< שופטים 16 >
וילך שמשון עזתה וירא שם אשה זונה ויבא אליה | 1 |
೧ತರುವಾಯ ಸಂಸೋನನು ಗಾಜಕ್ಕೆ ಹೋಗಿ ಅಲ್ಲಿ ಒಬ್ಬ ವೇಶ್ಯೆಯನ್ನು ಕಂಡು ಅವಳ ಬಳಿಗೆ ಹೋದನು.
לעזתים לאמר בא שמשון הנה ויסבו ויארבו לו כל הלילה בשער העיר ויתחרשו כל הלילה לאמר עד אור הבקר והרגנהו | 2 |
೨ಸಂಸೋನನು ಬಂದಿರುವುದು ಗಾಜದವರಿಗೆ ಗೊತ್ತಾಗಲು ಅವರು ಬಂದು ಅವನನ್ನು ಸುತ್ತಿಕೊಂಡರು. ಸೂರ್ಯೋದಯವಾಗುತ್ತಲೆ ಅವನನ್ನು ಕೊಂದುಹಾಕೋಣ ಎಂದುಕೊಂಡು ರಾತ್ರಿಯೆಲ್ಲಾ ಊರುಬಾಗಲಲ್ಲಿ ಹೊಂಚಿನೋಡುತ್ತಾ ಸುಮ್ಮನಿದ್ದರು.
וישכב שמשון עד חצי הלילה ויקם בחצי הלילה ויאחז בדלתות שער העיר ובשתי המזזות ויסעם עם הבריח וישם על כתפיו ויעלם אל ראש ההר אשר על פני חברון | 3 |
೩ಸಂಸೋನನು ಮಲಗಿ ಮಧ್ಯರಾತ್ರಿಯಲ್ಲೆದ್ದು ಊರು ಬಾಗಿಲಿನ ಕದಗಳನ್ನೂ, ಅದರ ಎರಡು ನಿಲುವುಪಟ್ಟಿಗಳನ್ನೂ, ಅಗುಳಿಗಳನ್ನೂ ಕಿತ್ತು, ಹೆಗಲ ಮೇಲೆ ಹೊತ್ತುಕೊಂಡು ಹೋಗಿ ಹೆಬ್ರೋನಿನ ಎದುರಿಗಿರುವ ಪರ್ವತ ಶಿಖರದ ಮೇಲೆ ಇಟ್ಟನು.
ויהי אחרי כן ויאהב אשה בנחל שרק ושמה דלילה | 4 |
೪ಅನಂತರ ಸಂಸೋನನು ಸೋರೇಕ್ ತಗ್ಗಿನಲ್ಲಿ ವಾಸವಾಗಿದ್ದ ದೆಲೀಲಾ ಎಂಬ ಹೆಸರುಳ್ಳ ಒಬ್ಬ ಸ್ತ್ರೀಯಲ್ಲಿ ಮೋಹಿತನಾದನು.
ויעלו אליה סרני פלשתים ויאמרו לה פתי אותו וראי במה כחו גדול ובמה נוכל לו ואסרנוהו לענותו ואנחנו נתן לך איש אלף ומאה כסף | 5 |
೫ಫಿಲಿಷ್ಟಿಯ ಪ್ರಭುಗಳು ಅವಳ ಬಳಿಗೆ ಹೋಗಿ ಅವಳಿಗೆ, “ನೀನು ಅವನನ್ನು ಮರುಳುಗೊಳಿಸಿ, ಅವನ ಮಹಾಶಕ್ತಿಯ ಮೂಲ ಯಾವುದೆಂಬುದನ್ನೂ, ನಾವು ಅವನನ್ನೂ ಗೆದ್ದು, ಬಲವನ್ನು ಕುಂದಿಸುವುದು ಹೇಗೆಂಬುದನ್ನೂ ಗೊತ್ತುಮಾಡಿಕೊಂಡು ನಮಗೆ ತಿಳಿಸು; ನಮ್ಮಲ್ಲಿ ಪ್ರತಿಯೊಬ್ಬನೂ ನಿನಗೆ ಸಾವಿರದ ನೂರು ರೂಪಾಯಿ ಕೊಡುವೆವು” ಎಂದು ಹೇಳಿದರು.
