< Ezekiela 16 >

1 HIKI mai la hoi ka olelo a Iehova ia'u, i mai la,
ಯೆಹೋವ ದೇವರ ವಾಕ್ಯವು ನನಗೆ ಬಂದಿತು:
2 E ke keiki a ke kanaka, e hoike oe ia Ierusalema i kona mau hewa i inainaia;
“ನರಪುತ್ರನೇ, ಯೆರೂಸಲೇಮಿಗೆ ಅದರ ಅಸಹ್ಯವಾದವುಗಳನ್ನು ತಿಳಿದುಕೊಳ್ಳುವ ಹಾಗೆ ಮಾಡಿ,
3 E olelo aku, Ke i mai nei no Iehova ka Haku ia Ierusalema, O kou wahi hanau ai a me kou hanau ana, ma ka aina o Kanaana ia. He Amora kou makuakane, a he Heta kou makuwahine.
ಹೀಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಯೆರೂಸಲೇಮಿನವರಿಗೆ ಹೀಗೆ ಹೇಳುತ್ತಾರೆ: ನಿಮ್ಮ ಪೂರ್ವಜರು ಮತ್ತು ನೀನು ಹುಟ್ಟಿದ್ದು ಕಾನಾನ್ ದೇಶದಲ್ಲಿ; ಅದೇ ನಿನ್ನ ಜನ್ಮಭೂಮಿ. ನಿನ್ನ ತಂದೆ ಅಮೋರಿಯನು, ನಿನ್ನ ತಾಯಿ ಹಿತ್ತಿಯಳು.
4 A i kou hanau ana, i ka la i hanau ai oe, aole i okiia kou piko, aole hoi i holoiia me ka wai i maemae; aole hoi oe i hoopaakai iki ia, aole hoi i wahi iki ia.
ನಿನ್ನ ಹುಟ್ಟಿದ ಸ್ಥಳದ ವಿಷಯವು: ನೀನು ಹುಟ್ಟಿದ ದಿನದಲ್ಲಿ ನಿನ್ನ ಹೊಕ್ಕಳು ಕತ್ತರಿಸಲಾಗಲಿಲ್ಲ; ಶುದ್ಧವಾಗುವ ಹಾಗೆ ನೀರಿನಲ್ಲಿ ತೊಳೆಯಲಾಗಲಿಲ್ಲ; ನಿನಗೆ ಉಪ್ಪನ್ನು ಸ್ವಲ್ಪವೂ ಸವರಲಿಲ್ಲ, ನಿನ್ನನ್ನು ಬಟ್ಟೆಯಿಂದ ಸುತ್ತಲಿಲ್ಲ;
5 Aohe maka i aloha ia oe, e hana aku i kahi o keia mau mea nou, e lokomaikai aku ia oe; aka, ua kiolaia'ku oe ma ke kula mawaho, i ka hoowahawahaia o kou kino, i kou la i hanauia'i.
ನಿನ್ನನ್ನು ಕರುಣಿಸಿ, ಕಟಾಕ್ಷಿಸಿ ಯಾರೂ ನಿನಗೆ ಒಂದು ಸಹಾಯವನ್ನೂ ಮಾಡಲಿಲ್ಲ. ಆದರೆ ನೀನು ಹುಟ್ಟಿದ ದಿನದಲ್ಲಿ ಅಸಹ್ಯಪಟ್ಟು ನಿನ್ನನ್ನು ಹೊಲದಲ್ಲಿ ಬಿಸಾಕಿದರು.
6 A maalo ae la au ma ou la, a ike ia oe e paumaele ana i kou koko iho, i aku la au ia oe iloko o kou koko, E ola; oiaio, ua olelo aku au ia oe iloko o kou koko, E ola.
“‘ನಾನು ನಿನ್ನ ಬಳಿಯಲ್ಲಿ ಹಾದುಹೋಗುವಾಗ, ನೀನು ನಿನ್ನ ಸ್ವಂತ ರಕ್ತದಲ್ಲಿ ಬಿದ್ದು ಹೊರಳಾಡುತ್ತಿದ್ದುದನ್ನು ನೋಡಿದಾಗ, “ಬದುಕು” ಎಂದೆನು.
7 Ua hoonui aku au ia oe e like me ka opuu o ke kula, a nui ae nei oe a mahuahua, a hiki oe i ka wa i maikai loa ai ke kino; ua nui na puuwaiu, a ua ulu kou lauoho, aka, ua olohelohe aku la oe, aole i uhiia.
ಹೊಲದಲ್ಲಿಯ ಮೊಳಕೆಯೋ ಎಂಬಂತೆ ನಾನು ನಿನ್ನನ್ನು ಬೆಳೆಸಲು, ನೀನು ಬಲಿತು, ಪ್ರಾಯವು ತುಂಬಿ, ನೀನು ಅತಿ ಸುಂದರಿಯಾದೆ, ನಿನ್ನ ಸ್ತನಗಳು ರೂಪಗೊಂಡವು, ನಿನ್ನ ಕೂದಲು ಬೆಳೆಯಿತು, ಮೊದಲು ನೀನು ಬರೀ ಬೆತ್ತಲೆಯಾಗಿದ್ದೆ.
8 A i ko'u maalo ana'e ma ou la, a nana aku ia oe, o ko'u manawa, he manawa aloha no ia, a hohola aku au i ke kihi o ko'u kapa maluna, a uhi ae la i kou olohelohe; hoohiki no hoi au nou, a komo hoi iloko o ka berita me oe, wahi a Iehova ka Haku, a lilo mai oe no'u.
