< Roma 11 >
1 NO ia hoi, ke ninau aku nei au, Ua kiola anei ke Akua i kona poe kanaka ponoi? Aole loa; no ka mea, he mamo na Iseraela au, no na hua o Aberahama, no ka ohana hoi a Beniamina.
೧ಹಾಗಾದರೆ ದೇವರು ತನ್ನ ಸ್ವಂತ ಜನರನ್ನು ಬೇಡವೆಂದು ತಿರಸ್ಕರಿಸಿದನೋ ಎಂದು ಕೇಳುತ್ತೇನೆ ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನನ ಕುಲದವನು ಆಗಿದ್ದೇನಲ್ಲಾ.
2 Aole no ke Akua i kiola i kona poe kanaka ana i ike mua ai. Aole anei oukou i ike i ka ka palapala hemolele i hai mai ai ia Elia, ia ia i hoopii aku ai i ke Akua i ka Iseraela, i ka i ana,
೨ದೇವರು ತಾನು ಮುಂದಾಗಿ ತನ್ನ ಜನರಾಗುವುದಕ್ಕೆ ಗೊತ್ತುಮಾಡಿಕೊಂಡಿದ್ದ ಪ್ರಜೆಗಳನ್ನು ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಧರ್ಮಶಾಸ್ತ್ರವು ಹೇಳುವ ಮಾತು ನಿಮಗೆ ತಿಳಿಯದೋ?
3 E ka Haku, ua pepehi lakou i kau poe kaula, ua wawahi lakou i kou mau kuahu, owau wale no koe, a ke imi nei lakou e kaili i kuu ola?
೩ಅವನು ದೇವರ ಮುಂದೆ, “ಕರ್ತನೇ ಅವರು ನಿನ್ನ ಪ್ರವಾದಿಗಳನ್ನು ಸಂಹರಿಸಿದ್ದಾರೆ, ನಿನ್ನ ಯಜ್ಞವೇದಿಗಳನ್ನು ಒಡೆದು ಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಅವರು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ” ಎಂದು ಇಸ್ರಾಯೇಲ್ಯರ ಮೇಲೆ ದೂರು ಹೇಳಿದ್ದಕ್ಕೆ.
4 A pehea mai ka ke Akua olelo ia ia? Ua hoana e au no'u i ehiku tausani kanaka aole i kukuli iho ia Baala.
೪ದೇವರ ಉತ್ತರವೇನೆಂದರೆ, “ಬಾಳನ ವಿಗ್ರಹಕ್ಕೆ ಅಡ್ಡಬೀಳದೆ ಇರುವ ಏಳುಸಾವಿರ ಪುರುಷರನ್ನು ನನಗಾಗಿ ಉಳಿಸಿಕೊಂಡಿದ್ದೇನೆ” ಎಂಬುದೇ.
5 Pela hoi i keia manawa, ua koe mai kekahi poe ma ka wae ana o ka lokomaikai.
೫ಅದರಂತೆ ಈಗಿನ ಕಾಲದಲ್ಲಿಯೂ ದೇವರ ಕೃಪೆಯಿಂದ ಆರಿಸಿಕೊಂಡವರಾದ ಒಂದು ಭಾಗವು ಉಳಿದಿದ್ದಾರೆ.
6 A ina ma ka lokomaikai, alaila aole ma na hana. A i ole pela, alaila o ka lokomaikai, aole ia he lokomaikai. Aka ina ma na hana, aole ma ka lokomaikai, a i ole pela, alaila, o ka hana aole ia he hana.
೬ಕೃಪೆಯಿಂದ ಆರಿಸಿಕೊಂಡನು ಅಂದ ಮೇಲೆ ಒಳ್ಳೆಯ ಕಾರ್ಯದಿಂದಲ್ಲ. ಹಾಗಲ್ಲದ ಪಕ್ಷಕ್ಕೆ ಕೃಪೆಯನ್ನು ಇನ್ನು ಕೃಪೆಯನ್ನುವುದಕ್ಕಾಗುವುದಿಲ್ಲ.
