< שמות 40 >
ביום החדש הראשון באחד לחדש תקים את משכן אהל מועד | 2 |
೨“ಮೊದಲನೆಯ ತಿಂಗಳಿನ ಪ್ರಥಮ ದಿನದಲ್ಲಿ ದೇವದರ್ಶನದ ಗುಡಾರವನ್ನು ತೆರೆಯಬೇಕು.
ושמת שם את ארון העדות וסכת על הארן את הפרכת | 3 |
೩ಆಜ್ಞಾಶಾಸನಗಳ ಮಂಜೂಷವನ್ನು ಅದರಲ್ಲಿ ಇಟ್ಟು ಆ ಮಂಜೂಷವನ್ನು ಪರದೆಯಿಂದ ಮರೆಮಾಡಬೇಕು.
והבאת את השלחן וערכת את ערכו והבאת את המנרה והעלית את נרתיה | 4 |
೪ಆ ಮೇಲೆ ಮೇಜನ್ನು ಒಳಗೆ ತಂದು ಅದರ ಮೇಲಿಡಬೇಕಾದದ್ದನ್ನು ಸರಿಯಾಗಿ ಇಡಬೇಕು; ದೀಪಸ್ತಂಭವನ್ನು ಒಳಗೆ ತಂದು ಅದರ ಹಣತೆಗಳನ್ನು ಸರಿಯಾಗಿ ಇಡಬೇಕು.
ונתתה את מזבח הזהב לקטרת לפני ארון העדת ושמת את מסך הפתח למשכן | 5 |
೫ಆಜ್ಞಾಶಾಸನಗಳ ಮಂಜೂಷದ ಎದುರಾಗಿ ಚಿನ್ನದ ಧೂಪವೇದಿಯನ್ನು ಇಟ್ಟು ಗುಡಾರದ ಬಾಗಿಲಿನ ಪರದೆಯನ್ನು ಕಟ್ಟಬೇಕು.
ונתתה את מזבח העלה לפני פתח משכן אהל מועד | 6 |
೬ದೇವದರ್ಶನ ಗುಡಾರದ ಬಾಗಿಲಿನ ಮುಂದೆ ಸರ್ವಾಂಗಹೋಮ ಯಜ್ಞವೇದಿಯನ್ನು ಇರಿಸಬೇಕು.
ונתת את הכיר בין אהל מועד ובין המזבח ונתת שם מים | 7 |
೭ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ದೊಡ್ಡ ತೊಟ್ಟಿಯೊಂದನ್ನು ಇಟ್ಟು ಅದರಲ್ಲಿ ನೀರನ್ನು ತುಂಬಿಸಬೇಕು.
ושמת את החצר סביב ונתת את מסך שער החצר | 8 |
೮ಅಂಗಳದ ಸುತ್ತಲಿನ ಆವರಣವನ್ನು ತೆರೆದು, ಅಂಗಳದ ಬಾಗಿಲಿಗೆ ಪರದೆಯನ್ನು ತೂಗಿಬಿಡಬೇಕು.
ולקחת את שמן המשחה ומשחת את המשכן ואת כל אשר בו וקדשת אתו ואת כל כליו והיה קדש | 9 |
೯“ನೀನು ಅಭಿಷೇಕತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರಲ್ಲಿರುವುದೆಲ್ಲವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಅಭಿಷೇಕಿಸಿ ನನಗಾಗಿ ಪ್ರತಿಷ್ಠಿಸಬೇಕು; ಅಂದಿನಿಂದ ಅದು ಪರಿಶುದ್ಧವಾಗಿರುವುದು.
ומשחת את מזבח העלה ואת כל כליו וקדשת את המזבח והיה המזבח קדש קדשים | 10 |
೧೦ಯಜ್ಞವೇದಿಯನ್ನೂ ಅದರ ಉಪಕರಣಗಳನ್ನೂ ಅಭಿಷೇಕಿಸಿ ಸರ್ವಾಂಗಹೋಮ ಯಜ್ಞವೇದಿಯನ್ನು ಪ್ರತಿಷ್ಠಿಸಬೇಕು; ಆ ಯಜ್ಞವೇದಿ ಅತ್ಯಂತ ಪರಿಶುದ್ಧವಾಗಿರಬೇಕು.
