< דברים 10 >
בעת ההוא אמר יהוה אלי פסל לך שני לוחת אבנים כראשנים ועלה אלי ההרה ועשית לך ארון עץ | 1 |
೧ಆ ಕಾಲದಲ್ಲಿ ಯೆಹೋವನು ನನಗೆ, “ನೀನು ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿಕೊಂಡು, ಬೆಟ್ಟವನ್ನು ಹತ್ತಿ ನನ್ನ ಬಳಿಗೆ ಬಾ; ಮತ್ತು ಒಂದು ಮರದ ಮಂಜೂಷವನ್ನು ಮಾಡಿಸಿಕೊಳ್ಳಬೇಕು.
ואכתב על הלחת את הדברים אשר היו על הלחת הראשנים אשר שברת ושמתם בארון | 2 |
೨ನೀನು ಒಡೆದುಬಿಟ್ಟ ಆ ಮೊದಲಿನ ಹಲಿಗೆಗಳಲ್ಲಿ ಬರೆದಿದ್ದ ಮಾತುಗಳನ್ನು ನಾನು ಈ ಹಲಿಗೆಗಳ ಮೇಲೆ ಬರೆಯುವೆನು. ತರುವಾಯ ನೀನು ಅವುಗಳನ್ನು ಆ ಮಂಜೂಷದಲ್ಲಿ ಇಡಬೇಕು” ಎಂದು ಆಜ್ಞಾಪಿಸಿದನು.
ואעש ארון עצי שטים ואפסל שני לחת אבנים כראשנים ואעל ההרה ושני הלחת בידי | 3 |
೩ಆದಕಾರಣ ನಾನು ಜಾಲೀಮರದಿಂದ ಮಂಜೂಷವನ್ನು ಮಾಡಿಸಿ ಮೊದಲಿನ ಕಲ್ಲಿನ ಹಲಿಗೆಗಳಂತೆ ಬೇರೆ ಎರಡು ಹಲಿಗೆಗಳನ್ನು ಸಿದ್ಧಪಡಿಸಿ, ಆ ಎರಡು ಹಲಿಗೆಗಳನ್ನು ಕೈಯಲ್ಲಿ ಹಿಡಿದುಕೊಂಡು ಬೆಟ್ಟವನ್ನು ಹತ್ತಿದೆನು.
ויכתב על הלחת כמכתב הראשון את עשרת הדברים אשר דבר יהוה אליכם בהר מתוך האש ביום הקהל ויתנם יהוה אלי | 4 |
೪ಯೆಹೋವನು ಬೆಟ್ಟದ ಮೇಲೆ ಅಗ್ನಿಜ್ವಾಲೆಯೊಳಗಿಂದ ನೀವು ಸಭೆ ಕೂಡಿದ ದಿನದಲ್ಲಿ ನಿಮ್ಮ ಸಂಗಡ ಹೇಳಿದ ಮಾತುಗಳನ್ನು, ಅಂದರೆ ಆ ಹತ್ತು ಕಟ್ಟಳೆಗಳನ್ನು ಆತನು ಮೊದಲಿನಂತೆಯೇ ಆ ಹಲಿಗೆಗಳ ಮೇಲೆ ಬರೆದನು.
ואפן וארד מן ההר ואשם את הלחת בארון אשר עשיתי ויהיו שם כאשר צוני יהוה | 5 |
೫ಯೆಹೋವನು ಆ ಹಲಿಗೆಗಳನ್ನು ನನ್ನ ವಶಕ್ಕೆ ಕೊಟ್ಟ ನಂತರ ನಾನು ಬೆಟ್ಟದಿಂದ ಇಳಿದು ಬಂದು ನನ್ನಿಂದ ಸಿದ್ಧವಾಗಿದ್ದ ಮಂಜೂಷದಲ್ಲಿ ಆತನ ಅಪ್ಪಣೆಯ ಮೇರೆಗೆ ಅವುಗಳನ್ನು ಇಟ್ಟೆನು; ಅವು ಇಂದಿನವರೆಗೂ ಅದರಲ್ಲೇ ಇವೆ.
ובני ישראל נסעו מבארת בני יעקן--מוסרה שם מת אהרן ויקבר שם ויכהן אלעזר בנו תחתיו | 6 |
೬(ಇಸ್ರಾಯೇಲರು ಯಾಕಾನ್ಯರ ಬಾವಿಗಳ ಬಳಿಯಿಂದ ಪ್ರಯಾಣಮಾಡಿ ಮೋಸೇರಕ್ಕೆ ಬಂದರು. ಅಲ್ಲಿ ಆರೋನನು ಸಾಯಲಾಗಿ ಅವನನ್ನು ಅಲ್ಲಿಯೇ ಸಮಾಧಿ ಮಾಡಿದರು. ಅವನ ಮಗನಾದ ಎಲ್ಲಾಜಾರನು ಅವನಿಗೆ ಬದಲಾಗಿ ಮಹಾಯಾಜಕನಾದನು.