7 Heaha hoi ilaila? Aole i loaa i ka Iseraela ka mea ana i imi aku ai; aka, ua loaa ae la i ka poe i waeia, a na hoomakapoia ka poe i koe;
೭ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದನ್ನು ಅವರು ಹೊಂದಲಿಲ್ಲ. ಅವರೊಳಗೆ ಆರಿಸಲ್ಪಟ್ಟವರಿಗೆ ಅದು ದೊರೆಯಿತು. ಉಳಿದವರು ಮೊಂಡರಾದರು.
8 (E like me ka mea i palapalaia, Ua haawi mai ke Akua ia lakou i naau hiamoe, a me na maka ike ole, a me na pepeiao lohe ole, ) a hiki i keia la.
೮“ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು.
9 Olelo mai la hoi o Davida, E lilo ko lakou papaaina i pahele e hei ai lakou, i mea e hina ai hoi, a i uku hoi no lakou.
೯ಇದಲ್ಲದೆ “ಅವರ ಭೋಜನವೇ ಅವರಿಗೆ ಬಲೆಯೂ, ಜಾಲವೂ, ಅಡೆತಡೆಯೂ, ಪ್ರತಿಕಾರವೂ ಆಗಲಿ;
10 E hoopouliia ko lakou mau maka, i ole ai lakou e ike, a e hookulou mau ia ko lakou kua.
೧೦ಅವರ ಕಣ್ಣು ಮೊಬ್ಬಾಗಿ ಕಾಣದೆಹೋಗಲಿ ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರುವಂತೆ ಮಾಡು” ಎಂದು ದಾವೀದನು ಹೇಳುತ್ತಾನೆ.
11 Ke ninau aku nei hoi an, Ua okupe anei lakou i hina loa ai? Aole loa: aka, o ko lakou hina ana, he mea ia e ola ai ko na aina e, i mea e hooikaika hou ai ia lakou.
೧೧ಹಾಗಾದರೆ “ಅವರು ಬಿದ್ದೇಹೋಗುವಂತೆ ಎಡವಿದರೇನು” ಎಂದು ಕೇಳುತ್ತೇನೆ. ಹಾಗೆ ಎಂದಿಗೂ ಆಗಬಾರದು ಅವರು ಬಿದ್ದುಹೋದದ್ದರಿಂದ ಕ್ರಿಸ್ತನಿಂದ ಉಂಟಾಗುವ ರಕ್ಷಣೆಯು ಅನ್ಯಜನರಿಗೆ ಉಂಟಾಯಿತು. ಇದರಿಂದ ದೇವರು ಅವರಲ್ಲಿ ಅಸೂಯೆ ಹುಟ್ಟಿಸುತ್ತಾನೆ.
12 Ina hoi o ko lakou hina ana ka mea e waiwai ai ke ao nei, a o ko lakou kiolaia ka mea e waiwai ai ko na aina e, aole anei e nui aku ia ma ko lakou pomaikai hou ana?
೧೨ಅವರು ಬಿದ್ದುಹೋದದ್ದು ಸರ್ವಲೋಕದ ಸೌಭಾಗ್ಯಕ್ಕೂ, ಅವರು ಸೋತುಹೋದದ್ದು ಅನ್ಯಜನಗಳ ಸಂಪತ್ತಿಗೂ ಮಾರ್ಗವಾಗಿರಲಾಗಿ ಅವರ ಪೂರ್ಣ ಪುನಃಸ್ಥಾಪನೆಯು ಪ್ರಪಂಚಕ್ಕೆ ಎಷ್ಟೋ ಹೆಚ್ಚಾದ ಭಾಗ್ಯಕ್ಕೆ ಕಾರಣವಾಗುವುದು.
13 (No ka mea, ke olelo nei au ia oukou, e ko na aina e, no ka mea, he lunaolelo wau no na kanaka e, a ke hoomaikai nei au i kuu oihana;
೧೩ಅನ್ಯಜನರಾಗಿರುವ ನಿಮಗೆ ನಾನು ಹೇಳುವುದೇನಂದರೆ, ನಾನು ಅನ್ಯಜನರಿಗೆ ಅಪೊಸ್ತಲನಾಗಿರಲಾಗಿ ನನ್ನ ಸೇವೆಯ ಬಗ್ಗೆ ಹೊಗಳಿಕೊಳ್ಳುತ್ತಿದ್ದೇನೆ.
