< איוב 20 >
೧ಆ ಮೇಲೆ ನಾಮಾಥ್ಯನಾದ ಚೋಫರನು ಹೀಗೆಂದನು,
לכן שעפי ישיבוני ובעבור חושי בי | 2 |
೨“ನನ್ನ ಮನೋವ್ಯಥೆಯು ಪ್ರತ್ಯುತ್ತರವನ್ನು ನನಗೆ ಹೇಳಿಕೊಡುತ್ತದೆ, ಆತುರವು ನನ್ನಲ್ಲಿ ತುಂಬಿದೆ.
מוסר כלמתי אשמע ורוח מבינתי יענני | 3 |
೩ಏಕೆಂದರೆ ನಾನು ಅಪಮಾನಕರವಾದ ನಿನ್ನ ಖಂಡನೆಯನ್ನು ಕೇಳಿದ್ದೇನೆ, ಆದಕಾರಣ ನನ್ನ ಆತ್ಮವು ನನ್ನ ಬುದ್ಧಿಯಿಂದಲೇ ಕಲಿತ ಉತ್ತರವನ್ನು ನನಗೆ ತಿಳಿಸುತ್ತದೆ.
הזאת ידעת מני-עד מני שים אדם עלי-ארץ | 4 |
೪ಮನುಷ್ಯನು ಲೋಕದಲ್ಲಿ ಉದ್ಭವಿಸಿದ ಪುರಾತನಕಾಲದಿಂದಲೂ,
כי רננת רשעים מקרוב ושמחת חנף עדי-רגע | 5 |
೫ದುಷ್ಟರ ಉತ್ಸಾಹ ಧ್ವನಿಯು ಅಲ್ಪಕಾಲದ್ದು, ಭ್ರಷ್ಟನ ಉಲ್ಲಾಸವು ಕ್ಷಣಿಕವಾದದ್ದು ಎಂದು ನಿನಗೆ ಗೊತ್ತಿಲ್ಲವೋ?
אם-יעלה לשמים שיאו וראשו לעב יגיע | 6 |
೬ಅವನ ಪ್ರತಿಷ್ಠೆಯು ಆಕಾಶಕ್ಕೆ ಏರಿದರೂ, ಅವನ ತಲೆಯು ಮೋಡಗಳಿಗೆ ತಗುಲಿದರೂ,
כגללו לנצח יאבד ראיו יאמרו איו | 7 |
೭ತನ್ನ ಮಲದ ಹಾಗೆ ನಿತ್ಯನಾಶನವನ್ನೂ ಹೊಂದುವನು, ಅವನನ್ನು ಕಂಡವರು ಕೂಡ ‘ಅವನು ಎಲ್ಲಿ?’ ಎನ್ನುವರು.
כחלום יעוף ולא ימצאהו וידד כחזיון לילה | 8 |
೮ಅವನು ಸ್ವಪ್ನದಂತೆ ಮರೆಯಾಗಿ ಸಿಕ್ಕುವುದಿಲ್ಲ, ರಾತ್ರಿಯ ಕನಸಿನ ಹಾಗೆ ಓಡಿಹೋಗುವನು.
עין שזפתו ולא תוסיף ולא-עוד תשורנו מקומו | 9 |
೯ಕಂಡವನ ಕಣ್ಣಿಗೆ ಮತ್ತೆ ಕಾಣಿಸನು, ಅವನ ನಿವಾಸವು ಅವನನ್ನು ತಿರುಗಿ ನೋಡುವುದೇ ಇಲ್ಲ.
בניו ירצו דלים וידיו תשבנה אונו | 10 |
೧೦ಅವನ ಮಕ್ಕಳು ದರಿದ್ರರ ದಯೆಯನ್ನು ಬೇಡುವರು. ಅವನು ತನ್ನ ಕೈಯಿಂದಲೇ ತನ್ನ ಆಸ್ತಿಯನ್ನು ಹಿಂದಕ್ಕೆ ಕೊಟ್ಟು ಬಿಡಬೇಕಾಗುವುದು.
