< ישעה 57 >
הצדיק אבד ואין איש שם על לב ואנשי חסד נאספים באין מבין כי מפני הרעה נאסף הצדיק | 1 |
೧ಸಜ್ಜನರು ನಾಶವಾಗುತ್ತಾರೆ, ಯಾರೂ ಮನಸ್ಸಿಗೆ ತಾರರು; ಸದ್ಭಕ್ತರು ಗತಿಸುತ್ತಾರೆ, ಆಹಾ, ಶಿಷ್ಟರು ಕೇಡಿನಿಂದ ಪಾರಾಗಿದ್ದಾರೆ ಎಂದು ಯಾರೂ ಯೋಚಿಸರು.
יבוא שלום ינוחו על משכבותם הלך נכחו | 2 |
೨ಇವರು ಸಮಾಧಾನದಲ್ಲಿ ಸೇರಿದ್ದಾರಲ್ಲಾ; ನೀತಿಯುಳ್ಳವನಾಗಿ ನಡೆಯುವ ಪ್ರತಿಯೊಬ್ಬನು ತನ್ನ ತನ್ನ ದೀರ್ಘನಿದ್ರಾಸ್ಥಾನದಲ್ಲಿ ವಿಶ್ರಮಿಸಿಕೊಳ್ಳುತ್ತಿದ್ದಾನೆ.
ואתם קרבו הנה בני עננה זרע מנאף ותזנה | 3 |
೩ಮಾಟಗಾತಿಯ ಮಕ್ಕಳೇ, ವ್ಯಭಿಚಾರ ಮತ್ತು ವ್ಯಭಿಚಾರಿಯ ಸಂತಾನದವರೇ, ನೀವು ಇಲ್ಲಿಗೆ ಬನ್ನಿರಿ!
על מי תתענגו--על מי תרחיבו פה תאריכו לשון הלוא אתם ילדי פשע זרע שקר | 4 |
೪ಯಾರನ್ನು ಗೇಲಿಮಾಡಿ ವಿನೋದಪಡುತ್ತೀರಿ? ಯಾರನ್ನು ನೋಡಿ ಬಾಯಿದೆರೆದು ನಾಲಿಗೆಯನ್ನು ಚಾಚುತ್ತೀರಿ?
הנחמים באלים תחת כל עץ רענן שחטי הילדים בנחלים תחת סעפי הסלעים | 5 |
೫ಏಲಾ ಮರಗಳ ತೋಪುಗಳಲ್ಲಿಯೂ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ನೆರಳಿನಲ್ಲಿಯೂ ಮದವೇರಿಸಿಕೊಂಡು, ಕಣಿವೆಗಳಲ್ಲಿಯೂ, ಬೆಟ್ಟದ ಗವಿಗಳಲ್ಲಿಯೂ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಸಂತಾನವೂ, ಸುಳ್ಳಿನ ಸಂತತಿಯೂ ಆಗಿದ್ದೀರಿ.
בחלקי נחל חלקך הם הם גורלך גם להם שפכת נסך העלית מנחה--העל אלה אנחם | 6 |
೬ಕೆಟ್ಟ ಸಂತಾನವೇ, ಹೊಳೆಯ ನುಣುಪಾದ ಕಲ್ಲುಗಳೇ ನಿನಗೆ ಗತಿ, ಅವುಗಳೇ ನಿನ್ನ ಪಾಲು; ಅವುಗಳಿಗೆ ನೀನು ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದು, ಧಾನ್ಯದ್ರವ್ಯವನ್ನು ಅರ್ಪಿಸಿದ್ದಿ. ನಾನು ಇದನ್ನೆಲ್ಲಾ ನೋಡಿ ಕೋಪವನ್ನು ಅಡಗಿಸಿಕೊಳ್ಳಲು ಆಗುವುದೇ?
על הר גבה ונשא שמת משכבך גם שם עלית לזבח זבח | 7 |
೭ಮಹೋನ್ನತ ಪರ್ವತದಲ್ಲಿ ನೀನು ಮಂಚವನ್ನು ಹಾಕಿಕೊಂಡಿದ್ದಿ, ಯಜ್ಞಮಾಡಲು ಆ ಬೆಟ್ಟವನ್ನೇರಿದ್ದಿ.
