< איוב 24 >
מדוע--משדי לא-נצפנו עתים וידעו לא-חזו ימיו | 1 |
೧“ಸರ್ವಶಕ್ತನಾದ ದೇವರು ಏಕೆ ದುಷ್ಟರಿಗೆ ದಂಡನೆಯ ಕಾಲಗಳನ್ನು ನೇಮಿಸಿ ಇಟ್ಟುಕೊಂಡಿಲ್ಲ? ಆತನನ್ನು ಅರಿತವರಿಗೆ ಆತನ ನ್ಯಾಯತೀರ್ಪಿನ ದಿನಗಳು ಏಕೆ ಗೋಚರವಾಗುವುದಿಲ್ಲ?
גבלות ישיגו עדר גזלו וירעו | 2 |
೨ಮೇರೆಗಳನ್ನು ದಾಟಿ ಆಶ್ರಯಿಸಿಕೊಳ್ಳುವವರು ಇದ್ದಾರೆ. ದನಕುರಿಗಳನ್ನು ಅಪಹರಿಸಿ ಸಾಕಿಕೊಳ್ಳುವವರಿದ್ದಾರೆ.
חמור יתומים ינהגו יחבלו שור אלמנה | 3 |
೩ಅನಾಥರ ಕತ್ತೆಯನ್ನು ಹೊಡೆದುಕೊಂಡು ಹೋಗುತ್ತಾರೆ, ವಿಧವೆಯ ಎತ್ತನ್ನು ಒತ್ತೆಯಾಗಿ ತೆಗೆದುಕೊಳ್ಳುತ್ತಾರೆ.
יטו אבינים מדרך יחד חבאו עניי-ארץ | 4 |
೪ದಿಕ್ಕಿಲ್ಲದವರನ್ನು ದಾರಿತಪ್ಪಿಸುತ್ತಾರೆ, ನಾಡಿನ ಬಡವರು ಒಟ್ಟಾಗಿ ಅಡಗಿಕೊಳ್ಳುತ್ತಾರೆ.
הן פראים במדבר-- יצאו בפעלם משחרי לטרף ערבה לו לחם לנערים | 5 |
೫ಇಗೋ, ಅಡವಿಯಲ್ಲಿ ಕಾಡುಕತ್ತೆಗಳು ಹೇಗೋ ಹಾಗೆಯೇ, ಇವರು ತಮ್ಮ ಹೊಟ್ಟೇ ಪಾಡಿಗಾಗಿ ಹೊರಟು ಆಹಾರವನ್ನು ಆತುರವಾಗಿ ಹುಡುಕುವರು; ಅರಣ್ಯವೇ ಇವರ ಮಕ್ಕಳಿಗಾಗಿ ಆಹಾರವನ್ನು ಒದಗಿಸುವುದು.
בשדה בלילו יקצירו (יקצורו) וכרם רשע ילקשו | 6 |
೬ತಮ್ಮ ಹೊಟ್ಟೆಗಾಗಿ ಬಯಲಿನಲ್ಲಿ ಸೊಪ್ಪನ್ನು ಕೊಯ್ದುಕೊಳ್ಳುವರು, ದುಷ್ಟನ ದ್ರಾಕ್ಷಿತೋಟದಲ್ಲಿ ಹಕ್ಕಲಾಯುವರು.
ערום ילינו מבלי לבוש ואין כסות בקרה | 7 |
೭ಹೊದಿಕೆ ಇಲ್ಲದೆ ಬೆತ್ತಲೆಯಾಗಿ ರಾತ್ರಿಯನ್ನು ಕಳೆಯುವರು, ಚಳಿಗಾಲದಲ್ಲಿಯೂ ಅವರಿಗೆ ಬಟ್ಟೆಯಿಲ್ಲ.
מזרם הרים ירטבו ומבלי מחסה חבקו-צור | 8 |
೮ಮಲೆನಾಡಿನ ದೊಡ್ಡ ಮಳೆಯಿಂದ ನೆನೆದುಹೋಗಿ, ಆಶ್ರಯವಿಲ್ಲದೆ ಬಂಡೆಯನ್ನು ಅಪ್ಪಿಕೊಳ್ಳುವರು.
