< איוב 38 >
ויען-יהוה את-איוב מנהסערה (מן הסערה) ויאמר | 1 |
೧ಆಗ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು,
מי זה מחשיך עצה במלין-- בלי-דעת | 2 |
೨“ಅಜ್ಞಾನದ ಮಾತುಗಳಿಂದ ಸತ್ಯಾಲೋಚನೆಯನ್ನು ಮಂಕುಮಾಡುವ ಇವನು ಯಾರು?
אזר-נא כגבר חלציך ואשאלך והודיעני | 3 |
೩ಶೂರನಂತೆ ನಡುಕಟ್ಟಿಕೋ; ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು.
איפה היית ביסדי-ארץ הגד אם-ידעת בינה | 4 |
೪ನಾನು ಲೋಕಕ್ಕೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿದ್ದಿ? ನೀನು ಜ್ಞಾನಿಯಾಗಿದ್ದರೆ ಹೇಳು.
מי-שם ממדיה כי תדע או מי-נטה עליה קו | 5 |
೫ಅದರ ಅಳತೆಗಳನ್ನು ಯಾರು ಗೊತ್ತುಮಾಡಿದರು? ನೀನೇ ಬಲ್ಲೆ. ಅದರ ಮೇಲೆ ನೂಲುಹಿಡಿದವರು ಯಾರು?
על-מה אדניה הטבעו או מי-ירה אבן פנתה | 6 |
೬ಭೂಲೋಕದ ಅಸ್ತಿವಾರವು ಯಾವುದರ ಮೇಲೆ ನೆಲೆಗೊಂಡವು? ಅದರ ಮೂಲೆಗಲ್ಲನ್ನು ಹಾಕಿದವರು ಯಾರು?
ברן-יחד כוכבי בקר ויריעו כל-בני אלהים | 7 |
೭ಮುಂಜಾನೆ ನಕ್ಷತ್ರಗಳು ಒಟ್ಟಾಗಿ ಉತ್ಸಾಹ ಧ್ವನಿಯೆತ್ತುತ್ತಾ ದೇವಕುಮಾರರೆಲ್ಲರೂ ಆನಂದ ಘೋಷಮಾಡುತ್ತಾ ಇರಲು,
ויסך בדלתים ים בגיחו מרחם יצא | 8 |
೮ಸಮುದ್ರವು ಭೂಗರ್ಭವನ್ನು ಭೇದಿಸಿಕೊಂಡು ಬರಲು, ಅದರ ದ್ವಾರಗಳನ್ನು ಮುಚ್ಚಿದವರು ಯಾರು?
בשומי ענן לבשו וערפל חתלתו | 9 |
೯ಆ ಕಾಲದಲ್ಲಿ ನಾನು ಮೋಡಗಳನ್ನು ಅದಕ್ಕೆ ವಸ್ತ್ರವನ್ನಾಗಿಯೂ, ಕಾರ್ಗತ್ತಲನ್ನು ಸುತ್ತುಬಟ್ಟೆಯನ್ನಾಗಿಯೂ ಮಾಡಿದೆನಲ್ಲವೆ?
ואשבר עליו חקי ואשים בריח ודלתים | 10 |
೧೦ಇದಲ್ಲದೆ ಸಮುದ್ರಕ್ಕೆ ನನ್ನ ಇಷ್ಟದ ಮೇರೆಯನ್ನು ಕಟ್ಟಿ, ಅದಕ್ಕೆ ಅಗುಳಿ, ಕದಗಳನ್ನು ಹಾಕಿದೆನು
ואמר--עד-פה תבוא ולא תסיף ופא-ישית בגאון גליך | 11 |
೧೧‘ಇಲ್ಲಿಯ ತನಕ ಬರಬಹುದು; ಮೀರಿ ಬರಬೇಡ, ನಿನ್ನ ತೆರೆಗಳ ಹೆಮ್ಮೆಗೆ ಇಲ್ಲೇ ತಡೆಯಾಗುವುದು’ ಎಂದು ಅಪ್ಪಣೆಕೊಟ್ಟೆನು.
