< שמואל ב 22 >
וידבר דוד ליהוה את דברי השירה הזאת ביום הציל יהוה אתו מכף כל איביו ומכף שאול | 1 |
೧ಯೆಹೋವನು ದಾವೀದನನ್ನು ಎಲ್ಲಾ ಶತ್ರುಗಳ ಕೈಗೂ ಸೌಲನ ಕೈಗೂ ಸಿಕ್ಕದಂತೆ ತಪ್ಪಿಸಿದಾಗ ಅವನು ಯೆಹೋವನ ಘನಕ್ಕಾಗಿ ಈ ಜಯ ಗೀತೆಯನ್ನು ರಚಿಸಿ ಹೀಗೆ ಹಾಡಿದನು:
ויאמר יהוה סלעי ומצדתי ומפלטי לי | 2 |
೨ಯೆಹೋವನು ನನ್ನ ಬಂಡೆಯೂ, ನನ್ನ ಕೋಟೆಯೂ ನನ್ನ ವಿಮೋಚಕನೂ ಆಗಿದ್ದಾನೆ.
אלהי צורי אחסה בו מגני וקרן ישעי משגבי ומנוסי משעי מחמס תשעני | 3 |
೩ಆತನು ನನ್ನ ಆಶ್ರಯಗಿರಿಯಾಗಿರುವ ದೇವರೂ, ನನ್ನ ಗುರಾಣಿಯೂ ನನ್ನ ರಕ್ಷಣೆಯ ಕೊಂಬೂ, ನನ್ನ ದುರ್ಗವೂ, ನನ್ನ ಶರಣನೂ, ಹಿಂಸೆಯಿಂದ ನನ್ನನ್ನು ರಕ್ಷಿಸುವವನೂ ಆಗಿದ್ದಾನೆ.
מהלל אקרא יהוה ומאיבי אושע | 4 |
೪ಯೆಹೋವನು ಸ್ತೋತ್ರಕ್ಕೆ ಅರ್ಹನು. ನಾನು ಆತನಿಗೆ ಮೊರೆಯಿಡಲು ಆತನು ನನ್ನನ್ನು ಶತ್ರುಗಳಿಂದ ರಕ್ಷಿಸುತ್ತಾನೆ.
כי אפפני משברי מות נחלי בליעל יבעתני | 5 |
೫ಮರಣ ಪ್ರವಾಹದ ಅಲ್ಲಕಲ್ಲೋಲಗಳು ನನ್ನನ್ನು ಸುತ್ತಿಕೊಂಡವು. ನಾಶಪ್ರವಾಹವು ನನ್ನನ್ನು ನಡುಗಿಸಿತು.
חבלי שאול סבני קדמני מקשי מות (Sheol ) | 6 |
೬ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು, ಮರಣಕರವಾದ ಉರುಲುಗಳು ನನ್ನನ್ನು ಸುತ್ತಿಕೊಂಡವು. (Sheol )
בצר לי אקרא יהוה ואל אלהי אקרא וישמע מהיכלו קולי ושועתי באזניו | 7 |
೭ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು. ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಸ್ವರವನ್ನು ಕೇಳಿದನು. ನನ್ನ ಪ್ರಾರ್ಥನೆ ಆತನ ಸನ್ನಿಧಿಗೆ ಕೇಳಿಸಿತು.
ותגעש (ויתגעש) ותרעש הארץ מוסדות השמים ירגזו ויתגעשו כי חרה לו | 8 |
೮ಆಗ ಆತನ ಕೋಪದಿಂದ ಭೂಮಿಯು ಕಂಪಿಸಿತು. ಆಕಾಶದ ಆಧಾರಗಳು ನಡುಗಿ ಕದಲಿದವು.
עלה עשן באפו ואש מפיו תאכל גחלים בערו ממנו | 9 |
೯ಆತನ ಮೂಗಿನಿಂದ ಹೊಗೆಯು ಬಂದಿತು. ಆತನ ಬಾಯಿಂದ ಅಗ್ನಿಜ್ವಾಲೆಯು ಹೊರಟು ಸಿಕ್ಕಿದ್ದೆಲ್ಲವನ್ನು ದಹಿಸಿ ಕೆಂಡವನ್ನಾಗಿ ಮಾಡಿತು.
