< ישעה 46 >
כרע בל קרס נבו--היו עצביהם לחיה ולבהמה נשאתיכם עמוסות משא לעיפה | 1 |
೧ಬೇಲ್ ದೇವತೆಯು ಬಾಗಿದೆ, ನೆಬೋ ದೇವತೆಯು ಕುಗ್ಗಿದೆ, ಅವುಗಳ ವಿಗ್ರಹಗಳು ಪಶುಗಳ ಮೇಲೆ ಹೊರಿಸಲ್ಪಟ್ಟಿವೆ, ನೀವು ಮೆರವಣಿಗೆಯಾಗಿ ಹೊರುತ್ತಿದ್ದವುಗಳು ಪಶುಗಳಿಗೆ ಭಾರವಾದ ಹೊರೆಯಾಗಿ ಅವುಗಳು ಬಳಲಿದವು.
קרסו כרעו יחדו לא יכלו מלט משא ונפשם בשבי הלכה | 2 |
೨ಒಟ್ಟಿಗೆ ಕುಗ್ಗಿ, ಬಗ್ಗಿವೆ, ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ, ಬಂಧನಕ್ಕೆ ಸ್ವಇಚ್ಛೆಯಿಂದ ಒಳಗಾದವು.
שמעו אלי בית יעקב וכל שארית בית ישראל--העמסים מני בטן הנשאים מני רחם | 3 |
೩ಯಾಕೋಬವಂಶವೇ, ಇಸ್ರಾಯೇಲ್ ಮನೆತೆನದವರಲ್ಲಿ ಉಳಿದ ಸಂತಾನವೇ, ನಿಮ್ಮನ್ನು ಗರ್ಭದಿಂದ ಹೊತ್ತು, ಹುಟ್ಟಿದಂದಿನಿಂದ ಪಾಲಿಸುತ್ತಿದ್ದ ನನ್ನ ಮಾತಿಗೆ ಕಿವಿಗೊಡಿರಿ.
ועד זקנה אני הוא ועד שיבה אני אסבל אני עשיתי ואני אשא ואני אסבל ואמלט | 4 |
೪ನಿಮ್ಮ ಮುಪ್ಪಿನ ತನಕ ನಾನೇ ಆಧಾರ, ನರೆ ಬಂದಾಗಲೂ ನಿಮ್ಮನ್ನು ಹೊತ್ತು ಸಹಿಸುವೆನು. ನಾನೇ ಉಂಟುಮಾಡಿದೆನು, ನಾನೇ ಹೊರುವೆನು. ಹೌದು, ನಿಮ್ಮನ್ನು ಹೊತ್ತು ಸಹಿಸಿ ನಿರ್ವಹಿಸುವೆನು.
למי תדמיוני ותשוו ותמשלוני ונדמה | 5 |
೫ನನ್ನನ್ನು ಯಾರಿಗೆ ಸಮಾನ ಎಂದು ತಿಳಿದಿದ್ದೀರಿ? ನಾನು ಯಾರಿಗೆ ಸಮಾನನೆಂದು, ನನ್ನನ್ನು ಯಾರೊಡನೆ ಹೊಲಿಸುತ್ತೀರಿ?
הזלים זהב מכיס וכסף בקנה ישקלו ישכרו צורף ויעשהו אל יסגדו אף ישתחוו | 6 |
೬ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೊಟ್ಟು ಕೂಲಿಯನ್ನು ಗೊತ್ತುಮಾಡಿದಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆಮಾಡುವರು.
ישאהו על כתף יסבלהו ויניחהו תחתיו ויעמד--ממקומו לא ימיש אף יצעק אליו ולא יענה מצרתו לא יושיענו | 7 |
೭ಅವರು ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ, ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅಲ್ಲಿಂದ ಜರುಗದು. ಒಬ್ಬನು ಕೂಗಿಕೊಂಡರೂ ಅದು ಅವನಿಗೆ ಉತ್ತರಕೊಡಲಾರದು. ಇಲ್ಲವೆ ಅವನನ್ನು ಕಷ್ಟದಿಂದ ಬಿಡಿಸಲಾರದು.
זכרו זאת והתאששו השיבו פושעים על לב | 8 |
೮“ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು ಗಮನಿಸಿ ಮನುಷ್ಯರಿಗೆ ತಕ್ಕಂತೆ ನಡೆಯಿರಿ!
זכרו ראשנות מעולם כי אנכי אל ואין עוד אלהים ואפס כמוני | 9 |
೯ಪುರಾತನವಾದ ಹಳೆಯ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಇಲ್ಲ; ನಾನೇ ದೇವರು, ನನಗೆ ಸರಿಸಮಾನನು ಇಲ್ಲ.
מגיד מראשית אחרית ומקדם אשר לא נעשו אמר עצתי תקום וכל חפצי אעשה | 10 |
೧೦ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ.
קרא ממזרח עיט מארץ מרחק איש עצתו (עצתי) אף דברתי אף אביאנה--יצרתי אף אעשנה | 11 |
೧೧ಮೂಡಲಿಂದ ಒಂದು ಪಕ್ಷಿಯನ್ನು ಬರಮಾಡು, ದೂರದೇಶದಿಂದ ನನ್ನ ಸಂಕಲ್ಪವನ್ನು ನೆರವೇರಿಸುವ ಮನುಷ್ಯನು ಬರಲಿ ಎಂದು ಕರೆದಿದ್ದೇನೆ. ಎಂದು ನಾನೇ ನುಡಿದಿದ್ದೇನೆ, ನಾನು ಅದನ್ನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಸಾಧಿಸುವೆನು.
שמעו אלי אבירי לב--הרחוקים מצדקה | 12 |
೧೨ಕಠಿಣ ಹೃದಯದವರೇ, ನೀತಿಗೆ ದೂರವಾದವರೇ, ನನ್ನ ಮಾತಿಗೆ ಕಿವಿಗೊಡಿರಿ.
קרבתי צדקתי לא תרחק ותשועתי לא תאחר ונתתי בציון תשועה לישראל תפארתי | 13 |
೧೩ನನ್ನ ನೀತಿಯನ್ನು ಹತ್ತಿರಕ್ಕೆ ಬರ ಮಾಡುವೆನು. ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು, ಚೀಯೋನಿನಲ್ಲಿ ರಕ್ಷಣಾ ಕಾರ್ಯವನ್ನು ನಡೆಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.”