< איוב 4 >
ויען אליפז התימני ויאמר | 1 |
೧ಅದಕ್ಕೆ ತೇಮಾನ್ಯನಾದ ಎಲೀಫಜನು ಹೀಗೆ ಉತ್ತರಕೊಟ್ಟನು,
הנסה דבר אליך תלאה ועצר במלין מי יוכל | 2 |
೨“ಒಬ್ಬನು ನಿನ್ನ ಸಂಗಡ ಮಾತನಾಡ ತೊಡಗಿದರೆ ನಿನಗೆ ಬೇಸರಿಕೆ ಉಂಟಾಗುವುದೋ? ಮಾತನಾಡದೆ ಸುಮ್ಮನೆ ಇರುವುದಕ್ಕೆ ಯಾರಿಂದಾದೀತು?
הנה יסרת רבים וידים רפות תחזק | 3 |
೩ಇಗೋ, ನೀನು ಅನೇಕರನ್ನು ಶಿಕ್ಷಿಸಿ, ಜೋಲು ಬಿದ್ದ ಕೈಗಳನ್ನು ಬಲಗೊಳಿಸಿದ್ದಿ.
כושל יקימון מליך וברכים כרעות תאמץ | 4 |
೪ಎಡವಿ ಬೀಳುವವರನ್ನು ನಿನ್ನ ಮಾತುಗಳಿಂದ ಉದ್ಧರಿಸಿ, ಕುಸಿಯುವ ಮೊಣಕಾಲುಗಳನ್ನು ದೃಢಪಡಿಸಿದ್ದಿ.
כי עתה תבוא אליך ותלא תגע עדיך ותבהל | 5 |
೫ಈಗಲಾದರೋ ನಿನಗೆ ಶ್ರಮೆ ಬಂತು, ಆದುದರಿಂದ ನೀನು ಬೇಸರಗೊಂಡಿರುವಿ. ಅದು ನಿನ್ನನ್ನೇ ತಗಲಿರುವ ಕಾರಣ ನಿನಗೆ ಭ್ರಮೆಯುಂಟಾಗಿದೆ.
הלא יראתך כסלתך תקותך ותם דרכיך | 6 |
೬ನಿನ್ನ ನಂಬಿಕೆಗೆ ನಿನ್ನ ಭಯಭಕ್ತಿಯೂ, ನಿನ್ನ ನಿರೀಕ್ಷೆಗೆ ನಿನ್ನ ಸನ್ಮಾರ್ಗವೂ ಆಧಾರವಲ್ಲವೋ?
זכר-נא--מי הוא נקי אבד ואיפה ישרים נכחדו | 7 |
೭ನೀನೇ ಆಲೋಚನೆಮಾಡು, ನಿರಪರಾಧಿಯು ಎಂದಾದರೂ ನಾಶವಾದದ್ದುಂಟೇ? ಯಥಾರ್ಥರು ಅಳಿದು ಹೋದದ್ದೆಲ್ಲಿ?
כאשר ראיתי חרשי און וזרעי עמל יקצרהו | 8 |
೮ನಾನು ನೋಡಿರುವ ಮಟ್ಟಿಗೆ ಅಧರ್ಮವನ್ನು ಉತ್ತು, ಕೇಡನ್ನು ಬಿತ್ತುವವರು ಕೇಡನ್ನೇ ಕೊಯ್ಯುವರು.
מנשמת אלוה יאבדו ומרוח אפו יכלו | 9 |
೯ದೇವರ ಶ್ವಾಸದಿಂದ ನಾಶವಾಗುತ್ತಾರೆ. ಆತನ ಸಿಟ್ಟೆಂಬ ಗಾಳಿಯಿಂದ ಹಾಳಾಗುತ್ತಾರೆ.
שאגת אריה וקול שחל ושני כפירים נתעו | 10 |
೧೦ಸಿಂಹ ಗರ್ಜನೆಯೂ ಆರ್ಭಟಿಸುವ ಸಿಂಹದ ಧ್ವನಿಯೂ, ಅಡಗಿ ಪ್ರಾಯದ ಸಿಂಹಗಳ ಕೋರೆಗಳು ಮುರಿಯಲ್ಪಡುವವು.
ליש אבד מבלי-טרף ובני לביא יתפרדו | 11 |
೧೧ಮೃಗೇಂದ್ರನು ಆಹಾರವಿಲ್ಲದೆ ಸಾಯುವನು. ಸಿಂಹದ ಮರಿಗಳು ಚದರಿಹೋಗುವವು.
