< איוב 30 >
ועתה שחקו עלי-- צעירים ממני לימים אשר-מאסתי אבותם-- לשית עם-כלבי צאני | 1 |
೧ಈಗಲಾದರೋ ನನಗಿಂತ ಚಿಕ್ಕವಯಸ್ಸಿನವರು ನನ್ನನ್ನು ಪರಿಹಾಸ್ಯಮಾಡುತ್ತಾರೆ; ಇವರ ಹೆತ್ತವರನ್ನು ನನ್ನ ಕುರಿ ಮಂದೆಯ ನಾಯಿಗಳ ಸಂಗಡ ಸೇರಿಸುವುದಕ್ಕೂ ಉದಾಸಿನ ಮಾಡಿದೆನು.
גם-כח ידיהם למה לי עלימו אבד כלח | 2 |
೨ಅವರ ಕೈ ಬಲದಿಂದ ನನಗೆ ಏನಾದೀತು? ಅವರ ಪುಷ್ಟಿಯು ಕುಗ್ಗಿಹೋಗಿದೆಯಷ್ಟೆ.
בחסר ובכפן גלמוד הערקים ציה--אמש שואה ומשאה | 3 |
೩ಅವರು ಕೊರತೆಯಿಂದಲೂ, ಹಸಿವಿನಿಂದಲೂ ಸೊರಗಿ, ನಿನ್ನೆಯವರೆಗೂ ಹಾಳುಬೀಳಾದ ಒಣ ನೆಲವನ್ನು ನೆಕ್ಕುವರು.
הקטפים מלוח עלי-שיח ושרש רתמים לחמם | 4 |
೪ಪೊದೆಗಳಲ್ಲಿ ಉಪ್ಪಿನ ಸೊಪ್ಪನ್ನು ಕಿತ್ತು, ತಿಂದು ಜಾಲಿಯ ಬೇರುಗಳನ್ನೂ ಆಹಾರಮಾಡಿಕೊಳ್ಳುವರು.
מן-גו יגרשו יריעו עלימו כגנב | 5 |
೫ಜನರು ಅವರನ್ನು ತಮ್ಮ ಮಧ್ಯದಿಂದ ತಳ್ಳಿಬಿಟ್ಟು, ಕಳ್ಳನನ್ನು ಓಡಿಸುವ ಹಾಗೆ ಕೂಗಾಡಿ ಓಡಿಸುವರು.
בערוץ נחלים לשכן חרי עפר וכפים | 6 |
೬ಅವರು ಭಯಂಕರವಾದ ತಗ್ಗುಗಳ ಸಂದುಗಳಲ್ಲಿ ವಾಸಿಸತಕ್ಕವರು, ಭೂಮಿಯಲ್ಲಿಯೂ, ಬಂಡೆಗಳಲ್ಲಿಯೂ ಇರುವ ಗುಹೆಗಳೇ ಅವರ ಮನೆಗಳು.
בין-שיחים ינהקו תחת חרול יספחו | 7 |
೭ಪೊದೆಗಳ ಮಧ್ಯದಲ್ಲಿ ಅರಚುವರು ಕತ್ತೆಗಳಂತೆ, ಮುಳ್ಳುಗಿಡಗಳ ಕೆಳಗೆ ಕೂಡಿಕೊಳ್ಳುವರು.
בני-נבל גם-בני בלי-שם-- נכאו מן-הארץ | 8 |
೮ಮೂರ್ಖರ ಮಕ್ಕಳಾದ ಈ ನೀಚ ಜಾತಿಯವರು ದೇಶಭ್ರಷ್ಟರು. ಅವರು ಕೊರಡೆಗಳ ಪೆಟ್ಟಿನಿಂದ ದೇಶದಿಂದ ಹೊರಹಾಕಲ್ಪಟ್ಟಿದ್ದರೆ.
ועתה נגינתם הייתי ואהי להם למלה | 9 |
೯ಈಗಲಾದರೋ ನನ್ನ ಮೇಲೆ ಗೇಲಿಮಾಡುವ ಹಾಡುಗಳನ್ನು ಕಟ್ಟುವರು. ಮತ್ತು ಅವರ ಕಟ್ಟುಕಥೆಗಳಿಗೆ ಆಸ್ಪದವಾಗಿದ್ದೇನೆ.
תעבוני רחקו מני ומפני לא-חשכו רק | 10 |
೧೦ನನಗೆ ಅಸಹ್ಯಪಟ್ಟು ದೂರ ನಿಂತು, ನನ್ನ ಮೇಲೆ ಉಗುಳುವುದಕ್ಕೂ ಹಿಂದೆಗೆಯರು.
