< איוב 32 >

וישבתו שלשת האנשים האלה-- מענות את-איוב כי הוא צדיק בעיניו 1
ಆಗ ಯೋಬನು ಸ್ವಂತ ಗಣನೆಯಲ್ಲಿ ನೀತಿವಂತನಾಗಿದ್ದರಿಂದ ಆ ಮೂವರು ಅವನಿಗೆ ಉತ್ತರಕೊಡುವುದನ್ನು ನಿಲ್ಲಿಸಿಬಿಟ್ಟರು.
ויחר אף אליהוא בן-ברכאל הבוזי-- ממשפחת-רם באיוב חרה אפו-- על-צדקו נפשו מאלהים 2
ಆಮೇಲೆ ಬೂಜ್ ಕುಲಕ್ಕೂ, ರಾಮ್ ಗೋತ್ರಕ್ಕೂ ಸೇರಿದ ಬರಕೇಲನ ಮಗನಾದ ಎಲೀಹುವಿಗೆ ಸಿಟ್ಟೇರಿತು; ಯೋಬನು ದೇವರಿಗಿಂತಲೂ ತಾನೇ ನ್ಯಾಯವಂತನೆಂದು ಎಣಿಸಿಕೊಂಡಿದ್ದರಿಂದ ಅವನ ಮೇಲೆ ಎಲೀಹುವಿಗೆ ಸಿಟ್ಟು ಬಂತು.
ובשלשת רעיו חרה אפו על אשר לא-מצאו מענה-- וירשיעו את-איוב 3
ಇದಲ್ಲದೆ ಅವನ ಮೂವರು ಸ್ನೇಹಿತರು ಯೋಬನನ್ನು ಖಂಡಿಸತಕ್ಕ ಉತ್ತರವನ್ನು ಹೇಳಲಾರದೆ ಹೋದುದರಿಂದ ಅವನು ಅವರ ಮೇಲೂ ಕೋಪಿಸಿಕೊಂಡನು.
ואליהו--חכה את-איוב בדברים כי זקנים-המה ממנו לימים 4
ಅವರು ತನಗಿಂತ ವೃದ್ಧರಾಗಿದ್ದ ಕಾರಣ, ಎಲೀಹು ಯೋಬನೊಂದಿಗೆ ಮೊದಲು ಮಾತನಾಡದೆ ತಡೆದಿದ್ದನು.
וירא אליהוא--כי אין מענה בפי שלשת האנשים ויחר אפו 5
ಎಲೀಹು ಈ ಮೂವರ ಬಾಯಲ್ಲಿ ತಕ್ಕ ಉತ್ತರವಿಲ್ಲದ್ದನ್ನು ಕಂಡು ರೋಷಗೊಂಡನು.
ויען אליהוא בן ברכאל הבוזי-- ויאמר צעיר אני לימים ואתם ישישים על-כן זחלתי ואירא מחות דעי אתכם 6
ಆಗ ಬೂಜ್ ಕುಲಕ್ಕೆ ಸೇರಿದ ಬರಕೇಲನ ಮಗನಾದ ಆ ಎಲೀಹು ಇಂತೆಂದನು, “ನಾನು ಯೌವನಸ್ಥನು, ನೀವು ನನಗಿಂತ ಹಿರಿಯರು; ಆದುದರಿಂದ ಸಂಕೋಚಪಟ್ಟು ನನ್ನ ಅಭಿಪ್ರಾಯವನ್ನು ನಿಮಗೆ ಅರಿಕೆಮಾಡಲು ಹೆದರಿದೆನು.”
אמרתי ימים ידברו ורב שנים ידיעו חכמה 7
ಅದಕ್ಕೆ ಅವನು, “ಹೆಚ್ಚು ದಿನಗಳವರು ಮಾತನಾಡಲಿ, ಬಹಳ ವರ್ಷದವರು ಜ್ಞಾನೋಪದೇಶಮಾಡಲಿ” ಎಂದುಕೊಂಡಿದ್ದೆನು.
אכן רוח-היא באנוש ונשמת שדי תבינם 8
ಆದರೆ ಮನುಷ್ಯರಲ್ಲಿ ಆತ್ಮವೊಂದುಂಟು, ಸರ್ವಶಕ್ತನಾದ ದೇವರ ಶ್ವಾಸದಿಂದ ಅವರಿಗೆ ವಿವೇಕ ದೊರೆಯುತ್ತದೆ.
לא-רבים יחכמו וזקנים יבינו משפט 9
ವೃದ್ಧರೇ ಜ್ಞಾನಿಗಳಲ್ಲ, ಮುದುಕರು ಮಾತ್ರ ನ್ಯಾಯ ಬಲ್ಲವರಲ್ಲ.
לכן אמרתי שמעה-לי אחוה דעי אף-אני 10
೧೦ಆದಕಾರಣ, “ನನ್ನ ಕಡೆಗೆ ಕಿವಿಗೊಡಿರಿ, ನಾನು ನನ್ನ ಅಭಿಪ್ರಾಯವನ್ನು ಅರಿಕೆಮಾಡುವೆನೆಂದು ಹೇಳಿಕೊಳ್ಳುತ್ತೇನೆ.