יגזלו משד יתום ועל-עני יחבלו | 9 |
೯ತಂದೆಯಿಲ್ಲದ ಮಗುವನ್ನು ತಾಯಿಯ ಮೊಲೆಯಿಂದ ಕಿತ್ತು, ಬಡವರಿಂದ ಒತ್ತೆ ತೆಗೆದುಕೊಳ್ಳುವವರಿದ್ದಾರೆ.
ערום הלכו בלי לבוש ורעבים נשאו עמר | 10 |
೧೦ಬಟ್ಟೆಯಿಲ್ಲದೆ ಬೆತ್ತಲೆಯಾಗಿ ಅಲೆಯುವರು; ಹಸಿವಿನಿಂದಲೇ ಸಿವುಡುಗಳನ್ನು ಹೊರುವರು.
בין-שורתם יצהירו יקבים דרכו ויצמאו | 11 |
೧೧ಯಜಮಾನರ ಪೌಳಿಗೋಡೆಗಳೊಳಗೇ ಇದ್ದುಕೊಂಡು ಎಣ್ಣೆಗಾಣವನ್ನು ತಿರುಗಿಸುವರು; ದಾಹಗೊಂಡೇ ಅವರ ತೊಟ್ಟಿಗಳಲ್ಲಿ ದ್ರಾಕ್ಷಿಯನ್ನು ತುಳಿಯುವರು.
מעיר מתים ינאקו-- ונפש-חללים תשוע ואלוה לא-ישים תפלה | 12 |
೧೨ತುಂಬಿದ ಪಟ್ಟಣದೊಳಗಿಂದ ಜನರು ನರಳುವರು, ಗಾಯಪಟ್ಟವರು ಮೊರೆಯಿಡುವರು, ಆದರೆ ದೇವರಾದರೋ ಅವರ ಮೊರೆಗೆ ಕಿವಿಗೊಡನು.
המה היו--במרדי-אור לא-הכירו דרכיו ולא ישבו בנתיבתיו | 13 |
೧೩ಬೆಳಕಿನ ವಿರುದ್ಧ ತಿರುಗಿ ಬಿದ್ದವರು ಇದ್ದಾರೆ; ಇವರು ಹಗಲಿನ ದಾರಿಗಳನ್ನು ತಿಳಿಯದವರಾಗಿ, ಅದರ ಹಾದಿಗಳಲ್ಲಿ ಇರುವುದಿಲ್ಲ.
לאור יקום רוצח--יקטל-עני ואביון ובלילה יהי כגנב | 14 |
೧೪ಕೊಲೆಪಾತಕನು ಮುಂಜಾನೆ ಎದ್ದು, ದಿಕ್ಕಿಲ್ಲದ ಬಡವರನ್ನು ಕೊಂದು, ರಾತ್ರಿಯಲ್ಲಿ ಕಳ್ಳನಂತಿರುವನು.
ועין נאף שמרה נשף לאמר-- לא-תשורני עין וסתר פנים ישים | 15 |
೧೫ಜಾರನು ತಾನು, ಯಾರ ಕಣ್ಣಿಗೂ ಬೀಳಬಾರದು ಎಂದು, ಸಂಜೆಯನ್ನು ಎದುರು ನೋಡುತ್ತಿದ್ದು ಮುಖಕ್ಕೆ ಮುಸುಕು ಹಾಕಿಕೊಳ್ಳುವನು.
חתר בחשך בתים יומם חתמו-למו לא-ידעו אור | 16 |
೧೬ಅವರು ಕತ್ತಲಲ್ಲಿ ಕನ್ನಕೊರೆದು ಮನೆಗಳೊಳಗೆ ನುಗ್ಗಿ; ಹಗಲಿನಲ್ಲಿ ಅಡಗಿಕೊಂಡಿದ್ದು; ಬೆಳಕನ್ನು ತಿಳಿಯದೆ ಇರುವರು.
כי יחדו בקר למו צלמות כי-יכיר בלהות צלמות | 17 |
೧೭ಅವರೆಲ್ಲರಿಗೂ ಬೆಳಕು ಕಾರ್ಗತ್ತಲಿನಂತಿರುವುದು, ಕಾರ್ಗತ್ತಲಿನ ಅಪಾಯಗಳನ್ನು ಅವರು ಬಲ್ಲರಷ್ಟೆ.
