< דברי הימים א 9 >

וכל ישראל התיחשו והנם כתובים על ספר מלכי ישראל ויהודה הגלו לבבל במעלם 1
ಎಲ್ಲಾ ಇಸ್ರಾಯೇಲರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ವಂಶಾವಳಿಯಲ್ಲಿ ಉಲ್ಲೇಖಿಸಲಾಗಿದೆ. ಅವರ ಹೆಸರುಗಳು ಇಸ್ರಾಯೇಲರ ಅರಸರ ಪುಸ್ತಕದಲ್ಲಿ ದಾಖಲಾಗಿದೆ. ಯೆಹೂದ್ಯರು ದೇವದ್ರೋಹಿಗಳಾದುದರಿಂದ ಬಾಬಿಲೋನಿಗೆ ಸೆರೆಯವರಾಗಿ ಹೋಗಬೇಕಾಯಿತು.
והיושבים הראשנים אשר באחזתם בעריהם ישראל הכהנים הלוים והנתינים 2
ಆಗ ಅವರ ಪಟ್ಟಣಗಳನ್ನೂ, ಸ್ವಾಸ್ತ್ಯವನ್ನೂ ಮೊದಲು ಸ್ವಾಧೀನಮಾಡಿಕೊಂಡವರು ಇಸ್ರಾಯೇಲ್ಯರು, ಯಾಜಕರು ಲೇವಿಯರು ಮತ್ತು ದೇವಾಲಯದ ಸೇವಕರು ಇವರೇ.
ובירושלם ישבו מן בני יהודה ומן בני בנימן--ומן בני אפרים ומנשה 3
ಯೆಹೂದ್ಯರು, ಬೆನ್ಯಾಮೀನ್ಯರು ಎಫ್ರಾಯೀಮ್ಯರು, ಮನಸ್ಸೆಯರು ಯೆರೂಸಲೇಮಿನಲ್ಲಿ ವಾಸವಾಗಿದ್ದವರು.
עותי בן עמיהוד בן עמרי בן אמרי בן בנימן (בני מן) בני פרץ בן יהודה 4
ಯೆಹೂದ ಕುಲದ ಊತೈ ಅಮ್ಮೀಹೂದನ ಮಗ. ಅಮ್ಮಿಹೂದನು ಒಮ್ರಿಯ ಮಗ. ಇವನು ಇಮ್ರಿಯ, ಮಗ. ಇವನು ಬಾನಿಯ ಮಗ. ಇವನು ಯೆಹೂದನ ಮಗನಾದ ಪೆರೆಚನ ಸಂತಾನದವನು.
ומן השילוני עשיה הבכור ובניו 5
ಶೇಲಾಹನ ಸಂತಾನದ ಚೊಚ್ಚಲು ಮಗನಾದ ಅಸಾಯ ಮತ್ತು ಅವನ ಮಕ್ಕಳು.
ומן בני זרח יעואל ואחיהם שש מאות ותשעים 6
ಯೆಯೂವೇಲ್ ಜೆರಹನ ಸಂತಾನದವನು. ಇವನೂ ಇವನ ಸಹೋದರರೂ ಒಟ್ಟು ಆರುನೂರ ತೊಂಬತ್ತು ಜನರು.
ומן בני בנימן--סלוא בן משלם בן הודויה בן הסנאה 7
ಬೆನ್ಯಾಮೀನ್ಯ ಕುಲದವರಲ್ಲಿ ಮೆಷುಲ್ಲಾಮನ ಮಗನೂ, ಹೋದವ್ಯನ ಮೊಮ್ಮಗನೂ, ಹಸ್ಸೆನುವಾಹನ ಮರಿಮಗನೂ ಆಗಿರುವ ಸಲ್ಲು ಪ್ರಮುಖನಾದವನು.
