< איוב 33 >
ואולם--שמע-נא איוב מלי וכל-דברי האזינה | 1 |
೧ಅದಿರಲಿ, ಯೋಬನೇ, ನನ್ನ ಮಾತನ್ನು ಕೇಳು, ನನ್ನ ಮಾತುಗಳಿಗೆಲ್ಲಾ ಕಿವಿಗೊಡು.
הנה-נא פתחתי פי דברה לשוני בחכי | 2 |
೨ಇಗೋ, ನನ್ನ ಬಾಯನ್ನು ತೆರೆದಿದ್ದೇನೆ, ನನ್ನ ನಾಲಿಗೆಯು ಬಾಯಿಯೊಳಗಿಂದ ಮಾತನಾಡುತ್ತಿದೆ.
ישר-לבי אמרי ודעת שפתי ברור מללו | 3 |
೩ನನ್ನ ಹೃದಯದ ಯಥಾರ್ಥತ್ವವನ್ನು ನನ್ನ ಮಾತುಗಳೇ ತಿಳಿಸುವವು, ನನ್ನ ತುಟಿಗಳು ತಿಳಿದುಕೊಂಡದ್ದನ್ನೇ ಸತ್ಯವಾಗಿ ಹೇಳುವವು.
רוח-אל עשתני ונשמת שדי תחיני | 4 |
೪ನಾನು ದೇವರಾತ್ಮನಿಂದಲೇ ನಿರ್ಮಿತನಾಗಿದ್ದೇನೆ, ನನ್ನ ಜೀವವು ಸರ್ವಶಕ್ತನಾದ ದೇವರ ಶ್ವಾಸದಿಂದುಂಟಾಗಿದೆ.
אם-תוכל השיבני ערכה לפני התיצבה | 5 |
೫ನಿನಗೆ ಸಾಮರ್ಥ್ಯವಿದ್ದರೆ ನನಗೆ ಉತ್ತರಕೊಡು, ನನ್ನೆದುರಿನಲ್ಲಿಯೇ ವಾದವನ್ನು ಹೂಡಿ ನಿಂತುಕೋ.
הן-אני כפיך לאל מחמר קרצתי גם-אני | 6 |
೬ನೋಡು, ನಾನು ದೇವರ ದೃಷ್ಟಿಯಲ್ಲಿ ನಿನ್ನ ಹಾಗೆಯೇ ಇದ್ದೇನೆ. ನಾನೂ ಜೇಡಿಮಣ್ಣಿನಿಂದ ರೂಪಿಸಲ್ಪಟ್ಟಿದ್ದೇನೆ.
הנה אמתי לא תבעתך ואכפי עליך לא-יכבד | 7 |
೭ಇಗೋ, ನನ್ನ ಭೀತಿಯು ನಿನ್ನನ್ನು ಹೆದರಿಸಲಾರದು, ನನ್ನ ಒತ್ತಾಯವು ನಿನಗೆ ಹೊರೆಯಾಗಿರದು.
אך אמרת באזני וקול מלין אשמע | 8 |
೮ನಿನ್ನ ನುಡಿಯ ಧ್ವನಿಯನ್ನು ಕೇಳಿದ್ದೇನೆ, ನನ್ನ ಕಿವಿಗೆ ಬಿದ್ದ ಈ ಮಾತುಗಳನ್ನು ಆಡಿದ್ದಿ,
זך אני בלי-פשע חף אנכי ולא עון לי | 9 |
೯‘ನಾನು ಪರಿಶುದ್ಧನು, ನನ್ನೊಳಗೆ ದೋಷವಿಲ್ಲ, ನಾನು ನಿರ್ಮಲನು, ನನ್ನಲ್ಲಿ ಏನು ಪಾಪವಿಲ್ಲ.
הן תנואות עלי ימצא יחשבני לאויב לו | 10 |
೧೦ಆಹಾ, ಆತನು ನನ್ನಲ್ಲಿ ವಿರೋಧಕ್ಕೆ ಕಾರಣಗಳನ್ನು, ನನ್ನನ್ನು ಶತ್ರುವೆಂದು ಎಣಿಸಿಕೊಂಡಿದ್ದಾನೆ.
ישם בסד רגלי ישמר כל-ארחתי | 11 |
೧೧ನನ್ನ ಕಾಲುಗಳನ್ನು ಕೋಳಕ್ಕೆ ಹಾಕಿ, ನನ್ನ ಮಾರ್ಗಗಳನ್ನೆಲ್ಲಾ ಕಂಡುಕೊಂಡಿದ್ದಾನೆ’ ಎಂದು ಹೇಳಿದೆಯಲ್ಲಾ.
הן-זאת לא-צדקת אענך כי-ירבה אלוה מאנוש | 12 |
೧೨ಇಗೋ, ನೀನು ಹೀಗೆ ಹೇಳಿದ್ದು ನ್ಯಾಯವಲ್ಲವೆಂಬುದೇ ನನ್ನ ಉತ್ತರ, ದೇವರು ಮನುಷ್ಯನಿಗಿಂತ ದೊಡ್ಡವನಾಗಿದ್ದಾನಷ್ಟೆ.