כי-יתרו (יתרי) פתח ויענני ורסן מפני שלחו | 11 |
೧೧ದೇವರು ತಾನು ಹಾಕಿದ್ದ ಕಟ್ಟನ್ನು ಸಡಲಿಸಿ ನನ್ನನ್ನು ಬಾಧಿಸುವುದಕ್ಕೆ ಅವರನ್ನು ಬಿಟ್ಟಿದ್ದಾನೆ. ಅವರು ನನ್ನ ಎದುರಿನಲ್ಲಿಯೇ ಕಡಿವಾಣವನ್ನು ಕಿತ್ತು ಹಾಕಿದ್ದಾರೆ.
על-ימין פרחח יקומו רגלי שלחו ויסלו עלי ארחות אידם | 12 |
೧೨ಆ ಕಲಹಗಾರರು ನನ್ನ ಬಲಗಡೆ ಎದ್ದು, ನನ್ನ ಕಾಲುಗಳನ್ನು ಹಿಂದಕ್ಕೆ ತಳ್ಳುತ್ತಾ ನನ್ನ ನಾಶಕ್ಕಾಗಿ ಹೊಂಚು ಹಾಕಿದ್ದಾರೆ.
נתסו נתיבתי להותי יעילו לא עזר למו | 13 |
೧೩ಅವರು ನನ್ನ ದಾರಿಯನ್ನು ಕಡಿದು, ನನ್ನ ಉಪದ್ರವವನ್ನು ಹೆಚ್ಚಿಸುತ್ತಾರೆ; ಅವರನ್ನು ಎದುರಿಸತಕ್ಕ ಸಹಾಯಕನು ಯಾರೂ ಇಲ್ಲ.
כפרץ רחב יאתיו תחת שאה התגלגלו | 14 |
೧೪ಕೋಟೆ ಬಿರುಕುಗಳಲ್ಲಿ ನುಗ್ಗಿ, ಹಾಳುಬೀಳಿನಲ್ಲಿ ನಿಂತಿರುವ ನನ್ನ ಮೇಲೆ ಹೊರಳುತ್ತಾರೆ.
ההפך עלי בלהות תרדף כרוח נדבתי וכעב עברה ישעתי | 15 |
೧೫ಅಪಾಯಗಳು ನನ್ನ ಮೇಲೆ ತಿರುಗಿಬಿದ್ದು; ನನ್ನ ಮಾನವನ್ನು ಗಾಳಿಯಂತೆ ಹೊಡೆದುಕೊಂಡು ಹೋಗುತ್ತಿವೆ; ನನ್ನ ಕ್ಷೇಮವು ಮೇಘದ ಹಾಗೆ ಹರಿದು ಹೋಯಿತು.
ועתה--עלי תשתפך נפשי יאחזוני ימי-עני | 16 |
೧೬ಈಗ ನನ್ನ ಆತ್ಮವು ಕರಗಿಹೋಗಿದೆ, ಬಾಧೆಯ ದಿನಗಳು ನನ್ನನ್ನು ಹಿಡಿದುಕೊಂಡಿವೆ.
לילה--עצמי נקר מעלי וערקי לא ישכבון | 17 |
೧೭ರಾತ್ರಿಯು ನನ್ನ ಎಲುಬುಗಳನ್ನು ಕೊರೆದು ಕೀಳುತ್ತದೆ, ನನ್ನನ್ನು ಕಚ್ಚುತ್ತಿರುವ ಸಂಕಟಗಳು ಸುಮ್ಮನಿರುವುದಿಲ್ಲ.
ברב-כח יתחפש לבושי כפי כתנתי יאזרני | 18 |
೧೮ನನ್ನ ಬಟ್ಟೆಯು ರೋಗದ ಅಧಿಕ ಬಲದಿಂದ ಕೆಟ್ಟುಹೋಗಿ; ಅಂಗಿಯ ಕೊರಳ ಪಟ್ಟಿಯ ಹಾಗೆ ನನ್ನನ್ನು ಸುತ್ತಿಕೊಂಡಿದೆ.
הרני לחמר ואתמשל כעפר ואפר | 19 |
೧೯ಆತನು ನನ್ನನ್ನು ಕೆಸರಿನಲ್ಲಿ ಕೆಡವಿದ್ದಾನೆ, ಧೂಳುಬೂದಿಗಳಿಗೆ ಸಮಾನನಾಗಿದ್ದೇನೆ.
אשוע אליך ולא תענני עמדתי ותתבנן בי | 20 |
೨೦ಓ ದೇವರೇ ನಾನು ನಿನಗೆ ಮೊರೆಯಿಟ್ಟರೂ ನೀನು ಉತ್ತರಕೊಡುವುದಿಲ್ಲ, ಎದ್ದು ನಿಂತರೂ ನನ್ನನ್ನು ಸುಮ್ಮನೆ ನೋಡುತ್ತಿರುವಿ.
