< ירמיה 37 >
וימלך מלך--צדקיהו בן יאשיהו תחת כניהו בן יהויקים אשר המליך נבוכדראצר מלך בבל בארץ יהודה | 1 |
೧ಯೋಷೀಯನ ಮಗನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದ ದೇಶದ ಪಟ್ಟಕ್ಕೆ ತರಲ್ಪಟ್ಟು ಯೆಹೋಯಾಕೀಮನ ಮಗನಾದ ಕೊನ್ಯನಿಗೆ ಬದಲಾಗಿ ರಾಜ್ಯವಾಳುತ್ತಿದ್ದನು.
ולא שמע הוא ועבדיו ועם הארץ אל דברי יהוה--אשר דבר ביד ירמיהו הנביא | 2 |
೨ಆಗ ಅವನಾಗಲಿ, ಅವನ ಸೇವಕರಾಗಲಿ ಅಥವಾ ದೇಶದ ಜನರಾಗಲಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಂದ ನುಡಿಸಿದ ಮಾತುಗಳನ್ನು ಕೇಳದೆ ಹೋದರು.
וישלח המלך צדקיהו את יהוכל בן שלמיה ואת צפניהו בן מעשיה הכהן אל ירמיהו הנביא לאמר התפלל נא בעדנו אל יהוה אלהינו | 3 |
೩ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಶೆಲೆಮ್ಯನ ಮಗನಾದ ಯೆಹೂಕಲ, ಯಾಜಕ ಮಾಸೇಯನ ಮಗನಾದ ಚೆಫನ್ಯ ಇವರ ಮೂಲಕ, “ದಯಮಾಡಿ ನಮಗಾಗಿ ನಮ್ಮ ದೇವರಾದ ಯೆಹೋವನನ್ನು ಪ್ರಾರ್ಥಿಸು” ಎಂದು ಪ್ರವಾದಿಯಾದ ಯೆರೆಮೀಯನಿಗೆ ಹೇಳಿಕಳುಹಿಸಿದನು.
וירמיהו בא ויצא בתוך העם ולא נתנו אתו בית הכליא (הכלוא) | 4 |
೪ಆ ಕಾಲದಲ್ಲಿ ಯೆರೆಮೀಯನು ಇನ್ನೂ ಸೆರೆಯಾಗಿರಲಿಲ್ಲ; ಜನರಲ್ಲಿ ಹೋಗುತ್ತಾ ಬರುತ್ತಾ ಇದ್ದನು.
וחיל פרעה יצא ממצרים וישמעו הכשדים הצרים על ירושלם את שמעם ויעלו מעל ירושלם | 5 |
೫ಆಗ ಫರೋಹನ ಸೈನ್ಯವು ಐಗುಪ್ತದಿಂದ ಹೊರಟಿತ್ತು; ಇದನ್ನು ಕೇಳಿ ಯೆರೂಸಲೇಮನ್ನು ಮುತ್ತಿದ್ದ ಕಸ್ದೀಯರು ಬಿಟ್ಟು ಹೋಗಿದ್ದರು.
ויהי דבר יהוה אל ירמיהו הנביא לאמר | 6 |
೬ಹೀಗಿರಲು ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ಈ ವಾಕ್ಯವನ್ನು ದಯಪಾಲಿಸಿದನು.
כה אמר יהוה אלהי ישראל כה תאמרו אל מלך יהודה השלח אתכם אלי לדרשני הנה חיל פרעה היצא לכם לעזרה שב לארצו מצרים | 7 |
೭“ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ನನ್ನನ್ನು ವಿಚಾರಿಸುವುದಕ್ಕೆ ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದ ಯೆಹೂದದ ಅರಸನಿಗೆ ಹೀಗೆ ಹೇಳಿರಿ, ‘ಇಗೋ, ನಿಮ್ಮ ಸಹಾಯಕ್ಕೆ ಹೊರಟಿರುವ ಫರೋಹನ ಸೈನ್ಯವು ಸ್ವದೇಶವಾದ ಐಗುಪ್ತಕ್ಕೆ ಹಿಂದಿರುಗುವುದು.
ושבו הכשדים ונלחמו על העיר הזאת ולכדה ושרפה באש | 8 |
೮ಕಸ್ದೀಯರು ಪುನಃ ಬಂದು ಈ ಪಟ್ಟಣದ ವಿರುದ್ಧವಾಗಿ ಹೋರಾಡಿ, ಆಕ್ರಮಿಸಿ ಅದನ್ನು ಬೆಂಕಿಯಿಂದ ಸುಟ್ಟುಬಿಡುವರು’” ಎಂಬುದು.