הן הוחלתי לדבריכם--אזין עד-תבונתיכם עד-תחקרון מלין 11
೧೧ಇಗೋ, ನೀವು ಆಡುತ್ತಿದ್ದ ಮಾತುಗಳನ್ನು ಕಾದು ಕೇಳುತ್ತಿದ್ದೆನು; ಏನು ಹೇಳಬೇಕೆಂದು ನೀವು ಆಲೋಚಿಸುತ್ತಿದ್ದಾಗ ನಿಮ್ಮ ನ್ಯಾಯಗಳಿಗಾಗಿ ಕಿವಿಗೊಟ್ಟಿದ್ದೆನು.
ועדיכם אתבונן והנה אין לאיוב מוכיח--עונה אמריו מכם 12
೧೨ನಿಮ್ಮ ಮೇಲೆ ಲಕ್ಷ್ಯವಿಟ್ಟಿದ್ದೆನು; ಆಹಾ, ನಿಮ್ಮಲ್ಲಿ ಯೋಬನನ್ನು ಖಂಡಿಸಬಲ್ಲವನು, ಅವನ ಮಾತುಗಳಿಗೆ ಉತ್ತರಕೊಡತಕ್ಕವನು, ಯಾರೂ ಸಿಕ್ಕಲಿಲ್ಲ.
פן-תאמרו מצאנו חכמה אל ידפנו לא-איש 13
೧೩‘ನಾವು ಅವನಲ್ಲಿ ಜ್ಞಾನವನ್ನು ಕಂಡುಕೊಂಡಿದ್ದೇವೆ, ದೇವರೇ ಅವನನ್ನು ಖಂಡಿಸಿಬಿಡಲಿ, ಮನುಷ್ಯನಿಂದಾಗುವುದಿಲ್ಲ’ ಎಂದು ಅಂದುಕೊಳ್ಳಬೇಡಿರಿ.
ולא-ערך אלי מלין ובאמריכם לא אשיבנו 14
೧೪ಅವನು ನನಗೆ ಪ್ರತಿಕೂಲವಾಗಿ ಇನ್ನೂ ವಾದವನ್ನು ಹೂಡಲಿಲ್ಲ; ನಾನೂ ಅವನಿಗೆ ಉತ್ತರಕೊಡುವಾಗ ನಿಮ್ಮ ಹಾಗೆ ಮಾತನಾಡೆನು.
חתו לא-ענו עוד העתיקו מהם מלים 15
೧೫ಅವರು ಬೆರಗಾಗಿ ಇನ್ನು ಉತ್ತರಕೊಡಲಾರರು, ಅವರ ಸೊಲ್ಲೇ ಅಡಗಿಹೋಯಿತು.
והוחלתי כי-לא ידברו כי עמדו לא-ענו עוד 16
೧೬ಅವರು ಇನ್ನು ಉತ್ತರಕೊಡದೆ ಮೌನವಾಗಿ ಸುಮ್ಮನೆ ನಿಂತಿದ್ದರೆ, ನಾನೂ ಕಾದುಕೊಂಡಿರಬೇಕೋ?
אענה אף-אני חלקי אחוה דעי אף-אני 17
೧೭ನಾನೂ ನನ್ನ ಪಾಲಿನ ಉತ್ತರವನ್ನು ಹೇಳುವೆನು, ನಾನೂ ನನ್ನ ಅಭಿಪ್ರಾಯವನ್ನು ತಿಳಿಸುವೆನು.
כי מלתי מלים הציקתני רוח בטני 18
೧೮ನನ್ನಲ್ಲಿ ಮಾತುಗಳು ತುಂಬಿವೆ, ನನ್ನ ಅಂತರಾತ್ಮವು ನನ್ನನ್ನು ಒತ್ತಾಯಪಡಿಸುತ್ತದೆ.
הנה-בטני--כיין לא-יפתח כאבות חדשים יבקע 19
೧೯ಆಹಾ, ದ್ರಾಕ್ಷಾರಸವನ್ನು ತುಂಬಿ, ಬಾಯಿಕಟ್ಟಿದ ಹೊಸ ಬುದ್ದಲಿಗಳಂತೆ ನನ್ನ ಹೊಟ್ಟೆಯು ಒಡೆದುಹೋಗುವ ಹಾಗಿದೆ.
אדברה וירוח-לי אפתח שפתי ואענה 20
೨೦ನನಗೆ ಉಪಶಮನವಾಗುವ ಹಾಗೆ ಮಾತನಾಡುವೆನು. ನನ್ನ ತುಟಿಗಳನ್ನು ತೆರೆದು ಉತ್ತರ ಹೇಳುವೆನು.
אל-נא אשא פני-איש ואל-אדם לא אכנה 21
೨೧ಆದರೆ ನಾನು ಯಾರಿಗೂ ಮುಖದಾಕ್ಷಿಣ್ಯವನ್ನು ತೋರಿಸಬಾರದು, ಯಾವ ಮನುಷ್ಯನಿಗಾದರೂ ಮುಖಸ್ತುತಿಯನ್ನು ಮಾಡಕೂಡದು.
כי לא ידעתי אכנה כמעט ישאני עשני 22
೨೨ಮುಖಸ್ತುತಿಯನ್ನು ಮಾಡುವುದಕ್ಕೆ ನನ್ನಿಂದಾಗುವುದಿಲ್ಲ; ಮಾಡಿದರೆ ನನ್ನ ಸೃಷ್ಟಿಕರ್ತನು ನನ್ನನ್ನು ಬೇಗ ನಿರ್ಮೂಲ ಮಾಡುವೆನು.

< איוב 32 >