< איוב 8 >
೧“ಆಗ ಶೂಹ್ಯನಾದ ಬಿಲ್ದದನು ಹೀಗೆಂದನು,
עד-אן תמלל-אלה ורוח כביר אמרי-פיך | 2 |
೨“ಬಿರುಗಾಳಿಯಂತಿರುವ ಮಾತುಗಳನ್ನಾಡಿ ಇನ್ನೆಷ್ಟರವರೆಗೆ ಹೀಗೆ ನುಡಿಯುತ್ತಿರುವಿ?
האל יעות משפט ואם-שדי יעות-צדק | 3 |
೩ದೇವರು ಅನ್ಯಾಯವಾದ ತೀರ್ಪನ್ನು ಕೊಡುವನೋ? ಸರ್ವಶಕ್ತನಾದ ದೇವರು ನೀತಿಯನ್ನು ಡೊಂಕುಮಾಡುವನೋ?
אם-בניך חטאו-לו וישלחם ביד-פשעם | 4 |
೪ಒಂದು ವೇಳೆ ನಿನ್ನ ಮಕ್ಕಳು ಆತನಿಗೆ ವಿರುದ್ಧವಾಗಿ ಪಾಪ ಮಾಡಿದ್ದರಿಂದ, ಆತನು ಅವರನ್ನು ಅವರ ದುಷ್ಕೃತ್ಯದ ಕೈಗೆ ಒಪ್ಪಿಸಿದನೋ ಏನೋ?
אם-אתה תשחר אל-אל ואל-שדי תתחנן | 5 |
೫ನೀನು ಶುದ್ಧನೂ, ಯಥಾರ್ಥನೂ ಆಗಿ ಕುತೂಹಲದಿಂದ ಆತನ ಪ್ರಸನ್ನತೆಯನ್ನು ಬಯಸಿ, ಸರ್ವಶಕ್ತನಾದ ದೇವರಿಗೆ ನಿನ್ನ ವಿಜ್ಞಾಪನೆಯನ್ನು ಮಾಡಿಕೊಂಡರೆ,
אם-זך וישר אתה כי-עתה יעיר עליך ושלם נות צדקך | 6 |
೬ಆತನು ನಿಶ್ಚಯವಾಗಿ ನಿನಗೋಸ್ಕರ ಎಚ್ಚೆತ್ತು, ನಿನ್ನ ನೀತಿಯ ನಿವಾಸವನ್ನು ಸಮೃದ್ಧಿಗೊಳಿಸುವನು.
והיה ראשיתך מצער ואחריתך ישגה מאד | 7 |
೭ನಿನ್ನ ಮೊದಲನೆಯ ಸ್ಥಿತಿಯು ಅಲ್ಪವಾಗಿದ್ದರೂ, ನಿನ್ನ ಕಡೆಯ ಸ್ಥಿತಿಯು ಬಹಳ ವೃದ್ಧಿಹೊಂದುವುದು.
כי-שאל-נא לדר רישון וכונן לחקר אבותם | 8 |
೮ದಯಮಾಡಿ, ಪೂರ್ವಿಕರನ್ನು ವಿಚಾರಿಸಿ, ಅವರ ಪೂರ್ವಿಕರು ಕಂಡುಕೊಂಡದ್ದಕ್ಕೂ ಮನಸ್ಸಿಡು.
כי-תמול אנחנו ולא נדע כי צל ימינו עלי-ארץ | 9 |
೯ನಾವಾದರೋ ನಿನ್ನೆ ಹುಟ್ಟಿದವರು, ನಮಗೆ ಏನೂ ತಿಳಿಯದು. ಭೂಲೋಕದಲ್ಲಿನ ನಮ್ಮ ದಿನಗಳು ನೆರಳಿನಂತಿವೆಯಷ್ಟೆ.
הלא-הם יורוך יאמרו לך ומלבם יוצאו מלים | 10 |
೧೦ಅವರು ನಿನಗೆ ಬೋಧಿಸಿ ಬುದ್ಧಿಹೇಳಿ, ಮನಃಪೂರ್ವಕವಾಗಿ ಮಾತನಾಡುವುದಿಲ್ಲವೋ?
היגאה-גמא בלא בצה ישגה-אחו בלי-מים | 11 |
೧೧ಜವುಗು ಇಲ್ಲದೆ ಜಂಬುಹುಲ್ಲು ಬೆಳೆಯುವುದೇ? ನೀರಿಲ್ಲದೆ ಆಪುಹುಲ್ಲು ಮೊಳೆಯುವುದೇ?
