< איוב 28 >
כי יש לכסף מוצא ומקום לזהב יזקו | 1 |
ಬೆಳ್ಳಿ ದೊರಕುವ ಗಣಿ ಇದೆ. ಬಂಗಾರ ಪರಿಷ್ಕರಿಸಲು ಸ್ಥಳವೂ ಇದೆ.
ברזל מעפר יקח ואבן יצוק נחושה | 2 |
ಕಬ್ಬಿಣವನ್ನು ಭೂಮಿಯಿಂದ ತೆಗೆಯುತ್ತಾರೆ; ಅದಿರನ್ನು ತಾಮ್ರವಾಗಲು ಕರಗಿಸುತ್ತಾರೆ.
קץ שם לחשך ולכל-תכלית הוא חוקר אבן אפל וצלמות | 3 |
ಮನುಷ್ಯರು ಕತ್ತಲನ್ನು ಹೋಗಲಾಡಿಸುತ್ತಾರೆ; ಕಾರ್ಗತ್ತಲಲ್ಲಿಯೂ ಮರೆಯಾಗಿರುವ ಲೋಹಗಳಿಗಾಗಿ ಭೂಮಿಯ ಆಳ ಪ್ರದೇಶದೊಳಗೆ ಅವರು ಶೋಧಿಸುತ್ತಾರೆ.
פרץ נחל מעם-גר--הנשכחים מני-רגל דלו מאנוש נעו | 4 |
ಜನ ನಿವಾಸದಿಂದ ದೂರವಾಗಿ ಗಣಿ ತೋಡಿ, ಮನುಷ್ಯರು ನಡೆದಾಡದ ಸ್ಥಳಗಳಲ್ಲಿ ಇತರರಿಂದ ಪ್ರತ್ಯೇಕವಾಗಿ ಕೆಲಸ ಮಾಡುತ್ತಾರೆ.
ארץ--ממנה יצא-לחם ותחתיה נהפך כמו-אש | 5 |
ಭೂಮಿ ಆಹಾರವನ್ನು ಕೊಡುತ್ತದೆ; ಆದರೆ ಅದರ ಕೆಳಭಾಗವು ಬೆಂಕಿಯ ಹಾಗೆ ಬದಲಾಗುವುದು.
מקום-ספיר אבניה ועפרת זהב לו | 6 |
ಭೂಮಿಯ ಬಂಡೆಗಳು ಇಂದ್ರನೀಲಗಳು ಸಿಗುತ್ತವೆ; ಅದರ ಧೂಳಿನಲ್ಲಿ ಬಂಗಾರದ ಗಟ್ಟಿಗಳು ಇರುತ್ತವೆ.
נתיב לא-ידעו עיט ולא שזפתו עין איה | 7 |
ಆ ದಾರಿ ಯಾವ ಪಕ್ಷಿಗೂ ತಿಳಿಯದು; ಹದ್ದಿನ ಕಣ್ಣು ಸಹ ಅದನ್ನು ಕಂಡಿಲ್ಲ.
לא-הדריכוהו בני-שחץ לא-עדה עליו שחל | 8 |
ಕಾಡುಮೃಗಗಳು ಅದರ ಮೇಲೆ ನಡೆಯಲಿಲ್ಲ; ಸಿಂಹವು ಅದನ್ನು ದಾಟಲಿಲ್ಲ.
בחלמיש שלח ידו הפך משרש הרים | 9 |
ಮಾನವನ ಹಸ್ತವು ಬಂಡೆಗಳನ್ನು ಒಡೆಯುತ್ತದೆ; ಪರ್ವತಗಳ ಬುಡಗಳನ್ನು ಸಹ ಬರಿದಾಗಿ ಮಾಡುತ್ತವೆ.