משם נסעו הגדגדה ומן הגדגדה יטבתה ארץ נחלי מים | 7 |
೭ಅಲ್ಲಿಂದ ಅವರು ಗುದ್ಗೋದಕ್ಕೂ, ಗುದ್ಗೋದದಿಂದ ನೀರಿನ ಹಳ್ಳಗಳುಳ್ಳ ಯೊಟ್ಬಾತಕ್ಕೂ ಪ್ರಯಾಣ ಮಾಡಿದರು.)
בעת ההוא הבדיל יהוה את שבט הלוי לשאת את ארון ברית יהוה--לעמד לפני יהוה לשרתו ולברך בשמו עד היום הזה | 8 |
೮ಆ ಕಾಲದಲ್ಲಿ ಯೆಹೋವನು ಲೇವಿ ಕುಲದವರನ್ನು ಪ್ರತ್ಯೇಕಿಸಿ ತನ್ನ ಒಡಂಬಡಿಕೆಯ ಮಂಜೂಷವನ್ನು ಹೊರುವುದಕ್ಕೂ, ತನ್ನ ಸನ್ನಿಧಿಯಲ್ಲಿ ಸೇವೆ ಮಾಡುವುದಕ್ಕೂ ಮತ್ತು ತನ್ನ ಹೆಸರಿನಿಂದ ಜನರನ್ನು ಆಶೀರ್ವದಿಸುವುದಕ್ಕೂ ಅವರನ್ನು ನೇಮಿಸಿದನು. ಅವರು ಇಂದಿನ ವರೆಗೂ ಆ ಕೆಲಸವನ್ನು ನಡಿಸುತ್ತಾರೆ.
על כן לא היה ללוי חלק ונחלה--עם אחיו יהוה הוא נחלתו כאשר דבר יהוה אלהיך לו | 9 |
೯ಆದುದರಿಂದ ಉಳಿದ ಇಸ್ರಾಯೇಲರಿಗೆ ದೊರಕಿದಂತೆ ಲೇವಿಯರಿಗೆ ಸ್ವಂತವಾದ ಭೂಸ್ಥಿತಿಯು ದೊರೆಯಲಿಲ್ಲ. ನಿಮ್ಮ ದೇವರಾದ ಯೆಹೋವನು ಅವರಿಗೆ ಹೇಳಿದಂತೆ ಯೆಹೋವನೇ ಅವರಿಗೆ ಸ್ವತ್ತು.
ואנכי עמדתי בהר כימים הראשנים--ארבעים יום וארבעים לילה וישמע יהוה אלי גם בפעם ההוא--לא אבה יהוה השחיתך | 10 |
೧೦ನಾನು ಮೊದಲಿನಂತೆ ಹಗಲಿರುಳು ನಲ್ವತ್ತು ದಿನವೂ ಬೆಟ್ಟದ ಮೇಲೆ ಇರಲಾಗಿ ಯೆಹೋವನು ಆ ಕಾಲದಲ್ಲಿಯೂ ನನ್ನ ಪ್ರಾರ್ಥನೆಯನ್ನು ಕೇಳಿ ನಿಮ್ಮನ್ನು ನಾಶಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟನು.
ויאמר יהוה אלי קום לך למסע לפני העם ויבאו ויירשו את הארץ אשר נשבעתי לאבתם לתת להם | 11 |
೧೧ತರುವಾಯ ಯೆಹೋವನು ನನಗೆ, “ನೀನು ಈ ಜನರ ಮುಂದೆ ಹೋಗು; ನಾನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶವನ್ನು ಇವರು ಸೇರಿ ಸ್ವಾಧೀನಮಾಡಿಕೊಳ್ಳಲಿ” ಎಂದು ಆಜ್ಞಾಪಿಸಿದನು.