ויבניה בן ירחם ואלה בן עזי בן מכרי ומשלם בן שפטיה בן רעואל בן יבניה 8
ಯೆರೋಹಾಮನ ಮಗನಾದ ಇಬ್ನೆಯಾಹ; ಉಜ್ಜಿಯನ ಮಗನೂ ಮಿಕ್ರೀರಿಯ ಮೊಮ್ಮಗನೂ ಆದ ಏಲಾ, ಶೆಫಟ್ಯನ ಮಗನೂ ರೆಯೂವೇಲನ ಮೊಮ್ಮಗನೂ ಇಬ್ನಿಯನ ಮರಿಮಗನೂ ಆದ ಮೆಷುಲ್ಲಾಮ್ ಇವರೂ ಮತ್ತು ಇವರ ಸಹೋದರರೂ,
ואחיהם לתלדותם תשע מאות וחמשים וששה כל אלה אנשים ראשי אבות לבית אבתיהם 9
ಒಟ್ಟಿಗೆ ಒಂಬೈನೂರ ಐವತ್ತಾರು ಜನರು. ಇವರೆಲ್ಲರೂ ತಮ್ಮ ಗೋತ್ರಗಳಲ್ಲಿ ಪ್ರಧಾನಪುರುಷರು.
ומן הכהנים ידעיה ויהויריב ויכין 10
೧೦ಯಾಜಕರಲ್ಲಿ ಯೆದಾಯ, ಯೆಹೋಯಾರೀಬ್, ಯಾಕೀನ್;
ועזריה בן חלקיה בן משלם בן צדוק בן מריות בן אחיטוב נגיד בית האלהים 11
೧೧ಅಹೀಟೂಬನ ಸಂತಾನದವನಾದ ಮೆರಾಯೋತನಿಂದ ಹುಟ್ಟಿದ ಚಾದೋಕನ ಮರಿಮಗನೂ ಮೆಷುಲ್ಲಾಮನ ಮೊಮ್ಮಗನೂ, ಹಿಲ್ಕೀಯನ ಮಗನೂ ದೇವಾಲಯದ ಅಧಿಪತಿಯಾಗಿದ್ದವನೂ ಆಗಿದ್ದ ಅಜರ್ಯ.
ועדיה בן ירחם בן פשחור בן מלכיה ומעשי בן עדיאל בן יחזרה בן משלם בן משלמית בן אמר 12
೧೨ಯೆರೋಹಾಮನ ಮಗನಾದ ಅದಾಯ ಇವನೂ ಮತ್ತು ಇವನ ಸಹೋದರರೂ ಯೆರೋಹಾಮನು, ಪಶ್ಹೂರನ ಮಗ; ಇವನು ಮಲ್ಕೀಯನ ಮಗ, ಇವನು ಮಾಸೈಯನ ಮಗ. ಇವನು ಅದೀಯೇಲನ ಮಗ. ಇವನು ಯಹ್ಜೇರನ ಮಗ. ಇವನು ಮೆಷುಲ್ಲಾಮನ ಮಗ. ಇವನು ಮೆಷಿಲ್ಲೋಮೋತನ ಮಗ. ಇವನು ಇಮ್ಮೇರನ ಮಗ.
ואחיהם ראשים לבית אבותם אלף ושבע מאות וששים--גבורי חיל מלאכת עבודת בית האלהים 13
೧೩ಗೋತ್ರ ಪ್ರಧಾನರು ದೇವಾಲಯ ಸೇವೆಯಲ್ಲಿ ಗಟ್ಟಿಗರೂ ಆಗಿದ್ದ ಇವರೂ, ಇವರ ಸಹೋದರರೂ ಒಟ್ಟು ಸಾವಿರದ ಏಳು ನೂರ ಅರವತ್ತು ಜನರು.
