< איוב 9 >
೧ಆ ಮೇಲೆ ಯೋಬನು ಪ್ರತ್ಯುತ್ತರವಾಗಿ ಇಂತೆಂದನು,
אמנם ידעתי כי-כן ומה-יצדק אנוש עם-אל | 2 |
೨“ನೀನು ಹೇಳಿದ್ದು ಸತ್ಯವೇ ಸರಿ. ಆದರೆ ಮನುಷ್ಯನು ದೇವರ ದೃಷ್ಟಿಯಲ್ಲಿ ನೀತಿವಂತನಾಗಿರುವುದು ಹೇಗೆ?
אם-יחפץ לריב עמו-- לא-יעננו אחת מני-אלף | 3 |
೩ಆತನೊಂದಿಗೆ ವ್ಯಾಜ್ಯಮಾಡಬೇಕೆಂದು ಇಷ್ಟಪಟ್ಟರೂ, ಆತನ ಸಾವಿರ ಪ್ರಶ್ನೆಗಳಲ್ಲಿ ಒಂದಕ್ಕೂ ಉತ್ತರಕೊಡಲಾರನು.
חכם לבב ואמיץ כח-- מי-הקשה אליו וישלם | 4 |
೪ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು. ಆತನ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?
המעתיק הרים ולא ידעו-- אשר הפכם באפו | 5 |
೫ಆತನು ಪರ್ವತಗಳನ್ನು ಅರಿಯದಂತೆ ಸರಿಸಿ ಕೋಪದಿಂದ ಅವುಗಳನ್ನು ಉರುಳಿಸುತ್ತಾನೆ.
המרגיז ארץ ממקומה ועמודיה יתפלצון | 6 |
೬ಭೂಲೋಕವನ್ನು ಕದಲಿಸಿ ಅದರ ಸ್ತಂಭಗಳನ್ನು ನಡುಗಿಸುತ್ತಾನೆ.
האמר לחרס ולא יזרח ובעד כוכבים יחתם | 7 |
೭ಹುಟ್ಟಬೇಡವೆಂದು ಆತನು ಅಪ್ಪಣೆ ಕೊಟ್ಟರೆ ಸೂರ್ಯನು ಹುಟ್ಟುವುದಿಲ್ಲ; ನಕ್ಷತ್ರಗಳನ್ನು ಮುಚ್ಚಿಟ್ಟು ಮುದ್ರೆಹಾಕುತ್ತಾನೆ.
נטה שמים לבדו ודורך על-במתי ים | 8 |
೮ಆಕಾಶಮಂಡಲವನ್ನು ವಿಶಾಲಪಡಿಸಿದವನು ಆತನೊಬ್ಬನೇ. ಅಲ್ಲಕಲ್ಲೋಲವಾದ ಸಮುದ್ರದ ಮೇಲೆ ನಡೆಯುತ್ತಾನೆ.
עשה-עש כסיל וכימה וחדרי תמן | 9 |
೯ನಕ್ಷತ್ರಮಂಡಲವನ್ನೂ, ಮೃಗಶಿರವನ್ನೂ, ಕೃತ್ತಿಕೆಯನ್ನೂ, ದಕ್ಷಿಣ ದಿಕ್ಕಿನ ನಕ್ಷತ್ರಗೃಹಗಳನ್ನೂ ನಿರ್ಮಿಸಿದವನು ಆತನೇ.
עשה גדלות עד-אין חקר ונפלאות עד-אין מספר | 10 |
೧೦ಅಪ್ರಮೇಯ ಮಹಾಕಾರ್ಯಗಳನ್ನೂ, ಅಸಂಖ್ಯಾತವಾದ ಅದ್ಭುತಕೃತ್ಯಗಳನ್ನೂ ಮಾಡುತ್ತಾನೆ.
הן יעבר עלי ולא אראה ויחלף ולא-אבין לו | 11 |
೧೧ಆಹಾ, ಆತನು ನನ್ನ ಪಕ್ಕದಲ್ಲಿ ದಾಟಿಹೋದರೂ ನಾನು ಕಾಣುವುದಿಲ್ಲ; ಮುಂದಕ್ಕೆ ಹಾದುಹೋದರೂ ನನಗೆ ತಿಳಿಯುವುದಿಲ್ಲ.
הן יחתף מי ישיבנו מי-יאמר אליו מה-תעשה | 12 |
೧೨ಇಗೋ ಹಿಡಿದುಕೊಳ್ಳುತ್ತಾನೆ, ಆತನನ್ನು ತಳ್ಳುವವರು ಯಾರು? ‘ನೀನು ಏನು ಮಾಡುತ್ತಿ?’ ಎಂದು ಆತನನ್ನು ಕೇಳುವವರಾರು?
אלוה לא-ישיב אפו תחתו שחחו עזרי רהב | 13 |
೧೩ದೇವರು ತನ್ನ ಸಿಟ್ಟನ್ನು ತೊಲಗಿಸಿಬಿಡುವುದಿಲ್ಲ; ರಾಹಾಬನ ಸಹಾಯಕರು ಆತನಿಗೆ ಅಡ್ಡಬಿದ್ದರಲ್ಲಾ.