ועתה ישראל--מה יהוה אלהיך שאל מעמך כי אם ליראה את יהוה אלהיך ללכת בכל דרכיו ולאהבה אתו ולעבד את יהוה אלהיך בכל לבבך ובכל נפשך | 12 |
೧೨ಆದುದರಿಂದ ಇಸ್ರಾಯೇಲರೇ, ನೀವು ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಎಲ್ಲಾ ವಿಷಯಗಳಲ್ಲಿಯೂ ಆತನು ಹೇಳುವ ಮಾರ್ಗದಲ್ಲೇ ನಡೆಯುತ್ತಾ, ಆತನನ್ನು ಪ್ರೀತಿಸುತ್ತಾ, ಸಂಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸೇವೆ ಮಾಡುತ್ತಾ,
לשמר את מצות יהוה ואת חקתיו אשר אנכי מצוך היום--לטוב לך | 13 |
೧೩ನಾನು ನಿಮ್ಮ ಮೇಲಿಗಾಗಿ ಈಗ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸುತ್ತಾ ಇರುವುದನ್ನೇ ಹೊರತು ನಿಮ್ಮ ದೇವರಾದ ಯೆಹೋವನು
הן ליהוה אלהיך השמים ושמי השמים הארץ וכל אשר בה | 14 |
೧೪ನಿಮ್ಮಿಂದ ಬೇರೇನೂ ಕೇಳಿಕೊಳ್ಳುತ್ತಾನೆ? ಆಲೋಚಿಸಿರಿ; ಉನ್ನತವಾದ ಆಕಾಶಮಂಡಲವೂ ಮತ್ತು ಭೂಮಿಯೂ, ಅದರಲ್ಲಿರುವ ಎಲ್ಲವೂ ನಿಮ್ಮ ದೇವರಾದ ಯೆಹೋವನವೇ.
רק באבתיך חשק יהוה לאהבה אותם ויבחר בזרעם אחריהם בכם מכל העמים--כיום הזה | 15 |
೧೫ಆದರೂ ಆತನು ನಿಮ್ಮ ಪೂರ್ವಿಕರಲ್ಲಿ ಇಷ್ಟವುಳ್ಳವನಾಗಿ ಅವರನ್ನು ಪ್ರೀತಿಸಿದ್ದರಿಂದ ಈಗ ನಿಮ್ಮ ಅನುಭವಕ್ಕೆ ಬಂದಂತೆ ಅವರ ತರುವಾಯ ಅವರ ಸಂತತಿಯವರಾದ ನಿಮ್ಮನ್ನೇ ಎಲ್ಲಾ ಜನಾಂಗಗಳೊಳಗಿಂದ ಆರಿಸಿಕೊಂಡನು.
ומלתם את ערלת לבבכם וערפכם--לא תקשו עוד | 16 |
೧೬ಆದುದರಿಂದ ನೀವು ಆಜ್ಞೆಗೆ ಮಣಿಯದ ನಿಮ್ಮ ದುಷ್ಟಸ್ವಭಾವವನ್ನು ಬಿಟ್ಟು ನಿಮ್ಮ ಹೃದಯದಲ್ಲೇ ಸುನ್ನತಿಮಾಡಿಕೊಳ್ಳಿರಿ.
כי יהוה אלהיכם--הוא אלהי האלהים ואדני האדנים האל הגדל הגבר והנורא אשר לא ישא פנים ולא יקח שחד | 17 |
೧೭ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ ಹಾಗೂ ಲಂಚತೆಗೆದುಕೊಳ್ಳುವವನಲ್ಲ.
עשה משפט יתום ואלמנה ואהב גר לתת לו לחם ושמלה | 18 |
೧೮ಆತನು ಅನಾಥರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ. ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ನವಸ್ತ್ರಗಳನ್ನು ಕೊಡುತ್ತಾನೆ.
ואהבתם את הגר כי גרים הייתם בארץ מצרים | 19 |
೧೯ಐಗುಪ್ತದೇಶದಲ್ಲಿ ನೀವೇ ಪರದೇಶಿಗಳಾಗಿದ್ದದ್ದನ್ನು ಜ್ಞಾಪಿಸಿಕೊಂಡು ಪರದೇಶದವರಲ್ಲಿ ಪ್ರೀತಿಯಿಡಿರಿ.
את יהוה אלהיך תירא אתו תעבד ובו תדבק ובשמו תשבע | 20 |
೨೦ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು, ಆತನ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.
הוא תהלתך והוא אלהיך--אשר עשה אתך את הגדלת ואת הנוראת האלה אשר ראו עיניך | 21 |
೨೧ಆತನೊಬ್ಬನೇ ನಿಮ್ಮ ಸ್ತುತಿ ಸ್ತೋತ್ರಕ್ಕೆ ಪಾತ್ರನು; ಆತನು ನಿಮ್ಮ ದೇವರು; ನೀವು ನೋಡಿದ ಆ ಅದ್ಭುತವಾದ ಮಹತ್ಕಾರ್ಯಗಳನ್ನು ನಿಮಗೋಸ್ಕರ ನಡಿಸಿದವನು ಆತನೇ.
בשבעים נפש ירדו אבתיך מצרימה ועתה שמך יהוה אלהיך ככוכבי השמים לרב | 22 |
೨೨ನಿಮ್ಮ ಪೂರ್ವಿಕರಲ್ಲಿ ಎಪ್ಪತ್ತು ಜನರು ಮಾತ್ರ ಐಗುಪ್ತದೇಶಕ್ಕೆ ಹೋದರು; ಈಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿರುವಂತೆ ಮಾಡಿದ್ದಾನೆ.