ותאמר דלילה אל שמשון הגידה נא לי במה כחך גדול ובמה תאסר לענותך | 6 |
೬ದೆಲೀಲಳು ಸಂಸೋನನಿಗೆ, “ನಿನಗೆ ಇಂಥ ಮಹಾ ಶಕ್ತಿ ಹೇಗೆ ಬಂದಿತು? ನಿನ್ನನ್ನು ಬಲವನ್ನು ಕುಂದಿಸುವುದು ಹೇಗೆ ಎಂಬುದನ್ನು ದಯವಿಟ್ಟು ನನಗೆ ತಿಳಿಸು” ಅಂದಳು.
ויאמר אליה שמשון אם יאסרני בשבעה יתרים לחים אשר לא חרבו--וחליתי והייתי כאחד האדם | 7 |
೭ಅವನು, “ಹಸಿ ನಾರಿನ ಏಳು ಎಳೆಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು” ಎಂದು ಹೇಳಿದನು.
ויעלו לה סרני פלשתים שבעה יתרים לחים--אשר לא חרבו ותאסרהו בהם | 8 |
೮ಫಿಲಿಷ್ಟಿಯ ಪ್ರಭುಗಳು ಅಂಥ ಹಸೀ ನಾರಿನ ಏಳು ಎಳೆಗಳನ್ನು ಅವಳಿಗೆ ತಂದುಕೊಟ್ಟರು.
והארב ישב לה בחדר ותאמר אליו פלשתים עליך שמשון וינתק את היתרים כאשר ינתק פתיל הנערת בהריחו אש ולא נודע כחו | 9 |
೯ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿಟ್ಟು ಅವುಗಳಿಂದ ಅವನನ್ನು ಕಟ್ಟಿ, “ಸಂಸೋನನೇ, ನಿನ್ನ ಮೇಲೆ ಫಿಲಿಷ್ಟಿಯರು ಬಂದರು” ಎಂದು ಕೂಗಿದಳು. ಅವನು ಬೆಂಕಿತಗುಲಿದ ಸೆಣಬಿನ ದಾರವನ್ನೋ ಎಂಬಂತೇ ಆ ಎಳೆಗಳನ್ನು ಹರಿದುಬಿಟ್ಟನು; ಹೀಗೆ ಅವನ ಶಕ್ತಿಯ ರಹಸ್ಯವು ತಿಳಿಯದೆ ಹೋಯಿತು.
ותאמר דלילה אל שמשון הנה התלת בי ותדבר אלי כזבים עתה הגידה נא לי במה תאסר | 10 |
೧೦ದೆಲೀಲಳು ತಿರುಗಿ ಸಂಸೋನನಿಗೆ, “ನೀನು ನನ್ನನ್ನು ವಂಚಿಸಿದಿ; ಸುಳ್ಳಾಡಿದಿ; ನಿನ್ನನ್ನು ಯಾವುದರಿಂದ ಕಟ್ಟಬಹುದೆಂಬುದನ್ನು ದಯವಿಟ್ಟು ನನಗೆ ತಿಳಿಸು” ಎಂದಳು.
ויאמר אליה--אם אסור יאסרוני בעבתים חדשים אשר לא נעשה בהם מלאכה וחליתי והייתי כאחד האדם | 11 |
೧೧ಅವನು ಅವಳಿಗೆ, “ಯಾವುದಕ್ಕೂ ಉಪಯೋಗಿಸದ ಹೊಸ ಹಗ್ಗಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯರಂತಾಗುವೆನು” ಅಂದನು.
