< Kinohi 37 >
1 NOHO aka la o Iakoba ma ka aina a kona makuakane i noho malihini ai, ma ka aina i Kanaana.
೧ಯಾಕೋಬನು ತನ್ನ ತಂದೆಯು ಪ್ರವಾಸವಾಗಿದ್ದ ಕಾನಾನ್ ದೇಶದಲ್ಲಿ ವಾಸವಾಗಿದ್ದನು.
2 Eia ka mooolelo no Iakoba. He umi ko Iosepa makahiki a me kumamahiku, e hanai ana oia i na holoholona me kona poe kaikuaana, e noho pu ana o ua keiki la me na keikikane a Bileha, a me na keikikane a Zilepa, na wahine a kona makuakane, a hai mai la o Iosepa i ka makuakane o lakou i ka lono ino o lakou.
೨ಇದು ಯಾಕೋಬನ ವಂಶದವರ ಚರಿತ್ರೆ: ಯೋಸೇಫನು ಹದಿನೇಳು ವರ್ಷದವನಾಗಿದ್ದಾಗ ತನ್ನ ಅಣ್ಣಂದಿರ ಜೊತೆಯಲ್ಲಿ ಅಂದರೆ, ತನ್ನ ತಂದೆಯ ಹೆಂಡತಿಯರಾದ ಬಿಲ್ಹಾ ಮತ್ತು ಜಿಲ್ಪಾರ ಮಕ್ಕಳ ಜೊತೆಯಲ್ಲಿ ಆಡು ಕುರಿಗಳನ್ನು ಮೇಯಿಸುತ್ತಿದ್ದನು. ಅವರು ಏನಾದರೂ ಕೆಟ್ಟ ಕೆಲಸ ಮಾಡುವಾಗ ಅವನು ತಂದೆಗೆ ತಿಳಿಸುತ್ತಿದ್ದನು.
3 Ua oi aku la ke aloha o Iseraela ia Iosepa mamua o kana mau keiki a pau, no ka mea, he keiki ia no kona wa elemakule: a hana iho la ia i kapakomo onionio nona.
೩ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದವನಾಗಿದ್ದುದರಿಂದ ಅವನನ್ನು ತನ್ನ ಎಲ್ಲಾ ಮಕ್ಕಳಿಗಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದನು, ಅಲ್ಲದೆ ಅವನಿಗೆ ಬಣ್ಣಬಣ್ಣದ ಒಂದು ನಿಲುವಂಗಿಯನ್ನು ಹೊಲಿಸಿ ಕೊಟ್ಟಿದ್ದನು.
4 A ike iho la kona poe kaikuaana i ke kela ana aku o ke aloha o ko lakou makuakane ia Iosepa mamua o kona poe hoahanau a pau, inaina aku la lakou ia Iosepa, aole i hiki ke olelo oluolu aku ia ia.
೪ಅವನ ಅಣ್ಣತಮ್ಮಂದಿರು, ತಮ್ಮ ತಂದೆಯು ಎಲ್ಲಾ ಮಕ್ಕಳಿಗಿಂತಲೂ ಇವನನ್ನೇ ಹೆಚ್ಚಾಗಿ ಪ್ರೀತಿಸುತ್ತಿರುವುದನ್ನು ನೋಡಿ ಯೋಸೇಫನನ್ನು ಹಗೆಮಾಡಿ ಅವನೊಡನೆ ಸ್ನೇಹಭಾವದಿಂದ ಮಾತನಾಡಲಾರದೆ ಹೋದರು.
5 Moe iho la o Iosepa i ka moe, a hai aku la i kona poe kaikuaana, a nui hou mai la ko lakou inaina ana ia ia.
೫ಒಂದು ದಿನ ಯೋಸೇಫನು ಕನಸು ಕಂಡು ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದಾಗ ಅವರು ಅವನನ್ನು ಇನ್ನೂ ಹೆಚ್ಚಾಗಿ ದ್ವೇಷಿಸಿದರು.
6 I aku la ia ia lakou, Ea, e hoolohe mai oukou i keia moe a'u i moe ai.
೬ಅವನು ಅವರಿಗೆ, “ನಾನು ಕನಸಿನಲ್ಲಿ ಕಂಡದ್ದನ್ನು ಹೇಳುತ್ತೇನೆ, ದಯವಿಟ್ಟು ಕೇಳಿರಿ.