“‘ಈಗ ನಾನು ನಿನ್ನ ಬಳಿ ಹಾದುಹೋಗುವಾಗ ನಿನ್ನನ್ನು ನೋಡಲು, ನಿನ್ನ ಕಾಲವು ಪ್ರೇಮಿಸುವ ಕಾಲವಾಗಿತ್ತು. ಆಗ ನಾನು ನನ್ನ ಸೆರಗನ್ನು ನಿನ್ನ ಮೇಲೆ ಹೊದಿಸಿ, ನಿನ್ನ ಮಾನವನ್ನು ಕಾಪಾಡಿದೆ. ಹೌದು, ನಾನು ನಿನಗೆ ಆಣೆಯಿಟ್ಟು ಒಡಂಬಡಿಕೆ ಮಾಡಿಕೊಂಡಿದ್ದರಿಂದ ನೀನು ನನ್ನವಳಾದೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
9 Alaila holoi aku la au ia oe i ka wai; oia, ua holoi lea aku au i kou koko mai ou aku la, a kahinu aku la au ia oe me ka aila.
“‘ಆಮೇಲೆ ನಿನ್ನನ್ನು ನೀರಿನಿಂದ ತೊಳೆದೆನು; ನಿನ್ನ ರಕ್ತವನ್ನು ನಿನ್ನಿಂದ ತೊಳೆದೆನು, ನಿನಗೆ ಎಣ್ಣೆಯಿಂದ ಅಭಿಷೇಕ ಮಾಡಿದೆನು.
10 Hoaahu aku la au ia oe me na kapa hoonionioia, a hookamaa aku ia oe me ka ili tahasa, kaei aku la au ia oe me ka olona makalii, a hoouhi ae la ia oe me ke silika.
ನಾನು ಕಸೂತಿಯ ಬಟ್ಟೆಯನ್ನು ನಿನಗೆ ತೊಡಿಸಿ, ಕಡಲುಹಂದಿಯ ತೊಗಲಿನ ಪಾದರಕ್ಷೆಗಳನ್ನು ಕೊಟ್ಟೆನು. ನಯವಾದ ನಾರುಮಡಿಯನ್ನು ನಿನಗೆ ಉಡಿಸಿದೆನು, ರೇಷ್ಮೆಯ ಹೊದಿಕೆಯನ್ನು ನಿನಗೆ ಹೊದಿಸಿದೆನು;
11 Kahiko aku la au ia oe me na mea e nani ai, a kau aku i na kupee ma kou mau lima, a me ke kaula lei ma kou a-i.
ಆಭರಣಗಳಿಂದ ನಿನ್ನನ್ನು ಅಲಂಕರಿಸಿದೆನು: ನಾನು ನಿನ್ನ ಕೈಗಳಿಗೆ ಕಡಗಗಳನ್ನು ನಿನ್ನ ಕೊರಳಿಗೆ ಸರವನ್ನು ಹಾಕಿದೆನು.
12 A kau aku la au i ke apo ma kou ihu, a me na apopepeiao ma kou mau pepeiao, a me ka leialii nani maluna o kou poo.
ನಿನ್ನ ಮೂಗಿಗೆ ಮೂಗುತಿಯನ್ನೂ, ನಿನ್ನ ಕಿವಿಗಳಲ್ಲಿ ವಾಲೆಗಳನ್ನೂ, ನಿನ್ನ ತಲೆಯ ಮೇಲೆ ಸುಂದರ ಕಿರೀಟವನ್ನೂ ಇಟ್ಟೆನು.
13 Kahikoia aku la oe me ke gula a me ke kala, a o kou kapa, he olona, he silika, me ka mea ulana onionioia; a o ka palaoa wali, a me ka meli. a me ka aila kau i ai ai. Nani loa aku la oe, a mahuahua kou pomaikai a aupuni okoa oe.
ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ, ನಿನ್ನ ಆಹಾರವು ನಯವಾದ ಹಿಟ್ಟು, ಜೇನು, ಎಣ್ಣೆ ತಿನ್ನುತ್ತಿದ್ದೆ. ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ.
14 Laha aku la kou kaulana iwaena o na lahuikauaka no kou nani; no ka mea, ua hemolele aku la ia no kou nani a'u i kau aku ai maluna ou, wahi a Iehova ka Haku.
ನಾನು ನಿನಗೆ ಅನುಗ್ರಹಿಸಿದ ನನ್ನ ವೈಭವದಿಂದ ನಿನ್ನ ಸೌಂದರ್ಯ ಪರಿಪೂರ್ಣವಾಯಿತು; ನಿನ್ನ ಚೆಲುವು ಜನಾಂಗಗಳಲ್ಲಿ ಪ್ರಸಿದ್ಧವಾಯಿತು, ಇದು ಸಾರ್ವಭೌಮ ಯೆಹೋವ ದೇವರ ನುಡಿ.
15 Aka, hilinai iho la oe i kou nani iho, a ua moe kolohe oe no kou kaulana, a ninini aku oe i kou moe kolohe ana maluna o kela mea keia mea e maalo ae ana; nona no ia.
“‘ಆದರೆ ನೀನು ನಿನ್ನ ಸೌಂದರ್ಯದಲ್ಲಿ ಭರವಸೆಯಿಟ್ಟು, ನಿನ್ನ ಕೀರ್ತಿಯ ನಿಮಿತ್ತವಾಗಿ ವೇಶ್ಯೆಯಾದೆ. ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ವ್ಯಭಿಚಾರ ಮಾಡಿದೆ ಮತ್ತು ನಿನ್ನ ಸೌಂದರ್ಯ ಅವನದಾಯಿತು.
16 A lawe oe i kauwahi o kou mau kapa komo, a kahiko aku la i kou mau wahi kiekie me ka onionio, a malaila i moe kolohe ai oe; aole e hiki hou, aole hoi pela.
ನಿನ್ನ ವಸ್ತ್ರಗಳನ್ನು ತೆಗೆದುಕೊಂಡು ಚಿತ್ರ ವಿಚಿತ್ರ ಮಾಡಿ ಅಲಂಕರಿಸಿಕೊಂಡು ಪೂಜಾ ಸ್ಥಳದಲ್ಲಿ ವ್ಯಭಿಚಾರ ಮಾಡಿದೆ; ನೀನು ಅವನ ಬಳಿಗೆ ಹೋದೆ ಮತ್ತು ಅವನು ನಿನ್ನ ಸೌಂದರ್ಯವನ್ನು ತೆಗೆದುಕೊಂಡಿದ್ದಾನೆ.