ותקח דלילה עבתים חדשים ותאסרהו בהם ותאמר אליו פלשתים עליך שמשון והארב ישב בחדר וינתקם מעל זרעתיו כחוט | 12 |
೧೨ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿರಿಸಿ, ಹೊಸ ಹಗ್ಗಗಳನ್ನು ತೆಗೆದುಕೊಂಡು ಅವುಗಳಿಂದ ಅವನನ್ನು ಕಟ್ಟಿ, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಲು ಅವನೆದ್ದು ತೋಳುಗಳಿಗೆ ಕಟ್ಟಿದ್ದ ಹಗ್ಗಗಳನ್ನು ದಾರವನ್ನೋ ಎಂಬಂತೆ ಹರಿದುಬಿಟ್ಟನು.
ותאמר דלילה אל שמשון עד הנה התלת בי ותדבר אלי כזבים--הגידה לי במה תאסר ויאמר אליה--אם תארגי את שבע מחלפות ראשי עם המסכת | 13 |
೧೩ಆಗ ದೆಲೀಲಳು ಸಂಸೋನನಿಗೆ “ನೀನು ತಿರುಗಿ ನನ್ನನ್ನು ವಂಚಿಸಿದಿ; ಸುಳ್ಳಾಡಿದಿ; ನಿನ್ನನ್ನು ಯಾವುದರಿಂದ ಕಟ್ಟಬಹುದೆಂದು ತಿಳಿಸು” ಅನ್ನಲು ಅವನು, “ನನ್ನ ತಲೆಕೂದಲಿನ ಏಳು ಜಡೆಗಳನ್ನು ಮಗ್ಗದಲ್ಲಿ ನೇಯಿದರೆ ಸಾಕು” ಎಂದು ಹೇಳಿದನು.
ותתקע ביתד ותאמר אליו פלשתים עליך שמשון וייקץ משנתו ויסע את היתד הארג ואת המסכת | 14 |
೧೪ಅವಳು ಅವನ ತಲೆಕೂದಲಿನ ಏಳು ಜಡೆಗಳನ್ನು ಗೂಟಕ್ಕೆ ಭದ್ರಮಾಡಿ, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಿದಳು. ಅವನು ನಿದ್ರೆಯಿಂದ ಎಚ್ಚೆತ್ತು ಮಗ್ಗವನ್ನೂ ಮಗ್ಗದ ಗೂಟವನ್ನೂ ಕಿತ್ತುಕೊಂಡು ಹೋದನು.
ותאמר אליו איך תאמר אהבתיך ולבך אין אתי זה שלש פעמים התלת בי ולא הגדת לי במה כחך גדול | 15 |
೧೫ಆಕೆಯು ತಿರುಗಿ ಅವನಿಗೆ, “ನನ್ನನ್ನು ಪ್ರೀತಿಸುತ್ತೇನೆಂದು ನೀನು ನನಗೆ ಹೇಗೆ ಹೇಳುವೇ? ನಿನ್ನ ಮನಸ್ಸು ನನ್ನ ಮೇಲೆ ಇಲ್ಲವಲ್ಲಾ; ಮೂರು ಸಾರಿ ನನ್ನನ್ನು ವಂಚಿಸಿದಿ. ನಿನಗೆ ಇಂಥ ಮಹಾ ಶಕ್ತಿ ಯಾವುದರಿಂದ ಬಂದಿತೆಂಬುದನ್ನು ನನಗೆ ತಿಳಿಸಲಿಲ್ಲ” ಅಂದಳು.
ויהי כי הציקה לו בדבריה כל הימים--ותאלצהו ותקצר נפשו למות | 16 |
೧೬ಇದಲ್ಲದೆ ಅವಳು ಅವನನ್ನು ದಿನದಿನವೂ ಮಾತಿನಿಂದ ಪೀಡಿಸಿದ್ದರಿಂದ ಅವನಿಗೆ ಸಾಯುವುದು ಒಳ್ಳೆಯದು ಎನ್ನುವಷ್ಟು ಬೇಸರವಾಯಿತು.
