< עמוס 3 >
שמעו את הדבר הזה אשר דבר יהוה עליכם--בני ישראל על כל המשפחה אשר העליתי מארץ מצרים לאמר | 1 |
೧ಇಸ್ರಾಯೇಲರೇ ಯೆಹೋವನು ನಿಮಗೆ ವಿರುದ್ಧವಾಗಿ, ತಾನು ಐಗುಪ್ತ ದೇಶದೊಳಗಿಂದ ಪಾರು ಮಾಡಿದ ಪೂರ್ಣಕುಲಕ್ಕೆ ವಿರುದ್ಧವಾಗಿ ನುಡಿದಿರುವ ಈ ಮಾತನ್ನು ಕೇಳಿರಿ,
רק אתכם ידעתי מכל משפחות האדמה על כן אפקד עליכם את כל עונתיכם | 2 |
೨ಭೂಮಿಯ ಸಕಲ ಕುಲಗಳೊಳಗೆ ನಿಮ್ಮನ್ನು ಮಾತ್ರ ನನ್ನವರೆಂದು ಆರಿಸಿಕೊಂಡಿದ್ದೇನೆ. ಆದಕಾರಣ ನಿಮ್ಮ ಎಲ್ಲಾ ಪಾಪಗಳ ಫಲವನ್ನು ನೀವು ಅನುಭವಿಸುವಂತೆ ಮಾಡುವೆನು.
הילכו שנים יחדו בלתי אם נועדו | 3 |
೩ಗೊತ್ತುಮಾಡಿಕೊಳ್ಳದೆ ಯಾರಾದರಿಬ್ಬರು ಜೊತೆಯಾಗಿ ನಡೆಯುವುದುಂಟೆ?
הישאג אריה ביער וטרף אין לו היתן כפיר קולו ממענתו בלתי אם לכד | 4 |
೪ಬೇಟೆಯ ಬಲಿ ಕಾಣದೇ ಸಿಂಹವು ಅರಣ್ಯದಲ್ಲಿ ಗರ್ಜಿಸುವುದೋ? ಏನನ್ನೂ ಬೇಟೆಯಾಡದೆ ಪ್ರಾಯದ ಸಿಂಹವು ಗವಿಯಲ್ಲಿ ಕುಳಿತು ಗುರುಗುಟ್ಟುವುದೋ?
התפל צפור על פח הארץ ומוקש אין לה היעלה פח מן האדמה ולכוד לא ילכוד | 5 |
೫ಕಾಳಿಲ್ಲದೆ ಪಕ್ಷಿಯು ನೆಲದಲ್ಲಿನ ಬಲೆಯೊಳಗೆ ಬೀಳುವುದೋ? ಏನೂ ಬಲೆಗೆ ಸಿಕ್ಕಿಕೊಳ್ಳದೇ ಬೋನು ಉರುಲಾಗುವುದೋ?
אם יתקע שופר בעיר ועם לא יחרדו אם תהיה רעה בעיר ויהוה לא עשה | 6 |
೬ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವುದಿಲ್ಲವೋ? ಯೆಹೋವನಿಂದಲ್ಲದೆ ಪಟ್ಟಣಕ್ಕೆ ವಿಪತ್ತು ಸಂಭವಿಸುವುದೋ?
כי לא יעשה אדני יהוה דבר כי אם גלה סודו אל עבדיו הנביאים | 7 |
೭ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಯೆಹೋವನಾದ ದೇವರು ಏನನ್ನೂ ಮಾಡುವುದಿಲ್ಲ.
אריה שאג מי לא יירא אדני יהוה דבר מי לא ינבא | 8 |
೮ಸಿಂಹವು ಗರ್ಜಿಸಿದರೆ, ಭಯಪಡದೆ ಇರುವವರು ಯಾರು? ಕರ್ತನಾದ ಯೆಹೋವನು ನುಡಿದಿದ್ದಾನೆ, ಆ ನುಡಿಯನ್ನು ಕೇಳಿ ಪ್ರವಾದಿಸದವರು ಯಾರು?
השמיעו על ארמנות באשדוד ועל ארמנות בארץ מצרים ואמרו האספו על הרי שמרון וראו מהומת רבות בתוכה ועשוקים בקרבה | 9 |
೯ಅಷ್ದೋದಿನ ಅರಮನೆಗಳಲ್ಲಿಯೂ, ಐಗುಪ್ತ ದೇಶದ ಅರಮನೆಗಳಲ್ಲಿಯೂ ಹೀಗೆ ಪ್ರಕಟಿಸಿರಿ, “ಸಮಾರ್ಯದ ಬೆಟ್ಟಗಳಲ್ಲಿ ಕೂಡಿಬನ್ನಿರಿ. ಪಟ್ಟಣದೊಳಗೆ ಇರುವ ಗದ್ದಲವನ್ನು, ಅದರೊಳಗಿರುವ ಹಿಂಸೆಯನ್ನೂ ನೋಡಿರಿ.