17 A ua lawe oe i kauwahi o kou mau mea nani o ko'u gula a me kuu kala, a'u i haawi aku ai ia oe, a hana aku oe i mau kii o na kanaka nou, a moe kolohe aku me lakou.
ಇದಲ್ಲದೆ ನಾನು ನಿನಗೆ ಬೆಳ್ಳಿಬಂಗಾರದಿಂದ ಮಾಡಿಸಿಕೊಟ್ಟಿದ್ದ ನಿನ್ನ ಅಂದವಾದ ಆಭರಣಗಳನ್ನು ತೆಗೆದು, ಅವುಗಳಿಂದ ಪುರುಷಮೂರ್ತಿಗಳನ್ನು ಮಾಡಿಕೊಂಡು ಅದರ ಸಂಗಡ ವ್ಯಭಿಚಾರ ಮಾಡಿದೆ.
18 A lawe ae la hoi oe i kou mau kapa onionio a hoouhi aku ia lakou. A ua hoonoho oe i ko'u aila a me ka'u mea ala imua o lakou.
ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು, ಅವರಿಗೆ ಹೊದಿಸಿ, ನನ್ನ ಎಣ್ಣೆಯನ್ನೂ, ಧೂಪವನ್ನೂ ಅವರ ಮುಂದೆ ಇಟ್ಟೆ.
19 O ka'u ai hoi a'u i haawi aku ai ia oe, ka palaoa wali, ka aila a me ka meli a'u i hauai ai ia oe, oia kau i hoonoho ai imua o lakou i mea ala ono: pela io no hoi, wahi a Iehova ka Haku.
ನಾನು ನಿಮಗೆ ಒದಗಿಸಿದ ಆಹಾರ, ಹಿಟ್ಟು, ಎಣ್ಣೆ ಮತ್ತು ಜೇನುತುಪ್ಪವನ್ನು ನಾನು ನಿಮಗೆ ತಿನ್ನಲು ಕೊಟ್ಟಿದ್ದೇನೆ. ನೀವು ಅವರ ಮುಂದೆ ಪರಿಮಳಯುಕ್ತ ಧೂಪವನ್ನು ಅರ್ಪಿಸಿದ್ದೀರಿ. ಆದರೆ ನೀನು ಅವುಗಳನ್ನು ಅವರ ಮುಂದೆ ಇಟ್ಟೆ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
20 A ua lawe hoi oe i kau mau keikikane, a me kau mau kaikamahine au i hanau ai na'u, a o lakou kau i kaumaha ai no lakou e pau i ka aiia. He mea uuku anei keia o kou moe kolohe ana?
“‘ಇದಾದ ಮೇಲೆ ನನಗೆ ಹುಟ್ಟಿದ ನನ್ನ ಪುತ್ರರನ್ನೂ, ಪುತ್ರಿಯರನ್ನೂ ವಿಗ್ರಹಗಳ ಆಹಾರಕ್ಕಾಗಿ ಯಜ್ಞವಾಗಿ ಅರ್ಪಿಸಿದೆ. ಈ ನಿನ್ನ ವ್ಯಭಿಚಾರ ಸಾಕಾಗಲಿಲ್ಲವೋ?
21 Ua pepehi aku no oe i ka'u mau keiki, a ua hookuu ia lakou e hoohele mawaena o ke ahi no lakou.
ನೀನು ನನ್ನ ಮಕ್ಕಳನ್ನು ಕೊಂದು, ವಿಗ್ರಹಗಳಿಗೆ ಬಲಿಯಾಗಿ ಅರ್ಪಿಸಿದೆ.
22 A iloko o kou mau mea inainaia a me kou moe kolohe ana, aole oe i hoomanao i na la o kou opiopio ana, i kou olohelohe ana, a me ka uhi ole ia, a me kou paumaele ana iloko o kou koko.
ಎಲ್ಲಾ ಅಸಹ್ಯ ಕಾರ್ಯಗಳನ್ನೂ, ವ್ಯಭಿಚಾರಗಳನ್ನೂ ಮಾಡುತ್ತಿದ್ದಾಗ, ನಿನ್ನ ಎಳೆಯ ಪ್ರಾಯದ ದಿವಸಗಳನ್ನು ನೀನು ಬರೀ ಬೆತ್ತಲೆಯಾಗಿ, ನಿನ್ನ ರಕ್ತದಲ್ಲಿ ಹೊರಳಾಡುತ್ತಿದ್ದುದನ್ನು ನೀನು ಜ್ಞಾಪಕಕ್ಕೆ ತಂದುಕೊಳ್ಳಲಿಲ್ಲ.
23 Eia hoi keia mahope iho o kau hana hewa ana a pau, (Auwe, auwe oe! wahi a Iehova ka Haku; )
“‘ನಿನಗೆ ಕಷ್ಟ! ಕಷ್ಟ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅವನ ಎಲ್ಲಾ ದುಷ್ಟತನದ ಹೊರತಾಗಿ,
24 Ua hana aku hoi oe i hale hookamakama nou, a hana hoi oe i wahi kiekie ma kela alanui a me keia alanui.
ನೀವು ನಿಮಗಾಗಿ ಒಂದು ದಿಬ್ಬವನ್ನು ನಿರ್ಮಿಸಿದ್ದೀರಿ ಮತ್ತು ಪ್ರತಿ ಸಾರ್ವಜನಿಕ ಚೌಕದಲ್ಲಿ ಎತ್ತರದ ದೇವಾಲಯವನ್ನು ನಿರ್ಮಿಸಿದ್ದೀರಿ.