המימיך צוית בקר ידעתה שחר (ידעת השחר) מקמו | 12 |
೧೨ನಿನ್ನ ಜೀವಮಾನದಲ್ಲಿ ಎಂದಾದರೂ ‘ಅರುಣೋದಯವಾಗಲಿ’ ಎಂದು ಆಜ್ಞಾಪಿಸಿರುವೆಯೋ? ಮುಂಜಾನೆಯ ಬೆಳಗಿಗೆ ಇರತಕ್ಕ ಸ್ಥಳವನ್ನು ಗೊತ್ತುಮಾಡಿದೆಯಾ?
לאחז בכנפות הארץ וינערו רשעים ממנה | 13 |
೧೩ಭೂಮಿಯ ಅಂಚುಗಳನ್ನು ಹಿಡಿದು ದುಷ್ಟರನ್ನು ಅದರೊಳಗಿಂದ ಒದರಿಬಿಡು ಎಂದು ಉದಯಕ್ಕೆ ಅಪ್ಪಣೆಕೊಟ್ಟೆಯಾ?
תתהפך כחמר חותם ויתיצבו כמו לבוש | 14 |
೧೪ಮುದ್ರೆ ಒತ್ತಿದ ಜೇಡಿಮಣ್ಣಿನಂತೆ ಬೆಳಗಾಗುವಾಗ ಭೂಮಿಯು ರೂಪ ತಾಳುತ್ತದೆ. ಎಲ್ಲಾ ವಸ್ತುಗಳು ನೆರಿಗೆ ಕಟ್ಟಿದ ಉಡಿಗೆಯಂತೆ ಕಾಣಿಸುವವು.
וימנע מרשעים אורם וזרוע רמה תשבר | 15 |
೧೫ಮತ್ತು ದುಷ್ಟರಿಗೆ ಬೆಳಕಿಲ್ಲವಾಗುವುದು, ಎತ್ತಿದ ಕೈ ಮುರಿಯುವುದು.
הבאת עד-נבכי-ים ובחקר תהום התהלכת | 16 |
೧೬ಎಂದಾದರೂ ಸಮುದ್ರದ ಬುಗ್ಗೆಗಳೊಳಗೆ ಸೇರಿದ್ದೆಯೋ? ಭೂಮಿಯ ಕೆಳಗಣ ಸಾಗರದ ಗುಪ್ತ ಪ್ರದೇಶಗಳಲ್ಲಿ ತಿರುಗಾಡಿದ್ದೀಯೋ?
הנגלו לך שערי-מות ושערי צלמות תראה | 17 |
೧೭ಮರಣದ ಬಾಗಿಲುಗಳು ನಿನಗೆ ಗೋಚರವಾದವೋ? ಘೋರಾಂಧಕಾರದ ಕದಗಳನ್ನು ಕಂಡೆಯಾ?
התבננת עד-רחבי-ארץ הגד אם-ידעת כלה | 18 |
೧೮ಭೂಮಿಯ ವಿಸ್ತಾರವನ್ನು ಗ್ರಹಿಸಿದ್ದೀಯೋ? ಇದೆಲ್ಲಾ ನಿನಗೆ ಗೊತ್ತಿದ್ದರೆ ತಿಳಿಸು.
אי-זה הדרך ישכן-אור וחשך אי-זה מקמו | 19 |
೧೯ಬೆಳಕಿನ ನಿವಾಸಕ್ಕೆ ಹೋಗುವ ದಾರಿ ಎಲ್ಲಿ? ಕತ್ತಲಿನ ಸ್ವಸ್ಥಳವು ಎಲ್ಲಿ?
כי תקחנו אל-גבולו וכי-תבין נתיבות ביתו | 20 |
೨೦ನೀನು ಆ ಒಂದೊಂದನ್ನೂ ಅದರದರ ಪ್ರಾಂತ್ಯಕ್ಕೆ ಕರೆದುಕೊಂಡು ಹೋಗಿ, ಅವುಗಳ ಮನೆಯ ಹಾದಿಗಳನ್ನು ಕಂಡುಕೊಳ್ಳಬಲ್ಲೆಯಾ?
ידעת כי-אז תולד ומספר ימיך רבים | 21 |
೨೧ನಿನಗೆ ತಿಳಿದಿರಬೇಕು; ಆಗಲೂ ಹುಟ್ಟಿದ್ದಿಯಲ್ಲವೆ; ನಿನ್ನ ದಿನಗಳ ಸಂಖ್ಯೆ ಬಹಳ ದೊಡ್ಡದು!