מדוע אליו ריבות כי כל-דבריו לא יענה | 13 |
೧೩ಆತನು ನಿನ್ನ ಮಾತುಗಳಲ್ಲಿ ಒಂದಕ್ಕಾದರೂ ಉತ್ತರ ದಯಪಾಲಿಸನೆಂಬುದಾಗಿ, ನೀನು ಆತನೊಂದಿಗೆ ವ್ಯಾಜ್ಯವಾಡುವುದೇಕೆ?
כי-באחת ידבר-אל ובשתים לא ישורנה | 14 |
೧೪ದೇವರು ಮಾತನಾಡುವ ರೀತಿ ಒಂದುಂಟು ಹೌದು, ಎರಡೂ ಉಂಟು, ಮನುಷ್ಯನಾದರೋ ಲಕ್ಷಿಸುವುದಿಲ್ಲ.
בחלום חזיון לילה--בנפל תרדמה על-אנשים בתנומות עלי משכב | 15 |
೧೫ಮನುಷ್ಯರಿಗೆ ಗಾಢನಿದ್ರೆಯು ಉಂಟಾದಾಗಲೂ, ಹಾಸಿಗೆಯ ಮೇಲೆ ಮಲಗಿದಾಗ ಜೊಂಪುಹತ್ತಿದಾಗಲೂ ಆತನು ಸ್ವಪ್ನದಲ್ಲಿ ರಾತ್ರಿಯ ಕನಸಿನಲ್ಲಿ,
אז יגלה אזן אנשים ובמסרם יחתם | 16 |
೧೬ಅವರ ಕಿವಿಗಳನ್ನು ತೆರೆದು, ಅವರಿಗೆ ಶಿಕ್ಷಾವಚನವನ್ನು ಉಪದೇಶಿಸಿ ಅದಕ್ಕೆ ಮುದ್ರೆ ಹಾಕುವನು.
להסיר אדם מעשה וגוה מגבר יכסה | 17 |
೧೭ಹೀಗೆ ಮನುಷ್ಯನನ್ನು ಅವನ ದುಷ್ಕಾರ್ಯದಿಂದ ತಪ್ಪಿಸುವನು, ಮಾನವನಿಗೆ ಗರ್ವವನ್ನು ಮರೆಮಾಡುವನು.
יחשך נפשו מני-שחת וחיתו מעבר בשלח | 18 |
೧೮ಅವನ ಆತ್ಮವನ್ನು ಅಧೋಲೋಕಕ್ಕೆ ಬೀಳದಂತೆ ತಡೆದು, ಅವನ ಜೀವವನ್ನು ದೈವಾಸ್ತ್ರದಿಂದ ಅಳಿದು ಹೋಗದ ಹಾಗೆ ನಿಲ್ಲಿಸುವನು.
והוכח במכאוב על-משכבו וריב (ורוב) עצמיו אתן | 19 |
೧೯ಇದಲ್ಲದೆ ಸಂಕಟದಿಂದಲೂ, ನಿತ್ಯವಾದ ಎಲುಬುಗಳ ನೋವಿನಿಂದಲೂ, ಮನುಷ್ಯನು ಹಾಸಿಗೆಯ ಮೇಲೆ ಶಿಕ್ಷಿಸಲ್ಪಡುವನು.
וזהמתו חיתו לחם ונפשו מאכל תאוה | 20 |
೨೦ಅವನ ಜೀವವು ಆಹಾರಕ್ಕೆ ಬೇಸರಗೊಳ್ಳುವುದು, ಅವನ ಆತ್ಮವು ಮೃಷ್ಟಾನ್ನಕ್ಕೂ ಅಸಹ್ಯಪಡುವುದು.
יכל בשרו מראי ושפי (ושפו) עצמתיו לא ראו | 21 |
೨೧ಅವನ ಮಾಂಸವು ಕ್ಷಯಿಸಿ ಕಾಣದೆ ಹೋಗುವುದು, ಕಾಣದಿದ್ದ ಅವನ ಎಲುಬುಗಳು ಬಯಲಾಗುವವು.
ותקרב לשחת נפשו וחיתו לממתים | 22 |
೨೨ಅವನ ಆತ್ಮವು ಅಧೋಲೋಕವನ್ನು ಸಮೀಪಿಸುವುದು, ಅವನ ಪ್ರಾಣವು ಸಂಹಾರದೂತರಿಗೆ ಹತ್ತಿರವಾಗುವುದು.