25 Ma kela poo, keia poo o ke ala, ua hana oe i wahi kiekie nou, ua hoolilo oe i kou nani i mea e hoowahawahaia. Ua wehe ae oe i kou mau wawae i kela mea keia mea i maalo ae. A hoonui hoi i kou moe kolohe ana.
ಪ್ರತಿಯೊಂದು ದಾರಿಯ ಕೊನೆಯಲ್ಲಿಯೂ ಎತ್ತರದ ದೇವಾಲಯವನ್ನು ನಿರ್ಮಿಸಿ, ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು, ಹಾದುಹೋಗುವ ಪ್ರತಿಯೊಬ್ಬನಿಗೂ ನಿನ್ನ ಕಾಲುಗಳನ್ನು ಅಗಲಿಸಿದೆ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದೆ.
26 Ua moe kolohe oe me ko Aigupita kou mau hoalauna, kapoe io nui; a ua hoomahuahua i kou moe kolohe ana e hoonaukiuki mai ia'u.
ಇದಲ್ಲದೆ ಅತಿಕಾಮಿಗಳಾದ ನಿನ್ನ ನೆರೆಯವರಾದ ಈಜಿಪ್ಟಿನವರ ಸಂಗಡ ವ್ಯಭಿಚಾರ ಮಾಡಿದೆ; ನನ್ನನ್ನು ರೇಗಿಸುವ ಹಾಗೆ ವ್ಯಭಿಚಾರವನ್ನು ಹೆಚ್ಚಿಸಿದೆ;
27 Nolaila hoi, ea, ua kikoo aku au i ko'u lima maluna ou, a ua hoemi au i kau ai, a ua haawi aku au ia oe i ka makemake o ka poe inaina ia oe, i na kaikamahine o ko Pilisetia, na mea i hilahila i kou aoao moe kolohe.
ಆದ್ದರಿಂದ ನಾನು ನನ್ನ ಕೈಯನ್ನು ನಿನ್ನ ಮೇಲೆ ಚಾಚಿ ನಿನ್ನ ಭೂಪ್ರದೇಶವನ್ನು ಕಡಿಮೆ ಮಾಡಿದೆ; ನಿನ್ನ ದುರ್ಮಾರ್ಗಕ್ಕೆ ನಾಚಿಕೆಪಟ್ಟು, ನಿನ್ನ ಕೆಟ್ಟ ನಡತೆಗೆ ಅಸಹ್ಯಪಡುವವರಾದ ಫಿಲಿಷ್ಟಿಯರ ಪುತ್ರಿಯರ ಚಿತ್ತಕ್ಕೆ ನಿನ್ನನ್ನು ಒಪ್ಪಿಸಿಬಿಟ್ಟೆ.
28 A ua moe kolohe no hoi oe me ko Asuria, no kou ana ole ana; a ua moe kolohe oe me lakou, aole hoi oe i ana.
ಇದಲ್ಲದೆ ಅಸ್ಸೀರಿಯರೊಂದಿಗೂ ವ್ಯಭಿಚಾರ ಮಾಡಿದರೂ ನಿನಗೆ ತೃಪ್ತಿಯಾಗಲಿಲ್ಲ; ಹೌದು, ಅವರ ಸಂಗಡ ವ್ಯಭಿಚಾರ ಮಾಡಿದ್ದೀಯೆ; ಆದರೂ ತೃಪ್ತಿಯಾಗಲಿಲ್ಲ.
29 Ua hoonui hoi oe i kou moe kolohe ana ma ka aina o Kanaana a hiki i Kaledea, aole nae oe i ana ilaila.
ಇದಲ್ಲದೆ ಈ ನಿನ್ನ ವ್ಯಭಿಚಾರವನ್ನು ವ್ಯಾಪಾರಸ್ಥರಾದ ಬಾಬಿಲೋನಿಯ ದೇಶದವರೆಗೂ ಹೆಚ್ಚು ಮಾಡಿದಿ. ಆದರೂ ನೀನು ಇದರಲ್ಲಿ ತೃಪ್ತಿ ಹೊಂದಲಿಲ್ಲ.
30 Pehea ka nawaliwali o kou naau? wahi a Iehova ka Haku, i kau hana ana ia mau mea, i ka hana a ka wahine moe kolohe hilahila ole;
“‘ನೀನು ನಾಚಿಕೆಯಿಲ್ಲದ ವೇಶ್ಯೆಯಂತೆ ವರ್ತಿಸಿದಾಗ ನಾನು ಕೋಪದಿಂದ ತುಂಬಿದೆನು ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.
31 I kau hana i kou hale hookamakama ma ke poo o na kuamoo a pau, a hana hoi i wahi kiekie nou ma na alanui a pau; aole me he wahine hookamakama la, no kou hoowahawaha ana i ka uku;
ಪ್ರತಿಯೊಂದು ಬೀದಿಯ ಕೊನೆಯಲ್ಲಿಯೂ, ದಿಬ್ಬವನ್ನು ಕಟ್ಟಿ ಪ್ರತಿಯೊಂದು ಹಾದಿಯಲ್ಲಿಯೂ ಉನ್ನತಸ್ಥಾನವನ್ನು ಮಾಡಿಕೊಂಡು, ಕೂಲಿಯನ್ನು ಉದಾಸೀನ ಮಾಡುವ ವ್ಯಭಿಚಾರಿಣಿ ನೀನಲ್ಲ.
32 Aka, me he wahine mare la e moe kolohe ana, e lalau ana i na kanaka e, aole i kana kane ponoi!
“‘ಆದರೆ ಗಂಡನಿಗೆ ಬದಲಾಗಿ ಪರರನ್ನು ಬಯಸುವ ವ್ಯಭಿಚಾರಿಯಾದ ಹೆಂಡತಿಯಾಗಿರುವೆ!
33 Ua haawi lakou i na makana i na wahine hookamakama a pau; aka, ua haawi oe i kau mau makana i kau mau ipo a pau, ua hoolimalima oe ia lakou, e hele mai iou la ma kela aoao keia aoao, no kou moe kolohe ana.
