< איוב 37 >
אף-לזאת יחרד לבי ויתר ממקומו | 1 |
೧“ಇದಲ್ಲದೆ ನನ್ನ ಎದೆಯು ಅದಕ್ಕೆ ತತ್ತರಗೊಂಡು, ಮಿಡಿಯುತ್ತ ತನ್ನ ಸ್ಥಳದಿಂದ ಕದಲುವುದು.
שמעו שמוע ברגז קלו והגה מפיו יצא | 2 |
೨ಗುಡುಗುಟ್ಟುವ ದೇವರ ಧ್ವನಿಗೆ ಕಿವಿಗೊಡಿರಿ, ಆತನ ಬಾಯಿಂದ ಹೊರಡುವ ಧ್ವನಿಯನ್ನು ಕೇಳಿರಿ!
תחת-כל-השמים ישרהו ואורו על-כנפות הארץ | 3 |
೩ಆತನು ಅದನ್ನು ಆಕಾಶಮಂಡಲದಲ್ಲೆಲ್ಲಾ ಹಬ್ಬಿಸಿ, ತನ್ನ ಸಿಡಿಲನ್ನು ಭೂಮಿಯ ಅಂಚುಗಳವರೆಗೂ ಬಿಡುವನು.
אחריו ישאג-קול-- ירעם בקול גאונו ולא יעקבם כי-ישמע קולו | 4 |
೪ಸಿಡಿಲಿನ ತರುವಾಯ ಗರ್ಜನೆಯುಂಟಾಗುವುದು, ಆತನು ತನ್ನ ಮಹಿಮೆಯ ಶಬ್ದದಿಂದ ಗುಡುಗುವನು. ಆ ಶಬ್ದವು ಕೇಳಿಸಿದ ಮೇಲೆಯೂ ಆತನು ಸಿಡಿಲುಗಳನ್ನು ತಡೆಯುವುದಿಲ್ಲ.
ירעם אל בקולו נפלאות עשה גדלות ולא נדע | 5 |
೫ದೇವರು ತನ್ನ ಧ್ವನಿಯಿಂದ ಅದ್ಭುತವಾಗಿ ಗುಡುಗುವನು; ನಾವು ಗ್ರಹಿಸಲಾಗದ ಮಹಾಕಾರ್ಯಗಳನ್ನು ನಡೆಸುವನು.
כי לשלג יאמר-- הוא-ארץ וגשם מטר וגשם מטרות עזו | 6 |
೬ಆತನು ಹಿಮಕ್ಕೆ, ‘ಭೂಮಿಯ ಮೇಲೆ ಬೀಳು’ ಎಂದು, ತನ್ನ ಶಕ್ತಿಯ ದೊಡ್ಡ ಮಳೆಗೆ, ‘ರಭಸದಿಂದ ಸುರಿ’ ಎಂದು ಅಪ್ಪಣೆಮಾಡುವನು.
ביד-כל-אדם יחתום-- לדעת כל-אנשי מעשהו | 7 |
೭ಆತನು ತನ್ನ ಕೆಲಸವನ್ನು ಎಲ್ಲರೂ ತಿಳಿದುಕೊಳ್ಳಬೇಕೆಂದು, ಪ್ರತಿಯೊಬ್ಬನ ಕೈಗಳನ್ನು ಬಲಪಡಿಸುತ್ತಾನೆ.
ותבוא חיה במו-ארב ובמעונתיה תשכן | 8 |
೮ಆಗ ಮೃಗಗಳು ಗುಹೆಗಳನ್ನು ಸೇರಿ, ತಮ್ಮ ಗುಹೆಗಳಲ್ಲಿ ವಾಸಿಸುವವು.
מן-החדר תבוא סופה וממזרים קרה | 9 |
೯ಆತನ ಭಂಡಾರದ ದಕ್ಷಿಣದಿಕ್ಕಿನಿಂದ ಬಿರುಗಾಳಿಯೂ, ಉತ್ತರದಿಕ್ಕಿನಿಂದ ಚಳಿಗಾಳಿಯೂ ಬರುವವು.
מנשמת-אל יתן-קרח ורחב מים במוצק | 10 |
೧೦ದೇವರ ಶ್ವಾಸದಿಂದ ನೀರು ಮಂಜುಗಡ್ಡೆಯಾಗುವುದು, ವಿಶಾಲವಾದ ನೀರು ಗಟ್ಟಿಯಾಗುವುದು.
אף-ברי יטריח עב יפיץ ענן אורו | 11 |
೧೧ಇದಲ್ಲದೆ ಮೋಡಗಳ ಮೇಲೆ ಮಂಜಿನ ಭಾರವನ್ನು ಹೇರಿ, ತನ್ನ ಮಿಂಚಿನ ಮೇಘಮಂಡಲವನ್ನು ಹರಡುವನು.
והוא מסבות מתהפך בתחבולתו לפעלם כל אשר יצום על-פני תבל ארצה | 12 |
೧೨ಸಿಡಿಲುಗಳು ಭೂಮಂಡಲದಲ್ಲೆಲ್ಲಾ ತಾನು ವಿಧಿಸುವುದನ್ನೇ ಮಾಡಲಿ ಎಂದು, ಅವುಗಳನ್ನು ನಡಿಸಿ ಸುತ್ತಮುತ್ತಲು ತಿರುಗಿಸುವನು.
אם-לשבט אם-לארצו-- אם-לחסד ימצאהו | 13 |
೧೩ಆತನು ದಂಡನೆಗಾಗಲಿ, ತನ್ನ ಭೂಮಿಯ ಹಿತಕ್ಕಾಗಲಿ, ಕೃಪೆತೋರುವುದಕ್ಕಾಗಲಿ ಹಾಗೂ ಒಡಂಬಡಿಕೆಯ ನಂಬಿಗಸ್ತಿಕೆಯಿಂದ ಆ ಮೇಘಗಳನ್ನು ಬರಮಾಡುವನು.
האזינה זאת איוב עמד והתבונן נפלאות אל | 14 |
೧೪ಯೋಬನೇ, ಇದನ್ನು ಕೇಳು! ಸುಮ್ಮನೆ ನಿಂತು ದೇವರ ಅದ್ಭುತಕಾರ್ಯಗಳನ್ನು ಧ್ಯಾನಿಸು.
התדע בשום-אלוה עליהם והפיע אור עננו | 15 |
೧೫ದೇವರು ಇವುಗಳನ್ನು ನಿಯಂತ್ರಿಸಿ, ತನ್ನ ಮೇಘದ ಸಿಡಿಲು ಹೊಳೆಯ ಮಾಡುವ ರೀತಿ ನಿನಗೆ ಗೊತ್ತಿದೆಯೋ?
התדע על-מפלשי-עב מפלאות תמים דעים | 16 |
೧೬ಮೋಡಗಳ ತೂಗಾಟವನ್ನೂ, ಜ್ಞಾನಪೂರ್ಣನ ಅದ್ಭುತಕಾರ್ಯಗಳನ್ನೂ ತಿಳಿದುಕೊಂಡಿದ್ದಿಯಾ?
אשר-בגדיך חמים-- בהשקט ארץ מדרום | 17 |
೧೭ಭೂಮಿಯು ದಕ್ಷಿಣ ಗಾಳಿಯ ದೆಸೆಯಿಂದ ಸ್ತಬ್ಧವಾಗಿರುವ ಸಮಯದಲ್ಲಿ, ಉಡುಪಿನ ಬಿಸಿಯನ್ನು ಅನುಭವಿಸುವ ಅರಿವು ನಿನಗಿರುತ್ತದೆಯೇ?
תרקיע עמו לשחקים חזקים כראי מוצק | 18 |
೧೮ತಗಡು ಬಡಿದ ಎರಕದ ದರ್ಪಣದಷ್ಟು ಗಟ್ಟಿಯಾಗಿರುವ ಆಕಾಶಮಂಡಲವನ್ನು ಆತನ ಹಾಗೆ ನಿರ್ಮಿಸಬಹುದೇ?
הודיענו מה-נאמר לו לא-נערך מפני-חשך | 19 |
೧೯ಆತನಿಗೆ ಹೇಳತಕ್ಕದ್ದನ್ನು ನಮಗೆ ನೀನೇ ತಿಳಿಸು, ಅಂಧಕಾರವು ನಮ್ಮನ್ನು ಕವಿದಿರುವುದರಿಂದ ಏನೂ ಮಾತನಾಡಲು ಸಾಧ್ಯವಿಲ್ಲ.
היספר-לו כי אדבר אם-אמר איש כי יבלע | 20 |
೨೦ನಾನು ಮಾತನಾಡಬೇಕೆಂದು ಆತನಿಗೆ ಹೇಳಿ ಕಳುಹಿಸಲು ಸಾಧ್ಯವೇ? ಹಾಗೆ ಮಾಡುವವನು ತನ್ನನ್ನೇ ನಿರ್ಮೂಲ ಮಾಡಿಕೊಂಡಂತೆ.
ועתה לא ראו אור-- בהיר הוא בשחקים ורוח עברה ותטהרם | 21 |
೨೧ಇಗೋ, ಗಾಳಿಯು ಬೀಸಿ ಗಗನವನ್ನು ಶುಭ್ರಪಡಿಸಲು, ಅಲ್ಲಿ ಪ್ರಜ್ವಲಿಸುವ ಪ್ರಕಾಶವನ್ನು ಯಾರೂ ದಿಟ್ಟಿಸಿ ನೋಡಲಾರರು.
מצפון זהב יאתה על-אלוה נורא הוד | 22 |
೨೨ಉತ್ತರದಿಕ್ಕಿನಿಂದ ಹೊನ್ನಿನ ಹೊಳಪು ಹೊರಡುವುದು, ದೇವರು ಭಯಂಕರ ತೇಜಸ್ಸನ್ನು ಧರಿಸಿಕೊಂಡಿದ್ದಾನೆ.
שדי לא-מצאנהו שגיא-כח ומשפט ורב-צדקה לא יענה | 23 |
೨೩ಇಂಥ ಸರ್ವಶಕ್ತನಾದ ದೇವರನ್ನು ನಾವು ಕಂಡುಹಿಡಿಯಲಾರೆವು; ಆತನ ಪರಾಕ್ರಮವು ಬಹಳ; ಆತನು ನ್ಯಾಯವನ್ನಾಗಲಿ, ಪರಿಪೂರ್ಣ ಧರ್ಮವನ್ನಾಗಲಿ ಕುಂದಿಸುವುದಿಲ್ಲ.
לכן יראוהו אנשים לא-יראה כל-חכמי-לב | 24 |
೨೪ಆದಕಾರಣ ಮನುಷ್ಯರು ಆತನಿಗೆ ಭಯಪಡುವರು, ಜ್ಞಾನಿಗಳೆಂದು ಎಣಿಸಿಕೊಳ್ಳುವವರನ್ನು ಆತನು ಲಕ್ಷಿಸುವುದೇ ಇಲ್ಲ.”