ומן הלוים שמעיה בן חשוב בן עזריקם בן חשביה מן בני מררי 14
೧೪ಲೇವಿಯರಲ್ಲಿ ಹಷಬ್ಯನ ಮಗನೂ, ಅಜ್ರೀಕಾಮನ ಮೊಮ್ಮಗನೂ, ಹಷಬ್ಯನ ಮರಿಮಗನೂ, ಮೆರಾರೀ ಗೋತ್ರದವನೂ ಆದ ಶೆಮಾಯ
ובקבקר חרש וגלל ומתניה בן מיכא בן זכרי בן אסף 15
೧೫ಬಕ್ಬಕ್ಕರ್, ಹೆರೆಷ್, ಗಾಲಾಲ್, ಮೀಕನ ಮಗನೂ ಜಿಕ್ರೀಯ ಮೊಮ್ಮಗನೂ ಆಸಾಫನ ಮರಿಮಗನೂ ಆದ ಮತ್ತನ್ಯನು.
ועבדיה בן שמעיה בן גלל בן ידותון וברכיה בן אסא בן אלקנה היושב בחצרי נטופתי 16
೧೬ಶೆಮಾಯನ ಮಗನೂ ಯೆದೂತೂನನ ಮರಿಮಗನೂ ಆದ ಓಬದ್ಯ. ನೆಟೋಫಾತ್ಯರ ಗ್ರಾಮಗಳಲ್ಲಿ ವಾಸವಾಗಿದ್ದ ಎಲ್ಕಾನನ ಮೊಮ್ಮಗನೂ ಆಸನ ಮಗನೂ ಆದ ಬೆರೆಕ್ಯ ಇವರೇ.
והשערים שלום ועקוב וטלמן ואחימן ואחיהם שלום הראש 17
೧೭ದ್ವಾರಪಾಲಕರಲ್ಲಿ ಶಲ್ಲೂಮ್, ಅಕ್ಕೂಬ್, ಟಲ್ಮೋನ್, ಅಹೀಮಾನ್, ಇವರೂ ಮತ್ತು ಇವರ ಸಹೋದರರು. ಇವರಲ್ಲಿ ಶಲ್ಲೂಮನು ಪ್ರಮುಖನಾಗಿದ್ದನು.
ועד הנה בשער המלך מזרחה המה השערים למחנות בני לוי 18
೧೮ಶಲ್ಲೂಮರು ಇಂದಿನವರೆಗೂ ಪೂರ್ವದಿಕ್ಕಿನಲ್ಲಿರುವ ಅರಸನ ಬಾಗಿಲನ್ನು ಕಾಯುತ್ತಿರುತ್ತಾರೆ. ಇವರು ಲೇವಿಯರ ಪಾಳೆಯಗಳ ದ್ವಾರಪಾಲಕರು.
ושלום בן קורא בן אביסף בן קרח ואחיו לבית אביו הקרחים על מלאכת העבודה שמרי הספים לאהל ואבתיהם על מחנה יהוה שמרי המבוא 19
೧೯ಕೋರೇಯನ ಮಗನೂ ಎಬ್ಯಾಸಾಫನ ಮೊಮ್ಮಗನೂ ಕೋರಹನ ಮರಿಮಗನೂ ಆದ ಶಲ್ಲೂಮನೂ, ಅವನ ಗೋತ್ರ ಬಂಧುಗಳಾದ ಮಿಕ್ಕ ಕೋರಹಿಯರೂ ಗುಡಾರದ ದ್ವಾರಪಾಲಕ ಸೇವೆಗೆ ನೇಮಿಸಲ್ಪಟ್ಟರು. ಇವರ ಪೂರ್ವಿಕರು ಯೆಹೋವನ ಪಾಳೆಯದ ಪ್ರವೇಶ ದ್ವಾರವನ್ನು ಕಾಯುವವರಾಗಿದ್ದರು.
ופינחס בן אלעזר נגיד היה עליהם לפנים--יהוה עמו 20
೨೦ಆಗ ಎಲ್ಲಾಜಾರನ ಮಗನಾದ ಫೀನೆಹಾಸನು ಅವರ ನಾಯಕನಾಗಿದ್ದನು. ಯೆಹೋವನು ಇವನ ಸಂಗಡ ಇದ್ದನು.
זכריה בן משלמיה שער פתח לאהל מועד 21
೨೧ಮೆಷೆಲೆಮ್ಯನ ಮಗನಾದ ಜೆಕರೀಯನು ದೇವದರ್ಶನದ ಗುಡಾರ ದ್ವಾರಪಾಲಕನಾಗಿದ್ದನು.
כלם הברורים לשערים בספים מאתים ושנים עשר המה בחצריהם התיחשם המה יסד דויד ושמואל הראה באמונתם 22
೨೨ದ್ವಾರಪಾಲಕ ಸೇವೆಗೆ ಪ್ರತ್ಯೇಕಿಸಲ್ಪಟ್ಟವರು ಒಟ್ಟಿಗೆ ಇನ್ನೂರ ಹನ್ನೆರಡು ಜನರು. ಅವರ ಹೆಸರುಗಳು ಅವರವರ ಗ್ರಾಮಗಳ ಪಟ್ಟಿಯಲ್ಲಿ ದಾಖಲಾಗಿದ್ದವು. ದಾವೀದನೂ, ದರ್ಶಿಯಾದ ಸಮುವೇಲನೂ ಅವರನ್ನು ಈ ಉದ್ಯೊಗಕ್ಕೆ ನೇಮಿಸಿದರು.
והם ובניהם על השערים לבית יהוה לבית האהל--למשמרות 23
೨೩ಅವರೂ ಅವರ ಮಕ್ಕಳೂ ಯೆಹೋವನ ಆಲಯದ, ಗುಡಾರದ ಬಾಗಿಲುಗಳನ್ನು ಕಾಯುತ್ತಿದ್ದರು.
לארבע רוחות יהיו השערים מזרח ימה צפונה ונגבה 24
೨೪ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ ಈ ದಿಕ್ಕುಗಳಲ್ಲಿರುವ ದೇವಾಲಯದ ಬಾಗಿಲುಗಳನ್ನು ಕಾಯುವವರಾಗಿದ್ದರು.
ואחיהם בחצריהם לבוא לשבעת הימים מעת אל עת--עם אלה 25
೨೫ಗ್ರಾಮಗಳಲ್ಲಿ ಇದ್ದ ಅವರ ಗೋತ್ರ ಬಂಧುಗಳು ಅವರ ಸಂಗಡ ಕೆಲಸ ಮಾಡುವುದಕ್ಕೊಸ್ಕರ ಸರದಿಯಂತೆ ಕ್ರಮದ ಪ್ರಕಾರವಾಗಿ ಮೇಲೆ ಏಳೇಳು ದಿನಗಳು ಬರಬೇಕಾಯಿತು.
כי באמונה המה ארבעת גברי השערים--הם הלוים והיו על הלשכות ועל האצרות בית האלהים 26
೨೬ಲೇವಿಯರಾದ ಮೇಲ್ಕಂಡ ನಾಲ್ಕು ಜನರು ದ್ವಾರಪಾಲಕರ ಮುಖ್ಯಸ್ಥರಾಗಿ ದೇವಾಲಯದ ಕೋಣೆಗಳನ್ನೂ ಮತ್ತು ಭಂಡಾರಗಳನ್ನೂ ನೋಡಿಕೊಳ್ಳುವ ಜವಾಬ್ದಾರರಾಗಿದ್ದರು.
וסביבות בית האלהים ילינו כי עליהם משמרת והם על המפתח ולבקר לבקר 27
೨೭ಅವರು ರಾತ್ರಿಯಲ್ಲಿ ದೇವಾಲಯದ ಸುತ್ತಲೂ ಕಾವಲು ಕಾಯುತ್ತಿದ್ದರು. ಪ್ರತಿದಿನ ಬೆಳಿಗ್ಗೆ ದೇವಾಲಯದ ಬಾಗಿಲು ತೆರೆಯುತ್ತಿದ್ದರು.
ומהם על כלי העבודה כי במספר יביאום ובמספר יוציאום 28
೨೮ಇದಲ್ಲದೆ ಅವರಲ್ಲಿ ಕೆಲವರು ಪೂಜಾ ಸಾಮಗ್ರಿಗಳನ್ನು ನೋಡಿಕೊಳ್ಳುವವರಾಗಿದ್ದರು. ಅವುಗಳನ್ನು ಕೊಡುವಾಗಲೂ ತಿರುಗಿ ತೆಗೆದುಕೊಳ್ಳುವಾಗಲೂ ಲೆಕ್ಕವಿರಿಸಿಕೊಂಡು ಕರ್ತವ್ಯ ನಿರ್ವಹಿಸುತ್ತಿದ್ದರು.