ואחר הדלת והמזוזה שמת זכרונך כי מאתי גלית ותעלי הרחבת משכבך ותכרת לך מהם--אהבת משכבם יד חזית | 8 |
೮ಬಾಗಿಲಿನ ಮತ್ತು ನಿಲುವಿನ ಹಿಂಭಾಗದಲ್ಲಿ ನೀನು ವಿಗ್ರಹವನ್ನು ಇಟ್ಟುಕೊಂಡಿದ್ದಿ; ನನ್ನನ್ನು ಬಿಟ್ಟುಬಿಟ್ಟು, ನಿನ್ನ ಮಂಚದ ಗವಸಣಿಗೆಯನ್ನು ತೆಗೆದು, ಅದನ್ನು ಹತ್ತಿ ಅದರಲ್ಲಿ ಅನ್ಯರಿಗೆ ಸ್ಥಳಕೊಟ್ಟು ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದಿ. ಅವರ ಸಂಗಮವನ್ನು ಆಶಿಸಿ, ನಿನ್ನನ್ನು ತೋರ್ಪಡಿಸಿಕೊಂಡಿದ್ದಿ.
ותשרי למלך בשמן ותרבי רקחיך ותשלחי צריך עד מרחק ותשפילי עד שאול (Sheol ) | 9 |
೯ಬಹು ಸುಗಂಧದ್ರವ್ಯಗಳನ್ನು ಕೂಡಿಸಿ, ತೈಲವನ್ನೂ ತೆಗೆದುಕೊಂಡು, ಪರರಾಜನ ಬಳಿಗೆ ಪ್ರಯಾಣಮಾಡಿದ್ದಿ; ನಿನ್ನ ರಾಯಭಾರಿಗಳನ್ನು ದೂರ ದೂರ ಕಳುಹಿಸಿದ್ದಿ; ನಿನ್ನನ್ನು ಪಾತಾಳದವರೆಗೂ ತಗ್ಗಿಸಿಕೊಂಡಿದ್ದಿ. (Sheol )
ברב דרכך יגעת לא אמרת נואש חית ידך מצאת על כן לא חלית | 10 |
೧೦ನೀನು ನಡೆದು ನಡೆದು ಆಯಾಸಗೊಂಡರೂ ದಿಕ್ಕಿಲ್ಲವಲ್ಲಾ ಅಂದುಕೊಳ್ಳಲಿಲ್ಲ; ಹೊಸ ಬಲವನ್ನು ತಂದುಕೊಂಡಿ; ಆದುದರಿಂದ ನೀನು ಸೋತುಹೋಗಲಿಲ್ಲ.
ואת מי דאגת ותיראי כי תכזבי ואותי לא זכרת לא שמת על לבך הלא אני מחשה ומעלם ואותי לא תיראי | 11 |
೧೧ನೀನು ಯಾರಿಗೆ ಹೆದರಿ ನನ್ನನ್ನು ಮರೆತು ನನಗೆ ಮೋಸಮಾಡಿದಿ? ಈ ದ್ರೋಹಕ್ಕೂ ಹಿಂದೆಗೆಯಲಿಲ್ಲವಲ್ಲಾ! ನೀನು ನನಗೆ ಅಂಜದೆ ಇರುವುದಕ್ಕೆ ನಾನು ಬಹುಕಾಲದಿಂದ ಸುಮ್ಮನೆ ಇದ್ದದ್ದೇ ಕಾರಣವಲ್ಲವೇ?
אני אגיד צדקתך ואת מעשיך ולא יועילוך | 12 |
೧೨ನಾನು ನಿನ್ನ ಧರ್ಮವನ್ನು ಬಯಲಿಗೆ ತರುವೆನು, ನಿನ್ನ ಕಾರ್ಯಗಳು ನಿನಗೆ ನಿಷ್ಪ್ರಯೋಜನ.