ומשחת את הכיר ואת כנו וקדשת אתו | 11 |
೧೧ನೀನು ತಾಮ್ರದ ಬೋಗುಣಿಯನ್ನೂ ಅದರ ಪೀಠವನ್ನೂ ಅಭಿಷೇಕಿಸಿ ಪ್ರತಿಷ್ಠಿಸಬೇಕು.
והקרבת את אהרן ואת בניו אל פתח אהל מועד ורחצת אתם במים | 12 |
೧೨“ಅದಲ್ಲದೆ ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರಕ್ಕೆ ಬರಮಾಡಿ
והלבשת את אהרן את בגדי הקדש ומשחת אתו וקדשת אתו וכהן לי | 13 |
೧೩ಆರೋನನು ನನಗೆ ಯಾಜಕನಾಗುವಂತೆ ಅವನಿಗೆ ಪವಿತ್ರವಾದ ದೀಕ್ಷಾವಸ್ತ್ರಗಳನ್ನು ತೊಡಿಸಿ ಅವನನ್ನು ಅಭಿಷೇಕಿಸಿ ಪ್ರತಿಷ್ಠಿಸಬೇಕು.
ואת בניו תקריב והלבשת אתם כתנת | 14 |
೧೪ಆ ನಂತರ ನೀನು ಅವನ ಮಕ್ಕಳನ್ನು ಬರಮಾಡಿ
ומשחת אתם כאשר משחת את אביהם וכהנו לי והיתה להית להם משחתם לכהנת עולם--לדרתם | 15 |
೧೫ಅವರಿಗೆ ಅಂಗಿಗಳನ್ನು ತೊಡಿಸಿ ಅವರು ನನಗೋಸ್ಕರ ಯಾಜಕರಾಗುವುದಕ್ಕಾಗಿ ನೀನು ಅವರ ತಂದೆಯನ್ನು ಅಭಿಷೇಕಿಸಿದಂತೆಯೇ ಅವರನ್ನೂ ಅಭಿಷೇಕಿಸಬೇಕು. ಈ ಅಭಿಷೇಕದಿಂದ ಯಾಜಕತ್ವವು ಅವರಿಗೂ ಅವರ ಸಂತತಿಯವರಿಗೂ ಶಾಶ್ವತವಾಗಿರುವುದು” ಎಂದು ಹೇಳಿದನು.
ויעש משה ככל אשר צוה יהוה אתו--כן עשה | 16 |
೧೬ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಎಲ್ಲವನ್ನು ಮಾಡಿದನು.
ויהי בחדש הראשון בשנה השנית--באחד לחדש הוקם המשכן | 17 |
೧೭ಎರಡನೆಯ ವರ್ಷದ ಮೊದಲನೆಯ ತಿಂಗಳಿನ ಪ್ರಥಮದಿನದಲ್ಲಿ ಮೋಶೆ ಗುಡಾರವನ್ನು ತೆರೆದನು.
ויקם משה את המשכן ויתן את אדניו וישם את קרשיו ויתן את בריחיו ויקם את עמודיו | 18 |
೧೮ಮೋಶೆಯು ಗುಡಾರವನ್ನು ತೆರೆದು ಅದಕ್ಕೆ ಮೆಟ್ಟುವಕಲ್ಲುಗಳನ್ನು ಹಾಕಿ ಚೌಕಟ್ಟುಗಳನ್ನು ನಿಲ್ಲಿಸಿ ಅಗುಳಿಗಳನ್ನು ಕೊಟ್ಟು ಕಂಬಗಳನ್ನು ನಿಲ್ಲಿಸಿದನು.
ויפרש את האהל על המשכן וישם את מכסה האהל עליו מלמעלה--כאשר צוה יהוה את משה | 19 |
೧೯ಗುಡಾರದ ಮೇಲೆ ಡೇರೆಯ ಬಟ್ಟೆಯನ್ನು ಹಾಸಿ ಆ ಡೇರೆಗೆ ಮೇಲ್ಹೊದಿಕೆಯನ್ನು ಹಾಕಿ ಅದನ್ನು ಮರೆಮಾಡಿದನು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಅದನ್ನೆಲ್ಲಾ ಮಾಡಿದನು.
ויקח ויתן את העדת אל הארן וישם את הבדים על הארן ויתן את הכפרת על הארן מלמעלה | 20 |
೨೦ಅವನು ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಕೋಲುಗಳನ್ನು ಹಾಕಿ ಕೃಪಾಸನವನ್ನು ಇರಿಸಿದನು.