ולא ידעו עשות נכחה נאם יהוה האוצרים חמס ושד בארמנותיהם | 10 |
೧೦ನ್ಯಾಯನೀತಿಗಳನ್ನು ಮಾಡುವುದಕ್ಕೆ ಅವರಿಗೆ ತಿಳಿದಿಲ್ಲ” ಇದು ಯೆಹೋವನ ನುಡಿ. ತಮ್ಮ ಉಪ್ಪರಿಗೆಗಳಲ್ಲಿ ಬಾಧೆಯನ್ನೂ, ನಾಶನವನ್ನೂ ಕೂಡಿಸಿಟ್ಟುಕೊಂಡಿದ್ದಾರೆ.
לכן כה אמר אדני יהוה צר וסביב הארץ והוריד ממך עזך ונבזו ארמנותיך | 11 |
೧೧ಹೀಗಿರಲು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ: “ಶತ್ರುವು ನಿನ್ನ ದೇಶವನ್ನು ಮುತ್ತಿಕೊಳ್ಳುವನು. ನಿನ್ನ ಶಕ್ತಿಯನ್ನು ಕುಂದಿಸಿಬಿಡುವನು ಮತ್ತು ನಿನ್ನ ಅರಮನೆಗಳು ಸೂರೆಯಾಗುವವು.”
כה אמר יהוה כאשר יציל הרעה מפי הארי שתי כרעים או בדל אזן--כן ינצלו בני ישראל הישבים בשמרון בפאת מטה ובדמשק ערש | 12 |
೧೨ಯೆಹೋವನು ಇಂತೆನ್ನುತ್ತಾನೆ: “ಸಿಂಹದ ಬಾಯೊಳಗಿಂದ ಕುರುಬನು ತನ್ನ ಕುರಿಗಳ ಎರಡು ಕಾಲನ್ನೂ, ಅಥವಾ ಕಿವಿಯ ಒಂದು ತುಂಡನ್ನೂ, ಹೇಗೆ ರಕ್ಷಿಸುವನೋ, ಹಾಗೆಯೇ ಸಮಾರ್ಯದೊಳಗೆ ಹಾಸಿಗೆಯ ಮೂಲೆಯಲ್ಲಿಯೂ, ಮಂಚದ ಪಟ್ಟೇದಿಂಬುಗಳಲ್ಲಿಯೂ, ಒರಗಿಕೊಳ್ಳುವ ಇಸ್ರಾಯೇಲರ ಸ್ವಲ್ಪ ಭಾಗ ಮಾತ್ರ ರಕ್ಷಿಸಲ್ಪಡುವುದು.”
שמעו והעידו בבית יעקב--נאם אדני יהוה אלהי הצבאות | 13 |
೧೩ಸೇನಾಧೀಶ್ವರ ದೇವನಾದ ಯೆಹೋವನು ಇಂತೆನ್ನುತ್ತಾನೆ; ಕೇಳಿರಿ, ಯಾಕೋಬ ವಂಶದವರಿಗೆ ವಿರುದ್ಧವಾಗಿ ಸಾಕ್ಷಿಕೊಡಿರಿ.
כי ביום פקדי פשעי ישראל--עליו ופקדתי על מזבחות בית אל ונגדעו קרנות המזבח ונפלו לארץ | 14 |
೧೪“ನಾನು ಇಸ್ರಾಯೇಲಿನ ದ್ರೋಹಗಳಿಗಾಗಿ ಅವರನ್ನು ಶಿಕ್ಷಿಸುವ ದಿನಗಳಲ್ಲಿ, ಬೇತೇಲಿನ ಯಜ್ಞವೇದಿಗಳನ್ನು ಧ್ವಂಸಮಾಡುವೆನು. ಯಜ್ಞವೇದಿಯ ಕೊಂಬುಗಳು ಕಡಿಯಲ್ಪಟ್ಟು ನೆಲದ ಮೇಲೆ ಉರುಳುವವು.
והכיתי בית החרף על בית הקיץ ואבדו בתי השן וספו בתים רבים--נאם יהוה | 15 |
೧೫ನಾನು ಚಳಿಗಾಲದ ಅರಮನೆಯನ್ನೂ, ಬೇಸಿಗೆಯ ಅರಮನೆಯನ್ನೂ ಹೊಡೆದುಹಾಕುವೆನು. ದಂತಮಂದಿರಗಳು ಹಾಳಾಗುವವು ಮತ್ತು ದೊಡ್ಡಮನೆಗಳು ಕೊನೆಗಾಣುವವು” ಇದು ಯೆಹೋವನ ನುಡಿ.