< איוב 13 >
הן-כל ראתה עיני שמעה אזני ותבן לה | 1 |
೧ಇಗೋ, ಇವುಗಳನ್ನೆಲ್ಲಾ ನನ್ನ ಕಣ್ಣು ಕಂಡಿದೆ, ಕಿವಿಯು ಕೇಳಿ ಗ್ರಹಿಸಿದೆ.
כדעתכם ידעתי גם-אני לא-נפל אנכי מכם | 2 |
೨ನೀವು ತಿಳಿದಿರುವುದನ್ನು ನಾನೂ ತಿಳಿದಿದ್ದೇನೆ. ನಿಮಗಿಂತ ನಾನು ಕಡೆಯಲ್ಲ.
אולם--אני אל-שדי אדבר והוכח אל-אל אחפץ | 3 |
೩ಆದರೆ ನಾನು ಸರ್ವಶಕ್ತನಾದ ದೇವರ ಸಂಗಡ ಮಾತನಾಡಬೇಕು, ದೇವರೊಂದಿಗೆ ವಾದಿಸಲು ಅಪೇಕ್ಷಿಸುತ್ತೇನೆ.
ואולם אתם טפלי-שקר רפאי אלל כלכם | 4 |
೪ನೀವಾದರೋ ಸುಳ್ಳನ್ನು ಪ್ರತಿಪಾದಿಸುವವರಾಗಿದ್ದೀರಿ, ನೀವೆಲ್ಲರೂ ವ್ಯರ್ಥ ವೈದ್ಯರೇ.
מי-יתן החרש תחרישון ותהי לכם לחכמה | 5 |
೫ನೀವು ಬಾಯಿಮುಚ್ಚಿ ಸುಮ್ಮನಾದರೆ ಎಷ್ಟೋ ಉತ್ತಮ! ಮೌನವೇ ನಿಮಗೆ ಜ್ಞಾನವು.
שמעו-נא תוכחתי ורבות שפתי הקשיבו | 6 |
೬ದಯಮಾಡಿ ನನ್ನ ಆಕ್ಷೇಪಣೆಯನ್ನು ಕೇಳಿರಿ, ನನ್ನ ತುಟಿಗಳ ವಾದಕ್ಕೆ ಕಿವಿಗೊಡಿರಿ.
הלאל תדברו עולה ולו תדברו רמיה | 7 |
೭ದೇವರ ಪಕ್ಷವಾಗಿ ಅನ್ಯಾಯವನ್ನು ನುಡಿಯುವಿರೋ? ಆತನಿಗೋಸ್ಕರ ಮೋಸದ ಮಾತುಗಳನ್ನಾಡುವಿರೋ?
הפניו תשאון אם-לאל תריבון | 8 |
೮ಆತನಿಗೆ ಮುಖದಾಕ್ಷಿಣ್ಯವನ್ನು ತೋರಿಸುವಿರಾ? ದೇವರಿಗಾಗಿ ವಾದಿಸುವಿರಾ?
הטוב כי-יחקר אתכם אם-כהתל באנוש תהתלו בו | 9 |
೯ಆತನು ನಿಮ್ಮನ್ನು ಶೋಧಿಸಿದರೆ ನಿಮಗೆ ಒಳ್ಳೆಯದಾಗುವುದೋ? ಮನುಷ್ಯನನ್ನು ಮೋಸಗೊಳಿಸುವಂತೆ ಆತನನ್ನೂ ಮೋಸಗೊಳಿಸುವಿರೋ?
הוכח יוכיח אתכם-- אם-בסתר פנים תשאון | 10 |
೧೦ನೀವು ರಹಸ್ಯವಾಗಿ ಪಕ್ಷಪಾತ ಮಾಡಿದರೆ ಆತನು ನಿಮ್ಮನ್ನು ಖಂಡಿಸೇ ಖಂಡಿಸುವನು.
הלא שאתו תבעת אתכם ופחדו יפל עליכם | 11 |
೧೧ಆತನ ಶ್ರೇಷ್ಠತೆಯು ನಿಮ್ಮನ್ನು ಹೆದರಿಸುವುದಿಲ್ಲವೋ? ಆತನ ಭಯವು ನಿಮ್ಮ ಮೇಲೆ ಬೀಳುವುದಿಲ್ಲವೋ?
זכרניכם משלי-אפר לגבי-חמר גביכם | 12 |
೧೨ನಿಮ್ಮ ಸ್ಮೃತಿಗಳು ಬೂದಿಗೆ ಸಮಾನವಾದ ಉದಾಹರಣೆ; ನಿಮ್ಮ ಕೋಟೆಯು ಬರೀ ಮಣ್ಣಿನದೇ.
החרישו ממני ואדברה-אני ויעבר עלי מה | 13 |
೧೩ಸುಮ್ಮನಿರಿ, ನನ್ನನ್ನು ಬಿಡಿರಿ, ನಾನು ಮಾತನಾಡಬೇಕು, ನನಗೇನಾದರೂ ಆಗಲಿ.
על-מה אשא בשרי בשני ונפשי אשים בכפי | 14 |
೧೪ನನ್ನ ಪ್ರಾಣವನ್ನು ಬಾಯಿಂದ ಕಚ್ಚಿಕೊಂಡಿರುವೆನು, ನನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡಿರುವೆನು.
הן יקטלני לא (לו) איחל אך-דרכי אל-פניו אוכיח | 15 |
೧೫ಆಹಾ, ಆತನು ನನ್ನನ್ನು ಕೊಲ್ಲುವನು, ಅದಕ್ಕಾಗಿ ಕಾದಿರುತ್ತೇನೆ, ಆದರೂ ನನ್ನ ನಡತೆಯ ಒಳ್ಳೆಯತನವನ್ನು ಆತನ ಮುಂದೆ ಸ್ಥಾಪಿಸುವೆನು.