בצורות יארים בקע וכל-יקר ראתה עינו | 10 |
ಬಂಡೆಗಳಲ್ಲಿ ಸುರಂಗಗಳನ್ನು ಕೊರೆಯುತ್ತಾರೆ; ಅವರ ಕಣ್ಣು ಅದರ ಎಲ್ಲಾ ಸಂಪತ್ತನ್ನು ನೋಡುತ್ತದೆ.
מבכי נהרות חבש ותעלמה יצא אור | 11 |
ಜನರು ನದಿಗಳ ಮೂಲಗಳನ್ನು ಹುಡುಕುತ್ತಾರೆ; ಅಡಗಿದ್ದ ಸಂಗತಿಗಳನ್ನು ಬೆಳಕಿಗೆ ತರುತ್ತಾರೆ.
והחכמה מאין תמצא ואי זה מקום בינה | 12 |
ಆದರೆ ಜ್ಞಾನವು ಎಲ್ಲಿ ದೊರಕುವುದು? ಗ್ರಹಿಕೆ ಇರುವ ಸ್ಥಳ ಎಲ್ಲಿ?
לא-ידע אנוש ערכה ולא תמצא בארץ החיים | 13 |
ಜ್ಞಾನದ ಮೌಲ್ಯ ಯಾರಿಗೂ ಗೊತ್ತಿಲ್ಲ; ಜೀವಿಸುವವರಲ್ಲಿ ಅದನ್ನು ಯಾರೂ ಕಂಡುಕೊಳ್ಳಲಾರರು.
תהום אמר לא בי-היא וים אמר אין עמדי | 14 |
ಸಾಗರ, “ಜ್ಞಾನವು ನನ್ನ ಹತ್ತಿರ ಇಲ್ಲ,” ಎನ್ನುತ್ತದೆ; ಸಮುದ್ರವು, “ಜ್ಞಾನವು ನನ್ನ ಬಳಿಯಲ್ಲಿ ಇಲ್ಲ,” ಎನ್ನುತ್ತದೆ.
לא-יתן סגור תחתיה ולא ישקל כסף מחירה | 15 |
ಚೊಕ್ಕ ಬಂಗಾರಕೊಟ್ಟು ಜ್ಞಾನವನ್ನು ಕೊಂಡುಕೊಳ್ಳಲಾಗದು; ಜ್ಞಾನದ ಬೆಲೆಗೆ ಬೆಳ್ಳಿಯನ್ನು ತೂಕಮಾಡಲಾಗದು.
לא-תסלה בכתם אופיר בשהם יקר וספיר | 16 |
ಜ್ಞಾನವನ್ನು ಓಫಿರಿನ ಬಂಗಾರಕ್ಕೂ, ಅಮೂಲ್ಯವಾದ ಗೋಮೇಧಿಕಕ್ಕೂ, ಇಂದ್ರನೀಲಕ್ಕೂ ಬೆಲೆ ಕಟ್ಟಲಾಗದು.
לא-יערכנה זהב וזכוכית ותמורתה כלי-פז | 17 |
ಬಂಗಾರವೂ, ಸ್ಪಟಿಕವೂ ಜ್ಞಾನಕ್ಕೆ ಸಮವಾಗಿರುವುದಿಲ್ಲ; ಬಂಗಾರದ ಆಭರಣಗಳು ಸಹ ಜ್ಞಾನಕ್ಕೆ ಸಮವಲ್ಲ.
ראמות וגביש לא יזכר ומשך חכמה מפנינים | 18 |
ಹವಳವೂ, ಸೂರ್ಯಕಾಂತ ಶಿಲೆಯೂ ಜ್ಞಾನಕ್ಕೆ ಹೋಲಿಸಲು ಅರ್ಹವಲ್ಲ; ಜ್ಞಾನದ ಬೆಲೆಯು ಮಾಣಿಕ್ಯಗಳಿಗಿಂತ ಎಷ್ಟೋ ಶ್ರೇಷ್ಠ!
