< ישעה 64 >
೧ಆಹಾ, ನೀನು ಆಕಾಶವನ್ನು ಸೀಳಿ ಇಳಿದು ಬರಬಾರದೇ! ನಿನ್ನ ದರ್ಶನವು ಉಂಟಾಗಿ ಪರ್ವತಗಳು ಅಗಲಿದರೆ ಎಷ್ಟೋ ಒಳ್ಳೆಯದು!
כקדח אש המסים מים תבעה אש להודיע שמך לצריך מפניך גוים ירגזו | 2 |
೨ಒಣಗಿಡಕ್ಕೆ ಹತ್ತುವ ಕಿಚ್ಚಿನ ಪ್ರಕಾರ, ನೀರನ್ನು ಕುದಿಸುವ ಬೆಂಕಿಯೋಪಾದಿಯಲ್ಲಿಯೂ ನೀನು ಪ್ರತ್ಯಕ್ಷನಾಗಿ, ನಿನ್ನ ನಾಮಮಹತ್ತನ್ನು ನಿನ್ನ ಶತ್ರುಗಳಿಗೆ ತಿಳಿಯಪಡಿಸಿ, ಜನಾಂಗಗಳನ್ನು ನಿನ್ನ ದರ್ಶನದಿಂದ ನಡುಗಿಸಬಾರದೇ!
בעשותך נוראות לא נקוה ירדת מפניך הרים נזלו | 3 |
೩ಹೌದು, ನೀನು ಮೊದಲಿನಂತೆ ನಮ್ಮ ನಿರೀಕ್ಷೆಗೆ ಮೀರಿದ ಭಯಂಕರ ಕೃತ್ಯಗಳನ್ನು ನಡೆಸಿ ಇಳಿದು ಬಂದು, ಪರ್ವತಗಳು ನಿನ್ನ ದರ್ಶನದಿಂದ ನಡುಗಿದರೆ ಎಷ್ಟೋ ಲೇಸು!
ומעולם לא שמעו לא האזינו עין לא ראתה אלהים זולתך--יעשה למחכה לו | 4 |
೪ನಿನ್ನನ್ನು ಬಿಟ್ಟರೆ ನಿರೀಕ್ಷಿಸುವವನಿಗೆ ಕಾರ್ಯಕರ್ತನಾದ ಯಾವ ದೇವರನ್ನೂ ಆದಿಯಿಂದ ಯಾರೂ ಕೇಳಲಿಲ್ಲ, ಯಾರ ಕಿವಿಗೂ ಬೀಳಲಿಲ್ಲ, ಯಾರ ಕಣ್ಣೂ ಕಾಣಲಿಲ್ಲ.
פגעת את שש ועשה צדק בדרכיך יזכרוך הן אתה קצפת ונחטא בהם עולם ונושע | 5 |
೫ಧರ್ಮವನ್ನು ಅನುಸರಿಸಲು ಸಂತೋಷಪಟ್ಟು ನಿನ್ನ ಮಾರ್ಗದಲ್ಲಿ ನಡೆಯುತ್ತಾ ನಿನ್ನನ್ನು ಸ್ಮರಿಸುವವರಿಗೆ ಪ್ರಸನ್ನನಾಗಿದ್ದಿ; ನಮ್ಮ ಮೇಲಾದರೋ ರೋಷಗೊಂಡಿದ್ದಿ; ಆದರೂ ಪಾಪದಲ್ಲಿ ಮುಳುಗಿರುವ ನಮಗೆ ರಕ್ಷಣೆಯಾದೀತೇ?
ונהי כטמא כלנו וכבגד עדים כל צדקתינו ונבל כעלה כלנו ועוננו כרוח ישאנו | 6 |
೬ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ.
ואין קורא בשמך מתעורר להחזיק בך כי הסתרת פניך ממנו ותמוגנו ביד עוננו | 7 |
೭ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ, ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದಿಯಲ್ಲಾ.
ועתה יהוה אבינו אתה אנחנו החמר ואתה יצרנו ומעשה ידך כלנו | 8 |
೮ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ; ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ.
אל תקצף יהוה עד מאד ואל לעד תזכר עון הן הבט נא עמך כלנו | 9 |
೯ಯೆಹೋವನೇ, ಅತಿರೋಷಗೊಳ್ಳದಿರು, ನಮ್ಮ ಅಧರ್ಮವನ್ನು ಕಡೆಯವರೆಗೂ ಜ್ಞಾಪಕದಲ್ಲಿಡಬೇಡ; ಎಲೈ, ಕರ್ತನೇ, ಕಟಾಕ್ಷಿಸು, ನಾವೆಲ್ಲರೂ ನಿನ್ನ ಜನರಾಗಿದ್ದೇವೆ.
ערי קדשך היו מדבר ציון מדבר היתה ירושלם שממה | 10 |
೧೦ನಿನ್ನ ಪರಿಶುದ್ಧ ಪಟ್ಟಣಗಳು ಕಾಡಾಗಿವೆ, ಚೀಯೋನು ಬೀಡಾಗಿದೆ, ಯೆರೂಸಲೇಮು ಹಾಳಾಗಿ ಹೋಗಿದೆ.
בית קדשנו ותפארתנו אשר הללוך אבתינו--היה לשרפת אש וכל מחמדינו היה לחרבה | 11 |
೧೧ನಮ್ಮ ಪೂರ್ವಿಕರು ನಿನ್ನನ್ನು ಕೀರ್ತಿಸುತ್ತಿದ್ದ ಸುಂದರ ಪವಿತ್ರಾಲಯವನ್ನು ಬೆಂಕಿಯು ಸುಟ್ಟುಬಿಟ್ಟಿದೆ, ನಮ್ಮ ಅಮೂಲ್ಯ ವಸ್ತುಗಳೆಲ್ಲಾ ನಾಶವಾಗಿವೆ.
העל אלה תתאפק יהוה תחשה ותעננו עד מאד | 12 |
೧೨ಯೆಹೋವನೇ, ಇವುಗಳನ್ನು ನೋಡಿಯೂ ನಿನ್ನನ್ನು ಬಿಗಿಹಿಡಿಯುವಿಯೋ? ಸುಮ್ಮನಿರುವಿಯೋ? ನಮ್ಮನ್ನು ಹೆಚ್ಚಾಗಿ ಕುಗ್ಗಿಸುವಿಯೋ?”