7 Eia hoi, i ka pua ana a kakou i na pua, ma ka mahina ai, ala mai la ka'u pua, a kupono ae la iluna; a o ka oukou mau pua ka i ku poai mai la, a kulou iho la i ka'u pua.
೭ಆ ಕನಸಿನಲ್ಲಿ ನಾವು ಹೊಲದಲ್ಲಿ ಸಿವುಡುಗಳನ್ನು ಕಟ್ಟುತ್ತಾ ಇದ್ದೆವು. ಆಗ ನನ್ನ ಸಿವುಡು ಎದ್ದು ನಿಂತಿತು. ನಿಮ್ಮ ಸಿವುಡುಗಳು ಸುತ್ತಲೂ ಬಂದು ನನ್ನ ಸಿವುಡಿಗೆ ಅಡ್ಡಬಿದ್ದದ್ದನ್ನು ಕಂಡೆನು” ಎಂದು ಹೇಳಿದನು.
8 Olelo mai la kona poe kaikuaana ia ia, E alii ana ka oe maluna o makou? O oe anei ka haku maluna o makou? Huhu nui aku la lakou ia ia i kana moe, a i kana olelo.
೮ಅದಕ್ಕೆ ಅವನ ಅಣ್ಣಂದಿರು ಅವನಿಗೆ, “ನೀನು ನಿಜವಾಗಿ ನಮ್ಮನ್ನು ಆಳುವಿಯಾ? ನೀನು ನಮ್ಮ ಮೇಲೆ ದೊರೆತನ ಮಾಡುವಿಯಾ?” ಎಂದು ಹೇಳಿ ಅವನ ಕನಸುಗಳಿಗಾಗಿಯೂ, ಅದನ್ನು ಅವನು ಅವರಿಗೆ ತಿಳಿಸಿದ್ದಕ್ಕಾಗಿಯು ಮತ್ತಷ್ಟು ಅವನನ್ನು ದ್ವೇಷಿಸಿದರು.
9 A mahope aku, moe hou iho la ia i ka moe, a hai hou aku la i kona poe kaikuaana, i aku la, Eia hoi, ua moe hou iho nei au i ka moe; a ua kulou mai ia'u ka la, a me ka mahina, a me na hoku he umikumamakahi.
೯ಅವನು ಇನ್ನೊಂದು ಕನಸನ್ನು ಕಂಡನು. ಅದನ್ನು ತನ್ನ ಅಣ್ಣಂದಿರಿಗೆ ತಿಳಿಸಿದನು. ಅವನು ಅವರಿಗೆ, “ಇನ್ನೊಂದು ಕನಸು ಕಂಡಿದ್ದೇನೆ. ಅದರಲ್ಲಿ ಸೂರ್ಯಚಂದ್ರರೂ, ಹನ್ನೊಂದು ನಕ್ಷತ್ರಗಳೂ ನನಗೆ ಅಡ್ಡ ಬಿದ್ದವು” ಎಂದು ಹೇಳಿದನು.
10 Hai aku la ia i kona makuakane, a i kona poe kaikuaana. Papa mai la kona makuakane, i mai la ia ia, Heaha keia moe au i moe ai? E hele anei au iou la, a me kou makuwahine, a me kou poe hoahanau, e kulou ilalo i ka honua imua ou?
೧೦ಅವನು ಈ ಕನಸನ್ನು ತನ್ನ ತಂದೆಗೂ ಮತ್ತು ಅಣ್ಣಂದಿರಿಗೂ ತಿಳಿಸಿದಾಗ ತಂದೆಯು ಅವನಿಗೆ, “ಇದು ಎಂಥಾ ಕನಸು ನೀನು ಕಂಡದ್ದು? ನಾನೂ ನಿನ್ನ ತಾಯಿಯೂ, ಅಣ್ಣತಮ್ಮಂದಿರೂ ನಿನ್ನ ಮುಂದೆ ಅಡ್ಡ ಬೀಳುವುದಕ್ಕೆ ಬಂದೆವೋ?” ಎಂದು ಹೇಳಿ ಗದರಿಸಿದನು.
11 Huahuwa ae la kona poe kaikuaana ia ia, a malama iho la kona makuakane i ua olelo la.
೧೧ಹೀಗೆ ಯೋಸೇಫನ ಅಣ್ಣಂದಿರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ಅವನ ತಂದೆಯು ಅವನ ಮಾತುಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.