לא-יערכנה פטדת-כוש בכתם טהור לא תסלה | 19 |
ಕೂಷ್ ದೇಶದ ಪುಷ್ಯರಾಗವು ಸಹ ಜ್ಞಾನಕ್ಕೆ ಹೋಲಿಸಲಾಗುವುದಿಲ್ಲ; ಶುದ್ಧ ಬಂಗಾರದಿಂದಲೂ ಜ್ಞಾನವನ್ನು ಕೊಂಡುಕೊಳ್ಳಲಾಗದು.
והחכמה מאין תבוא ואי זה מקום בינה | 20 |
ಆದರೆ ಜ್ಞಾನವು ಎಲ್ಲಿಂದ ಬರುವುದು? ಗ್ರಹಿಕೆಯ ಸ್ಥಳವು ಎಲ್ಲಿ?
ונעלמה מעיני כל-חי ומעוף השמים נסתרה | 21 |
ಎಲ್ಲಾ ಜೀವಿಗಳ ಕಣ್ಣಿಗೂ ಜ್ಞಾನ ಮರೆಯಾಗಿದೆ; ಆಕಾಶದ ಪಕ್ಷಿಗಳಿಗೂ ಅದು ಗೋಚರವಾಗದು.
אבדון ומות אמרו באזנינו שמענו שמעה | 22 |
ನಾಶಲೋಕವೂ ಮರಣವೂ, “ನಾವು ಜ್ಞಾನದ ಸುದ್ದಿಯನ್ನು ನಮ್ಮ ಕಿವಿಗಳಿಂದ ಕೇಳಿದ್ದೇವೆ ಅಷ್ಟೇ,” ಎನ್ನುತ್ತವೆ.
אלהים הבין דרכה והוא ידע את-מקומה | 23 |
ದೇವರು ಮಾತ್ರ ಜ್ಞಾನ ಮಾರ್ಗವನ್ನು ತಿಳಿದಿರುತ್ತಾರೆ; ಹೌದು, ದೇವರೇ ಜ್ಞಾನ ಸ್ಥಳವನ್ನು ತಿಳಿದಿದ್ದಾರೆ.
כי-הוא לקצות-הארץ יביט תחת כל-השמים יראה | 24 |
ದೇವರೊಬ್ಬರೇ ಭೂಮಿಯ ಕಟ್ಟಕಡೆಯ ತನಕ ದೃಷ್ಟಿಸಿ, ಆಕಾಶದ ಕೆಳಗಿನ ಸಮಸ್ತವನ್ನೂ ನೋಡುವವರಾಗಿದ್ದಾರೆ.
לעשות לרוח משקל ומים תכן במדה | 25 |
ದೇವರು ಗಾಳಿಗೆ ತಕ್ಕಷ್ಟು ತೂಕವನ್ನು ನೇಮಿಸಿ, ನೀರುಗಳನ್ನು ತಕ್ಕ ಪ್ರಮಾಣಗಳಿಂದ ಅಳತೆಮಾಡಿ,
בעשתו למטר חק ודרך לחזיז קלות | 26 |
ಮಳೆಗೆ ಕಟ್ಟಳೆಯನ್ನೂ, ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಏರ್ಪಡಿಸಿದಾಗಲೇ
אז ראה ויספרה הכינה וגם-חקרה | 27 |
ಜ್ಞಾನವನ್ನು ಕಂಡು ಲಕ್ಷಿಸಿದರು. ಹೌದು, ದೇವರು ಜ್ಞಾನವನ್ನು ದೃಢಪಡಿಸಿದ್ದಲ್ಲದೆ, ಅದನ್ನು ಪರೀಕ್ಷೆಮಾಡಿದರು.
ויאמר לאדם--הן יראת אדני היא חכמה וסור מרע בינה | 28 |
ದೇವರು ಮನುಷ್ಯನಿಗೆ, “ಇಗೋ, ಕರ್ತ ದೇವರಲ್ಲಿ ಭಯಭಕ್ತಿ ಇಡುವುದೇ ಜ್ಞಾನ! ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ,” ಎಂದು ಹೇಳಿದರು.