< איוב 29 >
ויסף איוב שאת משלו ויאמר | 1 |
೧ತರುವಾಯ ಯೋಬನು ಪ್ರಸ್ತಾಪವನ್ನೆತ್ತಿ ಇಂತೆಂದನು,
מי-יתנני כירחי-קדם כימי אלוה ישמרני | 2 |
೨“ಅಯ್ಯೋ ನಾನು ಹಿಂದಿನ ತಿಂಗಳುಗಳಲ್ಲಿ ಇದ್ದಂತೆ ಈಗಲೂ ಇದ್ದರೆ ಎಷ್ಟೋ ಸಂತೋಷವಾಗಿತ್ತು! ಆ ದಿನಗಳಲ್ಲಿ ದೇವರು ನನ್ನನ್ನು ಕಾಯುತ್ತಿದ್ದನಲ್ಲಾ!
בהלו נרו עלי ראשי לאורו אלך חשך | 3 |
೩ಆತನ ದೀಪವು ನನ್ನ ತಲೆಯ ಮೇಲೆ ಪ್ರಕಾಶಿಸುತ್ತಿತ್ತು, ಆತನ ಬೆಳಕಿನಿಂದ ಕತ್ತಲಲ್ಲೂ ಸಂಚರಿಸುತ್ತಿದ್ದೆನು.
כאשר הייתי בימי חרפי בסוד אלוה עלי אהלי | 4 |
೪ಆ ದಿನಗಳು ನನ್ನ ಜೀವಮಾನದ ಸುಗ್ಗೀಕಾಲವು, ದೇವರ ಸ್ನೇಹವು ನನ್ನ ಗುಡಾರವನ್ನು ಆವರಿಸಿಕೊಂಡಿತ್ತು.
בעוד שדי עמדי סביבותי נערי | 5 |
೫ಸರ್ವಶಕ್ತನಾದ ದೇವರು ಇನ್ನೂ ನನ್ನೊಂದಿಗಿದ್ದನು, ನನ್ನ ಮಕ್ಕಳು ನನ್ನ ಸುತ್ತಲಿದ್ದರು.
ברחץ הליכי בחמה וצור יצוק עמדי פלגי-שמן | 6 |
೬ಹಾಲು ತುಪ್ಪದಲ್ಲಿ ನನ್ನ ಪಾದಗಳನ್ನು ತೊಳೆಯುತ್ತಿದ್ದೆ, ಬಂಡೆಯು ನನಗೋಸ್ಕರ ಎಣ್ಣೆಯನ್ನು ಪ್ರವಾಹವಾಗಿ ಸುರಿಸುತ್ತಿತ್ತು.
בצאתי שער עלי-קרת ברחוב אכין מושבי | 7 |
೭ಊರ ಮುಂದಿನ ಚಾವಡಿಗೆ ಹೋದಾಗಲೂ, ಚೌಕದಲ್ಲಿ ಆಸನವನ್ನು ಹಾಕಿಸಿಕೊಂಡಾಗಲೂ
ראוני נערים ונחבאו וישישים קמו עמדו | 8 |
೮ಯೌವನಸ್ಥರು ನನ್ನನ್ನು ನೋಡಿ ಪಕ್ಕಕ್ಕೆ ಸರಿದು ನಿಲ್ಲುತ್ತಿದ್ದರು, ವೃದ್ಧರು ಎದ್ದು ನಿಂತರು.
שרים עצרו במלים וכף ישימו לפיהם | 9 |
೯ಪ್ರಭುಗಳು ಮೌನವಾಗಿ ಬಾಯ ಮೇಲೆ ಕೈಯಿಟ್ಟುಕೊಂಡರು.
קול-נגידים נחבאו ולשונם לחכם דבקה | 10 |
೧೦ಮುಖಂಡರ ನಾಲಿಗೆಯು ಸೇದಿಹೋಗಿ ಧ್ವನಿಯಡಗಿತು.
כי אזן שמעה ותאשרני ועין ראתה ותעידני | 11 |
೧೧ಕೇಳಿದ ಕಿವಿಯು ನನ್ನನ್ನು ಹರಸಿತು, ನೋಡಿದ ಕಣ್ಣು ಸಾಕ್ಷಿ ಕೊಟ್ಟಿತು.
כי-אמלט עני משוע ויתום ולא-עזר לו | 12 |
೧೨ಏಕೆಂದರೆ ಅಂಗಲಾಚುವ ಬಡವನನ್ನೂ, ಸಹಾಯಕನಿಲ್ಲದ ಅನಾಥನನ್ನೂ ರಕ್ಷಿಸುವವನಾಗಿದ್ದೆನು.
ברכת אבד עלי תבא ולב אלמנה ארנן | 13 |
೧೩ಗತಿಯಿಲ್ಲದವನು ನನ್ನನ್ನು ಹರಸುತ್ತಿದ್ದನು, ವಿಧವೆಯ ಹೃದಯವನ್ನು ಉತ್ಸಾಹಗೊಳಿಸುತ್ತಿದ್ದೆನು.