14 I hooikaika ae au i ko'u poe hoahanau ma ke kino, a e hoola au i kekahi poe o lakou.)
೧೪ಇದರಿಂದಾಗಿ ಸ್ವಜನರಲ್ಲಿ ಅಸೂಯೆಯನ್ನು ಕೆರಳಿಸಿ ಅವರಲ್ಲಿ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು.
15 No ka mea, ina o ka hemo ana o lakou ka mea e hoomaluhia ai ke ao nei, heaha hoi ka loaa hou ana mai o lakou, aole anei ia o ke ola mai ka make mai?
೧೫ಯಾಕೆಂದರೆ ಇಸ್ರಾಯೇಲ್ಯರನ್ನು ನಿರಾಕರಿಸುವುದರಿಂದ ಲೋಕವು ದೇವರ ಸಂಗಡ ಸಂಧಾನವಾಗುವುದಕ್ಕೆ ಮಾರ್ಗವಾದ ಮೇಲೆ ಅವರನ್ನು ಸೇರಿಸಿಕೊಳ್ಳುವುದರಿಂದ ಏನಾಗುವುದು? ಸತ್ತವರು ಜೀವಿತರಾಗಿ ಎದ್ದುಬಂದತಾಗುವುದಿಲ್ಲವೇ.
16 A ina i laa ka hua mua, pela aku hoi ka popo palaoa; a ina i laa ke kumu, pela aku hoi na lala.
೧೬ಕಣಕದಲ್ಲಿ ಪ್ರಥಮಫಲವನ್ನು ದೇವರಿಗರ್ಪಿಸಿದ ಮೇಲೆ ಕಣಕವೆಲ್ಲಾ ಪವಿತ್ರವಾಯಿತು. ಬೇರು ಶುದ್ಧವಾಗಿದ್ದ ಮೇಲೆ ಕೊಂಬೆಗಳೂ ಹಾಗೆಯೇ.
17 A ina i haihaiia kekahi mau lala, a o oe he oliva ulu wale, i pakuiia, ma ko lakou wahi, e loaa pu ana ia oe ko ke kumu, a me ka momona o ka oliva;
೧೭ಆದರೆ ಕೆಲವು ಕೊಂಬೆಗಳನ್ನು ಮುರಿದುಹಾಕಿ ಕಾಡೆಣ್ಣೆ ಮರದಂತಿರುವ ನಿನ್ನನ್ನು ಅವುಗಳ ಜಾಗದಲ್ಲಿ ಕಸಿಮಾಡಿರಲಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಅದು ಪಾಲುಹೊಂದಿದ್ದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಅಂಟಿಸಿದ ಮೇಲೆ ನೀನು ಕೊಂಬೆಯ ಕುರಿತು ಹೆಚ್ಚಿಸಿಕೊಳ್ಳಬೇಡ.
18 Mai hookiekie ae oe maluna o na lala: aka, ina hookiekie ae oe, aole e kau ke kumu maluna ou, aka, o oe maluna o ke kumu.
೧೮ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ. ಅದು ನಿನಗೆ ಆಧಾರವಾಗಿದೆ.
19 Alaila e olelo no oe, Ua haihaiia na lala i pakuiia'ku ai au.
೧೯ಈ ಮಾತಿಗೆ, “ನನ್ನನ್ನು ಕಸಿಮಾಡುವುದಕ್ಕಾಗಿ ಕೊಂಬೆಗಳು ಮುರಿದುಹಾಕಲ್ಪಟ್ಟವಲ್ಲಾ” ಎಂದು ನೀನು ಒಂದು ವೇಳೆ ಹೇಳಬಹುದು.
