< ישעה 13 >
משא בבל--אשר חזה ישעיהו בן אמוץ | 1 |
ಆಮೋಚನ ಮಗ ಯೆಶಾಯನಿಗೆ ಬಾಬಿಲೋನಿನ ವಿಷಯವಾಗಿ ಬಂದ ಪ್ರವಾದನೆ:
על הר נשפה שאו נס הרימו קול להם הניפו יד ויבאו פתחי נדיבים | 2 |
ಶತ್ರುಗಳು ಬಂದು ಶ್ರೇಷ್ಠರ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ.
אני צויתי למקדשי גם קראתי גבורי לאפי עליזי גאותי | 3 |
ನಾನು ನನ್ನ ಪರಿಶುದ್ಧರಿಗೆ ಆಜ್ಞಾಪಿಸಿ, ನನ್ನ ಜಯದಲ್ಲಿ ಉಲ್ಲಾಸಿಸುವವರನ್ನೂ, ನನ್ನ ಶೂರರನ್ನೂ ಸಹ ನನ್ನ ಕೋಪವನ್ನು ತೆಗೆದುಕೊಂಡು ಹೋಗಲು ಕರೆದಿದ್ದೇನೆ.
קול המון בהרים דמות עם רב קול שאון ממלכות גוים נאספים--יהוה צבאות מפקד צבא מלחמה | 4 |
ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ. ಒಟ್ಟಿಗೆ ಕೂಡಿಕೊಂಡ ರಾಜ್ಯಗಳ ಜನಾಂಗಗಳ ಆರ್ಭಟ, ಸೇನಾಧೀಶ್ವರ ಯೆಹೋವ ದೇವರು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾರೆ.
באים מארץ מרחק מקצה השמים יהוה וכלי זעמו לחבל כל הארץ | 5 |
ಯೆಹೋವ ದೇವರು ಮತ್ತು ಅವರ ರೋಷಕ್ಕೆ ಆಯುಧಗಳಾದವರು ದೂರದೇಶದಿಂದ ಎಂದರೆ, ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾರೆ.
הילילו כי קרוב יום יהוה כשד משדי יבוא | 6 |
ನೀವು ಗೋಳಾಡಿರಿ. ಏಕೆಂದರೆ, ಯೆಹೋವ ದೇವರ ದಿನವು ಸಮೀಪವಾಯಿತು. ಅದು ಸರ್ವಶಕ್ತರಿಂದ ನಾಶರೂಪವಾಗಿ ಬರುವುದು.
על כן כל ידים תרפינה וכל לבב אנוש ימס | 7 |
ಆದಕಾರಣ ಎಲ್ಲಾ ಕೈಗಳು ಜೋಲು ಬೀಳುವುವು ಮತ್ತು ಪ್ರತಿಯೊಬ್ಬನ ಹೃದಯವು ಕರಗುವುದು.
ונבהלו--צירים וחבלים יאחזון כיולדה יחילון איש אל רעהו יתמהו פני להבים פניהם | 8 |
ಅವರು ಭಯಪಡುವರು. ನೋವು ಮತ್ತು ಬೇನೆಗಳು ಅವರನ್ನು ಆವರಿಸಿಕೊಳ್ಳುವುವು. ಪ್ರಸವವೇದನೆಯಲ್ಲಿರುವ ಸ್ತ್ರೀಯರಂತೆ ಸಂಕಟಪಡುವರು. ಅವರು ಒಬ್ಬರಿಗೊಬ್ಬರು ಭ್ರಮೆ ಪಡುವರು. ಅವರ ಮುಖಗಳು ಜ್ವಾಲೆಯಂತಿರುವುವು.
הנה יום יהוה בא אכזרי ועברה וחרון אף--לשום הארץ לשמה וחטאיה ישמיד ממנה | 9 |
ಇಗೋ, ಯೆಹೋವ ದೇವರ ದಿನವು ಬರುತ್ತದೆ. ಅದು ಭೂಮಿಯನ್ನು ಹಾಳು ಮಾಡುವುದಕ್ಕೂ, ಅಲ್ಲಿಂದ ಪಾಪಿಗಳನ್ನು ನಿರ್ಮೂಲ ಮಾಡುವುದಕ್ಕೂ, ಕಡುಕೋಪದಿಂದಲೂ, ತೀಕ್ಷ್ಣರೋಷದಿಂದಲೂ ಕ್ರೂರವಾಗಿರುವುದು.
כי כוכבי השמים וכסיליהם לא יהלו אורם חשך השמש בצאתו וירח לא יגיה אורו | 10 |
ಏಕೆಂದರೆ, ಆಕಾಶದ ನಕ್ಷತ್ರಗಳು ಮತ್ತು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ. ಸೂರ್ಯನು ಮೂಡುತ್ತಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವುದಿಲ್ಲ.
ופקדתי על תבל רעה ועל רשעים עונם והשבתי גאון זדים וגאות עריצים אשפיל | 11 |
ಅವರ ಕೆಟ್ಟ ಕಾರ್ಯಗಳಿಗೋಸ್ಕರವೂ, ದುಷ್ಟರ ಅಪರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸುವೆನು, ಗರ್ವಿಷ್ಠರ ಅಹಂಕಾರವನ್ನು ನಿಲ್ಲಿಸಿಬಿಡುವೆನು. ಭಯಂಕರವಾದವರ ಹೆಮ್ಮೆಯನ್ನು ತಗ್ಗಿಸುವೆನು.
