< ישעה 53 >
מי האמין לשמעתנו וזרוע יהוה על מי נגלתה | 1 |
೧ನಾವು ಕೇಳಿದ ಸಂಗತಿಯನ್ನು ನಮ್ಮಲ್ಲಿ ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು?
ויעל כיונק לפניו וכשרש מארץ ציה--לא תאר לו ולא הדר ונראהו ולא מראה ונחמדהו | 2 |
೨ಒಣನೆಲದೊಳಗೆ ಬೇರಿನಿಂದ ಹೊರಡುವ ಸಸಿಯಂತೆಯೂ, ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ.
נבזה וחדל אישים איש מכאבות וידוע חלי וכמסתר פנים ממנו נבזה ולא חשבנהו | 3 |
೩ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು.
אכן חלינו הוא נשא ומכאבינו סבלם ואנחנו חשבנהו נגוע מכה אלהים ומענה | 4 |
೪ನಿಜವಾಗಿಯೂ ನಮ್ಮ ವ್ಯಾಧಿಗಳನ್ನು ಸಂಕಷ್ಟವನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ ಹೌದು, ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು.
והוא מחלל מפשענו מדכא מעונתינו מוסר שלומנו עליו ובחברתו נרפא לנו | 5 |
೫ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿಮಿತ್ತ ಅವನು ಜಜ್ಜಲ್ಪಟ್ಟನು; ನಮಗೆ ಸುಕ್ಷೇಮವನ್ನು ಉಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು.
כלנו כצאן תעינו איש לדרכו פנינו ויהוה הפגיע בו את עון כלנו | 6 |
೬ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.
נגש והוא נענה ולא יפתח פיו כשה לטבח יובל וכרחל לפני גזזיה נאלמה ולא יפתח פיו | 7 |
೭ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ; ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು, ಬಾಯಿ ತೆರೆಯಲೇ ಇಲ್ಲ.
מעצר וממשפט לקח ואת דורו מי ישוחח כי נגזר מארץ חיים מפשע עמי נגע למו | 8 |
೮ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ತೆಗೆದುಹಾಕಲ್ಪಟ್ಟಿದ್ದಾನೆ. ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಈ ಪೆಟ್ಟು ಅವನ ಮೇಲೆ ಬಿತ್ತಲ್ಲಾ ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು?
ויתן את רשעים קברו ואת עשיר במתיו על לא חמס עשה ולא מרמה בפיו | 9 |
೯ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ, ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ, ಅವನು ಸತ್ತಾಗ ದುಷ್ಟರ ಮಧ್ಯೆ ಪುಷ್ಟರ ನಡುವೆ ಅವನನ್ನು ಹೂಣಿಟ್ಟರು.
ויהוה חפץ דכאו החלי--אם תשים אשם נפשו יראה זרע יאריך ימים וחפץ יהוה בידו יצלח | 10 |
೧೦ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು;
מעמל נפשו יראה ישבע--בדעתו יצדיק צדיק עבדי לרבים ועונתם הוא יסבל | 11 |
೧೧ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.
לכן אחלק לו ברבים ואת עצומים יחלק שלל תחת אשר הערה למות נפשו ואת פשעים נמנה והוא חטא רבים נשא ולפשעים יפגיע | 12 |
೧೨ಇವನು ಇಂಥವನಾಗಿರುವುದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು, ಮರಣಹೊಂದಿ, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು, ಬಹು ಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆ ಮಾಡಿದನು.