< בראשית 43 >
೧ಕಾನಾನ್ ದೇಶದಲ್ಲಿ ಬರವು ಬಹು ಘೋರವಾಗಿತ್ತು.
ויהי כאשר כלו לאכל את השבר אשר הביאו ממצרים ויאמר אליהם אביהם שבו שברו לנו מעט אכל | 2 |
೨ಅವರು ಐಗುಪ್ತ ದೇಶದಿಂದ ತಂದಿದ್ದ ದವಸಧಾನ್ಯವು ಮುಗಿದ ನಂತರ ಅವರ ತಂದೆಯು ಅವರಿಗೆ, “ನೀವು ಪುನಃ ಹೋಗಿ ಇನ್ನೂ ಸ್ವಲ್ಪ ಧಾನ್ಯವನ್ನು ಖರೀದಿಸಿಕೊಂಡು ಬನ್ನಿರಿ” ಎಂದನು.
ויאמר אליו יהודה לאמר העד העד בנו האיש לאמר לא תראו פני בלתי אחיכם אתכם | 3 |
೩ಅದಕ್ಕೆ ಯೆಹೂದನು ತನ್ನ ತಂದೆಗೆ ಹೇಳಿದ್ದೇನಂದರೆ, “ಆ ಮನುಷ್ಯನು ನಮಗೆ ‘ನಿಮ್ಮ ತಮ್ಮನನ್ನು ಕರೆದುಕೊಂಡು ಬಂದ ಹೊರತು ನನ್ನ ಮುಖವನ್ನು ನೋಡಬಾರದು’ ಎಂದು ಖಂಡಿತವಾಗಿ” ಹೇಳಿದ್ದಾನೆ.
אם ישך משלח את אחינו אתנו--נרדה ונשברה לך אכל | 4 |
೪ನೀನು ನಮ್ಮ ತಮ್ಮನನ್ನು ನಮ್ಮ ಜೊತೆಯಲ್ಲಿ ಕಳುಹಿಸಿದರೆ ನಾವು ಹೋಗಿ, ನಿನಗೆ ಧಾನ್ಯವನ್ನು ಖರೀದಿಸಿಕೊಂಡು ತರುತ್ತೇವೆ.
ואם אינך משלח לא נרד כי האיש אמר אלינו לא תראו פני בלתי אחיכם אתכם | 5 |
೫ಅವನನ್ನು ನೀನು ಕಳುಹಿಸದೆ ಹೋದರೆ ನಾವು ಹೋಗುವುದಿಲ್ಲ. ಏಕೆಂದರೆ ಆ “ಮನುಷ್ಯನು ನಿಮ್ಮ ತಮ್ಮನು ನಿಮ್ಮ ಸಂಗಡ ಇಲ್ಲದಿದ್ದರೆ ನನ್ನ ಮುಖವನ್ನು ನೋಡಬಾರದು” ಎಂದು ಹೇಳಿದ್ದಾನೆ.
ויאמר ישראל למה הרעתם לי--להגיד לאיש העוד לכם אח | 6 |
೬ಅದಕ್ಕೆ ಇಸ್ರಾಯೇಲನು, “ಇನ್ನೊಬ್ಬ ತಮ್ಮನಿದ್ದಾನೆಂದು ಆ ಮನುಷ್ಯನಿಗೆ ಹೇಳಿ, ನೀವು ಯಾಕೆ ನನಗೆ ಕೇಡು ಮಾಡಿದಿರಿ?” ಎಂದು ಹೇಳಿದನು.