12 Hele aku la kona poe kaikuaana i Sekema, e hanai i ka poe holoholona a ka makuakane o lakou.
೧೨ಅವನ ಅಣ್ಣಂದಿರು ತಂದೆಯ ಆಡುಕುರಿ ಹಿಂಡುಗಳನ್ನು ಮೇಯಿಸುವುದಕ್ಕೆ ಶೆಕೆಮಿಗೆ ಹೋದರು.
13 Olelo aku la o Iseraela ia Iosepa, Aia paha kou poe kaikuaana e hanai holoholona ana ma Sekema? Auhea oe? E hoouna ana au ia oe io lakou la. I mai la kela ia ia, Eia no wau.
೧೩ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರಲ್ಲಾ ಅವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ, ಹೋಗು” ಎಂದು ಹೇಳಿದನು. ಅದಕ್ಕೆ ಅವನು, “ಆಗಲಿ, ಹೋಗುತ್ತೇನೆ” ಎಂದನು.
14 I aku la oia ia ia, Ea, o hele oe e ike i ka pono o kou poe kaikuaana, a me ka pono o na holoholona, a e hai mai ia'u. Hoouna aka la oia ia ia, iwaho o ke awawa o Heberona, a hiki aku la ia i Sekema.
೧೪ಇಸ್ರಾಯೇಲ್ಯನು ಅವನಿಗೆ, “ನೀನು ಶೆಕೆಮಿಗೆ ಹೋಗಿ ನಿನ್ನ ಅಣ್ಣಂದಿರ ಯೋಗ ಕ್ಷೇಮವನ್ನೂ, ಆಡುಕುರಿಗಳ ಹಿಂಡಿನ ಯೋಗ ಕ್ಷೇಮವನ್ನೂ ವಿಚಾರಿಸಿಕೊಂಡು ಬಾ” ಎಂದು ಅಪ್ಪಣೆ ಕೊಟ್ಟು, ಅವನನ್ನು ಹೆಬ್ರೋನ್ ಕಣಿವೆಯಿಂದ ಕಳುಹಿಸಲು ಯೋಸೇಫನು ಹೊರಟನು.
15 A loaa ia i kekahi kanaka, aia hoi, ua hele hewa ia i ke kula. Ninau mai la ua kanaka la ia ia, i mai la, Heaha kau mea e imi nei?
೧೫ಅವನು ಶೆಕೆಮಿಗೆ ಬಂದು ಅಲ್ಲಿ ಅಡವಿಯೊಳಗೆ ತಿರುಗಾಡುತ್ತಿರುವಾಗ ಒಬ್ಬ ಮನುಷ್ಯನು ಅವನನ್ನು ಕಂಡು, “ಏನು ಹುಡುಕುತ್ತೀ?” ಎಂದು ವಿಚಾರಿಸಿದನು.
16 Olelo aku la ia, E imi ana au i ko'u poe kaikuaana: e hai mai oe ia'u i kahi a lakou e hanai ai i na holoholona.
೧೬ಅದಕ್ಕೆ ಅವನು, “ನನ್ನ ಅಣ್ಣಂದಿರನ್ನು ಹುಡುಕುತ್ತಾ ಇದ್ದೇನೆ. ಅವರು ಆಡುಕುರಿಗಳನ್ನು ಎಲ್ಲಿ ಮೇಯಿಸುತ್ತಾರೆ ದಯವಿಟ್ಟು ಹೇಳು” ಎಂದನು.
17 Olelo mai la ia kanaka, Ua hala'ku la lakou: ua lohe au i ka olelo ana a lakou, E, e hele kakou i Dotana. Hahai aku la o Iosepa i kona poe kaikuaana, a loaa aku la lakou Dotana.
೧೭ಅದಕ್ಕೆ ಆ ಮನುಷ್ಯನು, “ಅವರು ಇಲ್ಲಿಂದ ಹೊರಟುಹೋದರು. ಅವರು ನಾವು ದೋತಾನಿಗೆ ಹೋಗೋಣ ಎಂಬುದಾಗಿ ಮಾತನಾಡುವುದನ್ನು ನಾನು ಕೇಳಿಸಿಕೊಂಡೆನು” ಎಂದು ಹೇಳಲು ಯೋಸೇಫನು ಅವರನ್ನು ಹುಡುಕುತ್ತಾ ಹೋಗಿ ದೋತಾನಿನಲ್ಲಿ ಅವರನ್ನು ಕಂಡನು.
