< איוב 40 >
ויען יהוה את-איוב ויאמר | 1 |
೧ಇದಲ್ಲದೆ ಯೆಹೋವನು ಯೋಬನಿಗೆ,
הרב עם-שדי יסור מוכיח אלוה יעננה | 2 |
೨“ತರ್ಕಮಾಡುವವನು ಸರ್ವಶಕ್ತನಾದ ದೇವರ ಸಂಗಡಲೂ ವ್ಯಾಜ್ಯವಾಡುವನೋ? ದೇವರೊಂದಿಗೆ ವಿವಾದಮಾಡುವವನು ಇದಕ್ಕೆಲ್ಲಾ ಉತ್ತರಕೊಡಲಿ” ಎಂದು ಹೇಳಿದನು.
ויען איוב את-יהוה ויאמר | 3 |
೩ಆಗ ಯೋಬನು ಯೆಹೋವನಿಗೆ ಉತ್ತರವಾಗಿ,
הן קלתי מה אשיבך ידי שמתי למו-פי | 4 |
೪“ಅಯ್ಯೋ, ನಾನು ಅಲ್ಪನೇ ಸರಿ, ನಿನಗೆ ಪ್ರತ್ಯುತ್ತರವಾಗಿ ಏನು ಹೇಳಲಿ? ಬಾಯಿಯ ಮೇಲೆ ಕೈಯಿಟ್ಟುಕೊಳ್ಳುವೆನು.
אחת דברתי ולא אענה ושתים ולא אוסיף | 5 |
೫ಒಂದು ಸಾರಿ ಮಾತನಾಡಿದ್ದೇನೆ, ಪ್ರತಿವಾದ ಮಾಡಲಾರೆನು; ಎರಡು ಸಲ ಹೌದು, ಇನ್ನೇನೂ ನುಡಿಯಲಾರೆನು” ಎಂದು ಹೇಳಿದನು.
ויען-יהוה את-איוב מנסערה (מן סערה) ויאמר | 6 |
೬ಆ ಮೇಲೆ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು,
אזר-נא כגבר חלציך אשאלך והודיעני | 7 |
೭“ಶೂರನಂತೆ ನಡುಕಟ್ಟಿಕೋ! ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು.
האף תפר משפטי תרשיעני למען תצדק | 8 |
೮ನನ್ನ ನೀತಿಯನ್ನು ಖಂಡಿಸಿಬಿಡುವಿಯಾ? ನಿನ್ನ ನ್ಯಾಯವನ್ನು ಸ್ಥಾಪಿಸಿಕೊಳ್ಳಲಿಕ್ಕೆ ನನ್ನನ್ನು ಕೆಟ್ಟವನೆಂದು ನಿರ್ಣಯಿಸುವೆಯೋ?
ואם-זרוע כאל לך ובקול כמהו תרעם | 9 |
೯ನಿನ್ನ ಕೈಯೂ, ದೇವರ ಕೈಯೂ ಸಮವೋ? ದೇವರ ಧ್ವನಿಯಂತೆ ಗುಡುಗಬಲ್ಲಿಯಾ?
עדה נא גאון וגבה והוד והדר תלבש | 10 |
೧೦ನಿನ್ನನ್ನು ನೀನೇ ಮಹಿಮೆ ಘನತೆಗಳಿಂದ ಭೂಷಿಸಿಕೊಂಡು ಪ್ರಭಾವ ಮಹತ್ವಗಳನ್ನು ಧರಿಸಿಕೋ.
הפץ עברות אפך וראה כל-גאה והשפילהו | 11 |
೧೧ತುಂಬಿ ತುಳುಕುವ ನಿನ್ನ ಕೋಪವನ್ನು ಎರಚಿ, ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಅವನನ್ನು ತಗ್ಗಿಸು.
ראה כל-גאה הכניעהו והדך רשעים תחתם | 12 |
೧೨ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಕುಗ್ಗಿಸಿ, ದುಷ್ಟರನ್ನು ತಟ್ಟನೆ ಕೆಡವಿಬಿಡು.
טמנם בעפר יחד פניהם חבש בטמון | 13 |
೧೩ಅವರನ್ನು ಒಟ್ಟಿಗೆ ಧೂಳಿನಲ್ಲಿ ಅಡಗಿಸಿ, ಅಂಧಕಾರ ಲೋಕದಲ್ಲಿ ಅವರ ಮುಖಕ್ಕೆ ಮುಸುಕು ಹಾಕು.