20 Oia, ua haihaiia na lala no ka manaoio ole, a ma ka manaoio e ku nei oe. Mai hoonaaukiekie oe, e hopohopo nae:
೨೦ನೀನು ಹೇಳುವುದು ನಿಜ. ಅವರು ನಂಬದೇ ಹೋದ್ದದರಿಂದ ಮುರಿದುಹಾಕಲ್ಪಟ್ಟರು. ನೀನು ನಿಂತಿರುವುದು ನಂಬಿಕೆಯಿಂದಲೇ.
21 No ka mea, ina i hookoe ole ke Akua i na lala maoli, e ao o hookoe ole oia ia oe.
೨೧ಗರ್ವಪಡಬೇಡ, ಭಯದಿಂದಿರು. ದೇವರು ಹುಟ್ಟುಕೊಂಬೆಗಳನ್ನು ಉಳಿಸದೆ ಇದ್ದ ಮೇಲೆ ನಿನ್ನನ್ನೂ ಉಳಿಸುವುದಿಲ್ಲ.
22 No ia mea, e nana oe i ka lokomaikai a me ka oolea o ke Akua: he oolea i ka poe i haule; aka, he lokomaikai no ia oe ke noho mau oe ma ka pono; a i ole, e okiia auanei oe.
೨೨ಆದ್ದರಿಂದ ದೇವರ ದಯೆಯನ್ನೂ, ದಂಡನೆಯನ್ನು ನೋಡು; ಬಿದ್ದವರಿಗೆ ದಂಡನೆಯನ್ನೂ, ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆಯನ್ನು ಹೊಂದುವಿ. ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.
23 A o lakou nei hoi, i ole lakou e noho mau ma ka manaoio ole, e pnkui hou ia auanei lakou; no ka mea e hiki no i ke Akua ke pakui hou ia lakou.
೨೩ಇಸ್ರಾಯೇಲ್ಯರ ಕೂಡ ಇನ್ನು ಅಪನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಅವರನ್ನೂ ಕಸಿಮಾಡುವನು. ದೇವರು ಅವರನ್ನು ತಿರುಗಿ ಕಸಿಕಟ್ಟುವುದಕ್ಕೆ ಸಮರ್ಥನಾಗಿದ್ದಾನೆ.
24 No ka mea, ina i okiia oe no luna mai o ka oliva ulu wale ma ke ano maoli, a ua pakuiia ma ka oliva maikai me ke ano e, aole anei e pakui io ia na lala maoli i ko lakou oliva ponoi?
೨೪ನೀನು ಹುಟ್ಟು ಕಾಡುಮರದಿಂದ ಕಡಿದು ತೆಗೆಯಲ್ಪಟ್ಟು ನಿನಗೆ ಸಂಬಂಧಪಡದ ಊರು ಮರದಲ್ಲಿ ಕಸಿಕಟ್ಟಿಸಿಕೊಂಡವನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವುದು ಎಷ್ಟೋ ಯುಕ್ತವಾಗಿದೆಯಲ್ಲವೇ.
25 No ka mea, aole au makemake e ike ole oukou, e na hoahanau, i keia pohihihi, o akamai oukou i ko oukou manao; ua loaa ka moowini i kekahi poe o ka Iseraela a hiki i ka manawa e komo mai ai ka nui o ko na aina e.
೨೫ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು.
26 Alaila e hoolaia ka Iseraela a pau; e like me ka mea i palapalaia, Noloko mai o Ziona e puka mai ai ka hoola, a e pale aku ia i ka aia ana, mai o Iakoba aku:
೨೬ಆ ನಂತರ ಇಸ್ರಾಯೇಲ್ ಜನರೆಲ್ಲರೂ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ ಧರ್ಮಶಾಸ್ತ್ರದಲ್ಲಿ ಬಿಡಿಸುವವನು “ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು.
27 A o keia ka'u berita me lakou i ka manawa e kala aku ai au i na hewa o lakou.
೨೭ನಾನು ಅವರ ಸಂಗಡ ಮಾಡಿಕೊಂಡ ಈ ಒಡಂಬಡಿಕೆಯು ನಾನು ಅವರ ಪಾಪಗಳನ್ನು ಪರಿಹರಿಸುವಾಗ ನೆರವೇರುವುದು.” ಎಂದು ಬರೆದಿದೆ.
