< בראשית 9 >
ויברך אלהים את נח ואת בניו ויאמר להם פרו ורבו ומלאו את הארץ | 1 |
೧ದೇವರು ನೋಹನನ್ನೂ, ಅವನ ಮಕ್ಕಳನ್ನೂ ಆಶೀರ್ವದಿಸಿ ಅವರಿಗೆ, “ನೀವು ಬಹುಸಂತಾನವುಳ್ಳವರಾಗಿ ಹೆಚ್ಚಿರಿ; ಭೂಲೋಕದಲ್ಲೆಲ್ಲಾ ತುಂಬಿಕೊಳ್ಳಿರಿ.
ומוראכם וחתכם יהיה על כל חית הארץ ועל כל עוף השמים בכל אשר תרמש האדמה ובכל דגי הים בידכם נתנו | 2 |
೨ಭೂಮಿಯ ಮೇಲಿರುವ ಎಲ್ಲಾ ಮೃಗಗಳೂ, ಆಕಾಶದ ಎಲ್ಲಾ ಪಕ್ಷಿಗಳೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ, ಸಮುದ್ರದ ಮೀನುಗಳೂ ನಿಮಗೆ ಹೆದರುವವು. ನಾನು ಅವುಗಳನ್ನೆಲ್ಲಾ ನಿಮ್ಮ ಸ್ವಾಧೀನಕ್ಕೆ ಕೊಟ್ಟಿದ್ದೇನೆ.
כל רמש אשר הוא חי לכם יהיה לאכלה כירק עשב נתתי לכם את כל | 3 |
೩ಭೂಮಿಯ ಮೇಲೆ ಚಲಿಸುವ ಎಲ್ಲಾ ಕ್ರಿಮಿಕೀಟಗಳೂ ನಿಮಗೆ ಆಹಾರವಾಗಿರುವವು. ನಾನು ನಿಮ್ಮ ಆಹಾರಕ್ಕೆ ಹಸಿರುಪಲ್ಯಗಳನ್ನು ನಿಮಗೆ ಕೊಟ್ಟಂತೆ ಇವುಗಳನ್ನೂ ಕೊಟ್ಟಿದ್ದೇನೆ.
אך בשר בנפשו דמו לא תאכלו | 4 |
೪ಆದರೆ ಮಾಂಸವನ್ನು ಅದರ ಜೀವಸತ್ವವಾದ ರಕ್ತದೊಂದಿಗೆ ನೀವು ತಿನ್ನಬಾರದು. ಏಕೆಂದರೆ ರಕ್ತದಲ್ಲಿ ಜೀವ ಇದೆ.
ואך את דמכם לנפשתיכם אדרש מיד כל חיה אדרשנו ומיד האדם מיד איש אחיו--אדרש את נפש האדם | 5 |
೫ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ?
שפך דם האדם באדם דמו ישפך כי בצלם אלהים עשה את האדם | 6 |
೬ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.
ואתם פרו ורבו שרצו בארץ ורבו בה | 7 |
೭ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯ ಮೇಲೆ ನಿಮಗೆ ಬಹುಸಂತಾನವಾಗಲಿ” ಎಂದು ಹೇಳಿದನು.
ויאמר אלהים אל נח ואל בניו אתו לאמר | 8 |
೮ಇದಲ್ಲದೆ ದೇವರು ನೋಹನಿಗೂ ಅವನ ಮಕ್ಕಳಿಗೂ,
ואני הנני מקים את בריתי אתכם ואת זרעכם אחריכם | 9 |
೯“ಕೇಳಿರಿ ನಾನು ನಿಮ್ಮೊಂದಿಗೂ, ನಿಮ್ಮ ತರುವಾಯ ನಿಮ್ಮ ಸಂತತಿಯವರೊಂದಿಗೂ, ಒಡಂಬಡಿಕೆ ಮಾಡಿಕೊಳ್ಳುವೆನು.
ואת כל נפש החיה אשר אתכם בעוף בבהמה ובכל חית הארץ אתכם מכל יצאי התבה לכל חית הארץ | 10 |
೧೦ನಿಮ್ಮೊಂದಿಗೆ ನಾವೆಯಿಂದ ಹೊರಟು ಬಂದ ಪಶು ಪಕ್ಷಿ, ಮೃಗ, ಸಕಲ ಭೂಜಂತುಗಳೊಂದಿಗೂ ನನ್ನ ಒಡಂಬಡಿಕೆಯನ್ನು ಸ್ಥಾಪಿಸುತ್ತೇನೆ.
