< איוב 22 >
೧ಆ ಮೇಲೆ ತೇಮಾನ್ಯನಾದ ಎಲೀಫಜನು ಮತ್ತೆ ಹೀಗೆಂದನು,
הלאל יסכן-גבר-- כי-יסכן עלימו משכיל | 2 |
೨“ಮನುಷ್ಯ ಮಾತ್ರದವನಿಂದ ದೇವರಿಗೆ ಏನು ಪ್ರಯೋಜನವಾದೀತು? ಒಬ್ಬನು ವಿವೇಕಿಯಾಗಿ ನಡೆದುಕೊಂಡರೆ ಅವನಿಗೆ ಪ್ರಯೋಜನವಷ್ಟೆ.
החפץ לשדי כי תצדק ואם-בצע כי-תתם דרכיך | 3 |
೩ನೀನು ನೀತಿವಂತನಾಗಿರುವುದು ಸರ್ವಶಕ್ತನಾದ ದೇವರಿಗೆ ಸುಖವೋ? ನಿನ್ನ ನಡತೆಯನ್ನು ಸರಿಪಡಿಸಿಕೊಂಡರೆ ಆತನಿಗೇನು ಲಾಭ?
המיראתך יכיחך יבוא עמך במשפט | 4 |
೪ನಿನ್ನ ಭಯಭಕ್ತಿಗಾಗಿಯೇ ಆತನು ನಿನ್ನನ್ನು ಶಿಕ್ಷಿಸಿ ನ್ಯಾಯತೀರ್ಪಿಗೆ ಗುರಿಮಾಡುತ್ತಾನೋ?
הלא רעתך רבה ואין-קץ לעונתיך | 5 |
೫ನಿನ್ನ ಕೆಟ್ಟತನವು ಬಹಳವಲ್ಲವೇ? ನಿನ್ನ ಪಾಪಗಳಿಗೆ ಮಿತಿಯೇ ಇಲ್ಲವಲ್ಲಾ?
כי-תחבל אחיך חנם ובגדי ערומים תפשיט | 6 |
೬ನೋಡು, ನಿನ್ನ ಸಹೋದರನಿಂದ ಸುಮ್ಮನೆ ಒತ್ತೆಯಾಳುಗಳನ್ನು ತೆಗೆದುಕೊಂಡಿದ್ದಿ, ಬೆತ್ತಲೆಯವರ ಬಟ್ಟೆಯನ್ನೂ ಸೆಳಕೊಂಡಿದ್ದಿ.
לא-מים עיף תשקה ומרעב תמנע-לחם | 7 |
೭ಬಳಲಿದವನಿಗೆ ನೀರು ಕೊಡದೆ, ಹಸಿದವನಿಗೆ ಅನ್ನಕೊಡದೆ ಹೋಗಿದ್ದಿ.
ואיש זרוע לו הארץ ונשוא פנים ישב בה | 8 |
೮ಬಲಿಷ್ಠನಾದರೆ ದೇಶವೇ ಅವನದು, ಅಲ್ಲಿ ಸನ್ಮಾನ ಯೋಗ್ಯನಾಗಿ ವಾಸಿಸತಕ್ಕವನು ಅವನೇ.
אלמנות שלחת ריקם וזרעות יתמים ידכא | 9 |
೯ನೀನು ವಿಧವೆಯರನ್ನು ಬರಿಗೈಯಾಗಿ ಕಳುಹಿಸಬಿಟ್ಟು, ಅನಾಥರ ಕೈಗಳನ್ನು ಮುರಿದಿದ್ದಿ.
על-כן סביבותיך פחים ויבהלך פחד פתאם | 10 |
೧೦ಆದಕಾರಣ ಬೋನುಗಳು ನಿನ್ನ ಸುತ್ತಲು ಕಾದಿವೆ, ಫಕ್ಕನೆ ಉಂಟಾದ ಭಯವು ನಿನ್ನನ್ನು ತಲ್ಲಣಗೊಳಿಸುತ್ತದೆ.