ומהם ממנים על הכלים ועל כל כלי הקדש ועל הסלת והיין והשמן והלבונה והבשמים 29
೨೯ಇನ್ನು ಕೆಲವರು ದೇವಾಲಯದ ಎಲ್ಲಾ ವಸ್ತುಗಳ ಮೇಲ್ವಿಚಾರಕರೂ, ಗೋದಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ, ಪರಿಮಳದ್ರವ್ಯ ಇವುಗಳ ಪಾರುಪತ್ಯಗಾರರು ಆಗಿದ್ದರು.
ומן בני הכהנים רקחי המרקחת לבשמים 30
೩೦ಯಾಜಕ ಸಂತಾನದವರಲ್ಲಿ ಕೆಲವರು ಪರಿಮಳದ್ರವ್ಯಗಳಿಂದ ತೈಲವನ್ನು ಮಾಡುತ್ತಿದ್ದರು.
ומתתיה מן הלוים הוא הבכור לשלם הקרחי--באמונה על מעשה החבתים 31
೩೧ಲೇವಿಯರಲ್ಲಿ ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ರೊಟ್ಟಿ ಸುಡುವ ಕೆಲಸದ ಮೇಲ್ವಿಚಾರಕನು.
ומן בני הקהתי מן אחיהם על לחם המערכת להכין שבת שבת 32
೩೨ಅವನ ಸಹೋದರರಾದ ಮಿಕ್ಕ ಕೆಹಾತ್ಯರಲ್ಲಿ ಕೆಲವರು ಪ್ರತಿ ಸಬ್ಬತ್ತಿನಲ್ಲಿ ನೈವೇದ್ಯದ ರೊಟ್ಟಿಗಳನ್ನು ತಯಾರಿಸುವ ಕೆಲಸವಿತ್ತು.
ואלה המשררים ראשי אבות ללוים בלשכת--פטירים (פטורים) כי יומם ולילה עליהם במלאכה 33
೩೩ಇನ್ನೂ ಕೆಲವರು ವಾದ್ಯಗಾರರಾಗಿ ಸಂಗೀತ ಸೇವೆಮಾಡುವ ಜವಾಬ್ದಾರಿಯಿತ್ತು. ಇವರು ಲೇವಿಯ ಗೋತ್ರಗಳಲ್ಲಿ ಪ್ರಧಾನರೂ ದೇವಾಲಯದ ಕೋಣೆಗಳಲ್ಲಿ ವಾಸಿಸುವವರೂ ಆಗಿದ್ದರು. ಅವರು ಹಗಲಿರುಳು ಕೆಲಸದಲ್ಲಿ ಇರುತ್ತಿದ್ದರಿಂದ ಇತರ ಸೇವೆಯಿಂದ ಬಿಡುಗಡೆ ಹೊಂದಿದ್ದರು.
אלה ראשי האבות ללוים לתלדותם ראשים אלה ישבו בירושלם 34
೩೪ಇವರು ವಂಶಾವಳಿಯ ಪ್ರಕಾರ ಲೇವಿಗೋತ್ರ ಪ್ರಧಾನರೂ, ಯೆರೂಸಲೇಮಿನಲ್ಲಿ ವಾಸಿಸುವವರೂ ಆಗಿದ್ದರು.
ובגבעון ישבו אבי גבעון יעואל (יעיאל) ושם אשתו מעכה 35
೩೫ಗಿಬ್ಯೋನಿನಲ್ಲಿ ಗಿಬ್ಯೋನ್ಯರ ಮೂಲಪುರುಷನಾದ ಯೆಯೂವೇಲನು ವಾಸಿಸುತ್ತಿದ್ದನು. ಅವನ ಹೆಂಡತಿಯ ಹೆಸರು ಮಾಕ.