הבאת אל-אצרות שלג ואוצרות ברד תראה | 22 |
೨೨ನಾನು ಇಕ್ಕಟ್ಟಿನ ಕಾಲಕ್ಕಾಗಿಯೂ, ಯುದ್ಧಕದನಗಳ ದಿನಕ್ಕಾಗಿಯೂ ಇಟ್ಟುಕೊಂಡಿರುವ,
אשר-חשכתי לעת-צר ליום קרב ומלחמה | 23 |
೨೩ಹಿಮದ ಭಂಡಾರಗಳನ್ನು ಪ್ರವೇಶಿಸಿದ್ದೀಯಾ? ಕಲ್ಮಳೆಯ ಬೊಕ್ಕಸಗಳನ್ನು ನೋಡಿದ್ದೀಯಾ?
אי-זה הדרך יחלק אור יפץ קדים עלי-ארץ | 24 |
೨೪ಬೆಳಕನ್ನು ಭಾಗಿಸುವುದಕ್ಕೆ, ಬಿಸಿಗಾಳಿಯನ್ನು ಭೂಮಿಯ ಮೇಲೆ ವಿಸ್ತರಿಸುವುದಕ್ಕೂ ಮಾರ್ಗವೆಲ್ಲಿ?
מי-פלג לשטף תעלה ודרך לחזיז קלות | 25 |
೨೫ನಿರ್ಜನ ಪ್ರದೇಶದಲ್ಲಿಯೂ, ಮನುಷ್ಯರೇ ಇಲ್ಲದ ಕಾಡಿನಲ್ಲಿಯೂ ಮಳೆಯನ್ನು ಸುರಿಸಿ,
להמטיר על-ארץ לא-איש-- מדבר לא-אדם בו | 26 |
೨೬ಹಾಳುಬೀಳಾದ ಭೂಮಿಯನ್ನು ತೃಪ್ತಿಪಡಿಸಿ, ಹಸಿ ಹುಲ್ಲನ್ನು ಬೆಳೆಯಿಸಬೇಕೆಂದು,
להשביע שאה ומשאה ולהצמיח מצא דשא | 27 |
೨೭ಅತಿವೃಷ್ಟಿಯ ಪ್ರವಾಹಕ್ಕೆ ಕಾಲುವೆಯನ್ನೂ, ಗರ್ಜಿಸುವ ಸಿಡಿಲಿಗೆ ದಾರಿಯನ್ನೂ ಯಾರು ಕಡಿದರು?
היש-למטר אב או מי-הוליד אגלי-טל | 28 |
೨೮ಮಳೆಗೆ ತಂದೆಯುಂಟೋ? ಮಂಜಿನ ಹನಿಗಳನ್ನು ಪಡೆದವನು ಯಾರು?
מבטן מי יצא הקרח וכפר שמים מי ילדו | 29 |
೨೯ಹಿಮದ ಗಡ್ಡೆಯು ಯಾರ ಗರ್ಭದಿಂದ ಹೊರಟಿತು? ಆಕಾಶದ ಇಬ್ಬನಿಯನ್ನು ಯಾರು ಹೆತ್ತರು?
כאבן מים יתחבאו ופני תהום יתלכדו | 30 |
೩೦ನೀರು ಕಲ್ಲಿನಂತೆ ಗಟ್ಟಿಯಾಗುವುದು; ಸಾಗರದ ಮೇಲ್ಭಾಗವೂ ಹೆಪ್ಪುಗೊಳ್ಳುವುದು.
התקשר מעדנות כימה או-משכות כסיל תפתח | 31 |
೩೧ನೀನು ಕೃತ್ತಿಕೆಯ ಸರಪಣಿಯನ್ನು ಬಿಗಿದು, ಮೃಗಶಿರದ ಸಂಕೋಲೆಯನ್ನು ಬಿಚ್ಚುವೆಯಾ?