או-חשך לא-תראה ושפעת-מים תכסך | 11 |
೧೧ಇದಲ್ಲದೆ ದಾರಿಕಾಣದಂತೆ ಕತ್ತಲೂ, ಮುಸುಕಿ ಜಲಪ್ರವಾಹವೂ ನಿನ್ನನ್ನು ಆವರಿಸುತ್ತವೆ.
הלא-אלוה גבה שמים וראה ראש כוכבים כי-רמו | 12 |
೧೨ದೇವರು ಉನ್ನತ ಆಕಾಶದಲ್ಲಿಲ್ಲವೋ? ನಕ್ಷತ್ರಮಂಡಲದ ತುದಿಯು ಎಷ್ಟೋ ಎತ್ತರ, ನೋಡು!
ואמרת מה-ידע אל הבעד ערפל ישפוט | 13 |
೧೩ನೀನಾದರೋ, ‘ದೇವರಿಗೆ ಏನು ಗೊತ್ತು? ಕಾರ್ಗತ್ತಲಿನ ಆಚೆಯಿಂದ ನ್ಯಾಯತೀರಿಸಬಲ್ಲನೋ?
עבים סתר-לו ולא יראה וחוג שמים יתהלך | 14 |
೧೪ದಟ್ಟವಾದ ಮೋಡಗಳು ಆತನಿಗೆ ಪರದೆಯ ಹಾಗಿರುವುದರಿಂದ ನೋಡಲಾರನು; ಆಕಾಶಮಂಡಲದ ಮೇಲೆ ನಡೆದಾಡುತ್ತಾನೆ’ ಎಂದು ಹೇಳಿಕೊಂಡೆಯಲ್ಲವೇ.
הארח עולם תשמור-- אשר דרכו מתי-און | 15 |
೧೫ಕೆಟ್ಟವರು ಮೊದಲಿನಿಂದಲೂ, ನಡೆದ ದಾರಿಯನ್ನು ನೀನು ಹಿಡಿಯುವಿಯಾ?
אשר-קמטו ולא-עת נהר יוצק יסודם | 16 |
೧೬ಅಕಾಲ ಮರಣವು ಅವರನ್ನು ಅಪಹರಿಸಿತು, ಅವರಿಗೆ ಆಧಾರವಾಗಿದ್ದ ನೆಲವು ನೀರಾಗಿ ಹರಿಯಿತು.
האמרים לאל סור ממנו ומה-יפעל שדי למו | 17 |
೧೭ಅವರು ಆತನನ್ನು ಕುರಿತು, ‘ನಮ್ಮಿಂದ ತೊಲಗಿ ಹೋಗು, ಸರ್ವಶಕ್ತನಾದ ದೇವರು ನಮಗೇನು ಮಾಡಾನು’ ಎಂದು ಹೇಳಿಕೊಳ್ಳುತ್ತಿದ್ದರು.
והוא מלא בתיהם טוב ועצת רשעים רחקה מני | 18 |
೧೮ಆದರೂ ದೇವರು ಅವರ ಮನೆಗಳನ್ನು ಸಂಪತ್ತಿನಿಂದ ತುಂಬಿಸಿದನು. ದುಷ್ಟರ ಆಲೋಚನೆಯು ನನಗೆ ದೂರವಾಗಿರಲಿ!
יראו צדיקים וישמחו ונקי ילעג-למו | 19 |
೧೯ನೀತಿವಂತರು ಇದನ್ನು ನೋಡಿ ಹಿಗ್ಗುವರು, ನಮ್ಮ ವಿರುದ್ಧವಾಗಿ ಎದ್ದವರು ಹಾಳಾಗಿಯೇ ಹೋದರು.
אם-לא נכחד קימנו ויתרם אכלה אש | 20 |
೨೦‘ಅವರ ಉಳಿದ ಸೊತ್ತನ್ನು ಬೆಂಕಿಯು ನಾಶಮಾಡಿತು’ ಎಂದು, ನಿರ್ದೋಷಿಗಳು ದುಷ್ಟರನ್ನು ಅಣಕಿಸುವರು.
הסכן-נא עמו ושלם בהם תבואתך טובה | 21 |
೨೧ದೇವರ ಚಿತ್ತಕ್ಕೆ ಒಳಪಟ್ಟು ಸಮಾಧಾನ ಹೊಂದು, ಇದರಿಂದ ನಿನಗೆ ಶುಭವಾಗುವುದು.
