< מלכים ב 15 >
בשנת עשרים ושבע שנה לירבעם מלך ישראל מלך עזריה בן אמציה מלך יהודה | 1 |
೧ಇಸ್ರಾಯೇಲರ ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಅಮಚ್ಯನ ಮಗನಾದ ಅಜರ್ಯನು ಯೆಹೂದದ ಅರಸನಾದನು.
בן שש עשרה שנה היה במלכו וחמשים ושתים שנה מלך בירושלם ושם אמו יכליהו מירושלם | 2 |
೨ಅಜರ್ಯನು ಪಟ್ಟಕ್ಕೆ ಬಂದಾಗ ಅವನು ಹದಿನಾರು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷಗಳ ಕಾಲ ಆಳಿದನು. ಯೆರೂಸಲೇಮಿನವಳಾದ ಯೆಕೊಲ್ಯ ಎಂಬಾಕೆ ಇವನ ತಾಯಿ.
ויעש הישר בעיני יהוה ככל אשר עשה אמציהו אביו | 3 |
೩ಅಜರ್ಯನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.
רק הבמות לא סרו עוד העם מזבחים ומקטרים בבמות | 4 |
೪ಆದರೆ, ಇವನ ಕಾಲದಲ್ಲಿಯೂ ಪೂಜಾಸ್ಥಳಗಳು ತೆಗೆಯಲ್ಪಡಲಿಲ್ಲವಾದುದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಅರ್ಪಿಸುತ್ತಿದ್ದರು.
וינגע יהוה את המלך ויהי מצרע עד יום מתו וישב בבית החפשית ויותם בן המלך על הבית שפט את עם הארץ | 5 |
೫ಯೆಹೋವನು ಅವನನ್ನು ಕುಷ್ಠರೋಗದಿಂದ ಶಿಕ್ಷಿಸಿದನು. ಆದುದರಿಂದ ಇವನು ಜೀವದಿಂದಿರುವವರೆಗೂ ಪ್ರತ್ಯೇಕವಾದ ಮನೆಯಲ್ಲಿ ವಾಸಮಾಡಬೇಕಾಯಿತು. ರಾಜಗೃಹಾಧಿಪತ್ಯವನ್ನೂ, ಪ್ರಜಾಪಾಲನೆಯನ್ನೂ ಇವನ ಮಗನಾದ ಯೋತಾಮನು ನೋಡಿಕೊಳ್ಳುತ್ತಿದ್ದನು.
ויתר דברי עזריהו וכל אשר עשה הלא הם כתובים על ספר דברי הימים--למלכי יהודה | 6 |
೬ಅಜರ್ಯನ ಉಳಿದ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲದ ವೃತಾಂತ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
וישכב עזריה עם אבתיו ויקברו אתו עם אבתיו בעיר דוד וימלך יותם בנו תחתיו | 7 |
೭ಅಜರ್ಯನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದ ನಗರದೊಳಗೆ ರಾಜಕುಟುಂಬದ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೋತಾಮನು ಅರಸನಾದನು.
בשנת שלשים ושמנה שנה לעזריהו מלך יהודה מלך זכריהו בן ירבעם על ישראל בשמרון--ששה חדשים | 8 |
೮ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಯಾರೊಬ್ಬಾಮನ ಮಗನಾದ ಜೆಕರ್ಯ ಎಂಬುವವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಆರು ತಿಂಗಳು ಆಳಿದನು.
ויעש הרע בעיני יהוה כאשר עשו אבתיו לא סר מחטאות ירבעם בן נבט אשר החטיא את ישראל | 9 |
೯ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
ויקשר עליו שלם בן יבש ויכהו קבל עם וימיתהו וימלך תחתיו | 10 |
೧೦ಯಾಬೇಷನ ಮಗನಾದ ಶಲ್ಲೂಮನು ಅವನಿಗೆ ವಿರುದ್ಧವಾಗಿ ಒಳಸಂಚುಮಾಡಿ ಪ್ರಜೆಗಳ ಮುಂದೆಯೇ ಅವನನ್ನು ಕೊಂದು ಅವನಿಗೆ ಬದಲಾಗಿ ತಾನು ಅರಸನಾದನು.