ויט שמים וירד וערפל תחת רגליו | 10 |
೧೦ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು. ಆತನ ಪಾದಗಳ ಕೆಳಗೆ ಕಾರ್ಗತ್ತಲಿತ್ತು.
וירכב על כרוב ויעף וירא על כנפי רוח | 11 |
೧೧ಕೆರೂಬಿವಾಹನನಾಗಿ ಹಾರಿದನು. ವಾಯುವೇ ಆತನ ರೆಕ್ಕೆಗಳೋ ಎಂಬಂತೆ ಇಳಿದು ಪ್ರತ್ಯಕ್ಷನಾದನು.
וישת חשך סביבתיו סכות חשרת מים עבי שחקים | 12 |
೧೨ಕತ್ತಲನ್ನೂ, ಜಲಮಯವಾಗಿರುವ ನೀಲಮೇಘಗಳನ್ನೂ, ತನ್ನ ಸುತ್ತಲೂ ಗುಡಾರದಂತೆ ಕವಿಸಿಕೊಂಡನು.
מנגה נגדו בערו גחלי אש | 13 |
೧೩ಆತನ ಸಾನ್ನಿಧ್ಯ ಪ್ರಕಾಶದಿಂದ ಉರಿಗೆಂಡಗಳು ಹೊರಟವು.
ירעם מן שמים יהוה ועליון יתן קולו | 14 |
೧೪ಯೆಹೋವನು ಆಕಾಶದಿಂದ ಗುಡುಗಿದನು. ಪರಾತ್ಪರನಾದ ದೇವರು ಧ್ವನಿಗೊಟ್ಟನು.
וישלח חצים ויפיצם ברק ויהמם (ויהם) | 15 |
೧೫ಆತನು ಬಾಣಗಳನ್ನೆಸೆದು ಶತ್ರುಗಳನ್ನು ಚದುರಿಸಿಬಿಟ್ಟನು. ಸಿಡಿಲಿನಿಂದ ಅವುಗಳನ್ನು ಕಳವಳಗೊಳಿಸಿದನು.
ויראו אפקי ים יגלו מסדות תבל בגערת יהוה מנשמת רוח אפו | 16 |
೧೬ಆಗ ಯೆಹೋವನ ಗದರಿಕೆಯಿಂದಲೂ ಆತನ ಶ್ವಾಸಭರದಿಂದಲೂ ಸಮುದ್ರದ ತಳವು ಕಾಣಿಸಿತು. ಭೂಮಂಡಲದ ಅಸ್ಥಿವಾರವು ತೋರಿಬಂದವು.
ישלח ממרום יקחני ימשני ממים רבים | 17 |
೧೭ಆತನು ಮೇಲಣಲೋಕದಿಂದ ಕೈಚಾಚಿ ನನ್ನನ್ನು ಹಿಡಿದು! ಮಹಾಜಲರಾಶಿಯೊಳಗಿಂದ ನನ್ನನ್ನು ಎಳೆದನು.
יצילני מאיבי עז משנאי כי אמצו ממני | 18 |
೧೮ನನಗಿಂತ ಬಲಿಷ್ಠರೂ, ಪುಷ್ಠರೂ ಆಗಿ ದ್ವೇಷಿಸುತ್ತಿದ್ದ ಶತ್ರುಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದನು.
יקדמני ביום אידי ויהי יהוה משען לי | 19 |
೧೯ಅವರು ನನ್ನ ಆಪತ್ಕಾಲದಲ್ಲಿ ನನ್ನ ಮೇಲೆ ಬಿದ್ದರು. ಆಗ ಯೆಹೋವನು ನನಗೆ ಉದ್ಧಾರಕನಾದನು.
ויצא למרחב אתי יחלצני כי חפץ בי | 20 |
೨೦ಆತನು ನನ್ನನ್ನು ಅಪಾಯದಿಂದ ಬಿಡಿಸಿದನು. ನನ್ನನ್ನು ಮೆಚ್ಚಿ ರಕ್ಷಿಸಿದನು.
יגמלני יהוה כצדקתי כבר ידי ישיב לי | 21 |
೨೧ಯೆಹೋವನು ನನ್ನ ಸನ್ನಡತೆಗೆ ತಕ್ಕ ಪ್ರತಿಫಲ ನೀಡಿದನು. ನನ್ನ ಕೈಗಳ ಶುದ್ಧತ್ವಕ್ಕೆ ತಕ್ಕಂತೆ ಪ್ರತಿಫಲಕೊಟ್ಟನು.