ואלי דבר יגנב ותקח אזני שמץ מנהו | 12 |
೧೨ಒಂದು ಸಂಗತಿಯು ನನಗೆ ರಹಸ್ಯವಾಗಿ ತಿಳಿದುಬಂತು. ಅದು ಪಿಸುಮಾತಿನ ಸದ್ದಾಗಿ ನನ್ನ ಕಿವಿಗೆ ಬಿತ್ತು.
בשעפים מחזינות לילה בנפל תרדמה על-אנשים | 13 |
೧೩ಮನುಷ್ಯರಿಗೆ ಗಾಢನಿದ್ರೆ ಹತ್ತುವ ಸಮಯದಲ್ಲಿ, ರಾತ್ರಿಯ ಕನಸುಗಳಿಂದ ಯೋಚನೆಗಳಲ್ಲಿರುವಾಗ
פחד קראני ורעדה ורב עצמותי הפחיד | 14 |
೧೪ನನಗೆ ಎಲುಬುಗಳೆಲ್ಲಾ ನಡುಗುವಷ್ಟು, ಭಯಂಕರವಾದ ದಿಗಿಲು ಉಂಟಾಯಿತು.
ורוח על-פני יחלף תסמר שערת בשרי | 15 |
೧೫ಆಗ ಆತ್ಮವೊಂದು ನನ್ನ ಮುಖದ ಮುಂದೆ ಸುಳಿಯಲು, ಮೈಯೆಲ್ಲಾ ರೋಮಾಂಚನವಾಯಿತು.
יעמד ולא אכיר מראהו-- תמונה לנגד עיני דממה וקול אשמע | 16 |
೧೬ನನ್ನ ಕಣ್ಣ ಮುಂದೆ ಒಂದು ಆತ್ಮವು ಇತ್ತು, ನಿಂತಿದ್ದರೂ ಅದು ಏನೆಂಬುದು ಗೊತ್ತಾಗಲಿಲ್ಲ. ಒಂದು ಸೂಕ್ಷ್ಮ ಧ್ವನಿಯು ಕೇಳಬಂತು.”
האנוש מאלוה יצדק אם מעשהו יטהר-גבר | 17 |
೧೭ಅದೇನೆಂದರೆ, “ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾದಾನೇ? ಮಾನವನು ಸೃಷ್ಟಿಕರ್ತನ ಸನ್ನಿಧಿಯಲ್ಲಿ ಪರಿಶುದ್ಧನಾಗಿರಬಹುದೇ?
הן בעבדיו לא יאמין ובמלאכיו ישים תהלה | 18 |
೧೮ಆಹಾ, ಆತನು ತನ್ನ ಸೇವಕರಲ್ಲಿಯೂ ನಂಬಿಕೆಯನ್ನಿಡುವುದಿಲ್ಲ, ತನ್ನ ದೂತರ ಮೇಲೆ ತಪ್ಪುಹೊರಿಸುತ್ತಾನೆ.
אף שכני בתי-חמר--אשר-בעפר יסודם ידכאום לפני-עש | 19 |
೧೯ಧೂಳಿನಲ್ಲಿರುವ ಅಸ್ತಿವಾರದ ಮೇಲೆ, ಮಣ್ಣಿನಿಂದಾದ ಶರೀರಗಳೆಂಬ ಮನೆಗಳೊಳಗೆ ವಾಸಿಸುವವರಲ್ಲಿ ಇನ್ನೆಷ್ಟೋ ಹೆಚ್ಚಾಗಿ ತಪ್ಪು ಕಂಡುಹಿಡಿಯಬಹುದು. ಅವರು ದೀಪದ ಹುಳದಂತೆ ಅಳಿದು ಹೋಗುತ್ತಾರೆ.
מבקר לערב יכתו מבלי משים לנצח יאבדו | 20 |
೨೦ಉದಯಾಸ್ತಮಾನಗಳ ಮಧ್ಯದಲ್ಲಿ (ಜೀವಿಸಿ) ಜಜ್ಜಲ್ಪಡುತ್ತಾರೆ. ಹೀಗೆ ನಿತ್ಯನಾಶ ಹೊಂದುವುದನ್ನು ಯಾರೂ ಲಕ್ಷಿಸುವುದಿಲ್ಲ.
הלא-נסע יתרם בם ימותו ולא בחכמה | 21 |
೨೧ಅವರ ಗುಡಾರದ ಹಗ್ಗವು ಬಿಚ್ಚಿಹೋಗುವುದಷ್ಟೆ. ಅವರು ಜ್ಞಾನವಿಲ್ಲದವರಾಗಿ ಸಾಯುವರು” ಎಂಬುದೇ.