ויתר דברי זכריה הנם כתובים על ספר דברי הימים--למלכי ישראל | 11 |
೧೧ಜೆಕರ್ಯನ ಉಳಿದ ಚರಿತ್ರೆಯು ಇಸ್ರಾಯೇಲರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
הוא דבר יהוה אשר דבר אל יהוא לאמר בני רביעים ישבו לך על כסא ישראל ויהי כן | 12 |
೧೨“ನಿನ್ನ ಸಂತಾನದವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು” ಎಂಬುದಾಗಿ ಯೆಹೋವನು ಯೇಹುವಿಗೆ ಮುಂತಿಳಿಸಿದ ಮಾತು ನೆರವೇರಿತು.
שלום בן יביש מלך בשנת שלשים ותשע שנה לעזיה מלך יהודה וימלך ירח ימים בשמרון | 13 |
೧೩ಯೆಹೂದದ ಅರಸನಾದ ಉಜ್ಜೀಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಯಾಬೇಷನ ಮಗನಾದ ಶಲ್ಲೂಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಒಂದು ತಿಂಗಳು ಆಳಿದನು.
ויעל מנחם בן גדי מתרצה ויבא שמרון ויך את שלום בן יביש בשמרון וימיתהו וימלך תחתיו | 14 |
೧೪ಗಾದಿಯ ಮಗನಾದ ಮೆನಹೇಮನೆಂಬುವನು ತಿರ್ಚದಿಂದ ಸಮಾರ್ಯಕ್ಕೆ ಬಂದು ಅಲ್ಲಿದ್ದ ಯಾಬೇಷನ ಮಗನಾದ ಶಲ್ಲೂಮನನ್ನು ಕೊಂದು, ಅವನಿಗೆ ಬದಲಾಗಿ ತಾನು ಅರಸನಾದನು.
ויתר דברי שלום וקשרו אשר קשר הנם כתובים על ספר דברי הימים--למלכי ישראל | 15 |
೧೫ಶಲ್ಲೂಮನ ಉಳಿದ ಚರಿತ್ರೆಯೂ ಮತ್ತು ಅವನ ಒಳಸಂಚಿನ ವಿವರವೂ ಇಸ್ರಾಯೇಲ್ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.
אז יכה מנחם את תפסח ואת כל אשר בה ואת גבוליה מתרצה--כי לא פתח ויך את כל ההרותיה בקע | 16 |
೧೬ಮೆನಹೇಮನು ತಿರ್ಚದಿಂದ ತಿಪ್ಸಹುವಿಗೆ ಹೋದಾಗ ಅಲ್ಲಿಯವರು ತಮ್ಮ ಊರುಬಾಗಿಲನ್ನು ಅವನಿಗೆ ತೆರೆಯಲಿಲ್ಲ, ಆದುದರಿಂದ ಅವನು ಆ ಊರನ್ನು ಅದಕ್ಕೆ ಸೇರಿದ ಪ್ರದೇಶವನ್ನೂ ಹಾಳುಮಾಡಿ ಅದರ ನಿವಾಸಿಗಳನ್ನು ಸಂಹರಿಸಿದನು. ಅದರಲ್ಲಿದ್ದ ಎಲ್ಲಾ ಗರ್ಭಿಣಿಗಳ ಹೊಟ್ಟೆಯನ್ನು ಸೀಳಿಹಾಕಿಸಿದನು.
בשנת שלשים ותשע שנה לעזריה מלך יהודה מלך מנחם בן גדי על ישראל עשר שנים--בשמרון | 17 |
೧೭ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಗಾದಿಯ ಮಗನಾದ ಮೆನಹೇಮನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಹತ್ತು ವರ್ಷ ಆಳಿದನು.
ויעש הרע בעיני יהוה לא סר מעל חטאות ירבעם בן נבט אשר החטיא את ישראל--כל ימיו | 18 |
೧೮ಇವನು ಜೀವದಿಂದ ಇರುವವರೆಗೂ ಇಸ್ರಾಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ದುರ್ಮಾರ್ಗವನ್ನು ಬಿಡದೆ ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
בא פול מלך אשור על הארץ ויתן מנחם לפול אלף ככר כסף--להיות ידיו אתו להחזיק הממלכה בידו | 19 |
೧೯ಅಶ್ಶೂರ ದೇಶದ ಅರಸನಾದ ಪೂಲನೆಂಬವನು ಇಸ್ರಾಯೇಲ್ ದೇಶಕ್ಕೆ ವಿರುದ್ಧವಾಗಿ ಬಂದಾಗ ಮೆನಹೇಮನು ಅವನ ಮುಖಾಂತರವಾಗಿ ತನ್ನ ಅರಸುತನವನ್ನು ಜನರು ದೃಢಪಡಿಸಿಕೊಳ್ಳುವುದಕ್ಕೋಸ್ಕರ ಅವನಿಗೆ ಸಾವಿರ ತಲಾಂತು ಬೆಳ್ಳಿಯನ್ನು ಕೊಟ್ಟನು.