ויאמרו שאול שאל האיש לנו ולמולדתנו לאמר העוד אביכם חי היש לכם אח ונגד לו על פי הדברים האלה הידוע נדע--כי יאמר הורידו את אחיכם | 7 |
೭ಅವರು, “ನಮ್ಮ ವಿಷಯದಲ್ಲಿಯೂ ನಮ್ಮ ಮನೆಯವರ ವಿಷಯದಲ್ಲಿಯೂ ಆ ಮನುಷ್ಯನು ಸೂಕ್ಷ್ಮವಾಗಿ ವಿಚಾರಿಸಿದನು, ಮತ್ತೆ ಅವನು ನಿಮ್ಮ ತಂದೆಯು ಇನ್ನೂ ಬದುಕಿದ್ದಾನೋ? ನಿಮಗೆ ಇನ್ನೊಬ್ಬ ತಮ್ಮನಿದ್ದಾನೋ? ಎಂದು ಕೇಳಿದನು. ಆ ಪ್ರಶ್ನೆಗಳಿಗೆ ತಕ್ಕಂತೆ ನಾವು ಉತ್ತರಕೊಟ್ಟೆವು. ಅವನು ನಿಮ್ಮ ತಮ್ಮನನ್ನು ಕರೆದುಕೊಂಡು ಬನ್ನಿರಿ ಎಂದು ಹೇಳುವನೆಂದು ನಮಗೆ ಹೇಗೆ ತಿಳಿಯುವುದು” ಎಂದರು.
ויאמר יהודה אל ישראל אביו שלחה הנער אתי--ונקומה ונלכה ונחיה ולא נמות גם אנחנו גם אתה גם טפנו | 8 |
೮ಆಗ ಯೆಹೂದನು ತನ್ನ ತಂದೆಯಾದ ಇಸ್ರಾಯೇಲನಿಗೆ, “ಆ ಹುಡುಗನನ್ನು ನನ್ನ ಜೊತೆಯಲ್ಲಿ ಕಳುಹಿಸಿಕೊಡು, ನಾವು ಹೋಗುವೆವು. ಆಗ ನೀನೂ, ನಾವು ಮತ್ತು ನಮ್ಮ ಮಕ್ಕಳೂ ಸಾಯದೆ ಬದುಕುವೆವು.
אנכי אערבנו--מידי תבקשנו אם לא הביאתיו אליך והצגתיו לפניך וחטאתי לך כל הימים | 9 |
೯ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ಅವನ ವಿಷಯ ನನ್ನನ್ನೇ ಕೇಳಬಹುದು. ನಾನು ಅವನನ್ನು ತಿರುಗಿ ಕರೆದುಕೊಂಡು ಬಂದು ನಿನ್ನೆದುರಿನಲ್ಲಿ ನಿಲ್ಲಿಸದೆ ಹೋದರೆ ಆ ಅಪರಾಧ ಎಂದೆಂದಿಗೂ ನನ್ನ ಮೇಲೆ ಇರಲಿ.
כי לולא התמהמהנו--כי עתה שבנו זה פעמים | 10 |
೧೦ನಾವು ತಡಮಾಡದೆ ಹೋಗಿದ್ದರೆ ಇಷ್ಟರೊಳಗೆ ಎರಡನೆಯ ಸಾರಿ ಹೋಗಿ ಬರುತ್ತಿದ್ದೆವು” ಎಂದು ಹೇಳಿದನು.
ויאמר אלהם ישראל אביהם אם כן אפוא זאת עשו--קחו מזמרת הארץ בכליכם והורידו לאיש מנחה מעט צרי ומעט דבש נכאת ולט בטנים ושקדים | 11 |
೧೧ಅದಕ್ಕೆ ಅವರ ತಂದೆಯಾದ ಇಸ್ರಾಯೇಲನು ಅವರಿಗೆ, “ಹಾಗಿದ್ದರೆ, ನೀವು ಹೀಗೆ ಮಾಡಿರಿ. ಈ ದೇಶದಲ್ಲಿ ದೊರಕುವ ಶ್ರೇಷ್ಠವಾದ ವಸ್ತುಗಳಲ್ಲಿ ಕೆಲವನ್ನು ನಿಮ್ಮ ಚೀಲದಲ್ಲಿ ಇಟ್ಟುಕೊಂಡು ಆ ಮನುಷ್ಯನಿಗೆ ಕಾಣಿಕೆಯಾಗಿ ತೆಗೆದುಕೊಂಡು ಹೋಗಿರಿ. ಸ್ವಲ್ಪ ತೈಲ, ಜೇನು, ಸುಗಂಧದ್ರವ್ಯ, ಕಾಕಂಬಿ, ಹಾಲುಮಡ್ಡಿ, ರಕ್ತಬೋಳ, ಗೋಡಂಬಿ, ಬಾದಾಮಿ ಇವುಗಳನ್ನು ತೆಗೆದುಕೊಂಡು ಹೋಗಿರಿ.