ויבא את הארן אל המשכן וישם את פרכת המסך ויסך על ארון העדות--כאשר צוה יהוה את משה | 21 |
೨೧ಮೋಶೆಯು ಮಂಜೂಷವನ್ನು ಗುಡಾರದೊಳಕ್ಕೆ ತಂದು, ಅದರ ಮುಂದೆ ಪರದೆಯನ್ನು ಇರಿಸಿ ಯೆಹೋವನು ಆಜ್ಞಾಪಿಸಿದಂತೆಯೇ ಆಜ್ಞಾಶಾಸನಗಳ ಮಂಜೂಷವನ್ನು ಮರೆಮಾಡಿದನು.
ויתן את השלחן באהל מועד על ירך המשכן צפנה מחוץ לפרכת | 22 |
೨೨ಮೋಶೆ ದೇವದರ್ಶನದ ಗುಡಾರದೊಳಗೆ ಉತ್ತರ ಭಾಗದಲ್ಲಿ ತೆರೆಯ ಹೊರಗಡೆ ಮೇಜನ್ನು ಇರಿಸಿದನು.
ויערך עליו ערך לחם לפני יהוה--כאשר צוה יהוה את משה | 23 |
೨೩ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆ ಮೇಜಿನ ಮೇಲೆ ರೊಟ್ಟಿಗಳನ್ನು ಕ್ರಮವಾಗಿ ಯೆಹೋವನ ಸನ್ನಿಧಿಯಲ್ಲಿ ಇರಿಸಿದನು.
וישם את המנרה באהל מועד נכח השלחן על ירך המשכן נגבה | 24 |
೨೪ಅವನು ದೇವದರ್ಶನದ ಗುಡಾರದಲ್ಲಿ ಮೇಜಿಗೆ ಎದುರಾಗಿ ಗುಡಾರದ ದಕ್ಷಿಣ ಭಾಗದಲ್ಲಿ ದೀಪಸ್ತಂಭವನ್ನು ಇರಿಸಿದನು.
ויעל הנרת לפני יהוה--כאשר צוה יהוה את משה | 25 |
೨೫ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆ, ಅದರ ಹಣತೆಗಳನ್ನು ಯೆಹೋವನ ಸನ್ನಿಧಿಯಲ್ಲಿ ಕ್ರಮವಾಗಿ ಇರಿಸಿದನು.
וישם את מזבח הזהב באהל מועד לפני הפרכת | 26 |
೨೬ಮತ್ತು ಅವನು ಚಿನ್ನದ ಧೂಪವೇದಿಯನ್ನು ದೇವದರ್ಶನದ ಗುಡಾರದಲ್ಲಿ ತೆರೆಯ ಎದುರಿಗೆ ಇರಿಸಿದನು.
ויקטר עליו קטרת סמים--כאשר צוה יהוה את משה | 27 |
೨೭ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆಯೇ, ಅದರ ಮೇಲೆ ಪರಿಮಳ ದ್ರವ್ಯಗಳ ಧೂಪವನ್ನು ಹಾಕಿದನು.
וישם את מסך הפתח למשכן | 28 |
೨೮ಅವನು ಗುಡಾರದ ಬಾಗಿಲಿಗೆ ಪರದೆಯನ್ನು ಹಾಕಿದನು.
ואת מזבח העלה שם פתח משכן אהל מועד ויעל עליו את העלה ואת המנחה--כאשר צוה יהוה את משה | 29 |
೨೯ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಸರ್ವಾಂಗಹೋಮ ಯಜ್ಞವೇದಿಯನ್ನು ಇಟ್ಟು ಅದರ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯಸಮರ್ಪಣೆಯನ್ನೂ ಮಾಡಿದನು.
וישם את הכיר בין אהל מועד ובין המזבח ויתן שמה מים לרחצה | 30 |
೩೦ಯೆಹೋವನು ಆಜ್ಞಾಪಿಸಿದಂತೆ ಮೋಶೆ ದೇವದರ್ಶನದ ಗುಡಾರಕ್ಕೂ, ಯಜ್ಞವೇದಿಗೂ ನಡುವೆ ನೀರಿನ ತೊಟ್ಟಿಯನ್ನು ಇರಿಸಿ ತೊಳೆದುಕೊಳ್ಳುವುದಕ್ಕಾಗಿ ಅದರಲ್ಲಿ ನೀರು ತುಂಬಿಸಿದನು.