18 A ike mai la lakou ia ia ma kahi loihi aku, aole ia i lihi koke mai, ohumu iho la lakou ia ia, e make ia.
೧೮ಅವರು ಅವನನ್ನು ದೂರದಿಂದ ನೋಡಿ ಅವನು ತಮ್ಮ ಬಳಿಗೆ ಬರುವಷ್ಟರೊಳಗೆ ಅವನನ್ನು ಕೊಲ್ಲುವುದಕ್ಕೆ ಒಳಸಂಚು ಮಾಡಿಕೊಂಡರು.
19 Olelo ae la lakou i kekahi i kekahi, Eia'e ka mea nana na moe, ke hele mai nei.
೧೯ಅವರು ಒಬ್ಬರಿಗೊಬ್ಬರು, “ಅಗೋ ಆ ಕನಸುಗಾರನು ಬರುತ್ತಿದ್ದಾನೆ ನೋಡಿರಿ
20 Ina kakou e pepehi ia ia a make loa, e hoolei ia ia iloko o kahi lua, a e olelo aku kakou, Na ka ilio hihiu ia i ai; alaila, e ike kakou i ka hope o kana mau moe.
೨೦ಬನ್ನಿರಿ, ಈಗ ನಾವು ಅವನನ್ನು ಕೊಂದು ಈ ಗುಂಡಿಗಳಲ್ಲಿ ಒಂದರೊಳಗೆ ಹಾಕಿ, ಕಾಡುಮೃಗವು ಅವನನ್ನು ತಿಂದು ಬಿಟ್ಟಿತೆಂದು ಹೇಳೋಣ. ಆಗ ಅವನ ಕನಸುಗಳು ಏನಾಗುವವೋ? ನೋಡೋಣ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
21 A lohe ae la o Reubena, hoola ae la oia ia ia, mai ko lakou lima ae; i ae la, Mai pepehi kakou ia ia.
೨೧ರೂಬೇನನು ಈ ಮಾತನ್ನು ಕೇಳಿ, “ನಾವು ಅವನ ಪ್ರಾಣವನ್ನು ತೆಗೆಯಬಾರದು” ಎಂದು ಹೇಳಿದನು.
22 Olelo aku la o Reubena ia lakou, Mai hookahe i ke koko; e hoolei ia ia iloko o keia hua o ka aina waonahele. Mai kau i ka lima maluna ona. Manao iho la ia e hoopakele ia ia, mai ko lakou lima ae, a e hoihoi aku ia ia i kona makuakane.
೨೨ರೂಬೇನನು ಅವನನ್ನು ಅವರ ಕೈಯಿಂದ ತಪ್ಪಿಸಿ ತಂದೆಗೆ ತಿರುಗಿ ಒಪ್ಪಿಸಬೇಕೆಂದು ನೆನಸಿ ಅವರಿಗೆ, “ಇವನ ರಕ್ತ ಸುರಿಸಬೇಡಿರಿ, ಅವನನ್ನು ಈ ಕಾಡಿನಲ್ಲಿರುವ ಈ ಗುಂಡಿಯೊಳಗೆ ಹಾಕಿರಿ, ಅವನ ಮೇಲೆ ಕೈಹಾಕಬೇಡಿರಿ” ಎಂದು ಹೇಳಿದನು.
23 A hiki aku la o Iosepa i kona poe kaikuaana, hao ae la lakou i ko Iosepa kapa, o ke kapa onionio maluna ona;
೨೩ಯೋಸೇಫನು ತನ್ನ ಅಣ್ಣಂದಿರ ಹತ್ತಿರಕ್ಕೆ ಬಂದಾಗ ಅವರು ಅವನ ಮೇಲಿದ್ದ ನಿಲುವಂಗಿಯನ್ನು ತೆಗೆದರು.
24 Lalau ae la lakou ia ia, hoolei aku la ia ia iloko o ka lua. Ua kaawale ka lua, aole he wai oloko.
೨೪ಅವನನ್ನು ಹಿಡಿದು ಆ ಗುಂಡಿಯೊಳಗೆ ಹಾಕಿದರು. ಆ ಗುಂಡಿ ನೀರಿಲ್ಲದೆ ಬರಿದಾಗಿತ್ತು.
