಎದುರಾಗಿ ತನ್ನ ರಥದಲ್ಲೇ ಆತುಕೊಂಡಿರಬೇಕಾಯಿತು. ಸೂರ್ಯಾಸ್ತಮಾನವಾದಾಗ ಅವನು ಸತ್ತನು.