< הושע 8 >
אל חכך שפר כנשר על בית יהוה--יען עברו בריתי ועל תורתי פשעו | 1 |
೧“ತುತ್ತೂರಿಯನ್ನು ಹಿಡಿದು ಊದು. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ, ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ.
לי יזעקו אלהי ידענוך ישראל | 2 |
೨ಅವರು ನನ್ನನ್ನು, ‘ನಮ್ಮ ದೇವರೇ, ಇಸ್ರಾಯೇಲರಾದ ನಾವು ನಿನ್ನನ್ನು ತಿಳಿದವರಾಗಿದ್ದೇವೆ’ ಎಂದು ಕೂಗಿಕೊಳ್ಳುವರು.
זנח ישראל טוב אויב ירדפו | 3 |
೩ಇಸ್ರಾಯೇಲರು ಮೇಲನ್ನು ತಳ್ಳಿಬಿಟ್ಟಿದ್ದಾರೆ; ಶತ್ರುವು ಅವರನ್ನು ಹಿಂದಟ್ಟುವನು.
הם המליכו ולא ממני השירו ולא ידעתי כספם וזהבם עשו להם עצבים למען יכרת | 4 |
೪ನನ್ನ ಅಪ್ಪಣೆಯಿಲ್ಲದೆ ರಾಜರನ್ನು ನೇಮಿಸಿಕೊಂಡಿದ್ದಾರೆ; ನನಗೆ ತಿಳಿಯದೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ. ತಮ್ಮ ಬೆಳ್ಳಿ ಮತ್ತು ಬಂಗಾರಗಳಿಂದ ಬೊಂಬೆಗಳನ್ನು ನಿರ್ಮಿಸಿಕೊಂಡಿದ್ದಾರೆ; ಅವರು ನಿರ್ಮಿಸಿದ್ದೆಲ್ಲಾ ನಾಶವಾಗತಕ್ಕದ್ದೇ.
זנח עגלך שמרון חרה אפי בם עד מתי לא יוכלו נקין | 5 |
೫ಸಮಾರ್ಯವೇ, ನಾನು ನಿನ್ನ ಬಸವನನ್ನು ತಳ್ಳಿಬಿಟ್ಟಿದ್ದೇನೆ; ನನ್ನ ರೋಷಾಗ್ನಿಯು ನಿನ್ನವರ ಮೇಲೆ ಉರಿಯುತ್ತದೆ; ಅವರು ನಿರ್ಮಲರಾಗುವುದಕ್ಕೆ ಇನ್ನೆಷ್ಟು ಕಾಲ ಹಿಡಿಯುವುದೋ?
כי מישראל והוא--חרש עשהו ולא אלהים הוא כי שבבים יהיה עגל שמרון | 6 |
೬ಆ ಬಸವನೂ ಇಸ್ರಾಯೇಲಿನ ಕೈಕೆಲಸ; ಶಿಲ್ಪಿಯು ಅದನ್ನು ರೂಪಿಸಿದನು; ಅದು ದೇವರಲ್ಲ; ಸಮಾರ್ಯದ ಬಸವನು ಚೂರುಚೂರಾಗುವನು.
כי רוח יזרעו וסופתה יקצרו קמה אין לו צמח בלי יעשה קמח--אולי יעשה זרים יבלעהו | 7 |
೭ಅವರು ಗಾಳಿಯನ್ನು ಬಿತ್ತುತ್ತಾರೆ, ಬಿರುಗಾಳಿಯನ್ನು ಕೊಯ್ದುಕೊಳ್ಳುವರು. ಇಸ್ರಾಯೇಲರ ಪೈರು ತೆನೆಗೆ ಬಾರದು; ಬೀಜ ಮೊಳೆತರೂ ಹಿಟ್ಟು ಸಿಕ್ಕದು; ಒಂದು ವೇಳೆ ಸಿಕ್ಕಿದರೂ ಅನ್ಯರು ಅದನ್ನು ನುಂಗಿಬಿಡುವರು.
נבלע ישראל עתה היו בגוים ככלי אין חפץ בו | 8 |
೮ಇಸ್ರಾಯೇಲೇ ನುಂಗಲ್ಪಟ್ಟಿದೆ; ಅದು ಜನಾಂಗಗಳ ಮಧ್ಯದಲ್ಲಿ ಯಾರಿಗೂ ಬೇಡವಾದ ಪಾತ್ರೆಯಂತಿದೆ.