ಸಾಮಾನ್ಯವಾಗಿ ವ್ಯಭಿಚಾರಿಗಳಿಗೆ ಬಹುಮಾನ ಕೊಡುತ್ತಾರೆ. ಆದರೆ ನೀನೇ ನಿನ್ನ ಪ್ರಿಯರಿಗೆಲ್ಲ ಬಹುಮಾನಗಳನ್ನು ಕೊಟ್ಟು, ನಿನ್ನ ವ್ಯಭಿಚಾರಕ್ಕಾಗಿ ನಿನ್ನ ಬಳಿಗೆ ಬರುವ ಹಾಗೆ ಅವರಿಗೆ ಲಂಚ ಕೊಡುತ್ತಿರುವೆ.
34 He mea e iloko ou, i kou moe kolohe ana, okoa na wahine e no ka hahai ole o kekahi ia oe e moe kolohe; a no kou haawi ana i ka uku, aole hoi uku i haawiia nou; nolaila he mea e oe.
ಹೀಗಿರುವುದರಿಂದ ನಿನ್ನ ವ್ಯಭಿಚಾರವು ಇತರ ವೇಶ್ಯೆಯರ ವ್ಯಭಿಚಾರಕ್ಕಿಂತ ಭಿನ್ನ. ವ್ಯಭಿಚಾರ ಮಾಡುವ ಹಾಗೆ ನಿನ್ನನ್ನು ಯಾರೂ ಹಿಂಬಾಲಿಸುವದಿಲ್ಲ. ನೀನು ಬಹುಮಾನ ಕೊಡುತ್ತೀಯೇ ಹೊರತು ನಿನಗೆ ಯಾರೂ ಬಹುಮಾನ ಕೊಡುವುದಿಲ್ಲ. ಆದ್ದರಿಂದ ನೀನು ಭಿನ್ನಳಾಗಿದ್ದು.
35 Nolaila, e ka wahine moe kolohe, e hoolohe i ka olelo a Iehova;
“‘ಆದಕಾರಣ ವ್ಯಭಿಚಾರಿಣಿಯೇ, ನೀನು ಯೆಹೋವ ದೇವರ ವಾಕ್ಯವನ್ನು ಕೇಳು.
36 Ke i mai nei Iehova ka Haku penei; No ka nininiia o kou kala keleawe, a me ka hoikeia o kou olohelohe ana, ma kou moe kolohe ana me kau mau ipo, a me ua akua kii a pau o kou mau mea inainaia, ma ke koko o kau mau keiki au i haawi ai ia lakou.
ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ನಿನ್ನ ಮೋಹವನ್ನು ಸುರಿಸಿದ ಕಾರಣದಿಂದಲೂ, ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ, ನಿನ್ನ ಅಸಹ್ಯ ವಿಗ್ರಹಗಳಿಂದಲೂ, ನೀನು ಆಹುತಿ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ,
37 Nolaila, ea, e hoakoakoa au i kau mau ipo i lealea pu ai oe, a me ka poe a pau au i makemake ai, a me ka poe a pau au i hoowahawaha ai; e hoakoakoa au ia lakou e ku e ia oe a puni, a e hoike i kou olohelohe ia lakou, a e ike lakou i kou olohelohe a pau.
ನೀನು ಆನಂದಪಟ್ಟ ನಿನ್ನ ಪ್ರಿಯರೆಲ್ಲರನ್ನು ಮತ್ತು ಹಗೆಮಾಡಿದವರೆಲ್ಲರನ್ನು ಸಹ ಕೂಡಿಸುವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ, ಅವರೆದುರಿಗೆ ನಿನ್ನನ್ನು ಬೆತ್ತಲೆ ಮಾಡಿ, ನಿನ್ನ ಮಾನವನ್ನು ಬಯಲು ಮಾಡುವೆ. ಆಗ ಅವರು ನಿನ್ನನ್ನು ಬೆತ್ತಲೆಯಾಗಿ ನೋಡುವರು.
38 A e hoopai aku au ia oe e like me ka hoopaiia o na wahine i uhaki i ka berita mare me ka hookahe koko; a e haawi au ia oe i ke koko o ka ukiuki a me ka lili.
ವ್ಯಭಿಚಾರ ಮಾಡಿದ ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ, ರೋಷಾವೇಶದಿಂದಲೂ ನಿನ್ನ ಮೇಲೆ ರಕ್ತ ಸುರಿಸುವೆನು.
39 A e haawi aku au ia oe iloko o ko lakou lima, a e hoohiolo lakou i kou hale hookamakama, e wawahi hoi i kou mau wahi kiekie: a e kaili aku lakou i kou mau kapa ko mo mai ou aku la, a e lawe aku hoi i kau mau mea nani, a e waiho ia oe e olohelohe ana me ka uhi ole ia.
ಅನಂತರ ನಿನ್ನನ್ನು ಅವರ ಕೈಗಳಿಗೆ ಒಪ್ಪಿಸುವೆನು. ಅವರು ನಿನ್ನ ಎತ್ತರ ಸ್ಥಳಗಳನ್ನೆಲ್ಲಾ ಕೆಡವಿಹಾಕಿ, ನಿನ್ನ ಉನ್ನತ ಸ್ಥಾನಗಳನ್ನು ಒಡೆದು ಬಿಡುವರು. ಅವರು ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸುಂದರ ಆಭರಣಗಳನ್ನು ಕಸಿದುಕೊಂಡು, ನಿನ್ನನ್ನು ಬರೀ ಬೆತ್ತಲೆಯನ್ನಾಗಿ ಮಾಡಿಹೋಗುವರು.
40 E lawe mai lakou i ka aha kanaka ku e ia oe, a e hailuku lakou ia oe me na pohaku, a e hou ia oe me ka lakou mau pahikaua.
ಅವರು ನಿನಗೆ ವಿರುದ್ಧವಾಗಿ ಒಂದು ಗುಂಪನ್ನು ಕರೆದುಕೊಂಡು ಬಂದು, ಕಲ್ಲುಗಳನ್ನು ನಿನ್ನ ಮೇಲೆ ಎಸೆದು, ತಮ್ಮ ಖಡ್ಗಗಳಿಂದ ನಿನ್ನನ್ನು ತಿವಿಯುವರು.
41 A e puhi lakou i kou mau hale i ke ahi, a e hooili i ka hoopai ana maluna ou imua o na wahine he nui no: a e hooki au i kou moe kolohe ana, aole hoi e haawi hou oe i ka uku.
ಅವರು ನಿನ್ನ ಮನೆಗಳನ್ನು ಸುಟ್ಟು, ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯತೀರಿಸುವರು. ನೀನು ವ್ಯಭಿಚಾರ ಮಾಡುವುದನ್ನು ನಾನು ನಿಲ್ಲಿಸುವೆನು. ನೀನು ನಿನ್ನ ಪ್ರಿಯರಿಗೆ ಕೂಲಿ ಸಹ ಕೊಡುವುದನ್ನು ನಿಲ್ಲಿಸುವೆನು.
42 Pela e hoomaha ai au i ko'u ukiuki ia oe, a e haalele ko'u lili ia oe, a e noho malie au aole e huhu hou.
ಈ ರೀತಿ ನಿನ್ನ ಮೇಲಿನ ನನ್ನ ಸಿಟ್ಟನ್ನು ತೀರಿಸುವೆನು. ನನ್ನ ರೋಷವನ್ನು ನಿನ್ನ ಕಡೆಯಿಂದ ತೊಲಗಿಸುತ್ತೇನೆ, ಶಾಂತನಾಗಿ ನಿನ್ನ ಮೇಲೆ ಕೋಪಗೊಳ್ಳುವುದಿಲ್ಲ.
43 No ka mea, aole oe i hoomanao i na la o kou opiopio ana, a ua hoonaukiuki mai oe ia'u ma keia mau mea a pau: e uku aku au ea, i kou aoao, maluna o kou poo, wahi a Iehova ka Haku; aole hoi oe e hookui i keia hana haumia maluna o kau mau mea inainaia a pau.
“‘ನೀನು ನಿನ್ನ ಯೌವನದ ದಿವಸಗಳನ್ನು ಜ್ಞಾಪಕಮಾಡಿಕೊಳ್ಳದೆ, ಈ ಸಂಗತಿಗಳಿಂದ ನೀನು ನನಗೆ ಬೇಸರಪಡಿಸಿದ್ದರಿಂದ, ನಾನು ಸಹ ನಿನ್ನ ದುರ್ಮಾರ್ಗದ ಫಲವನ್ನು ನಿನ್ನ ತಲೆಗೆ ಕಟ್ಟುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ನಿನ್ನ ಇತರ ಎಲ್ಲಾ ಅಸಹ್ಯವಾದವುಗಳ ಜೊತೆಗೆ, ಈ ಅಪವಿತ್ರತೆಯನ್ನು ನೀನು ಮಾಡಲಿಲ್ಲವೇ?
44 Eia hoi, o na mea a pau e olelo ana ma na olelo nane, e lawe lakou i keia olelo nane nau, e i ana, E like me ka makuwahine, pela no kana kaikamahine.
“‘“ತಾಯಿಯಂತೆ ಮಗಳು,” ಎಂಬ ಗಾದೆಯನ್ನು ನಿನಗೆ ವಿರುದ್ಧವಾಗಿ ಪ್ರತಿಯೊಬ್ಬರು ಹೇಳುವರು.
45 O ke kaikamahine no oe a kou makuwahine i hoowahawaha i kana kane a me kana mau keiki; o ka hoahanauwahine oe o kou mau hoahanauwahine i hoowahawaha i ka lakou mau kane mo ka lakou mau keiki; o kou makuwahine, o ka Heta no ia: o kou makuakaue, o ka Amora no ia.
ಗಂಡನಿಗೂ, ಮಕ್ಕಳಿಗೂ ಬೇಸರ ಪಡುವವಳಾದ ನಿನ್ನ ತಾಯಿಗೆ ನೀನು ತಕ್ಕ ಮಗಳು. ಗಂಡನಿಗೂ, ಮಕ್ಕಳಿಗೂ ಬೇಸರ ಪಡುವವರಾದ ನಿನ್ನ ಅಕ್ಕಂದಿರಿಗೆ ನೀನು ತಕ್ಕ ತಂಗಿ. ನಿನ್ನ ತಾಯಿ ಹಿತ್ತಿಯಳು, ನಿನ್ನ ತಂದೆ ಅಮೋರಿಯನು.
46 A o kou kaikuaana, o Samaria ia, oia me kana mau kaikamahine e noho ana ma kou lima hema. A o kou kaikaina e noho ana ma kou lima akau, oia o Sodoma a me kana mau kaikamahine.
ನಿನ್ನ ಉತ್ತರ ದಿಕ್ಕಿನಲ್ಲಿ ಪುತ್ರಿಯರೊಂದಿಗೆ ವಾಸಿಸುವ ಸಮಾರ್ಯವೇ ನಿನ್ನ ಅಕ್ಕ. ದಕ್ಷಿಣ ದಿಕ್ಕಿನಲ್ಲಿ ಪುತ್ರಿಯರೊಂದಿಗೆ ವಾಸಿಸುವ ಸೊದೋಮ್ ನಿನ್ನ ತಂಗಿ.
47 Aole nae oe i hele ma ko lakou mau aoao, aole hoi i hana mamuli o ko lakou mau mea inainaia; aka, me he mea uuku la, ua oi aku kou haumia ana mamua o ko lakou i kou mau aoao a pau.
ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ. ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ. ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ.
48 Ma ko'u ola ana, wahi a Iehova ka Haku, aole o Sodoma i hana, oia, aole hoi kana mau kaikamahine, e like me oe i hana ai, o oe a me kau mau kaikamahine.
ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ: ನನ್ನ ಜೀವದಾಣೆ, ನಿನ್ನ ತಂಗಿಯಾದ ಸೊದೋಮು ಮತ್ತು ಅವಳ ಪುತ್ರಿಯರು; ನೀನು ನಿನ್ನ ಪುತ್ರಿಯರು ಮಾಡಿದೆ ಹಾಗೆ ಮಾಡಿಲಿಲ್ಲ.
49 Eia hoi ka hewa o kou kaikaina, o Sodoma, o ka haaheo, o ka piha loa i ka berena, a o ka palaualelo nui wale ka iloko ona a me kana mau kaikamahine; aole nae ia i hooikaika i ka lima o ka mea ilihune a me ka nele.
“‘ಸೊದೋಮ್ ಎಂಬ ನಿನ್ನ ತಂಗಿಯ ಪಾಪವನ್ನು ನೋಡು; ಗರ್ವವ, ಅತಿ ಭೋಜನ, ಸ್ವಾರ್ಥತೆ; ಇವು ಆಕೆಯಲ್ಲಿಯೂ ಆಕೆಯ ಪುತ್ರಿಯರಲ್ಲಿಯೂ ಇದ್ದವು. ಆಕೆಯು ದೀನ ದರಿದ್ರರಿಗೆ ಸಹಾಯ ಮಾಡಲಿಲ್ಲ.
50 Ua hookiekie lakou, a ua hana i na mea inainaia imua o'u; nolaila lawe ae la au ia lakou mamuli o ko'u ike ana he pono.
ಅವರು ಅಹಂಕಾರಿಗಳಾಗಿದ್ದು ನನ್ನ ಮುಂದೆ ಅಸಹ್ಯವಾದವುಗಳನ್ನು ನಡೆಸಿದರು. ಆದ್ದರಿಂದ ನಾನು ಅದನ್ನು ನೋಡಿ, ಅವರನ್ನು ನಿರ್ಮೂಲ ಮಾಡಿದೆನು.
51 Aole hoi i hana o Samaria i ka hapalua o kou mau hewa; ua hoonui aku oe i kou mau mea inainaia i ko lakou, a ua hoapono oe i kou mau hoahanau wahine, ma kou mau mea inainaia a pau au i hana'i.
ಸಮಾರ್ಯವೆಂಬಾಕೆಯು ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದೆ. ನೀನು ಮಾಡಿದ ಲೆಕ್ಕವಿಲ್ಲದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ.
52 A o oe hoi ka mea i hooponopono i kou mau hoahanau wahine, e hali oe i kou hoinoia, no kou mau hewa au i hana aku ai i pakela aku i ko lakou; ua oi aku ko lakou pono i kou; oia, e hilahila hoi oe, a e hali oe i kou hoinoia, no kou hoapono ana i kou mau hoahanau wahine.
ನಿನ್ನ ದೋಷಗಳೇ ನಿನ್ನ ಅಕ್ಕ ತಂಗಿಯರ ಪಕ್ಷವಾಗಿ ನಿಂತಿದ್ದರಿಂದ ನೀನು ನಾಚಿಕೆಪಡು. ನೀನು ಅವರಿಗಿಂತ ಅಸಹ್ಯವಾಗಿ ಮಾಡಿದ ನಿನ್ನ ಪಾಪಗಳಿಗೆ ತಕ್ಕ ನಿಂದೆಯನ್ನು ಹೊತ್ತುಕೋ. ಅವರು ನಿನಗಿಂತ ನೀತಿವಂತರು. ಹೌದು, ನೀನು ನಿನ್ನ ಸಹೋದರಿಯರನ್ನು ನೀತಿವಂತರೆಂದು ತೋರ್ಪಡಿಸಿದ್ದರಿಂದ ನೀನೇ ನಾಚಿಕೆಪಟ್ಟು, ನಿನ್ನ ನಿಂದೆಯನ್ನು ಹೊತ್ತುಕೋ.
53 Aia hoihoi mai au i ko lakou pio ana, i ke pio ana o Sodoma a me kana mau kaikamahine, a me ke pio ana o Samaria a me kana mau kaikamahine, alaila, i ke pio ana o kou poe pio iwaena o lakou;
“‘ಸೊದೋಮ್ ಮತ್ತು ಆಕೆಯ ಕುಮಾರಿಯರ ಹಾಗೂ ಸಮಾರ್ಯ ಮತ್ತು ಆಕೆಯ ಕುಮಾರಿಯ ಸೌಭಾಗ್ಯವನ್ನು ಪುನಃ ನೀಡುವೆನು. ಅದರೊಂದಿಗೆ ನಿನ್ನ ಸೌಭಾಗ್ಯವನ್ನೂ ಮರಳಿಸುವೆನು.
54 I hali oe i kou hoinoia, a e hilahila hoi oe i na mea a pau au i hanaai, i kou hooluolu ana ia lakou.
ಏಕೆಂದರೆ ನೀನು ನಿನ್ನ ನಿಂದೆಯನ್ನು ಹೊತ್ತುಕೊಂಡು, ಅವರನ್ನು ಆಧರಿಸುವಾಗ ಲಜ್ಜೆಪಡುವೆ, ನಾಚಿಕೆಗೊಳ್ಳುವೆ.
55 Aia i hoi kou mau hoahanau wahine o Sodoma a me kana mau kaikamahine, i ko lakou noho kahiko ana, a hoi mai hoi o Samaria a me kana mau kaikamahine i ko lakou noho kahiko ana, alaila e hoi oe me kau mau kaikamahine i ko oukou noho kahiko ana.