28 No oukou hoi i lilo ai lakou i poe enemi, ma ka euanelio; aka, no na kupuna, he poe aloha, ma ka wae ana.
೨೮ಅವರು ಸುವಾರ್ತೆಯನ್ನು ಬೇಡವೆಂದದ್ದರಿಂದ ದೇವರು ನಿಮಗೆ ಹಿತವನ್ನು ಉಂಟುಮಾಡಿ ಅವರನ್ನು ಶತ್ರುಗಳೆಂದೆಣಿಸಿದ್ದಾನೆ. ಆದರೂ ಅವರು ತಾನು ಆರಿಸಿಕೊಂಡ ಪೂರ್ವಿಕರ ವಂಶಸ್ಥರಾಗಿರುವುದರಿಂದ ಅವರನ್ನು ಪ್ರಿಯರೆಂದು ಎಣಿಸಿದ್ದಾನೆ.
29 No ka mea, o na haawina a me ke koho ana a ke Akua, me ka luli ole no ia.
೨೯ದೇವರು ವರಗಳನ್ನು ಅನುಗ್ರಹಿಸುವುದಕ್ಕೆ ಜನರನ್ನು ಕರೆಯುವುದ್ದಕ್ಕೂ ಮನಸ್ಸು ಬದಲಾಯಿಸುವವನಲ್ಲ.
30 Me oukou i hoolohe ole ai i ke Akua mamua, a i keia manawa ua loaa ia oukou ke alohaia mai, ma ko lakou hoolohe ole;
೩೦ಯಾವ ಪ್ರಕಾರ ನೀವು ಪೂರ್ವದಲ್ಲಿ ಅವಿಧೇಯರಾಗಿದ್ದರೂ ಈಗ ಅವರ ಅವಿಧೇಯತೆಯ ದೆಸೆಯಿಂದ ಕರುಣೆ ಹೊಂದಿದ್ದೀರೋ,
31 Pela hoi lakou i hoolohe ole ai i keia manawa, i loaa ia lakou ke alohaia ma ko oukou alohaia.
೩೧ಅದೇ ಪ್ರಕಾರವಾಗಿ ಇಸ್ರಾಯೇಲ್ಯರೂ ಈಗ ಅವಿಧೇಯರಾಗಿದ್ದರೂ ನಿಮಗೆ ದೊರಕಿದ ಕರುಣೆಯನ್ನು ಅವರು ಹೊಂದುವರು.
32 No ka mea, ua kuu iho ke Akua ia lakou a pau i ka manaoio ole, i aloha mai ai oia ia lakou. (eleēsē )
೩೨ಯಾಕೆಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು ಎಲ್ಲರನ್ನೂ ಅವಿಧೇಯತೆಯೆಂಬ ದುಸ್ಥಿತಿಯಲ್ಲಿ ಮುಚ್ಚಿಹಾಕಿದ್ದಾನೆ. (eleēsē )
33 Nani ka hohonu o ka waiwai a me ke akamai, a me ka ike o ke Akua! nani hoi ke kupanaha o kona mau manao, a me ka ike ole ia ku o kona mau aoao!
೩೩ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.
34 No ka mea, owai la ka mea i ike i ka naau o ka Haku? Owai aku la hoi kona hoakukakuka?
೩೪“ಕರ್ತನ ಮನಸ್ಸನ್ನು ತಿಳಿದುಕೊಂಡವರಾರು? ಆತನಿಗೆ ಆಲೋಚನಾಕರ್ತನಾಗಿದ್ದವನು ಯಾರು?
35 Owai la hoi ka mea i haawi e aku ia ia e uku hou ia mai ai ia?
೩೫ಮುಂಗಡವಾಗಿ ಆತನಿಗೆ ಕೊಟ್ಟು ಆನಂತರ ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?”
36 No ka mea, nana mai, a ma o na la, a nona no hoi na mea a pau; ia ia ka hoonani mau loa ia'ku. Amene. (aiōn )
೩೬ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್. (aiōn )