כי המה עלו אשור פרא בודד לו אפרים התנו אהבים | 9 |
೯ಅದು ಒಂಟಿಯಾದ ಕಾಡುಕತ್ತೆಯಂತೆ ಮನಸ್ಸು ಬಂದ ಹಾಗೆ ನಡೆದು ಅಶ್ಶೂರಕ್ಕೆ ಹೋಗಿದೆ. ಎಫ್ರಾಯೀಮು ಹಣಕೊಟ್ಟು ಜಾರರನ್ನು (ವ್ಯಭಿಚಾರಿಗಳನ್ನು) ಸಂಪಾದಿಸಿಕೊಂಡಿದೆ.
גם כי יתנו בגוים עתה אקבצם ויחלו מעט ממשא מלך שרים | 10 |
೧೦ಅದು ಜನಾಂಗಗಳೊಳಗೆ ಜಾರರನ್ನು ಸಂಪಾದಿಸಿದರೂ, ಅದನ್ನು ನಾನು ಈಗ ಸೆರೆಗೆ ಒಳಪಡಿಸುವೆನು. ರಾಜಾಧಿರಾಜನು ಹೊರಿಸುವ ಹೊರೆಯಿಂದ ಅದು ಕುಗ್ಗಿಹೋಗಲಿಕ್ಕೆ ಆರಂಭವಾಗುವುದು.
כי הרבה אפרים מזבחות לחטא היו לו מזבחות לחטא | 11 |
೧೧ಎಫ್ರಾಯೀಮು ಯಜ್ಞವೇದಿಗಳನ್ನು ಹೆಚ್ಚೆಚ್ಚಾಗಿ ಕಟ್ಟಿ ಪಾಪಮಾಡಿದೆ; ಕಟ್ಟಿದ ಯಜ್ಞವೇದಿಗಳೇ ಅದಕ್ಕೆ ಪಾಪವಾಗಿ ಪರಿಣಮಿಸಿವೆ.
אכתוב (אכתב) לו--רבו (רבי) תורתי כמו זר נחשבו | 12 |
೧೨ನಾನು ನನ್ನ ಧರ್ಮವನ್ನು ಲಕ್ಷಾಂತರ ವಿಧಿಗಳ ರೂಪವಾಗಿ ಅದಕ್ಕೆ ಬರೆಯಿಸಿಕೊಟ್ಟರೂ, ಅವುಗಳು ತನಗೆ ಸಂಬಂಧಪಟ್ಟವುಗಳಲ್ಲ ಎಂದು ಅದು ಭಾವಿಸುತ್ತದೆ.
זבחי הבהבי יזבחו בשר ויאכלו--יהוה לא רצם עתה יזכר עונם ויפקד חטאותם--המה מצרים ישובו | 13 |
೧೩ಎಫ್ರಾಯೀಮ್ಯರು ಯಜ್ಞಪಶುಗಳನ್ನು ನನಗೆ ನೈವೇದ್ಯವಾಗಿ ವಧಿಸಿ ಮಾಂಸಭೋಜನ ಮಾಡುತ್ತಾರೆ; ಯೆಹೋವನು ಆ ಯಜ್ಞಗಳನ್ನು ಮೆಚ್ಚುವುದಿಲ್ಲ; ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಕ್ಕೆ ದಂಡನೆಮಾಡುವನು; ಅವರು ಐಗುಪ್ತಕ್ಕೆ ಹಿಂದಿರುಗಬೇಕಾಗುವುದು.
וישכח ישראל את עשהו ויבן היכלות ויהודה הרבה ערים בצרות ושלחתי אש בעריו ואכלה ארמנתיה | 14 |
೧೪ಇಸ್ರಾಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ; ಯೆಹೂದವು ಕೋಟೆಕೊತ್ತಲಗಳ ಪಟ್ಟಣಗಳನ್ನು ಮಾಡಿಕೊಂಡಿದೆ; ಆಹಾ, ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅವರ ಸೌಧಗಳನ್ನು ನುಂಗಿಬಿಡುವುದು.”