ובנו הבכור עבדון וצור וקיש ובעל ונר ונדב 36
೩೬ಅವನ ಚೊಚ್ಚಲ ಮಗ ಅಬ್ದೋನನು. ತರುವಾಯ ಹುಟ್ಟಿದವರು ಚೂರ್, ಕೀಷ್, ಬಾಳ್, ನೇರ್, ನಾದಾಬ್,
וגדור ואחיו וזכריה ומקלות 37
೩೭ಗೆದೋರ್, ಅಹ್ಯೋ, ಜೆಕರ್ಯ ಮತ್ತು ಮಿಕ್ಲೋತ್.
ומקלות הוליד את שמאם ואף הם נגד אחיהם ישבו בירושלם--עם אחיהם 38
೩೮ಮಿಕ್ಲೋತನು ಶಿಮಾಮನನ್ನು ಪಡೆದನು. ಇವರು ತಮ್ಮ ಸಹೋದರರಿಂದ ಬೇರೆಯಾಗಿ ಯೆರೂಸಲೇಮಿನಲ್ಲಿರುವ ತಮ್ಮ ಕುಲಸಂಬಂಧಿಕರ ಜೊತೆಯಲ್ಲಿ ವಾಸಿಸುತ್ತಿದ್ದರು.
ונר הוליד את קיש וקיש הוליד את שאול ושאול הוליד את יהונתן ואת מלכישוע ואת אבינדב ואת אשבעל 39
೩೯ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾತಾನನನ್ನೂ, ಮಲ್ಕೀಷೂವನನ್ನೂ, ಅಬೀನಾದಾಬನನ್ನೂ, ಎಷ್ಬಾಳನನ್ನು ಪಡೆದನು.
ובן יהונתן מריב בעל ומרי בעל הוליד את מיכה 40
೪೦ಯೋನಾತಾನನು ಮೆರೀಬ್ಬಾಳನನ್ನು ಪಡೆದನು. ಮೆರೀಬ್ಬಾಳನು ಮೀಕನನ್ನು ಪಡೆದನು.
ובני מיכה--פיתן ומלך ותחרע 41
೪೧ಮೀಕನ ಮಕ್ಕಳು ಪೀತೋನ್, ಮೆಲೆಕ್, ತಹ್ರೇಯ ಮತ್ತು ಅಹಾಜ ಇವರೇ.
ואחז הוליד את יערה ויערה הוליד את עלמת ואת עזמות ואת זמרי וזמרי הוליד את מוצא 42
೪೨ಆಹಾಜನು ಯಗ್ರಾಹನನ್ನು ಪಡೆದನು; ಯಗ್ರಾಹನು ಆಲೆಮೆತ್, ಅಜ್ಮಾವೆತ್, ಜಿಮ್ರಿ ಇವರನ್ನು ಪಡೆದನು; ಜಿಮ್ರಿಯು ಮೋಚನನ್ನು ಪಡೆದನು.
ומוצא הוליד את בנעא ורפיה בנו אלעשה בנו אצל בנו 43
೪೩ಮೋಚನು ಬಿನ್ನನನ್ನು ಪಡೆದನು; ಇವನ ಮಗನು ರೆಫಾಯ; ಇವನ ಮಗ ಎಲ್ಲಾಸ; ಇವನ ಮಗ ಅಚೇಲ.
ולאצל ששה בנים ואלה שמותם עזריקם בכרו וישמעאל ושעריה ועבדיה וחנן אלה בני אצל 44
೪೪ಅಚೇಲನಿಗೆ ಆರು ಮಕ್ಕಳಿದ್ದರು. ಅವರ ಹೆಸರುಗಳು ಅಜ್ರೀಕಾಮ್, ಬೋಕೆರೂ, ಇಷ್ಮಾಯೇಲ್, ಶೆಯರ್ಯ, ಓಬದ್ಯ ಮತ್ತು ಹಾನಾನ್.

< דברי הימים א 9 >