אף כי-אנכי אעננו אבחרה דברי עמו | 14 |
೧೪ನಾನಾದರೋ ದೇವರೊಂದಿಗೆ ವಾದಿಸಿ, ಆತನಿಗೆ ಉತ್ತರಕೊಡುವುದಕ್ಕೆ ಮತ್ತೂ ಅಶಕ್ತನು.
אשר אם-צדקתי לא אענה למשפטי אתחנן | 15 |
೧೫ನಾನು ನೀತಿವಂತನಾಗಿದ್ದರೂ ಉತ್ತರಕೊಡೆನು; ಆದರೆ ನನ್ನ ನ್ಯಾಯಾಧಿಪತಿಗೆ ಮೊರೆಯಿಡುವೆನು.
אם-קראתי ויענני-- לא-אאמין כי-יאזין קולי | 16 |
೧೬ನಾನು ಕರೆದಾಗ ಆತನು ನನಗೆ ಕಾಣಿಸಿಕೊಂಡಿದ್ದರೂ, ನನ್ನ ವಿಜ್ಞಾಪನೆಯನ್ನು ಲಾಲಿಸುವನೆಂದು ನಂಬುತ್ತಿರಲಿಲ್ಲ.
אשר-בשערה ישופני והרבה פצעי חנם | 17 |
೧೭ಆತನು ಬಿರುಗಾಳಿಯಿಂದ ನನ್ನನ್ನು ಬಡಿಯುತ್ತಾ, ಸುಮ್ಮಸುಮ್ಮನೆ ಒಂದರ ಮೇಲೊಂದು ಗಾಯಮಾಡುತ್ತಾ,
לא-יתנני השב רוחי כי ישבעני ממררים | 18 |
೧೮ಉಸಿರಾಡಗೊಡಿಸದೆ ಕಹಿಯಾದ ಪದಾರ್ಥದಿಂದ ನನ್ನ ಹೊಟ್ಟೆಯನ್ನು ತುಂಬಿಸುತ್ತಾನೆ.
אם-לכח אמיץ הנה ואם-למשפט מי יועידני | 19 |
೧೯ನಾನು ಬಲಿಷ್ಠನ ಶಕ್ತಿಯನ್ನು ಮೊರೆಹೋಗುವೆನೆಂದರೆ ದೇವರು, ‘ಇಗೋ, ಇದ್ದೇನೆ’ ಎನ್ನುವನು. ನ್ಯಾಯವಿಚಾರಣೆಯು ಆಗಲಿ ಎಂದರೆ ಆತನು ನನಗೆ, ‘ಕಾಲ ನಿಯಾಮಕರು ಯಾರು?’ ಎನ್ನುವನು.
אם-אצדק פי ירשיעני תם-אני ויעקשני | 20 |
೨೦ನಾನು ನೀತಿವಂತನಾಗಿದ್ದರೂ ನನ್ನ ಬಾಯೇ ನನ್ನನ್ನು ಅಪರಾಧಿಯೆಂದು ತೋರ್ಪಡಿಸುವುದು. ನಾನು ನಿರ್ದೋಷಿಯಾಗಿದ್ದರೂ ಆತನು ನನ್ನನ್ನು ದುರ್ಮಾರ್ಗಿಯೆಂದು ನಿರೂಪಿಸುವನು.
תם-אני לא-אדע נפשי אמאס חיי | 21 |
೨೧ನಾನು ನಿರ್ದೋಷಿಯೇ ಹೌದು; ನನ್ನ ವಿಷಯದಲ್ಲಿ ನನಗೇನೂ ಚಿಂತೆಯಿಲ್ಲ; ನನ್ನ ಪ್ರಾಣವನ್ನು ತಿರಸ್ಕರಿಸುತ್ತೇನೆ.
אחת היא על-כן אמרתי--תם ורשע הוא מכלה | 22 |
೨೨ಎಲ್ಲಾ ಒಂದೇ. ಆದಕಾರಣ ‘ನಾನು, ನಿರ್ದೋಷಿಯನ್ನೂ, ದೋಷಿಯನ್ನೂ ಆತನು ನಾಶ ಮಾಡುತ್ತೇನೆ’ ಎಂದು ಹೇಳುತ್ತಾನೆ.
אם-שוט ימית פתאם-- למסת נקים ילעג | 23 |
೨೩ವಿಪತ್ತು ಆಕಸ್ಮಾತ್ತಾಗಿ ಜನರನ್ನು ಸಂಹರಿಸಲು, ನಿರ್ಮಲಚಿತ್ತರು ಮನಗುಂದುವುದನ್ನು ಆತನು ನೋಡಿ ಹಾಸ್ಯಮಾಡುವನು.
ארץ נתנה ביד-רשע-- פני-שפטיה יכסה אם-לא אפוא מי-הוא | 24 |
೨೪ಭೂಲೋಕವು ದುಷ್ಟರ ಕೈ ಸೇರಿದೆ; ಲೋಕದ ನ್ಯಾಯಾಧಿಪತಿಗಳ ಮುಖಗಳಿಗೆ ಮುಸುಕು ಹಾಕಿದ್ದಾನೆ. ಇದನ್ನು ಮಾಡಿದವನು ಆತನಲ್ಲದೆ ಮತ್ತೆ ಯಾರು?