קל-הוא על-פני-מים-- תקלל חלקתם בארץ לא-יפנה דרך כרמים | 18 |
೧೮(ನೀವು ಹೇಳುವುದೇನೆಂದರೆ) ದುಷ್ಟನು ಪ್ರವಾಹದಲ್ಲಿ ವೇಗವಾಗಿ ಕೊಚ್ಚಿಕೊಂಡು ಹೋಗುವನು, ಭೂಲೋಕದ ಅವನ ಆಸ್ತಿಯು ಶಾಪಗ್ರಸ್ತವಾಗಿರುವುದು. ದ್ರಾಕ್ಷಿತೋಟಗಳ ಕಡೆಗೆ ತಿರುಗಲಾರನು.
ציה גם-חם יגזלו מימי-שלג שאול חטאו (Sheol ) | 19 |
೧೯ಬರಗಾಲವೂ, ಬಿಸಿಲೂ ಹಿಮದ ನೀರನ್ನು ಹೀರುವ ಹಾಗೆ, ಪಾತಾಳವು ಪಾಪಿಗಳನ್ನು ಎಳೆದುಕೊಳ್ಳುವುದು. (Sheol )
ישכחהו רחם מתקו רמה-- עוד לא-יזכר ותשבר כעץ עולה | 20 |
೨೦ಹೆತ್ತ ಹೊಟ್ಟೆಯೇ ಅವನನ್ನು ಮರೆತುಬಿಡುವುದು; ಹುಳವು ಅವನ ಹೆಣವನ್ನು ಸವಿದು ತಿನ್ನುವುದು; ಇನ್ನು ಮೇಲೆ ಯಾರಿಗೂ ಅವನ ನೆನಪಿರದು; ಅನ್ಯಾಯವು ಮರದ ಹಾಗೆ ಮುರಿಯಲ್ಪಡುವುದು.
רעה עקרה לא תלד ואלמנה לא ייטיב | 21 |
೨೧ಅವನು ಮಕ್ಕಳಿಲ್ಲದ ಬಂಜೆಯರನ್ನು ನುಂಗಿಬಿಟ್ಟು, ವಿಧವೆಯರನ್ನು ಉದ್ಧರಿಸದೆ ಹೋದನಷ್ಟೆ (ಎಂಬುದೇ).
ומשך אבירים בכחו יקום ולא-יאמין בחיין | 22 |
೨೨ದೇವರಂತು ತನ್ನ ಶಕ್ತಿಯಿಂದ ಬಲಿಷ್ಠರನ್ನು ಉಳಿಸುತ್ತಾನೆ, ಅವರು ತಮ್ಮ ಜೀವವು ಇನ್ನು ಉಳಿಯುವುದಿಲ್ಲವೆಂದು ನಂಬಿದ್ದರೂ ಉದ್ಧಾರವಾಗುವರು.
יתן-לו לבטח וישען ועיניהו על-דרכיהם | 23 |
೨೩ದೇವರು ಅವರಿಗೆ ಅಭಯವನ್ನು ಕೊಟ್ಟಿದ್ದರಿಂದ ಅವರು ಅದನ್ನು ಆಧಾರಮಾಡಿಕೊಳ್ಳುವರು; ಆತನ ಕಟಾಕ್ಷವು ಅವರ ಮಾರ್ಗಗಳ ಮೇಲಿರುವುದು.
רומו מעט ואיננו והמכו ככל יקפצון וכראש שבלת ימלו | 24 |
೨೪ಅವರು ಉನ್ನತಿಗೆ ಬರುವರು; ಸ್ವಲ್ಪ ಕಾಲದ ಮೇಲೆ ಅವರು ಎಲ್ಲಿಯೋ? ಸರ್ವ ಮನುಷ್ಯರೊಂದಿಗೆ ಸುಗ್ಗಿಯ ತೆನೆಗಳಂತೆ ಕೊಯ್ಯಲ್ಪಟ್ಟು ಕೆಳಕ್ಕೆ ಬಿದ್ದು ಕೂಡಿಸಲ್ಪಡುವರು.
ואם-לא אפו מי יכזיבני וישם לאל מלתי | 25 |
೨೫ಹೀಗಲ್ಲವೆಂದು ನೀವು ನಂಬಿದರೆ ನಾನು ಸುಳ್ಳುಗಾರನೆಂದೂ ನನ್ನ ಮಾತುಗಳು ನಿರರ್ಥಕವೆಂದೂ; ನಿಮ್ಮಲ್ಲಿ ಯಾರು ಸ್ಥಾಪಿಸಬಲ್ಲರು?”