< יחזקאל 15 >
೧ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
בן אדם מה יהיה עץ הגפן מכל עץ--הזמורה אשר היה בעצי היער | 2 |
೨“ನರಪುತ್ರನೇ, ದ್ರಾಕ್ಷಿಯ ಗಿಡವು ಉಳಿದ ಗಿಡಗಳಿಗಿಂತ ಎಷ್ಟು ಹೆಚ್ಚು? ವನವೃಕ್ಷಗಳಲ್ಲಿ ದ್ರಾಕ್ಷಾಲತೆಯ ವಿಶೇಷವೇನು?
היקח ממנו עץ לעשות למלאכה אם יקחו ממנו יתד לתלות עליו כל כלי | 3 |
೩ಜನರು ದ್ರಾಕ್ಷಿಯ ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವ ಕೆಲಸವನ್ನಾದರೂ ಮಾಡುವರೋ ಅಥವಾ ಅದರ ಮೇಲೆ ಯಾವ ವಸ್ತುವನ್ನಾದರೂ ನೇತು ಹಾಕುವುದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ?
הנה לאש נתן לאכלה את שני קצותיו אכלה האש ותוכו נחר--היצלח למלאכה | 4 |
೪ಇಲ್ಲ, ಸೌದೆಯಾಗಿ ಬೆಂಕಿಯಲ್ಲಿ ಹಾಕುವರು; ಬೆಂಕಿಯು ಅದರ ಎರಡು ಕೊನೆಗಳನ್ನು ಸುಟ್ಟುಬಿಡುವುದು, ಮಧ್ಯಭಾಗವು ಇದ್ದಲಾಗಿ ಯಾವ ಕೆಲಸಕ್ಕೂ ಬರುವುದಿಲ್ಲ.
הנה בהיותו תמים לא יעשה למלאכה אף כי אש אכלתהו ויחר ונעשה עוד למלאכה | 5 |
೫ಅದು ಸಂಪೂರ್ಣವಾಗಿ ಇದ್ದಾಗ ಯಾವ ಕೆಲಸಕ್ಕೂ ಬರಲಿಲ್ಲ; ಬೆಂಕಿಯಲ್ಲಿ ಸುಟ್ಟು ಇದ್ದಲಾದ ಮೇಲೆ ಯಾವ ಕೆಲಸಕ್ಕೆ ಬಂದೀತು?”
לכן כה אמר אדני יהוה כאשר עץ הגפן בעץ היער אשר נתתיו לאש לאכלה--כן נתתי את ישבי ירושלם | 6 |
೬ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ವನ ವೃಕ್ಷಗಳಲ್ಲಿ ದ್ರಾಕ್ಷಿಯ ಗಿಡವನ್ನು ನಾನು ಹೇಗೆ ಬೆಂಕಿಗೆ ಸೌದೆಯನ್ನಾಗಿ ಕೊಟ್ಟಿದ್ದೇನೋ, ಹಾಗೆಯೇ ನಾನು ಯೆರೂಸಲೇಮಿನವರನ್ನು ವಿನಾಶಕ್ಕೆ ಗುರಿಮಾಡಿದ್ದೇನೆ.
ונתתי את פני בהם--מהאש יצאו והאש תאכלם וידעתם כי אני יהוה בשומי את פני בהם | 7 |
೭ಅವರ ಮೇಲೆ ಕೋಪ ದೃಷ್ಟಿಯನ್ನಿಡುವೆನು; ಅವರು ಬೆಂಕಿಯೊಳಗಿಂದ ತಪ್ಪಿಸಿಕೊಂಡರೂ, ಬೆಂಕಿಯು ಅವರನ್ನು ನುಂಗಿಬಿಡುವುದು; ನಾನು ಅವರ ಮೇಲೆ ಕೋಪ ದೃಷ್ಟಿಯನ್ನಿಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
ונתתי את הארץ שממה--יען מעלו מעל נאם אדני יהוה | 8 |
೮ಅವರು ದ್ರೋಹ ಮಾಡಿದ್ದರಿಂದ ನಾನು ದೇಶವನ್ನು ಹಾಳುಮಾಡುವೆನು” ಇದು ಕರ್ತನಾದ ಯೆಹೋವನ ನುಡಿ.