עדנו באבו לא יקטף ולפני כל-חציר ייבש | 12 |
೧೨ಇನ್ನೂ ಎಳೆಯದಾಗಿರುವಾಗಲೇ ಮಿಕ್ಕ ಎಲ್ಲಾ ಸಸಿಗಳಿಗಿಂತಲೂ ಮುಂಚಿತವಾಗಿ, ಯಾರೂ ಕೊಯ್ಯದೆ ಇದು ಒಣಗಿ ಹೋಗುವುದು.
כן--ארחות כל-שכחי אל ותקות חנף תאבד | 13 |
೧೩ದೇವರನ್ನು ಮರೆತು ಬಿಟ್ಟವರೆಲ್ಲರ ಗತಿಯು ಹೀಗೆಯೇ ಇರುವುದು; ಭ್ರಷ್ಟನ ನಿರೀಕ್ಷೆಯು ನಿರರ್ಥಕವಾಗುವುದು.
אשר-יקוט כסלו ובית עכביש מבטחו | 14 |
೧೪ಅವನ ಭರವಸವು ಭಂಗವಾಗುವುದು, ಅವನ ಆಶ್ರಯವು ಜೇಡದ ಮನೆಯಂತಿರುವುದು.
ישען על-ביתו ולא יעמד יחזיק בו ולא יקום | 15 |
೧೫ಅವನು ಆ ಮನೆಯನ್ನು ಆತುಕೊಂಡರೆ ಅದು ನಿಲ್ಲುವುದಿಲ್ಲ; ಅದನ್ನು ಹಿಡುಕೊಂಡರೆ ಅದು ಸ್ಥಿರವಾಗಿರದು.
רטב הוא לפני-שמש ועל גנתו ינקתו תצא | 16 |
೧೬ಅವನು ಬಳ್ಳಿಯಂತೆ ಬಿಸಿಲಿನಲ್ಲಿಯೂ ಹಸಿಯಾಗಿದ್ದು, ತೋಟದಲ್ಲೆಲ್ಲಾ ಕವಲೊಡೆದು ಹರಡಿ
על-גל שרשיו יסבכו בית אבנים יחזה | 17 |
೧೭(ಕಲ್ಲು) ಕುಪ್ಪೆಯ ಮೇಲೆ ತನ್ನ ಬೇರುಗಳನ್ನು ಹೆಣೆದುಕೊಂಡು, ಕಲ್ಲುಬಿರುಕಿನಲ್ಲಿಯೂ ನುಗ್ಗಬಲ್ಲನು.
אם-יבלענו ממקמו וכחש בו לא ראיתיך | 18 |
೧೮ಅವನನ್ನು ಅಲ್ಲಿಂದ ಕಿತ್ತು ಹಾಕಿದರೆ ಆ ಸ್ಥಳವು, ‘ನಿನ್ನನ್ನು ಕಾಣೆ’ ಎಂದು ಕೂಗುವುದು.
הן-הוא משוש דרכו ומעפר אחר יצמחו | 19 |
೧೯ಆ ಮಣ್ಣಿನಿಂದ ಬೇರೆ ಸಸಿಗಳು ಮೊಳೆಯುವವು. ಆಹಾ, ಇದೇ ಅವನ ಗತಿಯ ಸುಖ!
הן-אל לא ימאס-תם ולא-יחזיק ביד-מרעים | 20 |
೨೦ಇಗೋ ದೇವರು ನಿರ್ದೋಷಿಯನ್ನು ತಳ್ಳಿಬಿಡುವುದಿಲ್ಲ, ಕೆಡುಕರನ್ನು ಕೈಹಿಡಿಯುವುದಿಲ್ಲ.
עד-ימלה שחוק פיך ושפתיך תרועה | 21 |
೨೧ಆತನು ಇನ್ನು ಮೇಲೆ ನಿನ್ನ ಬಾಯನ್ನು ನಗುವಿನಿಂದಲೂ, ತುಟಿಗಳನ್ನು ಉತ್ಸಾಹ ಧ್ವನಿಯಿಂದಲೂ ತುಂಬಿಸುವನು.
שנאיך ילבשו-בשת ואהל רשעים איננו | 22 |
೨೨ನಿನ್ನ ಶತ್ರುಗಳನ್ನು ಅವಮಾನವು ಮುಸುಕುವುದು; ದುಷ್ಟರ ನಿವಾಸವು ನಿರ್ಮೂಲವಾಗುವುದು.”