ויצא מנחם את הכסף על ישראל על כל גבורי החיל לתת למלך אשור חמשים שקלים כסף לאיש אחד וישב מלך אשור ולא עמד שם בארץ | 20 |
೨೦ಮೆನಹೇಮನು ಅಶ್ಶೂರದ ಅರಸನಿಗೆ ಆ ಹಣವನ್ನು ಕೊಡುವುದಕ್ಕಾಗಿ ಇಸ್ರಾಯೇಲರ ಪ್ರತಿಯೊಬ್ಬ ಐಶ್ವರ್ಯವಂತನಿಂದ ಐವತ್ತು ರೂಪಾಯಿಗಳನ್ನು ವಸೂಲಿಮಾಡಿಕೊಂಡನು. ಆ ಹಣವು ಸಿಕ್ಕಿದ ನಂತರ ಅಶ್ಶೂರದ ಅರಸನು ಅಲ್ಲಿ ನಿಲ್ಲದೆ ಹಿಂತಿರುಗಿ ಹೋದನು.
ויתר דברי מנחם וכל אשר עשה הלוא הם כתובים על ספר דברי הימים--למלכי ישראל | 21 |
೨೧ಮೆನಹೇಮನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
וישכב מנחם עם אבתיו וימלך פקחיה בנו תחתיו | 22 |
೨೨ಮೆನಹೇಮನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಮಗನಾದ ಪೆಕಹ್ಯನು ಇಸ್ರಾಯೇಲರ ಅರಸನಾದನು.
בשנת חמשים שנה לעזריה מלך יהודה מלך פקחיה בן מנחם על ישראל בשמרון--שנתים | 23 |
೨೩ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತನೆಯ ವರ್ಷದಲ್ಲಿ ಮೆನಹೇಮನ ಮಗನಾದ ಪೆಕಹ್ಯ ಎಂಬುವವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಎರಡು ವರ್ಷ ಆಳಿದನು.
ויעש הרע בעיני יהוה לא סר מחטאות ירבעם בן נבט אשר החטיא את ישראל | 24 |
೨೪ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
ויקשר עליו פקח בן רמליהו שלישו ויכהו בשמרון בארמון בית מלך (המלך) את ארגב ואת האריה ועמו חמשים איש מבני גלעדים וימתהו וימלך תחתיו | 25 |
೨೫ಇವನ ಸರದಾರನೂ, ರೆಮಲ್ಯನ ಮಗನೂ ಆಗಿದ್ದ ಪೆಕಹನು, ಗಿಲ್ಯಾದಿನ ಐವತ್ತು ಮಂದಿ ಜನರನ್ನು ಕೂಡಿಸಿಕೊಂಡು ಇವನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಸಮಾರ್ಯದಲ್ಲಿರುವ ಅರಮನೆಯ ಗರ್ಭಗೃಹದಲ್ಲಿ ಇವನನ್ನೂ ಅರ್ಗೋಬ್, ಅರ್ಯೇ ಎಂಬವರನ್ನೂ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.
ויתר דברי פקחיה וכל אשר עשה הנם כתובים על ספר דברי הימים--למלכי ישראל | 26 |
೨೬ಪೆಕಹ್ಯನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.
בשנת חמשים ושתים שנה לעזריה מלך יהודה מלך פקח בן רמליהו על ישראל בשמרון--עשרים שנה | 27 |
೨೭ಯೆಹೂದದ ಅರಸನಾದ ಅಜರ್ಯನ ಆಳ್ವಿಕೆಯ ಐವತ್ತೆರಡನೆಯ ವರ್ಷದಲ್ಲಿ ರೆಮಲ್ಯನ ಮಗನಾದ ಪೆಕಹನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಇಪ್ಪತ್ತು ವರ್ಷ ಆಳಿದನು.