כה אמר יהוה אל תשאו נפשתיכם לאמר הלך ילכו מעלינו הכשדים כי לא ילכו | 9 |
೯ಯೆಹೋವನು ಇಂತೆನ್ನುತ್ತಾನೆ, “ಕಸ್ದೀಯರು ನಮ್ಮಿಂದ ತೊಲಗಿ ಹೋಗುವುದು ಖಂಡಿತ ಎಂದು ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿರಿ; ಅವರು ತೊಲಗುವುದೇ ಇಲ್ಲ.
כי אם הכיתם כל חיל כשדים הנלחמים אתכם ונשארו בם אנשים מדקרים--איש באהלו יקומו ושרפו את העיר הזאת באש | 10 |
೧೦ನಿಮ್ಮನ್ನು ಪ್ರತಿಭಟಿಸುವ ಕಸ್ದೀಯರಲ್ಲಿ ಗಾಯಪಟ್ಟವರು ಮಾತ್ರ ಉಳಿಯುವಂತೆ ನೀವು ಆ ಸೈನ್ಯವನ್ನೆಲ್ಲಾ ಒಂದು ವೇಳೆ ಹೊಡೆದಿದ್ದರೂ ಆ ಗಾಯಪಟ್ಟವರೇ ತಮ್ಮ ತಮ್ಮ ಗುಡಾರಗಳಿಂದ ಎದ್ದು ಬಂದು ಈ ಪಟ್ಟಣವನ್ನು ಬೆಂಕಿಯಿಂದ ಸುಟ್ಟು ಬಿಡುತ್ತಿದ್ದರು.”
והיה בהעלות חיל הכשדים מעל ירושלם--מפני חיל פרעה | 11 |
೧೧ಕಸ್ದೀಯರ ಸೈನ್ಯವು ಫರೋಹನ ಸೈನ್ಯಕ್ಕೆ ಭಯಪಟ್ಟು ಯೆರೂಸಲೇಮನ್ನು ಬಿಟ್ಟುಹೋದರು.
ויצא ירמיהו מירושלם ללכת ארץ בנימן לחלק משם בתוך העם | 12 |
೧೨ಆಮೇಲೆ ಯೆರೆಮೀಯನು ಬೆನ್ಯಾಮೀನ್ ಸೀಮೆಯಲ್ಲಿ ತನಗೆ ಬರಬೇಕಾದ ಸ್ವತ್ತನ್ನು ಜನರ ಸಮಕ್ಷಮದಲ್ಲಿ ತೆಗೆದುಕೊಳ್ಳಲು ಯೆರೂಸಲೇಮಿನಿಂದ ಹೊರಟನು.
ויהי הוא בשער בנימן ושם בעל פקדת ושמו יראייה בן שלמיה בן חנניה ויתפש את ירמיהו הנביא לאמר אל הכשדים אתה נפל | 13 |
೧೩ಅವನು ಬೆನ್ಯಾಮೀನಿನ ಬಾಗಿಲನ್ನು ಹಾದುಹೋಗುತ್ತಿರುವಾಗ ಶೆಲೆಮ್ಯನ ಮಗನೂ ಹನನ್ಯನ ಮೊಮ್ಮಗನೂ ಆದ ಇರೀಯನು ಅಲ್ಲಿ ಪಹರೆಯ ವಿಚಾರಕನಾಗಿದ್ದು ಪ್ರವಾದಿಯಾದ ಯೆರೆಮೀಯನನ್ನು ಹಿಡಿದು, “ನೀನು ಕಸ್ದೀಯರಲ್ಲಿ ಮೊರೆಹೋಗಲು ಹೋಗುತ್ತಿದ್ದಿ” ಎಂದು ಹೇಳಿದನು.
ויאמר ירמיהו שקר אינני נפל על הכשדים--ולא שמע אליו ויתפש יראייה בירמיהו ויבאהו אל השרים | 14 |
೧೪ಅದಕ್ಕೆ ಯೆರೆಮೀಯನು, “ಅದು ಸುಳ್ಳು, ನಾನು ಕಸ್ದೀಯರಲ್ಲಿ ಮೊರೆಹೋಗುವವನಲ್ಲ” ಎನ್ನಲು ಇರೀಯನು ಅವನ ಮಾತನ್ನು ಕೇಳದೆ ಅವನನ್ನು ಹಿಡಿದು ಪ್ರಧಾನರ ಬಳಿಗೆ ಕರೆತಂದನು.