ורחצו ממנו משה ואהרן ובניו את ידיהם ואת רגליהם | 31 |
೩೧ಮೋಶೆಯು, ಆರೋನನು ಮತ್ತು ಅವನ ಮಕ್ಕಳೂ ಅದರಲ್ಲಿ ಕೈಕಾಲು ತೊಳೆದುಕೊಂಡರು.
בבאם אל אהל מועד ובקרבתם אל המזבח--ירחצו כאשר צוה יהוה את משה | 32 |
೩೨ಅವರು ದೇವದರ್ಶನದ ಗುಡಾರದೊಳಗೆ ಹೋಗುವಾಗಲೂ, ಯಜ್ಞವೇದಿಯ ಹತ್ತಿರ ಬರುವಾಗಲೂ ಯೆಹೋವನು ಆಜ್ಞಾಪಿಸಿದಂತೆ ಕೈಕಾಲುಗಳನ್ನು ತೊಳೆದುಕೊಳ್ಳುತ್ತಿದ್ದರು.
ויקם את החצר סביב למשכן ולמזבח ויתן את מסך שער החצר ויכל משה את המלאכה | 33 |
೩೩ಮೋಶೆಯು ಗುಡಾರಕ್ಕೂ ಯಜ್ಞವೇದಿಗೂ ಸುತ್ತಲು ಅಂಗಳದ ಆವರಣವನ್ನು ತೆರೆದು ಅಂಗಳದ ಬಾಗಿಲಿಗೆ ಪರದೆಯನ್ನು ಹಾಕಿದನು. ಈ ಪ್ರಕಾರ ಮೋಶೆ ಆ ಕೆಲಸವನ್ನೆಲ್ಲಾ ಮುಗಿಸಿದನು.
ויכס הענן את אהל מועד וכבוד יהוה מלא את המשכן | 34 |
೩೪ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿಕೊಂಡಿತು.
ולא יכל משה לבוא אל אהל מועד--כי שכן עליו הענן וכבוד יהוה מלא את המשכן | 35 |
೩೫ಮೇಘವು ದೇವದರ್ಶನದ ಗುಡಾರದ ಮೇಲೆ ನೆಲೆಗೊಂಡಿದ್ದು ಯೆಹೋವನ ತೇಜಸ್ಸು ಪರಿಶುದ್ಧ ನಿವಾಸದ ತುಂಬಾ ಅವರಿಸಿ ಯೆಹೋವನ ಮಹಿಮೆಯು ಗುಡಾರದೊಳಗೆ ತುಂಬಿಕೊಂಡ್ದಿದರಿಂದಲೂ ಮೋಶೆಯು ಗುಡಾರದ ಒಳಗೆ ಪ್ರವೇಶಿಸಲು ಸಾಧ್ಯವಾಗಲಿಲ್ಲ.
ובהעלות הענן מעל המשכן יסעו בני ישראל בכל מסעיהם | 36 |
೩೬ಆ ಮೇಘವು ಗುಡಾರವನ್ನು ಬಿಟ್ಟು ಮೇಲಕ್ಕೆ ಹೋದಾಗ ಇಸ್ರಾಯೇಲರು ಮುಂದೆ ಪ್ರಯಾಣ ಮಾಡುತ್ತಿದ್ದರು.
ואם לא יעלה הענן--ולא יסעו עד יום העלתו | 37 |
೩೭ಆ ಮೇಘವು ಮೇಲಕ್ಕೆ ಹೋಗದೇ ಇದ್ದು ಅದು ಹೊರಡುವ ತನಕ ಅವರು ಪ್ರಯಾಣ ಮಾಡದೆ ಇರುತ್ತಿದ್ದರು.
כי ענן יהוה על המשכן יומם ואש תהיה לילה בו--לעיני כל בית ישראל בכל מסעיהם | 38 |
೩೮ಇಸ್ರಾಯೇಲರ ಎಲ್ಲಾ ಪ್ರಯಾಣಗಳಲ್ಲಿಯೂ ಅವರ ಕಣ್ಣುಗಳ ಮುಂದೆ ಹಗಲು ಹೊತ್ತಿನಲ್ಲಿ ಯೆಹೋವನ ಮೇಘವು ಗುಡಾರದ ಮೇಲೆಯೂ ಇರುತ್ತಿತ್ತು; ರಾತ್ರಿ ವೇಳೆಯಲ್ಲಿ ಆ ಮೇಘದೊಳಗೆ ಅಗ್ನಿಯು ಇರುತ್ತಿತ್ತು.