ויגד לה את כל לבו ויאמר לה מורה לא עלה על ראשי--כי נזיר אלהים אני מבטן אמי אם גלחתי וסר ממני כחי וחליתי והייתי ככל האדם | 17 |
೧೭ಆಗ ಅವನು, “ಕ್ಷೌರಕತ್ತಿಯು ನನ್ನ ತಲೆಯ ಮೇಲೆ ಮುಟ್ಟಿಸಿಲ್ಲ; ನಾನು ಮಾತೃಗರ್ಭದಿಂದಲೇ ದೇವರಿಗೆ ಪ್ರತಿಷ್ಠಿತನಾದವನು (ನಾಜೀರನು). ನನ್ನ ತಲೆಯನ್ನು ಕ್ಷೌರಮಾಡುವುದಾದರೆ ನನ್ನ ಶಕ್ತಿಯು ಹೋಗುವುದು; ಮತ್ತು ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು” ಎಂದು ತನ್ನ ಗುಟ್ಟನ್ನೆಲ್ಲಾ ಆಕೆಯ ಮುಂದೆ ಬಿಚ್ಚಿಹೇಳಿದನು.
ותרא דלילה כי הגיד לה את כל לבו ותשלח ותקרא לסרני פלשתים לאמר עלו הפעם כי הגיד לה (לי) את כל לבו ועלו אליה סרני פלשתים ויעלו הכסף בידם | 18 |
೧೮ಅವನು ಇದ್ದದ್ದನ್ನು ಇದ್ದ ಹಾಗೆಯೇ ಹೇಳಿದನೆಂದು ದೆಲೀಲಳು ತಿಳಿದು ಫಿಲಿಷ್ಟಿಯ ಪ್ರಭುಗಳ ಬಳಿಗೆ ದೂತರನ್ನು ಕಳುಹಿಸಿ ಅವರಿಗೆ, “ಇದೊಂದು ಸಾರಿ ಬನ್ನಿರಿ: ಅವನು ನನಗೆ ತನ್ನ ಹೃದಯವನ್ನೆಲ್ಲಾ ತಿಳಿಸಿದ್ದಾನೆ” ಎಂದು ಹೇಳಿ, ಕರೆಕಳುಹಿಸಿದಳು. ಅವರು ಹಣವನ್ನು ತೆಗೆದುಕೊಂಡು ಆಕೆಯ ಬಳಿಗೆ ಬಂದರು.
ותישנהו על ברכיה ותקרא לאיש ותגלח את שבע מחלפות ראשו ותחל לענותו ויסר כחו מעליו | 19 |
೧೯ಆಕೆಯು ಸಂಸೋನನನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡು ಅವನಿಗೆ ನಿದ್ರೆಹತ್ತಿದಾಗ ಒಬ್ಬ ಮನುಷ್ಯನಿಂದ ಅವನ ತಲೆಯ ಏಳು ಜಡೆಗಳನ್ನು ಬೋಳಿಸಿ, ಅವನನ್ನು ದುರ್ಬಲಪಡಿಸಿದಳು. ಅವನ ಶಕ್ತಿಯು ಅವನನ್ನು ಬಿಟ್ಟು ಹೋಯಿತು,
ותאמר פלשתים עליך שמשון ויקץ משנתו ויאמר אצא כפעם בפעם ואנער והוא לא ידע כי יהוה סר מעליו | 20 |
೨೦ಆಗ ಅವಳು, “ಸಂಸೋನನೇ, ಫಿಲಿಷ್ಟಿಯರು ಬಂದಿದ್ದಾರೆ” ಎಂದು ಕೂಗಲು ಅವನು ಎಚ್ಚೆತ್ತು, ಮುಂಚಿನಂತೆ ಈಗಲೂ ಕೊಸರಿಕೊಂಡು ಹೋಗುವೆನು ಅಂದುಕೊಂಡನು; ಆದರೆ ಯೆಹೋವನು ತನ್ನನ್ನು ಬಿಟ್ಟುಹೋಗಿದ್ದಾನೆಂಬದು ಅವನಿಗೆ ತಿಳಿಯಲಿಲ್ಲ.
ויאחזוהו פלשתים וינקרו את עיניו ויורידו אותו עזתה ויאסרוהו בנחשתים ויהי טוחן בבית האסירים (האסורים) | 21 |
೨೧ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಹಿಟ್ಟನ್ನು ಬೀಸುವುದಕ್ಕೆ ಇರಿಸಿದರು.