וכסף משנה קחו בידכם ואת הכסף המושב בפי אמתחתיכם תשיבו בידכם--אולי משגה הוא | 12 |
೧೨ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನೂ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಇದ್ದಿರಬಹುದು.
ואת אחיכם קחו וקומו שובו אל האיש | 13 |
೧೩ನಿಮ್ಮ ತಮ್ಮನನ್ನೂ ಕರೆದುಕೊಂಡು, ತಿರುಗಿ ಆ ಮನುಷ್ಯನ ಬಳಿಗೆ ಹೋಗಿರಿ.
ואל שדי יתן לכם רחמים לפני האיש ושלח לכם את אחיכם אחר ואת בנימין ואני כאשר שכלתי שכלתי | 14 |
೧೪ಸರ್ವಶಕ್ತನಾದ ದೇವರು ನಿಮ್ಮ ಇನ್ನೊಬ್ಬ ಅಣ್ಣನನ್ನೂ, ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಕೊಡುವಂತೆ ನಿಮ್ಮ ಮೇಲೆ ಕರುಣೆ ತೋರುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕು ಎಂದರೆ ಹಾಗೆಯೇ ಆಗಲಿ” ಎಂದು ಹೇಳಿದನು.
ויקחו האנשים את המנחה הזאת ומשנה כסף לקחו בידם ואת בנימן ויקמו וירדו מצרים ויעמדו לפני יוסף | 15 |
೧೫ಆಗ ಆ ಮನುಷ್ಯರು ಕಾಣಿಕೆಯನ್ನು ಸಿದ್ಧಮಾಡಿಕೊಂಡು, ಎರಡರಷ್ಟು ಹಣವನ್ನೂ ತೆಗೆದುಕೊಂಡು, ಬೆನ್ಯಾಮೀನನನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಐಗುಪ್ತ ದೇಶಕ್ಕೆ ಹೋಗಿ ಯೋಸೇಫನ ಎದುರಿನಲ್ಲಿ ನಿಂತುಕೊಂಡರು.
וירא יוסף אתם את בנימין ויאמר לאשר על ביתו הבא את האנשים הביתה וטבח טבח והכן כי אתי יאכלו האנשים בצהרים | 16 |
೧೬ಬೆನ್ಯಾಮೀನನು ಅವರ ಸಂಗಡ ಇರುವುದನ್ನು ಯೋಸೇಫನು ಕಂಡು ತನ್ನ ಗೃಹನಿರ್ವಾಹಕನನ್ನು ಕರೆಯಿಸಿ, “ಈ ಮನುಷ್ಯರನ್ನು ಮನೆಯೊಳಗೆ ಕರೆದುಕೊಂಡು ಹೋಗು, ಒಳ್ಳೆ ಕೊಬ್ಬಿದ ಪಶುವನ್ನು ಕೊಯ್ದು ಅಡುಗೆ ಸಿದ್ಧಮಾಡು. ಏಕೆಂದರೆ ಈ ಮನುಷ್ಯರು ಈ ಹೊತ್ತು ಮಧ್ಯಾಹ್ನ ನನ್ನ ಸಂಗಡ ಊಟ ಮಾಡುವರು” ಎಂದು ಅಪ್ಪಣೆಕೊಟ್ಟನು.
ויעש האיש כאשר אמר יוסף ויבא האיש את האנשים ביתה יוסף | 17 |
೧೭ಯೋಸೇಫನ ಅಪ್ಪಣೆಯ ಮೇರೆಗೆ ಗೃಹನಿರ್ವಾಹಕನು ಅವರನ್ನು ಯೋಸೇಫನ ಮನೆಯೊಳಗೆ ಕರೆದುಕೊಂಡು ಹೋದನು.