וימי קלו מני-רץ ברחו לא-ראו טובה | 25 |
೨೫ನನ್ನ ದಿನಗಳು ಓಟಗಾರನಿಗಿಂತ ಶೀಘ್ರವಾಗಿರುತ್ತವೆ. ಯಾವ ಸುಖವನ್ನೂ ಕಾಣದೆ ಓಡಿ ಹೋಗುತ್ತವೆ.
חלפו עם-אניות אבה כנשר יטוש עלי-אכל | 26 |
೨೬ಬೆಂಡಿನ ದೋಣಿಗಳು ದಾಟಿ ಹೋಗುವಂತೆಯೂ, ಹದ್ದು ತನ್ನ ಬೇಟೆಯ ಮೇಲೆ ಎರಗುವಂತೆಯೂ ವೇಗವಾಗಿ ಗತಿಸಿ ಹೋಗುತ್ತವೆ.
אם-אמרי אשכחה שיחי אעזבה פני ואבליגה | 27 |
೨೭ನಾನು ನನ್ನ ಪ್ರಲಾಪವನ್ನು ಮರೆತುಬಿಟ್ಟು, ಕಳೆಗುಂದಿದ ನನ್ನ ಮುಖವನ್ನು ಮಾರ್ಪಡಿಸಿಕೊಂಡು ಹರ್ಷಿಸುವೆನೆಂದು ಮನಸ್ಸು ಮಾಡಿದರೆ,
יגרתי כל-עצבתי ידעתי כי-לא תנקני | 28 |
೨೮ನನ್ನ ಎಲ್ಲಾ ಸಂಕಟಗಳಿಂದ ನನಗೆ ಭಯವುಂಟಾಗುತ್ತದೆ; ನೀನು ನನ್ನನ್ನು ನಿರ್ದೋಷಿಯೆಂದು ಎಣಿಸುವುದಿಲ್ಲವೆಂದು ತಿಳಿದುಕೊಳ್ಳುತ್ತೇನೆ.
אנכי ארשע למה-זה הבל איגע | 29 |
೨೯ನಾನು ಅಪರಾಧಿಯೆಂದು ನಿರ್ಣಯಿಸಲ್ಪಡಬೇಕಷ್ಟೆ. ನಾನು ವ್ಯರ್ಥವಾಗಿ ಪ್ರಯಾಸಪಡುವುದೇಕೆ?
אם-התרחצתי במו- (במי-) שלג והזכותי בבר כפי | 30 |
೩೦ನಾನು ಹಿಮದಿಂದ ಸ್ನಾನಮಾಡಿದರೂ, ಚೌಳಿನಿಂದ ನನ್ನ ಕೈಗಳನ್ನು ತೊಳಕೊಂಡರೂ,
אז בשחת תטבלני ותעבוני שלמותי | 31 |
೩೧ನೀನು ನನ್ನನ್ನು ಗುಂಡಿಯಲ್ಲಿ ಮುಳುಗಿಸಿ, ನನ್ನ ಬಟ್ಟೆಗಳಿಗೆ ನಾನು ಅಸಹ್ಯನಾಗುವಂತೆ ಮಾಡುವಿ.
כי-לא-איש כמוני אעננו נבוא יחדו במשפט | 32 |
೩೨ಆತನು ನನ್ನಂಥವನಲ್ಲ, ಮನುಷ್ಯನಲ್ಲ, ನಾನು ಆತನೊಂದಿಗೆ ವಾದಿಸುವುದು ಹೇಗೆ? ನಾವಿಬ್ಬರೂ ನ್ಯಾಯಾಸನದ ಮುಂದೆ ಕೂಡುವುದು ಹೇಗೆ?
לא יש-בינינו מוכיח-- ישת ידו על-שנינו | 33 |
೩೩ನಮ್ಮಿಬ್ಬರ ಮೇಲೆ ಕೈಯಿಡುವವನಾಗಿಯೂ, ಮಧ್ಯಸ್ಥನಾಗಿಯೂ ಇರುವ ನ್ಯಾಯಾಧಿಪತಿಯು ಯಾರೂ ಇಲ್ಲ.
יסר מעלי שבטו ואמתו אל-תבעתני | 34 |
೩೪ನನ್ನ ಮೇಲೆ ಎತ್ತಿರುವ ತನ್ನ ದಂಡವನ್ನು ಆತನು ತೆಗೆದುಹಾಕಲಿ, ಆತನಿಂದಾಗುವ ದಿಗಿಲು ನನ್ನನ್ನು ಹೆದರಿಸದಿರಲಿ.
אדברה ולא איראנו כי לא-כן אנכי עמדי | 35 |
೩೫ಹೀಗಿದ್ದರೆ ನಾನು ಭಯಪಡದೆ ಮಾತನಾಡುವೆನು; ಭಯಕ್ಕೆ ನನ್ನಲ್ಲೇನೂ ಆಸ್ಪದವಿಲ್ಲ.”