ಆಗ ಸಮಾರ್ಯ, ಸೊದೋಮ್ ಎಂಬ ನಿನ್ನ ಅಕ್ಕತಂಗಿಯರೂ, ಅವರ ಪುತ್ರಿಯರೂ ತಮ್ಮ ಪೂರ್ವಸ್ಥಿತಿಗೆ ತಿರುಗುವರು. ನೀನೂ, ನಿನ್ನ ಪುತ್ರಿಯರೂ ಪೂರ್ವಸ್ಥಿತಿಗೆ ತಿರುಗಿಕೊಳ್ಳುವಿರಿ.
56 No ka mea, aole oleloia o Sodoma kou kaikaina e ko'u waha, i ka la o kou haaheo ana,
ನಿನ್ನ ಸಹೋದರಿಯರಾದ ಸೊದೋಮನ್ನು ನಿನ್ನ ಗರ್ವದ ದಿವಸಗಳಲ್ಲಿ ನಿನ್ನ ಬಾಯಿಂದ ಉಚ್ಚರಿಸಲಿಲ್ಲ.
57 Mamua o ka hoikeikeia'na o kou hewa, i ka wa i hoinoia'i na kaikamahine a Suria, a me na mea a pau e kokoke mai ana a puni ia, na kaikamahine a Pilisetia na mea i hoowahawaha ia oe ma kela aoao keia aoao.
ಅರಾಮಿನ ಪುತ್ರಿಯರಿಂದಲೂ ಮತ್ತು ಅದರ ಸುತ್ತಲಿರುವಂತ ಎಲ್ಲವುಗಳಿಂದಲೂ ಮತ್ತು ನಿನ್ನನ್ನು ಉದಾಸೀನ ಮಾಡಿದಂಥ ಎಲ್ಲಾ ಫಿಲಿಷ್ಟಿಯರ ಪುತ್ರಿಯರಿಂದಲೂ, ನಿನಗೆ ನಿಂದೆಯು ಬಂದ ಹಾಗೆ ನಿನ್ನ ಕೆಟ್ಟತನವು ಪ್ರಕಟವಾಗುವುದಕ್ಕೆ ಪೂರ್ವದಲ್ಲಿಯೇ
58 O kou hewa a me kou mau mea inainaia, oia kau i hali ai, wahi a Iehova.
ನೀನು ನಿನ್ನ ದುಷ್ಕರ್ಮಗಳ ಮತ್ತು ನಿನ್ನ ಅಸಹ್ಯಗಳ ಫಲವನ್ನು ಅನುಭವಿಸಬೇಕಾಗಿ ಬಂತು, ಎಂದು ಯೆಹೋವ ದೇವರು ಹೇಳುತ್ತಾರೆ.
59 No ka mea, ke i mai nei Iehova ka Haku, penei; E hana aku au ia oe e like me ka hana ana au a ka mea hoowahawaha i ka hoohiki ana, a i uhai hoi i ka berita.
“‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನೀನು ಮಾಡಿದ್ದಕ್ಕೆ ತಕ್ಕ ಹಾಗೆ ನಾನು ನಿನಗೆ ಮಾಡುತ್ತೇನೆ. ನೀನು ಒಡಂಬಡಿಕೆಯನ್ನು ಮೀರಿ, ನನ್ನ ಆಣೆಯನ್ನು ತಿರಸ್ಕರಿಸಿರುವೆ.
60 Aka hoi, e hoomanao aku no au i kuu berita a'u i hana pu ai me oe i na la o kou opiopio ana, a e hoomau aku no au nou i berita mau loa.
ಆದರೂ ನಿನ್ನ ಯೌವನದ ದಿನಗಳಲ್ಲಿ ನಾನು ನಿನ್ನ ಸಂಗಡ ಮಾಡಿದ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ನಿನಗಾಗಿ ನಿತ್ಯವಾದ ಒಡಂಬಡಿಕೆಯೊಂದನ್ನು ಸ್ಥಾಪಿಸುವೆನು.
61 Alaila e hoomanao oe i kou mau aoao, a e hilahila no hoi i ka wa e loaa ai ia oe kou mau hoahanau wahine, kou kaikuaana a me kou kaikaina; a e haawi aku au ia laua ia oe i mau kaikamahine, aole hoi ma kou berita.
ಆಗ ನೀನು ನಿನ್ನ ಮಾರ್ಗಗಳನ್ನು ಜ್ಞಾಪಕಮಾಡಿಕೊಂಡು, ನಿನ್ನ ಸಹೋದರಿಗಳಾದ ನಿನ್ನ ಅಕ್ಕತಂಗಿಯರನ್ನು ಸೇರುವಾಗ ನಾಚಿಕೆಪಡುವೆ. ಅವರನ್ನು ನಿನ್ನ ಪುತ್ರಿಯರಂತೆ ಕೊಡುವೆನು. ಆದರೆ ಇದು ನಿನ್ನ ಒಡಂಬಡಿಕೆಯಿಂದಲ್ಲ.
62 A e hoomau au i kuu berita me oe; a e ike no oe, owau no Iehova;
ನಾನು ಈ ಒಡಂಬಡಿಕೆಯನ್ನು ನಿಮ್ಮೊಂದಿಗೆ ಸ್ಥಾಪಿಸುವೆನು. ಆದ್ದರಿಂದ ನಾನೇ ಯೆಹೋವ ದೇವರೆಂದು ನಿಮಗೆ ಗೊತ್ತಾಗುವುದು.
63 I hoomanao hoi oe, a e hilahila hoi, aole loa e ekemu hou kou waha no kou hilahila, i ka wa e laulea hou ai au ia oe i na mea a pau au i hana mai ai, wahi a Iehova ka Haku.
ಆಗ ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷಮಿಸಿಬಿಟ್ಟ ಮೇಲೆ, ನೀನು ಅವುಗಳನ್ನು ಜ್ಞಾಪಕಕ್ಕೆ ತಂದುಕೊಂಡು, ಅವಮಾನದ ನಿಮಿತ್ತ ಇನ್ನು ನೀನು ಬಾಯಿ ತೆರೆಯಲೇಬಾರದು ಎಂದು ನಿನ್ನ ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.’”

< Ezekiela 16 >