קח-נא מפיו תורה ושים אמריו בלבבך | 22 |
೨೨ಆತನ ಬಾಯಿಂದಲೇ ಬೋಧನೆಯನ್ನು ಸ್ವೀಕರಿಸಿ, ಆತನ ಮಾತುಗಳನ್ನು ಹೃದಯದಲ್ಲಿ ಇಟ್ಟುಕೋ.
אם-תשוב עד-שדי תבנה תרחיק עולה מאהלך | 23 |
೨೩ನೀನು ಸರ್ವಶಕ್ತನಾದ ದೇವರ ಕಡೆಗೆ ತಿರುಗಿಕೊಂಡು, ನಿನ್ನ ಗುಡಾರಗಳಿಂದ ಅನ್ಯಾಯವನ್ನು ದೂರಮಾಡಿದರೆ ಉದ್ಧಾರವಾಗುವಿ.
ושית-על-עפר בצר ובצור נחלים אופיר | 24 |
೨೪ನಿನ್ನ ಚಿನ್ನವನ್ನು ಧೂಳಿನಲ್ಲಿ ಹಾಕು, ಓಫೀರ್ ದೇಶದ ಅಪರಂಜಿಯನ್ನು ಹೊಳೆಗಳ ಬಂಡೆಗಳಿಗೆ ಎಸೆದುಬಿಡು.
והיה שדי בצריך וכסף תועפות לך | 25 |
೨೫ಸರ್ವಶಕ್ತನಾದ ದೇವರು ನಿನಗೆ ಚಿನ್ನವಾಗಿಯೂ, ಬೆಳ್ಳಿಯ ರಾಶಿಗಳಾಗಿಯೂ ಇರುವನು.
כי-אז על-שדי תתענג ותשא אל-אלוה פניך | 26 |
೨೬ಆಗ ನೀನು ಸರ್ವಶಕ್ತನಾದ ದೇವರಲ್ಲಿ ಆನಂದಪಟ್ಟು, ದೇವರ ಅಭಿಮುಖನಾಗಿರುವೆ.
תעתיר אליו וישמעך ונדריך תשלם | 27 |
೨೭ನೀನು ಪ್ರಾರ್ಥಿಸುವಿ, ಆತನು ಲಾಲಿಸುವನು, ಆತನಿಗೆ ಹರಕೆಗಳನ್ನು ಒಪ್ಪಿಸುವಿ.
ותגזר-אמר ויקם לך ועל-דרכיך נגה אור | 28 |
೨೮ಯಾವುದನ್ನು ಸಂಕಲ್ಪಿಸಿಕೊಳ್ಳುವಿಯೋ ಅದು ನಿನಗೆ ನೆರವೇರುವುದು, ಬೆಳಕು ನಿನ್ನ ಮಾರ್ಗಗಳಲ್ಲಿ ಪ್ರಕಾಶಿಸುವುದು.
כי-השפילו ותאמר גוה ושח עינים יושע | 29 |
೨೯ಜನರು ನಿನ್ನನ್ನು ಕೆಳಕ್ಕೆ ಬೀಳಿಸುವಾಗ, ಮೇಲಕ್ಕೆ ಎತ್ತಲ್ಪಡುವೆನು ಅಂದುಕೊಳ್ಳುವಿ, ಆಗ ದೀನದೃಷ್ಟಿಯುಳ್ಳ ನಿನ್ನನ್ನು ಆತನು ರಕ್ಷಿಸುವನು.
ימלט אי-נקי ונמלט בבר כפיך | 30 |
೩೦ನಿರ್ದೋಷಿಯನ್ನು ಆತನು ತಪ್ಪಿಸುವನು, ಹೌದು, ಆತನು ಇಂಥವನನ್ನು ತಪ್ಪಿಸುವುದಕ್ಕೆ ನಿನ್ನ ಕೈಗಳ ಪರಿಶುದ್ಧತೆಯೇ ಕಾರಣವಾಗಿರುವುದು.”