25 A noho iho la lakou e ai i ka ai. Alawa'e la ko lakou maka, ike aku la, aia hoi kekahi poe mamo a Isemaela, e hele mai ana, mai Gileada mai, me ko lakou mau kamelo, ua kaumaha i ka mea ala, a me ka bama, a me ka mura, e lawe hele ana i Aigupita.
೨೫ಆ ಮೇಲೆ ಅವರು ಊಟಕ್ಕೆ ಕುಳಿತುಕೊಂಡಾಗ ಅವರು ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ, ಇಷ್ಮಾಯೇಲರ ಗುಂಪು ಒಂಟೆಗಳ ಮೇಲೆ ಪರಿಮಳ ದ್ರವ್ಯ, ಸುಗಂಧ ತೈಲ, ರಕ್ತಬೋಳ, ಇವುಗಳನ್ನು ಹೇರಿಕೊಂಡು ಗಿಲ್ಯಾದಿನಿಂದ ಐಗುಪ್ತದೇಶಕ್ಕೆ ಪ್ರಯಾಣಮಾಡುತ್ತಾ ಬರುವುದನ್ನು ಕಂಡರು.
26 Olelo aku la o Inda i kona poe hoahanau, Heaha ka maikai, ke pepehi kakou i ko kakou kaikaina, a huna i kona koko?
೨೬ಆಗ ಯೆಹೂದನು ತನ್ನ ಅಣ್ಣತಮ್ಮಂದಿರಿಗೆ, “ನಾವು ನಮ್ಮ ತಮ್ಮನನ್ನು ಕೊಂದು ಹಾಕಿ ಅವನ ರಕ್ತವನ್ನು ಮರೆಮಾಡಿದರೆ ಲಾಭವೇನು?
27 Ina kakou e kuai aku ia ia i ka Isemaela; mai kau ko kakou lima maluna ona; no ka mea, o ko kakou kaikaina no ia, a me ko kakou io. A hoolohe mai la kona poe hoahanau ia ia.
೨೭ಬನ್ನಿರಿ, ಅವನನ್ನು ಆ ಇಷ್ಮಾಯೇಲ್ಯರಿಗೆ ಮಾರಿಬಿಡೋಣ. ನಾವು ಅವನ ಮೇಲೆ ಕೈಹಾಕಬಾರದು. ಅವನು ನಮ್ಮ ಒಡಹುಟ್ಟಿದ ತಮ್ಮನಲ್ಲವೇ” ಎಂದು ಹೇಳಿದನು. ಆ ಮಾತಿಗೆ ಅವನ ಅಣ್ಣಂದಿರು ಒಪ್ಪಿದರು.
28 Hele ae la ua poe kanaka kuai la, no Midiana, huki mai la lakou, a hapai ae la ia Iosepa, mai loko mai o ka lua, a kuai aku la ia ia, i ka Isemaela, i na hapakala, he iwakalua. A lawe ae la lakou ia Iosepa i Aigupita.
೨೮ಅಷ್ಟರಲ್ಲಿ ಮಿದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು. ಅವರು ಯೋಸೇಫನನ್ನು ಗುಂಡಿಯೊಳಗಿಂದ ಮೇಲೆ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಅವನನ್ನು ಮಾರಿದರು. ಅವರು ಅವನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದರು.
29 A hoi mai la o Reubena i ka lua, aia hoi, aole o Iosepa iloko o ka lua: haehae iho la ia i kona kapa.
೨೯ರೂಬೇನನು ತಿರುಗಿ ಆ ಗುಂಡಿಯ ಹತ್ತಿರಕ್ಕೆ ಬಂದು ಅದರಲ್ಲಿ ಯೋಸೇಫನು ಇಲ್ಲದೆ ಇರುವುದನ್ನು ಕಂಡು ತನ್ನ ಬಟ್ಟೆಗಳನ್ನು ಹರಿದುಕೊಂಡನು.
30 A hoi aku la ia i kona poe hoahanau, i aku la, Aole loa ke keiki; a o wau, ihea la wau e hele ai?
೩೦ಅವನು ತನ್ನ ತಮ್ಮಂದಿರ ಬಳಿಗೆ ಬಂದು, “ಅಯ್ಯೋ, ಹುಡುಗನು ಇಲ್ಲವಲ್ಲಾ, ನಾನೆಲ್ಲಿಗೆ ಹೋಗಲಿ?” ಎಂದು ಗೋಳಾಡಿದನು.