ויעש הרע בעיני יהוה לא סר מן חטאות ירבעם בן נבט אשר החטיא את ישראל | 28 |
೨೮ಇವನು ಇಸ್ರಾಯೇಲರನ್ನು ಪಾಪಕ್ಕೆ ಪ್ರಚೋದಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
בימי פקח מלך ישראל בא תגלת פלאסר מלך אשור ויקח את עיון ואת אבל בית מעכה ואת ינוח ואת קדש ואת חצור ואת הגלעד ואת הגלילה כל ארץ נפתלי ויגלם אשורה | 29 |
೨೯ಇಸ್ರಾಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬುವವನು ಬಂದು ಇಯ್ಯೋನ್, ಆಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನು ಗಿಲ್ಯಾದ್ ಮತ್ತು ಗಲಿಲಾಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು ಅವುಗಳ ನಿವಾಸಿಗಳನ್ನು ಅಶ್ಶೂರ್ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.
ויקשר קשר הושע בן אלה על פקח בן רמליהו ויכהו וימיתהו וימלך תחתיו--בשנת עשרים ליותם בן עזיה | 30 |
೩೦ಆಗ ಏಲನ ಮಗನಾದ ಹೋಶೇಯನು, ರೆಮಲ್ಯನ ಮಗನಾದ ಪೆಕಹನಿಗೆ ವಿರುದ್ಧವಾಗಿ ಒಳಸಂಚು ಮಾಡಿ, ಇವನನ್ನು ಉಜ್ಜೀಯನ ಮಗನಾದ ಯೋತಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಕೊಂದು ಇವನಿಗೆ ಬದಲಾಗಿ ತಾನು ಅರಸನಾದನು.
ויתר דברי פקח וכל אשר עשה הנם כתובים על ספר דברי הימים--למלכי ישראל | 31 |
೩೧ಪೆಕಹನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.
בשנת שתים לפקח בן רמליהו מלך ישראל מלך יותם בן עזיהו מלך יהודה | 32 |
೩೨ಇಸ್ರಾಯೇಲರ ಅರಸನೂ, ರೆಮಲ್ಯನ ಮಗನೂ ಆದ ಪೆಕಹನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯೆಹೂದ್ಯರ ಅರಸನಾದ ಉಜ್ಜೀಯನ ಮಗನಾದ ಯೋತಾಮನು ಆಳತೊಡಗಿದನು.
בן עשרים וחמש שנה היה במלכו ושש עשרה שנה מלך בירושלם ושם אמו ירושא בת צדוק | 33 |
೩೩ಇವನು ಪಟ್ಟಕ್ಕೆ ಬಂದಾಗ ಇಪ್ಪತ್ತೈದು ವರ್ಷದವನಾಗಿದ್ದನು. ಇವನು ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಚಾದೋಕನ ಮಗಳಾದ ಯೆರೂಷಾ ಇವನ ತಾಯಿ.
ויעש הישר בעיני יהוה ככל אשר עשה עזיהו אביו עשה | 34 |
೩೪ಇವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನು.
רק הבמות לא סרו--עוד העם מזבחים ומקטרים בבמות הוא בנה את שער בית יהוה--העליון | 35 |
೩೫ಆದರೆ ಇವನ ಕಾಲದಲ್ಲಿ ಪೂಜಾಸ್ಥಳಗಳು ಇನ್ನೂ ತೆಗೆಯಲ್ಪಟ್ಟಿರಲಿಲ್ಲ. ಆದುದರಿಂದ ಜನರು ಅವುಗಳಲ್ಲಿ ಯಜ್ಞಧೂಪಗಳನ್ನು ಸಮರ್ಪಿಸುತ್ತಿದ್ದರು. ಯೆಹೋವನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿದವನು ಇವನೇ.
ויתר דברי יותם אשר עשה הלא הם כתובים על ספר דברי הימים--למלכי יהודה | 36 |
೩೬ಯೋತಾಮನ ಉಳಿದ ಚರಿತ್ರೆಯೂ, ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.
בימים ההם--החל יהוה להשליח ביהודה רצין מלך ארם ואת פקח בן רמליהו | 37 |
೩೭ಯೆಹೋವನು ಆ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನನನ್ನೂ, ರೆಮಲ್ಯನ ಮಗನಾದ ಪೆಕಹನನ್ನೂ ಯೆಹೂದ್ಯರಿಗೆ ವಿರೋಧವಾಗಿ ಕಳುಹಿಸತೊಡಗಿದನು.
וישכב יותם עם אבתיו ויקבר עם אבתיו בעיר דוד אביו וימלך אחז בנו תחתיו | 38 |
೩೮ಯೋತಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಅವನ ಪೂರ್ವಿಕರ ಕುಟುಂಬ ಸ್ಮಶಾನದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಆಹಾಜನು ಅರಸನಾದನು.