וייראו האנשים כי הובאו בית יוסף ויאמרו על דבר הכסף השב באמתחתינו בתחלה אנחנו מובאים--להתגלל עלינו ולהתנפל עלינו ולקחת אתנו לעבדים ואת חמרינו | 18 |
೧೮ಯೋಸೇಫನ ಮನೆಗೆ ಕರೆತಂದದ್ದರಿಂದ ಅವರು ಭಯಪಟ್ಟು, “ಮೊದಲನೆಯ ಸಾರಿ ನಮ್ಮ ಚೀಲಗಳಲ್ಲಿ ಹಿಂದಕ್ಕೆ ತೆಗೆದುಕೊಂಡು ಹೋದ ಹಣದ ನಿಮಿತ್ತವೇ ಅವನು ನಮ್ಮನ್ನು ತನ್ನ ಮನೆಯೊಳಗೆ ಕರೆಸಿದ್ದಾನೆ. ನಮ್ಮ ಮೇಲೆ ಫಕ್ಕನೆ ಬಿದ್ದು, ನಮ್ಮನ್ನೂ, ನಮ್ಮ ಕತ್ತೆಗಳನ್ನೂ ತೆಗೆದುಕೊಂಡು ನಮ್ಮನ್ನು ದಾಸರನ್ನಾಗಿ ಮಾಡಿಕೊಳ್ಳಲು ಇಲ್ಲಿಗೆ ಕರೆಸಿದ್ದಾನೆ” ಎಂದುಕೊಂಡರು.
ויגשו אל האיש אשר על בית יוסף וידברו אליו פתח הבית | 19 |
೧೯ಆಗ ಅವರು ಯೋಸೇಫನ ಗೃಹನಿರ್ವಾಹಕನ ಬಳಿಗೆ ಹೋಗಿ ಮನೆಯ ಬಾಗಿಲ ಬಳಿ ನಿಂತುಕೊಂಡು ಅವನ ಸಂಗಡ ಮಾತನಾಡಿ ಅವನಿಗೆ,
ויאמרו בי אדני ירד ירדנו בתחלה לשבר אכל | 20 |
೨೦“ಅಯ್ಯಾ, ಮೊದಲನೆಯ ಸಾರಿ ನಾವು ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕೆ ಬಂದಿದ್ದೇವು.
ויהי כי באנו אל המלון ונפתחה את אמתחתינו והנה כסף איש בפי אמתחתו כספנו במשקלו ונשב אתו בידנו | 21 |
೨೧ನಾವು ಹೊರಟುಹೋದ ನಂತರ ಇಳಿದುಕೊಂಡಿದ್ದ ಸ್ಥಳದಲ್ಲಿ ನಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬನ ಹಣವು ತೂಕದಲ್ಲಿ ಏನೂ ಕಡಿಮೆಯಿಲ್ಲದೆ ನಮ್ಮ ನಮ್ಮ ಚೀಲದಲ್ಲೇ ಇತ್ತು. ಅದನ್ನು ಹಿಂತಿರುಗಿಸಲು ತಂದಿದ್ದೇವೆ.
וכסף אחר הורדנו בידנו לשבר אכל לא ידענו מי שם כספנו באמתחתינו | 22 |
೨೨ದವಸವನ್ನು ಕೊಂಡುಕೊಳ್ಳುವುದಕ್ಕೆ ಬೇರೆ ಹಣವನ್ನೂ ತಂದಿದ್ದೇವೆ. ಆ ಹಣವನ್ನು ನಮ್ಮ ಚೀಲಗಳಲ್ಲಿ ಯಾರು ಇಟ್ಟರೋ ನಮಗೆ ತಿಳಿಯದು” ಎಂದು ಹೇಳಿದರು.
ויאמר שלום לכם אל תיראו אלהיכם ואלהי אביכם נתן לכם מטמון באמתחתיכם--כספכם בא אלי ויוצא אלהם את שמעון | 23 |
೨೩ಅದಕ್ಕೆ ಅವನು, “ನೀವು ಸಮಾಧಾನವಾಗಿರಿ. ನೀವೇನೂ ಭಯಪಡಬೇಡಿರಿ ನಿಮಗೂ ನಿಮ್ಮ ತಂದೆಗೂ ದೇವರಾಗಿರುವಾತನು ನಿಮ್ಮ ಚೀಲಗಳಲ್ಲಿ ಹಣವನ್ನು ಇಟ್ಟಿರಬೇಕು. ನಿಮ್ಮ ಹಣವು ನನಗೆ ಮುಟ್ಟಿತು” ಎಂದು ಹೇಳಿ, ಅವನು ಸಿಮೆಯೋನನನ್ನು ಅವರ ಬಳಿಗೆ ಕರೆದುಕೊಂಡು ಬಂದನು.
ויבא האיש את האנשים ביתה יוסף ויתן מים וירחצו רגליהם ויתן מספוא לחמריהם | 24 |
೨೪ಅವರೆಲ್ಲರನ್ನೂ ಯೋಸೇಫನ ಮನೆಯೊಳಗೆ ಕರೆದುಕೊಂಡು ಬಂದನು. ಕಾಲುಗಳನ್ನು ತೊಳೆಯುವುದಕ್ಕೆ ನೀರನ್ನು ಕೊಡಿಸಿ, ಅವರ ಕತ್ತೆಗಳಿಗೂ ಮೇವು ಹಾಕಿಸಿದನು.
ויכינו את המנחה עד בוא יוסף בצהרים כי שמעו כי שם יאכלו לחם | 25 |
೨೫ತಾವು ಅಲ್ಲೇ ಊಟ ಮಾಡಬೇಕೆಂಬ ಸಂಗತಿಯನ್ನು ಅವರು ಕೇಳಿದ್ದರಿಂದ ತಾವು ತಂದಿದ್ದ ಕಾಣಿಕೆಯನ್ನು ಯೋಸೇಫನಿಗೆ ಕೊಡಲು ಸಿದ್ಧಮಾಡಿಕೊಂಡರು.
ויבא יוסף הביתה ויביאו לו את המנחה אשר בידם הביתה וישתחוו לו ארצה | 26 |
೨೬ಯೋಸೇಫನು ಮನೆಗೆ ಬಂದಾಗ, ಅವರು ತಮ್ಮ ಕೈಯಲ್ಲಿದ್ದ ಕಾಣಿಕೆಯನ್ನು ಮನೆಯೊಳಗೆ ತಂದು, ಅವನಿಗೆ ಕೊಟ್ಟು, ಅವನ ಮುಂದೆ ಅಡ್ಡಬಿದ್ದರು.
וישאל להם לשלום ויאמר השלום אביכם הזקן אשר אמרתם--העודנו חי | 27 |
೨೭ಅವನು ಅವರ ಯೋಗ ಕ್ಷೇಮವನ್ನು ವಿಚಾರಿಸಿ ಅವರಿಗೆ ಹೇಳಿದ್ದೇನೆಂದರೆ, “ನೀವು ಹೇಳಿದ, ಮುದುಕನಾಗಿರುವ ನಿಮ್ಮ ತಂದೆ ಕ್ಷೇಮವೋ? ಅವನು ಇನ್ನೂ ಬದುಕಿದ್ದಾನೋ?” ಎಂದು ಕೇಳಿದನು.
ויאמרו שלום לעבדך לאבינו--עודנו חי ויקדו וישתחו (וישתחוו) | 28 |
೨೮ಅವರು ಅದಕ್ಕೆ, “ನಿನ್ನ ಸೇವಕನಾದ ನಮ್ಮ ತಂದೆ ಕ್ಷೇಮವಾಗಿದ್ದಾನೆ. ಅವನು ಇನ್ನೂ ಬದುಕಿದ್ದಾನೆ” ಎಂದು ಹೇಳಿ, ತಮ್ಮ ತಲೆಗಳನ್ನು ಬಾಗಿಸಿ ಅವನಿಗೆ ಅಡ್ಡಬಿದ್ದರು.
וישא עיניו וירא את בנימין אחיו בן אמו ויאמר הזה אחיכם הקטן אשר אמרתם אלי ויאמר אלהים יחנך בני | 29 |
೨೯ಆಗ ಅವನು ಕಣ್ಣೆತ್ತಿ ತನ್ನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ನೋಡಿ, “ನೀವು ಹೇಳಿದ ನಿಮ್ಮ ಕಿರಿಯ ತಮ್ಮನು ಇವನೋ?” ಎಂದು ಕೇಳಿ ಅವನಿಗೆ, “ಮಗನೇ, ದೇವರ ದಯೆ ನಿನ್ನ ಮೇಲೆ ಇರಲಿ” ಎಂದು ಹೇಳಿದನು.
וימהר יוסף כי נכמרו רחמיו אל אחיו ויבקש לבכות ויבא החדרה ויבך שמה | 30 |
೩೦ಯೋಸೇಫನು ಅವಸರವಾಗಿ ಎದ್ದು ತನ್ನ ಕೋಣೆಯೊಳಗೆ ಹೋದನು. ಏಕೆಂದರೆ ತನ್ನ ಕರಳು ತಮ್ಮನ ಮೇಲೆ ಮರುಗಿದ್ದರಿಂದ ಅವನು ತನ್ನ ಕೋಣೆಯೊಳಗೆ ಹೋಗಿ ಅಲ್ಲಿ ಅತ್ತನು.
וירחץ פניו ויצא ויתאפק--ויאמר שימו לחם | 31 |
೩೧ಆ ಮೇಲೆ ಮುಖವನ್ನು ತೊಳೆದುಕೊಂಡು ಹೊರಗೆ ಬಂದು, ಮನಸ್ಸನ್ನು ಬಿಗಿ ಹಿಡಿದು, “ಊಟಕ್ಕೆ ಬಡಿಸಿರಿ” ಎಂದು ಅಪ್ಪಣೆ ಕೊಟ್ಟನು.
וישימו לו לבדו ולהם לבדם ולמצרים האכלים אתו לבדם--כי לא יוכלון המצרים לאכל את העברים לחם כי תועבה הוא למצרים | 32 |
೩೨ಪರಿಚಾರಕರು ಅವನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡವಿದ್ದ ಐಗುಪ್ತರಿಗೂ ಬೇರೆ ಬೇರೆಯಾಗಿ ಊಟಕ್ಕೆ ಬಡಿಸಿದರು. ಏಕೆಂದರೆ ಐಗುಪ್ತರು ಇಬ್ರಿಯರ ಜೊತೆ ಸಹಪಂಕ್ತಿಯಲ್ಲಿ ಊಟಮಾಡುತ್ತಿರಲಿಲ್ಲ. ಅದು ಐಗುಪ್ತರಿಗೆ ಅಸಹ್ಯವಾಗಿತ್ತು.
וישבו לפניו--הבכר כבכרתו והצעיר כצערתו ויתמהו האנשים איש אל רעהו | 33 |
೩೩ಯೋಸೇಫನು ತನ್ನ ಅಣ್ಣತಮ್ಮಂದಿರನ್ನು ಹಿರಿಯವನು ಮೊದಲುಗೊಂಡು ಕಿರಿಯವನವರೆಗೂ ಅವರವರ ವಯಸ್ಸಿನ ಪ್ರಕಾರವೇ ಕುಳಿತುಕೊಳ್ಳುವಂತೆ ಮಾಡಿದ್ದರಿಂದ, ಅವರು ತಮ್ಮೊಳಗೆ ಆಶ್ಚರ್ಯಪಟ್ಟರು.
וישא משאת מאת פניו אלהם ותרב משאת בנימן ממשאת כלם חמש ידות וישתו וישכרו עמו | 34 |
೩೪ಯೋಸೇಫನು ತನ್ನ ಮುಂದಿಟ್ಟಿದ್ದ ಆಹಾರಗಳಲ್ಲಿ ಭಾಗಗಳನ್ನು ಕಳುಹಿಸಿದಾಗ, ಬೆನ್ಯಾಮೀನನಿಗೆ ಬಂದ ಭಾಗವು ಮಿಕ್ಕಾದವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಪಾನಮಾಡಿ ಅವನ ಸಂಗಡ ಸಂತೋಷದಿಂದ ಇದ್ದರು.