כי שמרתי דרכי יהוה ולא רשעתי מאלהי | 22 |
೨೨ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ ನನ್ನ ದೇವರನ್ನು ಬಿಟ್ಟು ದ್ರೋಹ ಮಾಡಲಿಲ್ಲ.
כי כל משפטו לנגדי וחקתיו לא אסור ממנה | 23 |
೨೩ನಾನು ಆತನ ಆಜ್ಞೆಗಳನ್ನು ಯಾವಾಗಲೂ ನನ್ನೆದುರಿನಲ್ಲಿ ಇಟ್ಟುಕೊಂಡೆನು. ಆತನ ವಿಧಿಗಳಿಂದ ತಪ್ಪಿ ಹೋಗಲಿಲ್ಲ.
ואהיה תמים לו ואשתמרה מעוני | 24 |
೨೪ನಾನು ಆತನ ದೃಷ್ಟಿಯಲ್ಲಿ ನಿರ್ದೋಷಿಯು. ಪಾಪದಲ್ಲಿ ಬೀಳದಂತೆ ಜಾಗರೂಕತೆಯಿಂದ ನಡೆದುಕೊಂಡೆನು.
וישב יהוה לי כצדקתי כברי לנגד עיניו | 25 |
೨೫ಆದ್ದರಿಂದ ನನ್ನ ನೀತಿಗೆ ತಕ್ಕಂತೆಯೂ, ಆತನ ದೃಷ್ಟಿಯಲ್ಲಿ ನನ್ನ ನಿರಪರಾಧಕ್ಕೆ ತಕ್ಕಂತೆಯೂ ಯೆಹೋವನು ನನಗೆ ತಕ್ಕ ಪ್ರತಿಫಲವನ್ನು ಕೊಟ್ಟನು.
עם חסיד תתחסד עם גבור תמים תתמם | 26 |
೨೬ನೀನು ಕೃಪೆಯುಳ್ಳವನಿಗೆ ಕೃಪಾವಂತನೂ, ದೋಷವಿಲ್ಲದವರಿಗೆ ನಿರ್ದೋಷಿಯೂ.
עם נבר תתבר ועם עקש תתפל | 27 |
೨೭ಶುದ್ಧನಿಗೆ ಪರಿಶುದ್ಧನೂ, ವಕ್ರಬುದ್ಧಿಯವನಿಗೆ ವಕ್ರನೂ ಆಗಿರುವಿ.
ואת עם עני תושיע ועיניך על רמים תשפיל | 28 |
೨೮ದೀನರನ್ನು ಉದ್ಧರಿಸುತ್ತಿ. ಹಮ್ಮಿನವರನ್ನು ಕಂಡುಹಿಡಿದು ತಗ್ಗಿಸಿಬಿಡುತ್ತಿ.
כי אתה נירי יהוה ויהוה יגיה חשכי | 29 |
೨೯ಯೆಹೋವನೇ, ನನ್ನ ದೀಪವು ನೀನೇ. ಯೆಹೋವನು ನನಗೆ ಬೆಳಕನ್ನು ಕೊಟ್ಟು ನನ್ನ ಕತ್ತಲನ್ನು ಪರಿಹರಿಸುವನು.
כי בכה ארוץ גדוד באלהי אדלג שור | 30 |
೩೦ನಿನ್ನ ಬಲದಿಂದ ನಾನು ದಂಡಿನ ಮೇಲೆ ಬೀಳುವೆನು. ನನ್ನ ದೇವರ ಸಹಾಯದಿಂದ ಪ್ರಾಕಾರಗಳನ್ನು ಹಾರುವೆನು.
האל תמים דרכו אמרת יהוה צרופה-- מגן הוא לכל החסים בו | 31 |
೩೧ದೇವರ ಮಾರ್ಗವು ಯಾವ ದೋಷವೂ ಇಲ್ಲದ್ದು ಯೆಹೋವನ ವಚನವು ಶುದ್ಧವಾದದ್ದು. ಆತನು ಆಶ್ರಿತರೆಲ್ಲರಿಗೆ ಗುರಾಣಿಯಾಗಿದ್ದಾನೆ.