אוקיר אנוש מפז ואדם מכתם אופיר | 12 |
ಮನುಷ್ಯರನ್ನು ಚೊಕ್ಕ ಬಂಗಾರಕ್ಕಿಂತಲೂ, ಓಫೀರ್ ಬಂಗಾರಕ್ಕಿಂತಲೂ ಜನರು ವಿರಳವಾಗಿರುವಂತೆ ಮಾಡುವೆನು.
על כן שמים ארגיז ותרעש הארץ ממקומה--בעברת יהוה צבאות וביום חרון אפו | 13 |
ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರ ಕೋಪವೂ, ಅವರ ತೀಕ್ಷ್ಣರೋಷವೂ ಪ್ರಕಟವಾಗುವ ಆ ದಿನದಂದು, ಆಕಾಶಮಂಡಲ ನಡುಗುವುದು. ಭೂಮಂಡಲ ಅದರ ಸ್ಥಳದಿಂದ ಕದಲುವುದು.
והיה כצבי מדח וכצאן ואין מקבץ איש אל עמו יפנו ואיש אל ארצו ינוסו | 14 |
ಅದು ಅಟ್ಟಿದ ಜಿಂಕೆಯಂತೆಯೂ, ಕುರುಬರಿಲ್ಲದ ಕುರಿಗಳಂತೆಯೂ ಇರುವುದು. ಅವರಲ್ಲಿ ಪ್ರತಿಯೊಬ್ಬನೂ ತನ್ನ ಜನರ ಕಡೆಗೆ ತಿರುಗಿಕೊಳ್ಳುವನು; ಪ್ರತಿಯೊಬ್ಬನು ತನ್ನ ಸ್ವದೇಶಕ್ಕೆ ಓಡಿಹೋಗುವನು.
כל הנמצא ידקר וכל הנספה יפול בחרב | 15 |
ಸಿಕ್ಕಿದ ಪ್ರತಿಯೊಬ್ಬನೂ ಇರಿತಕ್ಕೆ ಗುರಿಯಾಗುವನು. ಅಟ್ಟಿಹಿಡಿಯಲಾದ ಪ್ರತಿಯೊಬ್ಬನೂ ಖಡ್ಗಕ್ಕೆ ತುತ್ತಾಗುವನು.
ועלליהם ירטשו לעיניהם ישסו בתיהם ונשיהם תשגלנה (תשכבנה) | 16 |
ಅವರ ಮಕ್ಕಳೂ ಸಹ ಅವರ ಕಣ್ಣೆದುರಿಗೆ ಹತರಾಗುವರು. ಅವರ ಮನೆಗಳು ಸೂರೆಮಾಡಲಾಗುವುದು. ಅವರ ಹೆಂಡತಿಯರು ಅತ್ಯಾಚಾರಕ್ಕೆ ಈಡಾಗುವರು.
הנני מעיר עליהם את מדי אשר כסף לא יחשבו וזהב לא יחפצו בו | 17 |
ಇಗೋ, ಬೆಳ್ಳಿಯನ್ನು ಲಕ್ಷಿಸದೆ, ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧವಾಗಿ ನಾನು ಎಬ್ಬಿಸುವೆನು.
וקשתות נערים תרטשנה ופרי בטן לא ירחמו על בנים לא תחוס עינם | 18 |
ಅವರ ಬಿಲ್ಲುಗಳು ಸಹ ಯುವಕರನ್ನು ಸಂಹರಿಸುವುವು. ಇವರು ಹಸುಳೆಗಳನ್ನು ಕರುಣಿಸರು. ಇವರು ಮಕ್ಕಳನ್ನು ಕನಿಕರಿಸುವುದಿಲ್ಲ.
והיתה בבל צבי ממלכות תפארת גאון כשדים כמהפכת אלהים את סדם ואת עמרה | 19 |
ರಾಜ್ಯಗಳ ಘನತೆಯೂ, ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬಿಲೋನನ್ನು ದೇವರು ಸೊದೋಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಕೆಡವಿಬಿಡುವನು.
לא תשב לנצח ולא תשכן עד דור ודור ולא יהל שם ערבי ורעים לא ירבצו שם | 20 |
ಅದು ಎಂದಿಗೂ ನಿವಾಸ ಸ್ಥಳವಾಗದು. ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಯಾವ ಅರಬಿಯನೂ ಗುಡಾರಹಾಕನು. ಕುರುಬರು ಅಲ್ಲಿ ಮಂದೆಗಳನ್ನು ತಂಗಿಸರು.
ורבצו שם ציים ומלאו בתיהם אחים ושכנו שם בנות יענה ושעירים ירקדו שם | 21 |
ಆದರೆ ಕಾಡುಮೃಗಗಳು ಅಲ್ಲಿ ಮಲಗುವುವು. ಅವರ ಮನೆಗಳು ನರಿಗಳಿಂದ ತುಂಬಿರುವುವು, ಅಲ್ಲಿ ಗೂಬೆಗಳು ವಾಸಿಸುವುವು ಮತ್ತು ಕಾಡುಮೇಕೆಗಳು ಅಲ್ಲಿ ಕುಣಿದಾಡುವುವು.
וענה איים באלמנותיו ותנים בהיכלי ענג וקרוב לבוא עתה וימיה לא ימשכו | 22 |
ಅವರ ಕೋಣೆಗಳಲ್ಲಿ ತೋಳಗಳು ಕೂಗುವುವು, ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ನರಿಗಳು ವಾಸಿಸುವುವು. ಬಾಬಿಲೋನಿಗೆ ಕಾಲವು ಸಮೀಪಿಸಿತು. ಇನ್ನು ಅದರ ದಿನಗಳು ಮುಂದುವರಿಯುವುದಿಲ್ಲ.