31 Lawe ae la lakou i ke kapa o Iosepa, pepehi iho la lakou i ke kao keiki, a kupenu iho la i ke kapa i ke koko.
೩೧ಆ ಮೇಲೆ ಅವರು ಒಂದು ಹೋತವನ್ನು ಕೊಯ್ದು ಅದರ ರಕ್ತದಲ್ಲಿ ಯೋಸೇಫನ ಅಂಗಿಯನ್ನು ಅದ್ದಿ,
32 Hoouka aku la lakou i ua kapa onionio la, a hiki i ko lakou makuakane; i aku la, Ua loaa mai keia ia makou: e nana oe, o ke kapa paha o kau keiki, aole paha.
೩೨ಆ ಬಣ್ಣದ ನಿಲುವಂಗಿಯನ್ನು ತಮ್ಮ ತಂದೆಯ ಬಳಿಗೆ ತಂದು, “ಇದು ನಮಗೆ ಸಿಕ್ಕಿತು. ಇದು ನಿನ್ನ ಮಗನ ಅಂಗಿಯೋ ಏನೋ ದಯವಿಟ್ಟು ನೋಡು” ಎಂದು ಅವನಿಗೆ ಹೇಳಿದರು.
33 Ike mai la kela, i mai la, Oia, o ke kapa no ia o ka'u keiki; ua pau o Iosepa i ka ilio hihiu, oiaio no, ua haehaeia o Iosepa.
೩೩ಯಾಕೋಬನು ಅದರ ಗುರುತು ಹಿಡಿದು, “ಈ ಅಂಗಿ ನನ್ನ ಮಗನದೇ ಹೌದು, ಕಾಡುಮೃಗವು ಅವನನ್ನು ಕೊಂದು ತಿಂದು ಬಿಟ್ಟಿದೆ. ಯೋಸೇಫನನ್ನು ಸಂದೇಹವಿಲ್ಲದೆ ಸೀಳಿಹಾಕಿರಬೇಕು” ಎಂದು ಹೇಳಿದನು.
34 Haehae iho la o Iseraela i kona kapa, kaei ae la i ke kapa inoino ma kona puhaka, a kanikau iho la ia i kana keiki a nui na la.
೩೪ಯಾಕೋಬನು ತನ್ನ ಬಟ್ಟೆಗಳನ್ನು ಹರಿದುಕೊಂಡು ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗಾಗಿ ಬಹು ದಿನಗಳವರೆಗೂ ದುಃಖಪಟ್ಟನು.
35 Ku mai la kana mau keikikane a pau, a me kana mau kaikamahine a pau, e hoonana ia ia. Hoole aku la kela, aole e na: i aku la, E kanikau no au, a hiki au ilalo i ka lua i kuu keiki la. Pela i uwe ai kona makuakane ia ia. (Sheol )
೩೫ಅವನ ಗಂಡುಮಕ್ಕಳೂ ಮತ್ತು ಹೆಣ್ಣುಮಕ್ಕಳೂ ಎಲ್ಲರೂ ಅವನ ದುಃಖ ಶಮನಮಾಡುವುದಕ್ಕೆ ಪ್ರಯತ್ನಿಸಿದ್ದಾಗ್ಯೂ ಅವನು ಸಮಾಧಾನ ಆದರಣೆ ಹೊಂದಲಾರದೇ, “ನಾನು ಹೀಗೆ ದುಃಖಪಡುತ್ತಾ ನನ್ನ ಮಗನೊಂದಿಗೆ ಸಮಾಧಿ ಸೇರುವೆನು” ಎಂದನು. ಹೀಗೆ ತಂದೆಯು ಮಗನಿಗೋಸ್ಕರ ದುಃಖಿಸಿದನು. (Sheol )
36 A kuai aku la ko Midiana ia ia i Aigupita, ia Potipara, he luna na Parao, oia ka luna o ka poe koa.
೩೬ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ತೆಗೆದುಕೊಂಡು ಹೋಗಿ ಐಗುಪ್ತ ದೇಶದ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದರು. ಇವನು ಅರಸನ ಮೈಗಾವಲಿನವರ ದಳಪತಿಯೂ ಆಗಿದ್ದನು.