עצמותיו מלאו עלומו ועמו על-עפר תשכב | 11 |
೧೧ಯೌವನವು ಅವನ ಎಲುಬುಗಳಲ್ಲಿ ಇನ್ನೂ ತುಂಬಿರುವಾಗಲೇ, ಅದು ಅವನೊಂದಿಗೆ ಧೂಳಿನಲ್ಲಿ ಮಲಗುವುದು.
אם-תמתיק בפיו רעה-- יכחידנה תחת לשנו | 12 |
೧೨ಕೆಟ್ಟತನವು ಅವನ ಬಾಯಿಗೆ ಸಿಹಿಯಾಗಿರಲು, ಅವನು ನಾಲಿಗೆಯ ಕೆಳಗೆ ಅದನ್ನು ಅಡಗಿಸಿ,
יחמל עליה ולא יעזבנה וימנענה בתוך חכו | 13 |
೧೩ನುಂಗದೆ ಕಾಪಾಡುತ್ತಾ ಬಾಯಲ್ಲೇ ಇಟ್ಟುಕೊಂಡಿದ್ದರೂ
לחמו במעיו נהפך מרורת פתנים בקרבו | 14 |
೧೪ತಿಂದ ಮೇಲೆ ಆ ಪದಾರ್ಥವು ಮಾರ್ಪಟ್ಟು, ಅವನೊಳಗೆ ಹಾವಿನ ವಿಷವಾಗುವುದು.
חיל בלע ויקאנו מבטנו ירשנו אל | 15 |
೧೫ನುಂಗಿದ ಐಶ್ವರ್ಯವನ್ನು ಅವನು ಕಾರುವನು, ದೇವರು ಅವನ ಹೊಟ್ಟೆಯೊಳಗಿಂದ ಅದನ್ನು ಕಕ್ಕಿಸಿ ಬಿಡುವನು.
ראש-פתנים יינק תהרגהו לשון אפעה | 16 |
೧೬ಅವನು ಚೀಪುವುದು ಹಾವಿನ ವಿಷವೇ, ಸರ್ಪದ ನಾಲಿಗೆಯು ಅವನನ್ನು ಕೊಲ್ಲುವುದು.
אל-ירא בפלגות-- נהרי נחלי דבש וחמאה | 17 |
೧೭ಜೇನೂ, ಮೊಸರೂ ಸಮೃದ್ಧಿಯಾಗಿ ಹರಿಯುವ ನದಿಗಳನ್ನು ಅವನು ನೋಡುವುದೇ ಇಲ್ಲ.
משיב יגע ולא יבלע כחיל תמורתו ולא יעלס | 18 |
೧೮ಅವನು ದುಡಿದದ್ದನ್ನು ಅನುಭವಿಸದೆ ಪರರ ಪಾಲು ಮಾಡುವನು, ಅವನ ಲಾಭದಿಂದಾಗತಕ್ಕ ಆನಂದವು ಅವನಿಗೆ ಸಿಕ್ಕುವುದಿಲ್ಲ.
כי-רצץ עזב דלים בית גזל ולא יבנהו | 19 |
೧೯ಅವನು ಬಡವರನ್ನು ಜಜ್ಜಿ ತ್ಯಜಿಸಿಬಿಟ್ಟಿದ್ದಾನಲ್ಲಾ; ಸುಲಿಗೆಯಿಂದ ಕಿತ್ತುಕೊಂಡ ಮನೆಯನ್ನು ಭದ್ರಪಡಿಸಿಕೊಳ್ಳದೆ ಹೋಗುವನು.
כי לא-ידע שלו בבטנו בחמודו לא ימלט | 20 |
೨೦ಅವನ ಹೊಟ್ಟೆಗೆ ತೃಪ್ತಿಯಿಲ್ಲವಾದ ಕಾರಣ, ಅವನು ತನ್ನ ಇಷ್ಟ ಸಂಪತ್ತಿನಲ್ಲಿ ಯಾವುದನ್ನೂ ಉಳಿಸಿಕೊಳ್ಳುವುದಿಲ್ಲ.