צדק לבשתי וילבשני כמעיל וצניף משפטי | 14 |
೧೪ನಾನು ಧರ್ಮವನ್ನು ಧರಿಸಿಕೊಂಡೆನು, ಧರ್ಮವು ನನ್ನನ್ನು ಧರಿಸಿತು. ನನ್ನ ನ್ಯಾಯವೇ ನನಗೆ ನಿಲುವಂಗಿಯೂ, ಕಿರೀಟವೂ ಆಗಿತ್ತು.
עינים הייתי לעור ורגלים לפסח אני | 15 |
೧೫ನಾನು ಕುರುಡನಿಗೆ ಕಣ್ಣಾಗಿಯೂ, ಕುಂಟನಿಗೆ ಕಾಲಾಗಿಯೂ ಇದ್ದೆನು.
אב אנכי לאביונים ורב לא-ידעתי אחקרהו | 16 |
೧೬ದರಿದ್ರರಿಗೆ ತಂದೆಯಾಗಿ, ಪರಿಚಯವಿಲ್ಲದವನ ವ್ಯಾಜ್ಯವನ್ನೂ ವಿಚಾರಿಸುತ್ತಿದ್ದೆನು.
ואשברה מתלעות עול ומשניו אשליך טרף | 17 |
೧೭ಅನ್ಯಾಯಗಾರನ ಕೋರೆಗಳನ್ನು ಮುರಿದು, ಅವನ ಹಲ್ಲುಗಳಿಂದ ಬೇಟೆಯನ್ನು ಕಿತ್ತು ತರುತ್ತಿದ್ದೆನು.
ואמר עם-קני אגוע וכחול ארבה ימים | 18 |
೧೮ಆಗ ನಾನು ಹೇಳಿದ್ದೇನೆಂದರೆ, ‘ನನ್ನ ಗೂಡಿನಲ್ಲಿಯೇ ನಾನು ಸಾಯುವೆನು, ನನ್ನ ದಿನಗಳು ಮರಳಿನಂತೆ ಅಸಂಖ್ಯವಾಗಿರುವವು.
שרשי פתוח אלי-מים וטל ילין בקצירי | 19 |
೧೯ನನ್ನ ಬೇರುಗಳು ನೀರಿನವರೆಗೂ ವ್ಯಾಪಿಸಿಕೊಂಡಿರುವವು, ರಾತ್ರಿಯಲ್ಲಿ ಇಬ್ಬನಿಯು ನನ್ನ ರೆಂಬೆಗಳ ಮೇಲೆ ಬಿದ್ದಿರುವುದು.
כבודי חדש עמדי וקשתי בידי תחליף | 20 |
೨೦ನನ್ನ ಮಾನವು ಹೊಸದಾಗುತ್ತಲೂ, ನನ್ನ ಬಿಲ್ಲು ಕೈಯಲ್ಲಿ ಬಲಗೊಳ್ಳುತ್ತಲೂ ಇರುವವು’ ಎಂಬುದೇ.
לי-שמעו ויחלו וידמו למו עצתי | 21 |
೨೧ಜನರು ಕಾದುಕೊಂಡಿದ್ದು ನನ್ನ ಮಾತಿಗೆ ಕಿವಿಗೊಟ್ಟು, ನನ್ನ ಆಲೋಚನೆಯನ್ನು ತಿಳಿದುಕೊಳ್ಳಬೇಕೆಂದು ಮೌನವಾಗಿದ್ದರು.
אחרי דברי לא ישנו ועלימו תטף מלתי | 22 |
೨೨ನಾನು ಮಾತನಾಡಿದ ಮೇಲೆ ಮತ್ತೆ ಅವರು ಮಾತನಾಡುತ್ತಿರಲಿಲ್ಲ, ನನ್ನ ವಚನವೃಷ್ಟಿಯು ಅವರ ಮೇಲೆ ಬೀಳುತ್ತಿತ್ತು,
ויחלו כמטר לי ופיהם פערו למלקוש | 23 |
೨೩ಮಳೆಯನ್ನು ಹೇಗೋ ಹಾಗೆಯೇ ನನ್ನನ್ನು ಎದುರು ನೋಡುತ್ತಾ, ಮುಂಗಾರಿಗೋ ಎಂಬಂತೆ ಬಾಯ್ದೆರೆಯುತ್ತಿದ್ದರು.
אשחק אלהם לא יאמינו ואור פני לא יפילון | 24 |
೨೪ನಾನು ಅವರನ್ನು ನೋಡಿ ನಗಲು ಅವರು ಧೈರ್ಯಗೆಟ್ಟರು, ನನ್ನ ಮುಖಕಾಂತಿಯನ್ನೋ ಅವರು ಎಂದೂ ಕುಂದಿಸಲಿಲ್ಲ.
אבחר דרכם ואשב ראש ואשכון כמלך בגדוד כאשר אבלים ינחם | 25 |
೨೫ನಾನು ಅವರಿಗೆ ತಕ್ಕ ಮಾರ್ಗವನ್ನು ಆರಿಸಿಕೊಟ್ಟು, ತನ್ನ ಸೈನ್ಯಗಳ ಮಧ್ಯದಲ್ಲಿ ಕುಳಿತಿರುವ ರಾಜನಂತೆಯೂ, ದುಃಖಿತರನ್ನು ಸಂತೈಸುವ ಮುಖಂಡನಾಗಿ ಆಸೀನನಾಗಿದ್ದೆನು.”