בזעקך יצילך קבוציך ואת כלם ישא רוח יקח הבל והחוסה בי ינחל ארץ ויירש הר קדשי | 13 |
೧೩ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ವಿಗ್ರಹಗಳು ನಿನ್ನನ್ನುದ್ಧರಿಸಲಿ. ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವುದು, ಉಸಿರು ಅದನ್ನು ಒಯ್ಯುವುದು. ನನ್ನನ್ನು ಆಶ್ರಯಿಸುವವನೋ ದೇಶವನ್ನು ಅನುಭವಿಸಿ ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು.
ואמר סלו סלו פנו דרך הרימו מכשול מדרך עמי | 14 |
೧೪“ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ; ನನ್ನ ಜನರ ದಾರಿಯೊಳಗಿಂದ ಅಡಚಣೆಗಳನ್ನು ನಿರ್ಮೂಲಮಾಡಿರಿ” ಎಂದು ಒಂದು ವಾಣಿಯು ನುಡಿಯುತ್ತದೆ.
כי כה אמר רם ונשא שכן עד וקדוש שמו--מרום וקדוש אשכון ואת דכא ושפל רוח להחיות רוח שפלים ולהחיות לב נדכאים | 15 |
೧೫ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.
כי לא לעולם אריב ולא לנצח אקצוף כי רוח מלפני יעטוף ונשמות אני עשיתי | 16 |
೧೬ನಾನು ಸರ್ವದಾ ವ್ಯಾಜ್ಯವಾಡುವುದಿಲ್ಲ, ಕಡೆಯ ತನಕ ಕೋಪಿಸಿಕೊಳ್ಳೆನು, ಹೀಗೆ ಮಾಡಿದರೆ ಮನುಷ್ಯನ ಆತ್ಮವೂ, ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು.
בעון בצעו קצפתי ואכהו הסתר ואקצף וילך שובב בדרך לבו | 17 |
೧೭ನನ್ನ ಜನರು ಲಾಭವನ್ನು ದೋಚಿಕೊಂಡ ಅನ್ಯಾಯವನ್ನು ನಾನು ನೋಡಿ ಕೋಪಗೊಂಡು ಅವರನ್ನು ಹೊಡೆದೆನು, ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತನಾಗಿದ್ದೆನು; ಅವರೋ ತಿರುಗಿಕೊಂಡು ಮನಸ್ಸಿಗೆ ತೋರಿದ ಹಾಗೆಯೇ ನಡೆಯುತ್ತಾ ಬಂದಿದ್ದಾರೆ.
דרכיו ראיתי וארפאהו ואנחהו ואשלם נחמים לו ולאבליו | 18 |
೧೮ಅವರ ಮಾರ್ಗಗಳನ್ನು ನೋಡಿದ್ದೇನೆ, ಅವರನ್ನು ಸ್ವಸ್ಥಮಾಡಿ ನಡೆಸುತ್ತಾ ಅವರಿಗೆ, ಅವರಲ್ಲಿನ ದುಃಖಿತರಿಗೆ, ಆದರಣೆಯನ್ನು ಪ್ರತಿಫಲವಾಗಿ ಕೊಡುವೆನು.”
בורא נוב (ניב) שפתים שלום שלום לרחוק ולקרוב אמר יהוה--ורפאתיו | 19 |
೧೯ಯೆಹೋವನು ಮನುಷ್ಯರ ಬಾಯಿಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ, “ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ, ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು” ಎಂದು ಹೇಳುತ್ತಾನೆ.
והרשעים כים נגרש כי השקט לא יוכל ויגרשו מימיו רפש וטיט | 20 |
೨೦ದುಷ್ಟರಾದರೋ ಅಲ್ಲೋಲಕಲ್ಲೋಲವಾದ ಸಮುದ್ರದಂತಿದ್ದಾರೆ; ಅದು ಸುಮ್ಮನಿರದು, ಅದರ ತೆರೆಗಳು ಕೆಸರನ್ನೂ, ಹೊಲಸನ್ನೂ ಕಾರುತ್ತಲಿರುತ್ತವೆ.
אין שלום אמר אלהי לרשעים | 21 |
೨೧“ದುಷ್ಟರಿಗೆ ಸಮಾಧಾನವೇ ಇಲ್ಲ” ಎಂದು ನನ್ನ ದೇವರು ನುಡಿಯುತ್ತಾನೆ.