אין-שריד לאכלו על-כן לא-יחיל טובו | 21 |
೨೧ಏನೂ ಉಳಿಯದಂತೆ ಅವನು ನುಂಗಿಬಿಟ್ಟಿದರಿಂದ; ಅವನ ಸುಖವು ಅಸ್ಥಿರವಾಗಿರುವುದು.
במלאות שפקו יצר לו כל-יד עמל תבאנו | 22 |
೨೨ಸಮೃದ್ಧಿಯು ತುಂಬಿರುವಾಗಲೇ ಅವನಿಗೆ ಇಕ್ಕಟ್ಟಾಗುವುದು. ಶ್ರಮೆಯನ್ನು ಅನುಭವಿಸುವ ಪ್ರತಿಯೊಬ್ಬನ ಕೈ ಅವನ ಮೇಲೆ ಬೀಳುವುದು.
יהי למלא בטנו--ישלח-בו חרון אפו וימטר עלימו בלחומו | 23 |
೨೩ಅವನ ಹೊಟ್ಟೆ ತುಂಬುವುದು, ಹೌದು, ದೇವರು ತನ್ನ ಕೋಪಾಗ್ನಿಯನ್ನು ಕಳುಹಿಸಿ; ಅದನ್ನೇ ಆಹಾರವನ್ನಾಗಿ ಅವನ ಮೇಲೆ ಸುರಿಸುವನು.
יברח מנשק ברזל תחלפהו קשת נחושה | 24 |
೨೪ಕಬ್ಬಿಣದ ಆಯುಧದ ದೆಸೆಯಿಂದ ಓಡಿಹೋಗುವನು, ತಾಮ್ರದ ಬಿಲ್ಲು ಅವನನ್ನು ಇರಿಯುವುದು.
שלף ויצא מגוה וברק ממררתו יהלך עליו אמים | 25 |
೨೫ಅವನು ಬಾಣವನ್ನು ಕೀಳಲು ಅದು ಬೆನ್ನಿನಿಂದ ಹೊರಬರುವುದು, ಥಳಥಳಿಸುತ್ತಾ ಅವನ ಪಿತ್ತಕೋಶದೊಳಗಿಂದ ಹೊರಡುತ್ತಿರುವುದು, ಭಯಭ್ರಾಂತಿಗಳು ಅವನನ್ನು ಮುತ್ತಿಕೊಳ್ಳುವವು.
כל-חשך טמון לצפוניו תאכלהו אש לא-נפח ירע שריד באהלו | 26 |
೨೬ಅವನ ನಿಧಿನಿಕ್ಷೇಪಗಳಿಗಾಗಿ ಪೂರ್ಣಾಂಧಕಾರವು ಕಾದಿರುವುದು, ಯಾರೂ ಹೊತ್ತಿಸದ ಬೆಂಕಿಯು ಅವನನ್ನು ತಿಂದುಹಾಕಿ, ಅವನ ಗುಡಾರದಲ್ಲಿ ತಪ್ಪಿಸಿಕೊಂಡದ್ದನ್ನು ಮೇದು ಬಿಡುವುದು.
יגלו שמים עונו וארץ מתקוממה לו | 27 |
೨೭ಆಕಾಶವು ಅವನ ಪಾಪವನ್ನು ಬಯಲುಪಡಿಸುವುದು. ಭೂಮಿಯು ಅವನ ವಿರುದ್ಧ ಸಾಕ್ಷಿಯಾಗಿ ಏಳುವುದು.
יגל יבול ביתו נגרות ביום אפו | 28 |
೨೮ದೇವರ ಸಿಟ್ಟಿನ ದಿನದಲ್ಲಿ ಅವನ ಮನೆಯ ಧನಧಾನ್ಯಗಳು, ಪ್ರವಾಹದಿಂದ ಕೊಚ್ಚಿಕೊಂಡು ತೊಲಗಿಹೋಗುವವು.
זה חלק-אדם רשע--מאלהים ונחלת אמרו מאל | 29 |
೨೯ದುಷ್ಟನಿಗೆ ದೇವರಿಂದ ದೊರೆಯುವ ಪಾಲೂ, ದೇವರು ನೇಮಿಸಿರುವ ಸ್ವಾಸ್ತ್ಯವೂ ಇವೇ.”