< איוב 23 >
גם-היום מרי שחי ידי כבדה על-אנחתי | 2 |
೨“ನಾನು ನನ್ನ ನರಳಾಟವನ್ನು ಎಷ್ಟು ಬಿಗಿಹಿಡಿದರೂ; ಆ ನನ್ನ ಮುಲುಗುವಿಕೆಯು ದೇವದ್ರೋಹವೆಂದು ಈಗಲೂ ಎಣಿಸುತ್ತೀರಾ?
מי-יתן ידעתי ואמצאהו אבוא עד-תכונתו | 3 |
೩ಆಹಾ, ಆತನ ದರ್ಶನವು ಎಲ್ಲಿ ಆದೀತು, ನನಗೆ ಗೊತ್ತಾಗಿದ್ದರೆ ಎಷ್ಟೋ ಸಂತೋಷ! ಆತನ ಸನ್ನಿಧಿಯನ್ನು ಸೇರೆನು.
אערכה לפניו משפט ופי אמלא תוכחות | 4 |
೪ನನ್ನ ಬಾಯಿಯನ್ನು ತರ್ಕಗಳಿಂದ ತುಂಬಿಸಿಕೊಂಡು ನನ್ನ ನ್ಯಾಯವನ್ನು ಆತನ ಮುಂದೆ ವಿವರಿಸುವೆನು.
אדעה מלים יענני ואבינה מה-יאמר לי | 5 |
೫ಆತನ ಪ್ರತ್ಯುತ್ತರದ ಮಾತುಗಳನ್ನು ತಿಳಿದುಕೊಂಡು ಆತನು ನನಗೆ ಹೇಳುವುದನ್ನು ವಿವೇಚಿಸುವೆನು.
הברב-כח יריב עמדי לא אך-הוא ישם בי | 6 |
೬ಆತನು ತನ್ನ ಮಹಾಶಕ್ತಿಯಿಂದ ನನ್ನ ಸಂಗಡ ವ್ಯಾಜ್ಯವಾಡುವನೋ? ಇಲ್ಲವೇ ಇಲ್ಲ; ನನ್ನ ವಿಜ್ಞಾಪನೆಯನ್ನು ಗಮನಿಸುವನು.
שם--ישר נוכח עמו ואפלטה לנצח משפטי | 7 |
೭ಅಲ್ಲಿ ಯಥಾರ್ಥಚಿತ್ತನು ಆತನೊಂದಿಗೆ ವಾದಿಸುವನು. ನನ್ನ ನ್ಯಾಯಾಧಿಪತಿಯಿಂದ ನನಗೆ ನಿತ್ಯವಾದ ಬಿಡುಗಡೆಯಾಗುವುದು.
הן קדם אהלך ואיננו ואחור ולא-אבין לו | 8 |
೮ಅಯ್ಯೋ, ನಾನು ಮುಂದೆ ಹೋದರೂ ಆತನು ಸಿಕ್ಕುವುದಿಲ್ಲ, ಹಿಂದೆ ಹೋದರೂ ಆತನನ್ನು ತಿಳಿಯಲಾರೆನು.
שמאול בעשתו ולא-אחז יעטף ימין ולא אראה | 9 |
೯ಎಡಗಡೆಯಲ್ಲಿ ಹುಡುಕಿದರೂ ನೋಡಲಾರೆನು, ಬಲಗಡೆಗೆ ತಿರುಗಿಕೊಂಡರೂ ಆತನು ಕಾಣಿಸುವುದಿಲ್ಲ.
כי-ידע דרך עמדי בחנני כזהב אצא | 10 |
೧೦ಆತನಾದರೋ ನನ್ನ ದಾರಿಯನ್ನು ಬಲ್ಲನು, ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು.
באשרו אחזה רגלי דרכו שמרתי ולא-אט | 11 |
೧೧ಆತನ ಹೆಜ್ಜೆಯ ಜಾಡಿನಲ್ಲೇ ಕಾಲಿಟ್ಟಿದ್ದೇನೆ, ಓರೆಯಾಗದೆ ಆತನ ದಾರಿಯನ್ನೇ ಹಿಡಿದಿದ್ದೇನೆ.
מצות שפתיו ולא אמיש מחקי צפנתי אמרי-פיו | 12 |
೧೨ಆತನ ತುಟಿಗಳಿಂದ ಹೊರಟ ನಿಯಮಗಳಿಗೆ ನಾನು ಹಿಂದೆಗೆಯಲಿಲ್ಲ, ಆತನ ಬಾಯಿಂದ ಬಂದ ಮಾತುಗಳನ್ನು ಎದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.
והוא באחד ומי ישיבנו ונפשו אותה ויעש | 13 |
೧೩ಆತನಂತು ಒಂದೇ ಮನಸ್ಸುಳ್ಳವನಾಗಿದ್ದಾನೆ, ತಿರುಗಿಸಬಲ್ಲವರು ಯಾರು? ತಾನು ಬಯಸಿದ್ದನ್ನೇ ಮಾಡುತ್ತಾನೆ.
כי ישלים חקי וכהנה רבות עמו | 14 |
೧೪ನನ್ನ ವಿಷಯದಲ್ಲಿ ನೇಮಕವಾದದ್ದನ್ನು ಪೂರೈಸುವವನಷ್ಟೆ, ಆತನಲ್ಲಿ ಇಂಥಾ ಸಂಕಲ್ಪಗಳು ಅನೇಕವಾಗಿವೆ.
על-כן מפניו אבהל אתבונן ואפחד ממנו | 15 |
೧೫ಆದಕಾರಣ ನಾನು ಆತನ ಸನ್ನಿಧಿಯಲ್ಲಿ ಗಾಬರಿಯಾಗಿದ್ದೇನೆ; ಇದನ್ನೆಲ್ಲಾ ಯೋಚಿಸಿಕೊಳ್ಳುವಾಗ ಆತನಿಗೆ ಹೆದರುತ್ತೇನೆ.
ואל הרך לבי ושדי הבהילני | 16 |
೧೬ನನ್ನ ಹೃದಯವನ್ನು ಕುಂದಿಸಿದವನು ದೇವರೇ, ನನ್ನನ್ನು ಗಾಬರಿಪಡಿಸಿದವನು ಸರ್ವಶಕ್ತನಾದ ದೇವರೇ.
כי-לא נצמתי מפני-חשך ומפני כסה-אפל | 17 |
೧೭ನಾನು ಹಾಳಾದದ್ದಕ್ಕೆ ಈ ಅಂಧಕಾರವು ಕಾರಣವಲ್ಲ, ನನ್ನ ಮುಖವನ್ನು ಕವಿದಿರುವ ಕಾರ್ಗತ್ತಲು ಕಾರಣವಲ್ಲ.”