התציא מזרות בעתו ועיש על-בניה תנחם | 32 |
೩೨ಆಯಾ ಸಮಯದಲ್ಲಿ ನಕ್ಷತ್ರ ರಾಶಿಗಳನ್ನು ಬರಮಾಡುವೆಯೋ? ನಕ್ಷತ್ರ ಮಂಡಲ ಪರಿವಾರದೊಡನೆ ನಡೆಸುವೆಯಾ?
הידעת חקות שמים אם-תשים משטרו בארץ | 33 |
೩೩ಖಗೋಳದ ಕಟ್ಟಳೆಗಳನ್ನು ತಿಳಿದುಕೊಂಡಿದ್ದೀಯೋ? ಅದರ ಆಳ್ವಿಕೆಯನ್ನು ಭೂಮಿಯಲ್ಲಿ ಸ್ಥಾಪಿಸಿದ್ದೀಯಾ?
התרים לעב קולך ושפעת-מים תכסך | 34 |
೩೪ಮೋಡಗಳನ್ನು ಮುಟ್ಟುವಂತೆ ನೀನು ಧ್ವನಿಯೆತ್ತಿದ ಮಾತ್ರಕ್ಕೆ, ಹೇರಳವಾದ ನೀರು ನಿನ್ನನ್ನು ಆವರಿಸುವುದೋ?
התשלח ברקים וילכו ויאמרו לך הננו | 35 |
೩೫ಸಿಡಿಲುಗಳು ನಿನ್ನ ಅಪ್ಪಣೆಯಂತೆ ಹೋಗಿ ಬಂದು, ‘ಇಗೋ, ಬಂದಿದ್ದೇವೆ’ ಎನ್ನುವವೋ?
מי-שת בטחות חכמה או מי-נתן לשכוי בינה | 36 |
೩೬ಯಾರು ಕಾರ್ಮುಗಿಲಿಗೆ ಜ್ಞಾನವನ್ನು ದಯಪಾಲಿಸಿದರು? ಉತ್ಪಾತಗಳಿಗೆ ವಿವೇಕವನ್ನು ಅನುಗ್ರಹಿಸಿದವರು ಯಾರು?
מי-יספר שחקים בחכמה ונבלי שמים מי ישכיב | 37 |
೩೭ಜ್ಞಾನದಿಂದ ಯಾರು ಮೇಘಗಳನ್ನು ಲೆಕ್ಕಿಸುವರು? ಆಕಾಶದಲ್ಲಿನ ಬುದ್ದಲಿಗಳನ್ನು ಮೊಗಚಿಹಾಕಿ,
בצקת עפר למוצק ורגבים ידבקו | 38 |
೩೮ಧೂಳು ಹರಿದು ಒತ್ತಟ್ಟಿಗೆ ಸೇರುವಂತೆಯೂ, ಹೆಂಟೆಗಳು ಒಂದಕ್ಕೊಂದು ಅಂಟಿಕೊಳ್ಳುವಂತೆಯೂ ಯಾರು ಮಾಡುವರು?
התצוד ללביא טרף וחית כפירים תמלא | 39 |
೩೯ಗವಿಯಲ್ಲಿ ಮಲಗಿರುವ ಸಿಂಹಕ್ಕೆ ಆಹಾರ ಒದಗಿಸಲು ಬೇಟೆಯಾಡುವೆಯಾ?
כי-ישחו במעונות ישבו בסכה למו-ארב | 40 |
೪೦ಅವುಗಳು ಗುಹೆಯಲ್ಲಿ ಕುಳಿತುಕೊಳ್ಳುವಾಗ, ಪೊದೆಯಲ್ಲಿ ಹೊಂಚುಹಾಕಿರುವ ಪ್ರಾಯದ ಸಿಂಹಗಳ ಆಶೆಯನ್ನು ತೀರಿಸುವೆಯೋ?
מי יכין לערב צידו כי-ילדו אל-אל ישועו יתעו לבלי-אכל | 41 |
೪೧ತಮ್ಮ ಮರಿಗಳು, ಗುಟುಕಿಲ್ಲದೆ ಅಲೆಯುತ್ತಾ ದೇವರಿಗೆ ಮೊರೆಯಿಡುವಾಗ, ಕಾಗೆಗಳಿಗೆ ಆಹಾರವನ್ನು ಯಾರು ಒದಗಿಸುವರು?”