כי מי אל מבלעדי יהוה ומי צור מבלעדי אלהינו | 32 |
೩೨ಯೆಹೋವನಲ್ಲದೆ ದೇವರು ಯಾರು? ನಮ್ಮ ದೇವರ ಹೊರತು ಶರಣನು ಎಲ್ಲಿ?
האל מעוזי חיל ויתר תמים דרכו (דרכי) | 33 |
೩೩ದೇವರು ನನ್ನ ಬಲವಾದ ಕೋಟೆಯಾಗಿದ್ದಾನೆ. ಆತನು ನನ್ನ ಮಾರ್ಗವನ್ನು ಸರಾಗಮಾಡುತ್ತಾನೆ.
משוה רגליו (רגלי) כאילות ועל במתי יעמדני | 34 |
೩೪ನನ್ನ ಕಾಲನ್ನು ಜಿಂಕೆಯ ಕಾಲಿನಂತೆ ಚುರುಕು ಮಾಡುತ್ತಾನೆ. ನನ್ನನ್ನು ಉನ್ನತಪ್ರದೇಶಗಳಲ್ಲಿ ನಿಲ್ಲಿಸುತ್ತಾನೆ
מלמד ידי למלחמה ונחת קשת נחושה זרעתי | 35 |
೩೫ಆತನು ನನಗೆ ಯುದ್ಧ ವಿದ್ಯೆಯನ್ನು ಕಲಿಸಿದ್ದರಿಂದ ನಾನು ತಾಮ್ರದ ಬಿಲ್ಲನ್ನಾದರೂ ಉಪಯೋಗಿಸಬಲ್ಲೆನು.
ותתן לי מגן ישעך וענתך תרבני | 36 |
೩೬ನೀನು ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಕೃಪಾಕಟಾಕ್ಷವು ನನ್ನನ್ನು ಉನ್ನತಕ್ಕೆ ಏರಿಸಿದೆ.
תרחיב צעדי תחתני ולא מעדו קרסלי | 37 |
೩೭ನೀನು ನನ್ನ ಕಾಲುಗಳಿಗೆ ವಿಶಾಲ ಸ್ಥಳವನ್ನು ಕೊಟ್ಟಿದ್ದರಿಂದ ನನ್ನ ಕಾಲುಗಳು ಕದಲುವುದಿಲ್ಲ.
ארדפה איבי ואשמידם ולא אשוב עד כלותם | 38 |
೩೮ನನ್ನ ಶತ್ರುಗಳನ್ನು ಹಿಂದಟ್ಟಿ ಸಂಹರಿಸುವೆನು. ಅವರನ್ನು ಇಲ್ಲದಂತೆ ಮಾಡುವವರೆಗೂ ಹಿಂದಿರುಗುವುದಿಲ್ಲ.
ואכלם ואמחצם ולא יקומון ויפלו תחת רגלי | 39 |
೩೯ಅವರನ್ನು ನಿರ್ನಾಮಗೊಳಿಸುವೆನು, ಹೊಡೆದು ಏಳಲಾರದಂತೆ ಮಾಡುವೆನು. ಅವರು ನನ್ನ ಪಾದದ ಕೆಳಗೆ ಬೀಳುವರು.
ותזרני חיל למלחמה תכריע קמי תחתני | 40 |
೪೦ನೀನು ನನಗೆ ಯುದ್ಧಕ್ಕಾಗಿ ಶೌರ್ಯವೆಂಬ ನಡುಕಟ್ಟನ್ನು ಬಿಗಿದಿದ್ದಿ. ಎದುರಾಳಿಗಳನ್ನು ಕುಗ್ಗಿಸಿ ನನಗೆ ಅಧೀನಮಾಡಿದ್ದಿ.
ואיבי תתה לי ערף משנאי ואצמיתם | 41 |
೪೧ನನ್ನ ಶತ್ರುಗಳನ್ನು ಬೆಂಗೊಟ್ಟು ಓಡಮಾಡಿದ್ದೀ. ನನ್ನ ಶತ್ರುಗಳನ್ನು ನಿರ್ಮೂಲ ಮಾಡುವೆನು.