ויחל שער ראשו לצמח כאשר גלח | 22 |
೨೨ಅಷ್ಟರಲ್ಲಿ ಅವನ ತಲೆಯ ಕೂದಲುಗಳು ಬೆಳೆಯ ತೊಡಗಿದವು.
וסרני פלשתים נאספו לזבח זבח גדול לדגון אלהיהם--ולשמחה ויאמרו--נתן אלהינו בידנו את שמשון אויבנו | 23 |
೨೩ಶತ್ರುವಾದ ಸಂಸೋನನನ್ನು ತಮ್ಮ ಕೈಗೆ ಒಪ್ಪಿಸಿದ ತಮ್ಮ ದೇವರಾದ ದಾಗೋನನಿಗೆ ಮಹಾಯಜ್ಞವನ್ನು ಸಮರ್ಪಿಸಿ ಸಂತೋಷಪಡಬೇಕೆಂದು ಫಿಲಿಷ್ಟಿಯ ಪ್ರಭುಗಳು ಒಟ್ಟಾಗಿ ಸೇರಿಬಂದರು.
ויראו אתו העם ויהללו את אלהיהם כי אמרו נתן אלהינו בידנו את אויבנו ואת מחריב ארצנו ואשר הרבה את חללינו | 24 |
೨೪ಜನರು ಸಂಸೋನನನ್ನು ನೋಡಿದಾಗ, “ನಮ್ಮ ದೇಶವನ್ನು ಹಾಳುಮಾಡಿ ನಮ್ಮಲ್ಲಿ ಅನೇಕರನ್ನು ಕೊಂದುಹಾಕಿದ ಈ ಶತ್ರುವನ್ನು ನಮ್ಮ ದೇವರು ನಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾನೆ” ಎಂದು ಹಾಡು ಹಾಡಿ ಸಂತೋಷಿಸಿದರು.
ויהי כי טוב (כטוב) לבם ויאמרו קראו לשמשון וישחק לנו ויקראו לשמשון מבית האסירים (האסורים) ויצחק לפניהם ויעמידו אותו בין העמודים | 25 |
೨೫ಅವರು ಸಂಭ್ರಮದಲ್ಲಿದ್ದಾಗ, “ನಮ್ಮ ವಿನೋದಕ್ಕೋಸ್ಕರ ಸಂಸೋನನನ್ನು ಕರೆದುಕೊಂಡು ಬನ್ನಿರಿ” ಅಂದರು. ಅದರಂತೆಯೇ ಸಂಸೋನನನ್ನು ಸೆರೆಮನೆಯಿಂದ ಕರೆದುಕೊಂಡು ಬಂದರು. ಅವನು ಎರಡು ಸ್ತಂಭಗಳ ನಡುವೆ ನಿಂತು ವಿನೋದ ಮಾಡಬೇಕಾಯಿತು.
ויאמר שמשון אל הנער המחזיק בידו הניחה אותי והימשני (והמישני) את העמדים אשר הבית נכון עליהם ואשען עליהם | 26 |
೨೬ಆಗ ಸಂಸೋನನು ತನ್ನನ್ನು ಕೈಹಿಡಿದು ನಡೆಸುವ ಹುಡುಗನಿಗೆ, “ನನ್ನ ಕೈಗಳನ್ನು ಬಿಡು; ನಾನು ಕೈಯಾಡಿಸಿ ಮನೆಗೆ ಆಧಾರವಾಗಿರುವ ಸ್ತಂಭಗಳನ್ನು ಹುಡುಕಿ ಅವುಗಳಿಗೆ ಸ್ವಲ್ಪ ಒರಗಿಕೊಳ್ಳುತ್ತೇನೆ” ಅಂದನು.