תהפך לאכזר לי בעצם ידך תשטמני | 21 |
೨೧ನೀನು ನನಗೆ ಕ್ರೂರನಾಗಿ ಮಾರ್ಪಟ್ಟಿದ್ದಿ, ನಿನ್ನ ಕೈಬಲದಿಂದ ನನ್ನನ್ನು ಹಿಂಸಿಸುತ್ತಿ.
תשאני אל-רוח תרכיבני ותמגגני תשוה (תשיה) | 22 |
೨೨ನನ್ನನ್ನು ಬಿರುಗಾಳಿಗೆ ಎತ್ತಿ ತೂರಿಬಿಟ್ಟು, ಅದರ ಆರ್ಭಟದಲ್ಲಿ ಮಾಯಮಾಡುತ್ತಿ.
כי-ידעתי מות תשיבני ובית מועד לכל-חי | 23 |
೨೩ನೀನು ನನ್ನನ್ನು ಮರಣಕ್ಕೆ ಗುರಿಮಾಡಿ, ಸಮಸ್ತ ಜೀವಿಗಳು ಹೋಗಬೇಕಾದ ಮನೆಗೆ ಸೇರಿಸುವಿಯೆಂದು ನನಗೆ ಗೊತ್ತೇ ಇದೆ.
אך לא-בעי ישלח-יד אם-בפידו להן שוע | 24 |
೨೪ಆದರೂ ನಾಶಕ್ಕೆ ಒಳಗಾದವನು ಕೈಚಾಚುವುದಿಲ್ಲವೋ? ಆಪತ್ತಿಗೆ ಒಳಪಟ್ಟವನು ಕೂಗಿಕೊಳ್ಳುವುದಿಲ್ಲವೋ?
אם-לא בכיתי לקשה-יום עגמה נפשי לאביון | 25 |
೨೫ಕಷ್ಟಾನುಭವಿಯನ್ನು ಕಂಡು ನಾನು ಕಣ್ಣೀರಿಡಲಿಲ್ಲವೇ? ದಿಕ್ಕಿಲ್ಲದವನಿಗೆ ದುಃಖಿಸುವವನೂ ಆಗಿದ್ದೇನಷ್ಟೆ.
כי טוב קויתי ויבא רע ואיחלה לאור ויבא אפל | 26 |
೨೬ನಾನು ಒಳ್ಳೆಯದನ್ನು ನಿರೀಕ್ಷಿಸುತ್ತಿರುವಲ್ಲಿ ಕೇಡು ಬಂತು, ಬೆಳಕನ್ನು ಎದುರು ನೋಡುತ್ತಿರುವಾಗ ಕತ್ತಲಾಯಿತು.
מעי רתחו ולא-דמו קדמני ימי-עני | 27 |
೨೭ನನ್ನ ಹೃದಯವು ಕುದಿಯುತ್ತಿದೆ, ಅದಕ್ಕೆ ಶಾಂತಿಯಿಲ್ಲ; ಬಾಧೆಯ ದಿನಗಳು ನನಗೆ ಒದಗಿವೆ.
קדר הלכתי בלא חמה קמתי בקהל אשוע | 28 |
೨೮ಸಂತೈಸುವ ಸೂರ್ಯನಿಲ್ಲದೆ; ಮಂಕುಬಡಿದಂತೆ ಅಲೆಯುತ್ತಾ ಸಭೆಯ ಮಧ್ಯನಿಂತು ಅಂಗಲಾಡುತ್ತಿದ್ದೇನೆ. ಸಂಘದಲ್ಲಿ ನಿಂತು ಅಂಗಲಾಚಿಕೊಳ್ಳುತ್ತೇನೆ.
אח הייתי לתנים ורע לבנות יענה | 29 |
೨೯ನಾನು ನರಿಗಳ ತಮ್ಮನೂ, ಉಷ್ಟ್ರಪಕ್ಷಿಗಳ ಗೆಳೆಯನೂ ಆಗಿದ್ದೇನೆ.
עורי שחר מעלי ועצמי-חרה מני-חרב | 30 |
೩೦ನನ್ನ ಚರ್ಮವು ಕರಿದಾಗಿ ಉದುರುತ್ತದೆ, ನನ್ನ ಎಲುಬುಗಳು ತಾಪದಿಂದ ಬೆಂದಿದೆ.
ויהי לאבל כנרי ועגבי לקול בכים | 31 |
೩೧ಇದರಿಂದ ನನ್ನ ಕಿನ್ನರಿಯಲ್ಲಿ ಗೋಳಾಟವೂ, ನನ್ನ ಕೊಳಲಿನಲ್ಲಿ ಅಳುವ ಧ್ವನಿಯೂ ಕೇಳಿಸುತ್ತವೆ.