אם-יש עליו מלאך--מליץ אחד מני-אלף להגיד לאדם ישרו | 23 |
೨೩ಮನುಷ್ಯನ ಕರ್ತವ್ಯವನ್ನು ತೋರಿಸತಕ್ಕ ಸಹಸ್ರ ದೇವದೂತರಲ್ಲಿ ಒಬ್ಬನು ಅವನಿಗೆ ಮಧ್ಯಸ್ಥನಾಗಿ ಬೇಡುವುದರಿಂದ,
ויחננו--ויאמר פדעהו מרדת שחת מצאתי כפר | 24 |
೨೪ದೇವರು ಒಂದು ವೇಳೆ ಆ ಮನುಷ್ಯನನ್ನು ಮೆಚ್ಚಿ ಈಡು ದೊರಕುವಂತೆ ಮಾಡಿ, ‘ಅಧೋಲೋಕಕ್ಕೆ ಇಳಿಯದಂತೆ ಇವನನ್ನು ರಕ್ಷಿಸು’ ಎಂದು ಅಪ್ಪಣೆಕೊಟ್ಟರೆ,
רטפש בשרו מנער ישוב לימי עלומיו | 25 |
೨೫ಅವನ ದೇಹವು ಬಾಲ್ಯಕ್ಕಿಂತಲೂ ಕೋಮಲವಾಗುವುದು. ಅವನು ಪುನಃ ಎಳೆತನದ ಚೈತನ್ಯವನ್ನು ಅನುಭವಿಸುವನು.
יעתר אל-אלוה וירצהו וירא פניו בתרועה וישב לאנוש צדקתו | 26 |
೨೬ಅವನು ದೇವರನ್ನು ಪ್ರಾರ್ಥಿಸಿ ಆತನ ಒಲುಮೆಗೆ ಪಾತ್ರನಾಗಿ, ಆತನ ದರ್ಶನ ಮಾಡಿ ಉತ್ಸಾಹದಿಂದ ಧ್ವನಿಗೈದು, ತಿರುಗಿ ಆತನಿಂದ ನೀತಿವಂತನೆಂದು ಎನ್ನಿಸಿಕೊಳ್ಳುವನು.
ישר על-אנשים ויאמר חטאתי וישר העויתי ולא-שוה לי | 27 |
೨೭ಅವನು ಮನುಷ್ಯರ ಮುಂದೆ ನಿಂತು, ‘ನಾನು ಪಾಪ ಮಾಡಿ ನ್ಯಾಯವನ್ನು ಕೆಡಿಸಿದ್ದರೂ, ಆತನು ಮುಯ್ಯಿತೀರಿಸಲಿಲ್ಲ.
פדה נפשי (נפשו) מעבר בשחת וחיתי (וחיתו) באור תראה | 28 |
೨೮ನನ್ನ ಆತ್ಮವನ್ನು ಅಧೋಲೋಕಕ್ಕೆ ಹೋಗದಂತೆ ವಿಮೋಚಿಸಿದ್ದಾನೆ, ನನ್ನ ಜೀವವು ಬೆಳಕನ್ನು ಕಾಣುತ್ತಿರುವುದು’ ಎಂದು ಕೀರ್ತನೆ ಹಾಡುವನು.
הן-כל-אלה יפעל-אל-- פעמים שלוש עם-גבר | 29 |
೨೯ದೇವರು ಎರಡು ಸಾರಿ, ಹೌದು ಮೂರು ಸಾರಿ ಈ ಕಾರ್ಯಗಳನ್ನೆಲ್ಲಾ ಮಾಡುವನು.
להשיב נפשו מני-שחת-- לאור באור החיים | 30 |
೩೦ನೋಡು, ಮನುಷ್ಯನ ಆತ್ಮವು ಅಧೋಲೋಕದಿಂದ ಹಿಂದಿರುಗಿ, ಜೀವಲೋಕದ ಬೆಳಕನ್ನು ಅನುಭವಿಸುವಂತೆ ಮಾಡುವನು
הקשב איוב שמע-לי החרש ואנכי אדבר | 31 |
೩೧ಯೋಬನೇ, ನನ್ನ ಕಡೆಗೆ ಗಮನವಿಟ್ಟು ಕೇಳು, ಮೌನವಾಗಿರು, ನಾನೇ ಮಾತನಾಡುವೆನು.
אם-יש-מלין השיבני דבר כי-חפצתי צדקך | 32 |
೩೨ನೀನು ಏನಾದರೂ ಹೇಳಬೇಕೆಂದಿದ್ದರೆ ನನಗೆ ಉತ್ತರವಾಗಿ ಹೇಳು, ಮಾತನಾಡು, ನಿನ್ನನ್ನು ನೀತಿವಂತನೆಂದು ಸ್ಥಾಪಿಸಬೇಕೆಂಬುದೇ ನನ್ನ ಆಶೆ.
אם-אין אתה שמע-לי החרש ואאלפך חכמה | 33 |
೩೩ಇಲ್ಲವಾದರೆ ನೀನೇ ನನಗೆ ಕಿವಿಗೊಟ್ಟು ಮೌನವಾಗಿರು, ನಾನು ನಿನಗೆ ಜ್ಞಾನವನ್ನು ಬೋಧಿಸುವೆನು.”