וגם-אני אודך כי-תושע לך ימינך | 14 |
೧೪ಹೀಗಾದರೆ ನಿನ್ನ ಬಲಭುಜವು ನಿನ್ನನ್ನು ರಕ್ಷಿಸಬಲ್ಲದೆಂದು ನಾನೇ ನಿನ್ನನ್ನು ಹೊಗಳುವೆನು.
הנה-נא בהמות אשר-עשיתי עמך חציר כבקר יאכל | 15 |
೧೫ನಿನ್ನಂತೆ ನನ್ನ ಸೃಷ್ಟಿಯಾಗಿರುವ ನೀರಾನೆಯನ್ನು ನೋಡು; ಎತ್ತಿನ ಹಾಗೆ ಹುಲ್ಲನ್ನು ಮೇಯುವುದು.
הנה-נא כחו במתניו ואונו בשרירי בטנו | 16 |
೧೬ಇಗೋ, ಅದರ ಬಲವು ಸೊಂಟದಲ್ಲಿಯೂ, ಅದರ ಶಕ್ತಿಯು ಹೊಟ್ಟೆಯ ನರಗಳಲ್ಲಿಯೂ ಸೇರಿಕೊಂಡಿವೆ.
יחפץ זנבו כמו-ארז גידי פחדו ישרגו | 17 |
೧೭ತನ್ನ ಬಾಲವನ್ನು ದೇವದಾರುವಿನ ಮರದಂತೆ ಬಾಗಿಸುವುದು; ಅದರ ತೊಡೆಯ ನರಗಳು ಹೆಣೆದುಕೊಂಡಿವೆ.
עצמיו אפיקי נחשה גרמיו כמטיל ברזל | 18 |
೧೮ಅದರ ಮೂಳೆಗಳು ತಾಮ್ರದ ನಳಗಳಂತೆಯೂ, ಅದರ ಎಲುಬುಗಳು ಕಬ್ಬಿಣದ ಹಾರೆಗಳಂತೆಯೂ ಇರುವವು.
הוא ראשית דרכי-אל העשו יגש חרבו | 19 |
೧೯ಅದು ದೇವರ ಸೃಷ್ಟಿಗಳಲ್ಲಿ ಮುಖ್ಯವಾದದ್ದು. ಅದನ್ನು ನಿರ್ಮಿಸಿದವನು ಅದಕ್ಕೆ ಕೋರೆ ಹಲ್ಲೆಂಬ ಶಸ್ತ್ರವನ್ನೂ ಒದಗಿಸಿದ್ದಾನೆ.
כי-בול הרים ישאו-לו וכל-חית השדה ישחקו-שם | 20 |
೨೦ಗುಡ್ಡಗಳು ಅದಕ್ಕೆ ಮೇವನ್ನು ಕೊಡುವವು; ಕಾಡುಮೃಗಗಳೆಲ್ಲಾ ಅಲ್ಲಿ ಆಡುತ್ತಿರುವವು;
תחת-צאלים ישכב-- בסתר קנה ובצה | 21 |
೨೧ತಾವರೆಯ ಗಿಡಗಳ ಕೆಳಗೂ, ಆಪಿನ ಮರೆಯಲ್ಲಿಯೂ, ಜವುಗು ಭೂಮಿಯಲ್ಲಿಯೂ ಮಲಗಿಕೊಳ್ಳುವುದು.
יסכהו צאלים צללו יסבוהו ערבי-נחל | 22 |
೨೨ತಾವರೆ ಗಿಡಗಳು ತಮ್ಮ ನೆರಳನ್ನು ಅದರ ಮೇಲೆ ಹರಡುವವು, ನದಿಯ ನೀರವಂಜಿಗಳು ಅದನ್ನು ಸುತ್ತಿಕೊಂಡಿರುವವು.
הן יעשק נהר לא יחפוז יבטח כי-יגיח ירדן אל-פיהו | 23 |
೨೩ಓಹೋ, ಹೊಳೆಯು ಉಕ್ಕಿ ಬಂದರೂ ಅದು ಹೆದರುವುದಿಲ್ಲ. ಪ್ರವಾಹವು ಅದರ ಬಾಯೊಳಗೆ ನುಗ್ಗಿದರೂ ಧೈರ್ಯದಿಂದಿರುವುದು.
בעיניו יקחנו במוקשים ינקב-אף | 24 |
೨೪ಯಾರಾದರೂ ಕಣ್ಣೆದುರಿಗೆ ಬಂದು ಅದನ್ನು ಹಿಡಿದಾನೇ? ಗಾಳದಿಂದ ಅದರ ಮೂಗನ್ನು ಚುಚ್ಚಬಲ್ಲನೇ?” ಎಂದನು.