והבית מלא האנשים והנשים ושמה כל סרני פלשתים ועל הגג כשלשת אלפים איש ואשה הראים בשחוק שמשון | 27 |
೨೭ಆ ಮನೆಯು ಸ್ತ್ರೀಪುರುಷರಿಂದ ಕಿಕ್ಕಿರಿದು ಹೋಗಿತ್ತು. ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಅಲ್ಲಿದ್ದರು; ಸಂಸೋನನ ವಿನೋದವನ್ನು ನೋಡುವುದಕ್ಕಾಗಿ ಬಂದವರಲ್ಲಿ ಸುಮಾರು ಮೂರು ಸಾವಿರ ಮಂದಿ ಸ್ತ್ರೀಪುರುಷರು ಮಾಳಿಗೆಯ ಮೇಲಿದ್ದರು.
ויקרא שמשון אל יהוה ויאמר אדני יהוה זכרני נא וחזקני נא אך הפעם הזה האלהים ואנקמה נקם אחת משתי עיני מפלשתים | 28 |
೨೮ಆಗ ಸಂಸೋನನು ಯೆಹೋವನಿಗೆ, “ಕರ್ತನೇ, ಯೆಹೋವನೇ, ಫಿಲಿಷ್ಟಿಯರು ಕಿತ್ತುಹಾಕಿದ ನನ್ನ ಎರಡೂ ಕಣ್ಣುಗಳಲ್ಲಿ ಒಂದಕ್ಕೋಸ್ಕರವಾದರೂ ನಾನು ಅವರಿಗೆ ಮುಯ್ಯಿತೀರಿಸುವ ಹಾಗೆ ನನ್ನನ್ನು ಈ ಸಾರಿ ಬಲಪಡಿಸು” ಎಂದು ಮೊರೆಯಿಟ್ಟು,
וילפת שמשון את שני עמודי התוך אשר הבית נכון עליהם ויסמך עליהם--אחד בימינו ואחד בשמאלו | 29 |
೨೯ಮನೆಯ ಆಧಾರಸ್ತಂಭಗಳಲ್ಲಿ ಒಂದನ್ನು ಬಲಗೈಯಿಂದಲೂ, ಇನ್ನೊಂದನ್ನು ಎಡಗೈಯಿಂದಲೂ ಹಿಡಿದು, ಅವುಗಳನ್ನು ಒತ್ತಿ,
ויאמר שמשון תמות נפשי עם פלשתים ויט בכח ויפל הבית על הסרנים ועל כל העם אשר בו ויהיו המתים אשר המית במותו רבים מאשר המית בחייו | 30 |
೩೦“ನಾನೂ ಫಿಲಿಷ್ಟಿಯರ ಸಂಗಡ ಸಾಯುವೆನು” ಎಂದು ಹೇಳಿ ಬಲವಾಗಿ ಬಾಗಿಕೊಂಡನು. ಆಗ ಅ ಕಟ್ಟಡವು ಅಧಿಪತಿಗಳ ಮೇಲೆಯೂ ಅಲ್ಲಿ ಬಂದಿದ್ದ ಎಲ್ಲಾ ಜನರ ಮೇಲೆಯೂ ಬಿದ್ದಿತು. ಅವನು ಜೀವದಿಂದಿದ್ದಾಗ ಕೊಂದುಹಾಕಿದವರಿಗಿಂತ ಸಾಯುವಾಗ ಕೊಂದವರ ಸಂಖ್ಯೆಯೇ ಹೆಚ್ಚಾಗಿತ್ತು.
וירדו אחיו וכל בית אביהו וישאו אתו ויעלו ויקברו אותו בין צרעה ובין אשתאל בקבר מנוח אביו והוא שפט את ישראל עשרים שנה | 31 |
೩೧ಅವನ ಬಂಧುಗಳೂ, ತಂದೆಯ ಮನೆಯವರೆಲ್ಲರೂ ಬಂದು ಅವನ ಶವವನ್ನು ತೆಗೆದುಕೊಂಡು ಹೋಗಿ ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿದ್ದ ಅವನ ತಂದೆಯಾದ ಮಾನೋಹನ ಸಮಾಧಿಯಲ್ಲಿ ಹೂಣಿಟ್ಟರು. ಅವನು ಇಸ್ರಾಯೇಲರನ್ನು ಇಪ್ಪತ್ತು ವರ್ಷ ಪಾಲಿಸಿದ್ದನು.