והקמתי את בריתי אתכם ולא יכרת כל בשר עוד ממי המבול ולא יהיה עוד מבול לשחת הארץ | 11 |
೧೧ಆ ಒಡಂಬಡಿಕೆ ಯಾವುದೆಂದರೆ, ಇನ್ನು ಮೇಲೆ ಯಾವ ಪ್ರಾಣಿಗಳೂ ಜಲಪ್ರಳಯದಿಂದ ನಾಶವಾಗುವುದಿಲ್ಲ; ಇನ್ನು ಮುಂದೆ ಭೂಮಿಯನ್ನು ಹಾಳುಮಾಡುವ ಜಲಪ್ರಳಯವು ಬರುವುದೇ ಇಲ್ಲ” ಎಂದು ಹೇಳಿದನು.
ויאמר אלהים זאת אות הברית אשר אני נתן ביני וביניכם ובין כל נפש חיה אשר אתכם--לדרת עולם | 12 |
೧೨ದೇವರು ಪುನಃ ಹೇಳಿದ್ದೇನಂದರೆ, “ನಾನು ನಿಮ್ಮನ್ನೂ ನಿಮ್ಮ ಸಂಗಡ ಇರುವ ಸಮಸ್ತ ಜೀವರಾಶಿಗಳನ್ನೂ ಕುರಿತು ತಲತಲಾಂತರಗಳಲ್ಲಿಯೂ ಮಾಡುವ ಈ ಒಡಂಬಡಿಕೆಗೆ ಮೇಘಗಳಲ್ಲಿ ನಾನು ಇಟ್ಟಿರುವ ಈ ಕಾಮನಬಿಲ್ಲೇ ಗುರುತಾಗಿರುವುದು.
את קשתי נתתי בענן והיתה לאות ברית ביני ובין הארץ | 13 |
೧೩ನನಗೂ ಭೂಜೀವಿಗಳಿಗೂ ಮಾಡಿಕೊಂಡ ಒಡಂಬಡಿಕೆಗೆ ಇದೇ ಗುರುತಾಗಿರಲಿ.
והיה בענני ענן על הארץ ונראתה הקשת בענן | 14 |
೧೪ನಾನು ಭೂಲೋಕದ ಮೇಲೆ ಮೇಘಗಳನ್ನು ಕವಿಸುವಾಗ ಆ ಕಾಮನಬಿಲ್ಲು ಮೇಘಗಳಲ್ಲಿ ಕಂಡುಬರುವುದು.
וזכרתי את בריתי אשר ביני וביניכם ובין כל נפש חיה בכל בשר ולא יהיה עוד המים למבול לשחת כל בשר | 15 |
೧೫ಆಗ ನಾನು ನಿಮ್ಮನ್ನೂ, ಎಲ್ಲಾ ಜೀವರಾಶಿಗಳನ್ನೂ ಕುರಿತು ಮಾಡಿದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಮುಂದೆ ನೀರು ಹೆಚ್ಚಿ ಎಲ್ಲಾ ಭೂಜೀವಿಗಳನ್ನು ಹಾಳುಮಾಡುವ ಪ್ರಳಯವಾಗುವುದಿಲ್ಲ.
והיתה הקשת בענן וראיתיה לזכר ברית עולם בין אלהים ובין כל נפש חיה בכל בשר אשר על הארץ | 16 |
೧೬ಆ ಕಾಮನಬಿಲ್ಲು ಮೇಘಗಳಲ್ಲಿ ಕಾಣಿಸುವಾಗ ನಾನು ಅದನ್ನು ನೋಡಿ ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಆದ ಶಾಶ್ವತವಾದ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು” ಅಂದನು.
ויאמר אלהים אל נח זאת אות הברית אשר הקמתי ביני ובין כל בשר אשר על הארץ | 17 |
೧೭ಮತ್ತು ದೇವರು ನೋಹನಿಗೆ, “ನನಗೂ ಎಲ್ಲಾ ಭೂಜೀವಿಗಳಿಗೂ ಆದ ಒಡಂಬಡಿಕೆಗೆ ಇದೇ ಗುರುತು” ಎಂದು ಹೇಳಿದನು.
ויהיו בני נח היצאים מן התבה--שם וחם ויפת וחם הוא אבי כנען | 18 |
೧೮ನಾವೆಯಿಂದ ಹೊರಟುಬಂದ ನೋಹನ ಮಕ್ಕಳು ಯಾರೆಂದರೆ ಶೇಮ್, ಹಾಮ್, ಯೆಫೆತ್. ಹಾಮನು ಕಾನಾನನ ತಂದೆಯು.
שלשה אלה בני נח ומאלה נפצה כל הארץ | 19 |
೧೯ಈ ಮೂವರು ನೋಹನ ಮಕ್ಕಳು. ಇವರಿಂದಲೇ ಜನರು ಉತ್ಪತ್ತಿಯಾಗಿ ಭೂಮಿಯಲ್ಲೆಲ್ಲಾ ಹರಡಿಕೊಂಡರು.
ויחל נח איש האדמה ויטע כרם | 20 |
೨೦ನೋಹನು ವ್ಯವಸಾಯಗಾರನಾಗಿದ್ದನು; ದ್ರಾಕ್ಷಿ ತೋಟ ಮಾಡುವುದನ್ನು ಮೊದಲು ಪ್ರಾರಂಭಿಸಿದವನು ಇವನೇ.
וישת מן היין וישכר ויתגל בתוך אהלה | 21 |
೨೧ಒಂದು ದಿನ ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಬಿದ್ದಿದ್ದನು.
וירא חם אבי כנען את ערות אביו ויגד לשני אחיו בחוץ | 22 |
೨೨ಕಾನಾನನ ತಂದೆಯಾದ ಹಾಮನು ತಂದೆಯು ಬೆತ್ತಲೆಯಾಗಿರುವುದನ್ನು ಕಂಡು, ಹೊರಗಿದ್ದ ತನ್ನ ಸಹೋದರರಾದ ಶೇಮ್ ಮತ್ತು ಯೆಫೆತರಿಗೆ ತಿಳಿಸಿದನು.
ויקח שם ויפת את השמלה וישימו על שכם שניהם וילכו אחרנית ויכסו את ערות אביהם ופניהם אחרנית וערות אביהם לא ראו | 23 |
೨೩ಆಗ ಶೇಮ್ ಮತ್ತು ಯೆಫೆತರು ಕಂಬಳಿಯನ್ನು ತೆಗೆದುಕೊಂಡು ತಮ್ಮಿಬ್ಬರ ಬೆನ್ನಿನ ಮೇಲೆ ಹಾಕಿಕೊಂಡು ಹಿಂಭಾಗವಾಗಿ ನಡೆದು ತಂದೆಗೆ ಹೊದಿಸಿ ಅವನ ಬೆತ್ತಲೆತನವನ್ನು ಮುಚ್ಚಿದರು. ಅವರು ಹಿಮ್ಮುಖರಾಗಿದ್ದುದ್ದರಿಂದ ತಂದೆಯು ಬೆತ್ತಲೆಯಾಗಿದ್ದದ್ದನ್ನು ನೋಡಲಿಲ್ಲ.
וייקץ נח מיינו וידע את אשר עשה לו בנו הקטן | 24 |
೨೪ನೋಹನು ದ್ರಾಕ್ಷಾರಸದ ಅಮಲಿನಿಂದ ಎಚ್ಚೆತ್ತು ಕಿರಿಯ ಮಗನು ಮಾಡಿದ್ದನ್ನು ತಿಳಿದು,
ויאמר ארור כנען עבד עבדים יהיה לאחיו | 25 |
೨೫“ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಅಣ್ಣತಮ್ಮಂದಿರಿಗೆ ದಾಸಾನುದಾಸನಾಗಲಿ” ಎಂದನು.
ויאמר ברוך יהוה אלהי שם ויהי כנען עבד למו | 26 |
೨೬ಅವನು ಇನ್ನೂ ನುಡಿದದ್ದೇನೆಂದರೆ, “ಶೇಮನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ; ಕಾನಾನನು ಅವರಿಗೆ ದಾಸನಾಗಿರಲಿ.
יפת אלהים ליפת וישכן באהלי שם ויהי כנען עבד למו | 27 |
೨೭ಯೆಫೆತನ ಮೇರೆಯನ್ನು ದೇವರು ವಿಸ್ತರಿಸಲಿ, ಅವನು ಶೇಮನ ಗುಡಾರಗಳಲ್ಲಿ ವಾಸವಾಗಿರಲಿ, ಕಾನಾನನು ಅವರಿಗೆ ದಾಸನಾಗಿರಲಿ” ಎಂದನು.
ויחי נח אחר המבול שלש מאות שנה וחמשים שנה | 28 |
೨೮ಪ್ರಳಯವಾದ ಮೇಲೆ ನೋಹನು ಮುನ್ನೂರೈವತ್ತು ವರ್ಷ ಬದುಕಿದನು.
ויהיו כל ימי נח תשע מאות שנה וחמשים שנה וימת | 29 |
೨೯ನೋಹನು ಒಂಭೈನೂರ ಐವತ್ತು ವರ್ಷ ಬದುಕಿ ಸತ್ತನು.