גם-הוא-לי לישועה כי-לא לפניו חנף יבוא | 16 |
೧೬ಭ್ರಷ್ಟನು ಆತನ ಮುಂದೆ ಬರುವುದಿಲ್ಲವೆಂಬುದೇ, ನಾನು ರಕ್ಷಣೆಯನ್ನು ಹೊಂದುವೆನೆಂಬುವುದಕ್ಕೆ ಆಧಾರವಾಗಿದೆ.
שמעו שמוע מלתי ואחותי באזניכם | 17 |
೧೭ನನ್ನ ಮಾತುಗಳನ್ನು ಚೆನ್ನಾಗಿ ಕೇಳಿರಿ, ನನ್ನ ಅರಿಕೆಗೆ ಕಿವಿಗೊಡಿರಿ.
הנה-נא ערכתי משפט ידעתי כי-אני אצדק | 18 |
೧೮ಇಗೋ, ನನ್ನ ನ್ಯಾಯವನ್ನು ಸಿದ್ಧಪಡಿಸಿದ್ದೇನೆ; ನಾನು ನೀತಿವಂತನೆಂಬುದಾಗಿ ನಿರ್ಣಯವಾಗುವುದೆಂದು ನನಗೆ ಗೊತ್ತೇ ಇದೆ.
מי-הוא יריב עמדי כי-עתה אחריש ואגוע | 19 |
೧೯ನನಗೆ ಪ್ರತಿವಾದಿ ಇದ್ದಾನೋ? ಇದ್ದರೆ, ನಾನು ನನ್ನನ್ನು ನಿನ್ನ ದೃಷ್ಟಿಗೆ ಮರೆಮಾಡಿಕೊಂಡು, ಮೌನನಾಗಿ ಪ್ರಾಣಬಿಡುವೆನು.
אך-שתים אל-תעש עמדי אז מפניך לא אסתר | 20 |
೨೦ಈ ನನ್ನೆರಡು ಕೋರಿಕೆಗಳನ್ನು ಈಡೇರಿಸು. ಆಗ ನಿನ್ನ ದೃಷ್ಟಿಗೆ ನಾನು ಮರೆಮಾಡಿಕೊಳ್ಳುವುದಿಲ್ಲ.
כפך מעלי הרחק ואמתך אל-תבעתני | 21 |
೨೧ನನ್ನ ಮೇಲೆತ್ತಿರುವ ನಿನ್ನ ಕೈಯನ್ನು ದೂರಮಾಡು, ನಿನ್ನ ಭಯವು ನನ್ನನ್ನು ಹೆದರಿಸದಿರಲಿ.
וקרא ואנכי אענה או-אדבר והשיבני | 22 |
೨೨ಆಗ ನೀನು ಕರೆದರೆ ನಾನು ಉತ್ತರಕೊಡುವೆನು, ಇಲ್ಲವೆ ನಾನು ಮಾತನಾಡುವೆ, ನೀನು ಉತ್ತರಕೊಡು.
כמה לי עונות וחטאות-- פשעי וחטאתי הדיעני | 23 |
೨೩ನನ್ನ ಪಾಪದೋಷಗಳೆಷ್ಟು? ನನ್ನ ಪಾಪವನ್ನೂ, ದ್ರೋಹವನ್ನೂ ನನಗೆ ತಿಳಿಯಪಡಿಸು.
למה-פניך תסתיר ותחשבני לאויב לך | 24 |
೨೪ಏಕೆ ನಿನ್ನ ಮುಖವನ್ನು ಮರೆಮಾಡುತ್ತಿ? ನನ್ನನ್ನು ಶತ್ರುವೆಂದೆಣಿಸಿರುವುದೇಕೆ?
העלה נדף תערוץ ואת-קש יבש תרדף | 25 |
೨೫ಹಾರಿಹೋಗುವ ಎಲೆಯನ್ನು ನಡುಗಿಸುವಿಯಾ? ಒಣಗಿದ ಹೊಟ್ಟನ್ನು ಅಟ್ಟಿಬಿಡುವಿಯಾ?
כי-תכתב עלי מררות ותורישני עונות נעורי | 26 |
೨೬ನನ್ನ ವಿಷಯವಾಗಿ ಕಠಿಣವಾದ ತೀರ್ಪುಗಳನ್ನು ಬರೆದು, ನನ್ನ ಯೌವನದ ಪಾಪಗಳ ಬಾಧ್ಯತೆಯನ್ನು ನನಗೆ ಕೊಟ್ಟಿದ್ದಿ.
ותשם בסד רגלי-- ותשמור כל-ארחתי על-שרשי רגלי תתחקה | 27 |
೨೭ನೀನು ನನ್ನ ಕಾಲುಗಳಿಗೆ ಕೋಳವನ್ನು ಹಾಕಿದ್ದಿ; ನನ್ನ ದಾರಿಗಳನ್ನೆಲ್ಲಾ ಮನದಟ್ಟುಮಾಡಿ ನನ್ನ ಹೆಜ್ಜೆಗಳ ಸುತ್ತಲೂ ಗೆರೆಯೆಳೆದಿದ್ದಿ.
והוא כרקב יבלה כבגד אכלו עש | 28 |
೨೮ಕೊಳೆಯುವ ಪದಾರ್ಥದಂತೆಯೂ, ನುಸಿ ಹಿಡಿದ ಬಟ್ಟೆಯ ಹಾಗೂ ಕ್ಷಯಿಸಿಹೋಗುತ್ತಿದ್ದೇನೆ.