ויקצפו השרים על ירמיהו והכו אתו ונתנו אותו בית האסור בית יהונתן הספר--כי אתו עשו לבית הכלא | 15 |
೧೫ಆ ಪ್ರಧಾನರು ಯೆರೆಮೀಯನ ಮೇಲೆ ಕೋಪಗೊಂಡು ಅವನನ್ನು ಹೊಡೆಯಿಸಿ, ತಾವು ಬಂದಿಖಾನೆಯನ್ನಾಗಿ ಮಾಡಿದ್ದ ಲೇಖಕನಾದ ಯೆಹೋನಾಥಾನನ ಮನೆಯಲ್ಲಿ ಸೆರೆಹಾಕಿಸಿದರು.
כי בא ירמיהו אל בית הבור ואל החניות וישב שם ירמיהו ימים רבים | 16 |
೧೬ಯೆರೆಮೀಯನು ಆ ಬಂದಿಖಾನೆಯ ನೆಲಮನೆಗಳಲ್ಲಿ ಕೆಲವು ದಿನಗಳು ಇದ್ದನು.
וישלח המלך צדקיהו ויקחהו וישאלהו המלך בביתו בסתר ויאמר היש דבר מאת יהוה ויאמר ירמיהו יש ויאמר ביד מלך בבל תנתן | 17 |
೧೭ಆಮೇಲೆ ಅರಸನಾದ ಚಿದ್ಕೀಯನು ಅವನನ್ನು ಕರೆಕಳುಹಿಸಿ, “ಯೆಹೋವನಿಂದ ದೈವೋಕ್ತಿಯು ದೊರೆಯಿತೋ?” ಎಂದು ತನ್ನ ಮನೆಯಲ್ಲಿ ರಹಸ್ಯವಾಗಿ ವಿಚಾರಿಸಲು ಯೆರೆಮೀಯನು, “ಹೌದು, ದೊರೆಯಿತು, ನೀನು ಬಾಬೆಲಿನ ಅರಸನ ಕೈಯಲ್ಲಿ ಸಿಕ್ಕಿಬೀಳುವಿ” ಅಂದನು.
ויאמר ירמיהו אל המלך צדקיהו מה חטאתי לך ולעבדיך ולעם הזה כי נתתם אותי אל בית הכלא | 18 |
೧೮ಅಲ್ಲದೆ ಯೆರೆಮೀಯನು ಅರಸನಾದ ಚಿದ್ಕೀಯನಿಗೆ, “ನೀವು ನನ್ನನ್ನು ಸೆರೆಯಲ್ಲಿ ಹಾಕಿಸಿದ್ದಕ್ಕೆ ನಾನು ನಿನಗಾಗಲಿ, ನಿನ್ನ ಸೇವಕರಿಗಾಗಲಿ ಅಥವಾ ಈ ಜನರಿಗಾಗಲಿ ಯಾವ ಅಪರಾಧವನ್ನು ಮಾಡಿದೆನು?
ואיו (ואיה) נביאיכם אשר נבאו לכם לאמר לא יבא מלך בבל עליכם ועל הארץ הזאת | 19 |
೧೯ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬರುವುದಿಲ್ಲ ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?
ועתה שמע נא אדני המלך תפל נא תחנתי לפניך ואל תשבני בית יהונתן הספר ולא אמות שם | 20 |
೨೦ಎನ್ನೊಡೆಯನೇ, ಅರಸನೇ, ಈಗ ದಯಮಾಡಿ ಲಾಲಿಸು; ಲೇಖಕನಾದ ಯೆಹೋನಾಥಾನನ ಮನೆಗೆ ನನ್ನನ್ನು ತಿರುಗಿ ಸೇರಿಸಬೇಡ, ಅಲ್ಲೇ ಸತ್ತೇನು, ನನ್ನ ಬಿನ್ನಹವು ನಿನಗೆ ಮುಟ್ಟಲಿ” ಎಂದು ಅರಿಕೆಮಾಡಿದನು.
ויצוה המלך צדקיהו ויפקדו את ירמיהו בחצר המטרה ונתן לו ככר לחם ליום מחוץ האפים עד תם כל הלחם מן העיר וישב ירמיהו בחצר המטרה | 21 |
೨೧ಅರಸನಾದ ಚಿದ್ಕೀಯನು ಇದನ್ನು ಕೇಳಿ ಅಪ್ಪಣೆ ಕೊಡಲು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಟ್ಟು, ಪಟ್ಟಣದ ರೊಟ್ಟಿಯೆಲ್ಲಾ ತೀರುವ ತನಕ ರೊಟ್ಟಿಯ ಪೇಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದು ಕೊಡುತ್ತಿದ್ದರು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.