ישעו ואין משיע אל יהוה ולא ענם | 42 |
೪೨ಅವರು ಸಹಾಯಕ್ಕಾಗಿ ಕೂಗಿಕೊಂಡರೂ ರಕ್ಷಿಸುವವನಿಲ್ಲ. ಯೆಹೋವನಿಗೆ ಮೊರೆಯಿಟ್ಟರೂ ಆತನು ಉತ್ತರವನ್ನು ಕೊಡಲೇ ಇಲ್ಲ.
ואשחקם כעפר ארץ כטיט חוצות אדקם ארקעם | 43 |
೪೩ಭೂಮಿಯ ಧೂಳನ್ನೋ ಎಂಬಂತೆ ಅವರನ್ನು ಪುಡಿಪುಡಿ ಮಾಡಿದೆನು. ಬೀದಿಯಲ್ಲಿರುವ ಕೆಸರನ್ನೋ ಎಂಬಂತೆ ಅವರನ್ನು ತುಳಿದು ಎಸೆದುಬಿಟ್ಟೆನು.
ותפלטני מריבי עמי תשמרני לראש גוים עם לא ידעתי יעבדני | 44 |
೪೪ನನ್ನ ಜನರ ಕಲಹಗಳಿಗೆ ನನ್ನನ್ನು ತಪ್ಪಿಸಿದ್ದಿ. ಜನಾಂಗಗಳಿಗೆ ದೊರೆಯಾಗುವಂತೆ ನನ್ನನ್ನು ಉಳಿಸಿದ್ದಿ. ನಾನರಿಯದ ಜನಾಂಗದವರು ಸಹ ನನಗೆ ಅಧೀನರಾಗುವರು.
בני נכר יתכחשו לי לשמוע אזן ישמעו לי | 45 |
೪೫ದೇಶಾಂತರದವರು ನನ್ನ ಮುಂದೆ ಮುದುರಿಕೊಳ್ಳುವರು. ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು.
בני נכר יבלו ויחגרו ממסגרותם | 46 |
೪೬ಅವರು ಧೈರ್ಯಗುಂದಿದವರಾಗಿ ತಮ್ಮ ತಮ್ಮ ಕೋಟೆಗಳಿಂದ ನಡುಗುತ್ತಾ ಬರುವರು.
חי יהוה וברוך צורי וירם אלהי צור ישעי | 47 |
೪೭ಯೆಹೋವನು ಚೈತನ್ಯಸ್ವರೂಪನು. ನನ್ನ ಶರಣನಿಗೆ ಸ್ತೋತ್ರ. ನನ್ನ ಆಶ್ರಯಗಿರಿಯಾಗಿರುವ ದೇವರಿಗೆ ಕೊಂಡಾಟ.
האל הנתן נקמת לי ומריד עמים תחתני | 48 |
೪೮ಆತನು ನನ್ನ ಶತ್ರುಗಳಿಗೆ ಪ್ರತಿದಂಡನೆಮಾಡುವ ದೇವರು. ಜನಾಂಗಗಳನ್ನು ನನಗೆ ಅಧೀನಪಡಿಸುತ್ತಾನೆ.
ומוציאי מאיבי ומקמי תרוממני מאיש חמסים תצילני | 49 |
೪೯ಶತ್ರುಗಳಿಂದ ನನ್ನನ್ನು ಬಿಡಿಸುವಾತನೇ, ನೀನು ನನ್ನನ್ನು ನನ್ನ ಎದುರಾಳಿಗಳಿಂದ ತಪ್ಪಿಸಿ ಉನ್ನತಪಡಿಸುತ್ತಿ. ಬಲಾತ್ಕಾರಿಗಳಿಂದ ನನ್ನನ್ನು ರಕ್ಷಿಸುತ್ತಿ.
על כן אודך יהוה בגוים ולשמך אזמר | 50 |
೫೦ಈ ಕಾರಣದಿಂದ ಯೆಹೋವನೇ, ಅನ್ಯಜನಾಂಗಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. ನಿನ್ನ ನಾಮವನ್ನು ಸಂಕೀರ್ತಿಸುವೆನು.
מגדיל (מגדול) ישועות מלכו ועשה חסד למשיחו לדוד ולזרעו עד עולם | 51 |
೫೧ಆತನು ತಾನು ನೇಮಿಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ. ತಾನು ಅಭಿಷೇಕಿಸಿದ ದಾವೀದನಿಗೂ, ಅವನ ಸಂತತಿಯವರೆಗೆ ಸದಾಕಾಲವೂ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ.