< הושע 14 >
שובה ישראל עד יהוה אלהיך כי כשלת בעונך | 1 |
೧ಇಸ್ರಾಯೇಲೇ, ನೀನು ಹಿಂದಿರುಗಿ ನಿನ್ನ ದೇವರಾದ ಯೆಹೋವನ ಕಡೆಗೆ ತಿರುಗಿಕೋ; ನಿನ್ನ ಅಪರಾಧದಿಂದಲೇ, ನೀನು ಮುಗ್ಗರಿಸಿ ಬಿದ್ದಿ.
קחו עמכם דברים ושובו אל יהוה אמרו אליו כל תשא עון וקח טוב ונשלמה פרים שפתינו | 2 |
೨ಪಶ್ಚಾತ್ತಾಪದ ಮಾತುಗಳಿಂದ ಯೆಹೋವನ ಬಳಿಗೆ ಹಿಂದಿರುಗಿ ಬಂದು ಆತನಿಗೆ, “ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ, ನಮ್ಮಲ್ಲಿನ ಒಳ್ಳೆಯದನ್ನು ಅಂಗೀಕರಿಸು; ನಮ್ಮ ತುಟಿಗಳ ಫಲಗಳನ್ನು ಅರ್ಪಿಸುವೆವು.
אשור לא יושיענו על סוס לא נרכב ולא נאמר עוד אלהינו למעשה ידינו--אשר בך ירחם יתום | 3 |
೩ಅಶ್ಶೂರವು ನಮ್ಮನ್ನು ರಕ್ಷಿಸುವುದೆಂದು ನಂಬುವುದಿಲ್ಲ, ಐಗುಪ್ತದ ಕುದುರೆಗಳನ್ನು ಹತ್ತುವುದಿಲ್ಲ, ನಮ್ಮ ಕೈಕೆಲಸದ ಬೊಂಬೆಗಳಿಗೆ, ‘ನೀವು ನಮ್ಮ ದೇವರುಗಳು’ ಎಂದು ಇನ್ನು ಹೇಳುವುದಿಲ್ಲ; ನೀನೇ ದಿಕ್ಕಿಲ್ಲದ ಈ ಅನಾಥರನ್ನು ಕರುಣಿಸುವವನು” ಎಂಬುದಾಗಿ ಅರಿಕೆಮಾಡಿಕೊಳ್ಳಿರಿ.
ארפא משובתם--אהבם נדבה כי שב אפי ממנו | 4 |
೪ನಾನು ನನ್ನ ಜನರ ಭ್ರಷ್ಟತ್ವವನ್ನು ಪರಿಹರಿಸಿ ಅವರನ್ನು ಮನಃಪೂರ್ವಕವಾಗಿ ಪ್ರೀತಿಸುವೆನು; ನನ್ನ ಕೋಪವು ಅವರಿಂದ ತೊಲಗಿಹೋಯಿತು.
אהיה כטל לישראל יפרח כשושנה ויך שרשיו כלבנון | 5 |
೫ನಾನು ಇಸ್ರಾಯೇಲಿಗೆ ಇಬ್ಬನಿಯಂತಾಗುವೆನು; ಅದು ತಾವರೆಯಂತೆ ಅರಳುವುದು; ಲೆಬನೋನಿನ ದೇವದಾರು ಮರಗಳ ಹಾಗೆ ಬೇರು ಬಿಟ್ಟುಕೊಳ್ಳುವುದು.
ילכו ינקותיו ויהי כזית הודו וריח לו כלבנון | 6 |
೬ಅದರ ರೆಂಬೆಗಳು ಹರಡುವವು, ಅದರ ಅಂದವು ಒಲೀವ್ ಮರದಂತೆ ಕಂಗೊಳಿಸುವುದು, ಅದರ ಪರಿಮಳವು ಲೆಬನೋನಿನ ಹಾಗೆ ಮನೋಹರವಾಗಿರುವುದು.
ישבו ישבי בצלו יחיו דגן ויפרחו כגפן זכרו כיין לבנון | 7 |
೭ಅದರ ನೆರಳನ್ನು ಆಶ್ರಯಿಸಿರುವವರು ಹಿಂದಿರುಗಿ ಬೆಳೆಯನ್ನು ಬೆಳೆದು ದ್ರಾಕ್ಷಿಯಂತೆ ಫಲಪ್ರದರಾಗಿ ಫಲ ಕೊಡುವರು; ಅದರ ಕೀರ್ತಿಯು ಲೆಬನೋನಿನ ದ್ರಾಕ್ಷಾರಸದ ಹಾಗೆ ಸ್ವಾರಸ್ಯವಾಗಿರುವುದು.
אפרים מה לי עוד לעצבים אני עניתי ואשורנו אני כברוש רענן--ממני פריך נמצא | 8 |
೮ಎಫ್ರಾಯೀಮು, “ವಿಗ್ರಹಗಳ ಗೊಡವೆ ನನಗೆ ಇನ್ನೇಕೆ?” ಎಂದು ಅವುಗಳನ್ನು ತ್ಯಜಿಸುವುದು; ನಾನು ಅದಕ್ಕೆ ಒಲಿದು ಕಟಾಕ್ಷಿಸುವೆನು; ನಾನು ಸೊಂಪಾದ ತುರಾಯಿ ಮರದಂತಿದ್ದೇನೆ; ನನ್ನಿಂದಲೇ ನೀನು ಫಲಿಸುವಿ.
מי חכם ויבן אלה נבון וידעם כי ישרים דרכי יהוה וצדקים ילכו בם ופשעים יכשלו בם | 9 |
೯ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. ಯೆಹೋವನ ಮಾರ್ಗಗಳು ಸತ್ಯವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು.