< נחום 1 >
משא נינוה--ספר חזון נחום האלקשי | 1 |
೧ನಿನವೆ ಪಟ್ಟಣದ ಬಗ್ಗೆ ದೈವೋಕ್ತಿ. ಎಲ್ಕೋಷ್ ಊರಿನ ನಹೂಮ ಎಂಬ ಪ್ರವಾದಿಗೆ ಆದ ದೈವದರ್ಶನದ ಗ್ರಂಥ.
אל קנוא ונקם יהוה נקם יהוה ובעל חמה נקם יהוה לצריו ונוטר הוא לאיביו | 2 |
೨ಯೆಹೋವನು ಸ್ವಗೌರವವನ್ನು ಕಾಪಾಡಿಕೊಳ್ಳುವ ದೇವರು. ಆತನು ಮುಯ್ಯಿತೀರಿಸುವವನು; ಹೌದು ಯೆಹೋವನು ಮುಯ್ಯಿತೀರಿಸುವವನು, ಕೋಪಭರಿತನು; ಯೆಹೋವನು ತನ್ನ ವಿರೋಧಿಗಳಿಗೆ ಮುಯ್ಯಿತೀರಿಸುತ್ತಾನೆ. ತನ್ನ ಶತ್ರುಗಳ ಮೇಲೆ ದೀರ್ಘರೋಷವಿಡುತ್ತಾನೆ.
יהוה ארך אפים וגדול (וגדל) כח ונקה לא ינקה יהוה בסופה ובשערה דרכו וענן אבק רגליו | 3 |
೩ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ, ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ಧೂಳು.
גוער בים ויבשהו וכל הנהרות החריב אמלל בשן וכרמל ופרח לבנון אמלל | 4 |
೪ಆತನು ಸಮುದ್ರವನ್ನು ಗದರಿಸಿ ಒಣಗಿಸುತ್ತಾನೆ, ಸಕಲನದಿಗಳನ್ನು ಬತ್ತಿಸುತ್ತಾನೆ; ಬಾಷಾನೂ ಮತ್ತು ಕರ್ಮೆಲ್ ಹೊಲಗಳೂ ಕಂದುತ್ತವೆ. ಲೆಬನೋನಿನ ಚಿಗುರು ಬಾಡುತ್ತದೆ.
הרים רעשו ממנו והגבעות התמגגו ותשא הארץ מפניו ותבל וכל יושבי בה | 5 |
೫ಆತನ ಮುಂದೆ ಬೆಟ್ಟಗಳು ಅದರುತ್ತವೆ, ಗುಡ್ಡಗಳು ಕರಗುತ್ತವೆ; ಆತನ ದರ್ಶನಕ್ಕೆ ಭೂಮಿಯು ಕಂಪಿಸುತ್ತದೆ, ಹೌದು, ಲೋಕವೂ ಲೋಕನಿವಾಸಿಗಳೆಲ್ಲರೂ ತಲ್ಲಣಿಸುತ್ತವೆ.
לפני זעמו מי יעמוד ומי יקום בחרון אפו חמתו נתכה כאש והצרים נתצו ממנו | 6 |
೬ಆತನ ಸಿಟ್ಟಿಗೆ ಯಾರು ಎದುರು ನಿಲ್ಲಲು ಸಾಧ್ಯ? ಆತನ ರೋಷಾಗ್ನಿಯ ಎದುರು ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ. ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
טוב יהוה למעוז ביום צרה וידע חסי בו | 7 |
೭ಯೆಹೋವನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಆಶ್ರಯದುರ್ಗವಾಗಿದ್ದಾನೆ; ತನ್ನ ಮೊರೆಹೊಕ್ಕವರನ್ನು ಬಲ್ಲನು.
ובשטף עבר כלה יעשה מקומה ואיביו ירדף חשך | 8 |
೮ಆದರೆ ತುಂಬಿತುಳುಕುವ ಜಲಪ್ರವಾಹದಿಂದಲೋ ಎಂಬಂತೆ ನಿನವೆಯ ಸ್ಥಾನವನ್ನು ತೀರಾ ಹಾಳುಮಾಡಿ ತನ್ನ ವಿರೋಧಿಗಳನ್ನು ಹಿಂದಟ್ಟಿ ಅಂಧಕಾರಕ್ಕೆ ತಳ್ಳುವನು.
מה תחשבון אל יהוה--כלה הוא עשה לא תקום פעמים צרה | 9 |
೯ನೀವು ಯೆಹೋವನಿಗೆ ವಿರುದ್ಧವಾಗಿ ಯಾವರೀತಿಯ ಕುಯುಕ್ತಿಯನ್ನು ಕಲ್ಪಿಸುತ್ತೀರಿ? ಆತನು ಸಂಪೂರ್ಣವಾಗಿ ಹಾಳುಮಾಡುವನು; ಎರಡನೆಯ ಸಾರಿ ಅಪಾಯವು ತಲೆ ಎತ್ತದಂತೆ ಪೂರ್ಣವಾಗಿ ನಿಮ್ಮನ್ನು ನಾಶಮಾಡುವನು.
כי עד סירים סבכים וכסבאם סבואים אכלו--כקש יבש מלא | 10 |
೧೦ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ, ಮಧ್ಯಪಾನದಲ್ಲೇ ಮತ್ತರಾಗಿ ಮುಳುಗಿಹೋಗಿದ್ದರೂ, ಒಣಗಿದ ಹುಲ್ಲಂತೆ ಬೆಂಕಿಗೆ ತುತ್ತಾಗುವರು.
ממך יצא חשב על יהוה רעה--יעץ בליעל | 11 |
೧೧ನಿನವೆಯೇ, ಯೆಹೋವನಿಗೆ ವಿರುದ್ಧವಾಗಿ ದುಷ್ಟ ಆಲೋಚನೆ ಮಾಡಿ ಕೇಡನ್ನು ಕಲ್ಪಿಸುವವನು ನಿನ್ನೊಳಗಿಂದ ಹೊರಟಿದ್ದಾನೆ.
כה אמר יהוה אם שלמים וכן רבים וכן נגוזו ועבר וענתך--לא אענך עוד | 12 |
೧೨ಯೆಹೋವನು ಇಂತೆನ್ನುತ್ತಾನೆ, “ನಿನ್ನ ಶತ್ರುಗಳು ಎಷ್ಟು ಪ್ರಬಲವಾಗಿದ್ದರೂ, ಅವರ ಸಂಖ್ಯೆ ಎಷ್ಟು ಹೆಚ್ಚಿದ್ದರೂ ಅವರು ಕಡಿಯಲ್ಪಡುವರು. ಆ ದುರಾಲೋಚಕನು ಇಲ್ಲವಾಗುವನು. ನಿನ್ನನ್ನು ಬಾಧಿಸಿದ್ದೇನೆ, ಆದರೆ ಇನ್ನು ಬಾಧಿಸೆನು.
ועתה אשבר מטהו מעליך ומוסרתיך אנתק | 13 |
೧೩ಅವನು ಹೇರಿದ ನೊಗವನ್ನು ಈಗ ನಿನ್ನ ಮೇಲಿನಿಂದ ಮುರಿದು ಕಟ್ಟಿದ್ದ ಕಣ್ಣಿಗಳನ್ನು ಕಿತ್ತುಹಾಕುವೆನು.”
וצוה עליך יהוה לא יזרע משמך עוד מבית אלהיך אכרית פסל ומסכה אשים קברך--כי קלות | 14 |
೧೪ಅಶ್ಶೂರವೇ, ನಿನ್ನ ಹೆಸರಿನ ಸಂತಾನ ಬೀಜವು ಇನ್ನು ಬಿತ್ತಲ್ಪಡಬಾರದೆಂದು ಯೆಹೋವನಾದ ನಾನು ಆಜ್ಞಾಪಿಸಿದ್ದೇನೆ; ನಿನ್ನ ದೇವರ ಮಂದಿರದೊಳಗಿಂದ ಕೆತ್ತಿದ ವಿಗ್ರಹವನ್ನೂ, ಎರಕದ ಬೊಂಬೆಯನ್ನೂ ಕಡಿದುಬಿಡುವೆನು; ನಿನಗೆ ಸಮಾಧಿಯನ್ನು ಸಿದ್ಧಮಾಡುವೆನು; ನಿನ್ನ ಪಾಪಗಳು ದುರ್ವಾಸನೆ ಬೀರುತ್ತಿವೆ.
הנה על ההרים רגלי מבשר משמיע שלום--חגי יהודה חגיך שלמי נדריך כי לא יוסיף עוד לעבור (לעבר) בך בליעל כלה נכרת | 15 |
೧೫ನೋಡಿರಿ ಆ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪರ್ವತಗಳ ಮೇಲೆ ಸಾರುವ ದೂತನ ಪಾದಗಳು ಮೇಲೆ ತ್ವರೆಪಡುತ್ತವೆ! ಯೆಹೂದವೇ, ನಿನ್ನ ಹಬ್ಬಗಳನ್ನು ಆಚರಿಸಿಕೋ, ನಿನ್ನ ಹರಕೆಗಳನ್ನು ಸಲ್ಲಿಸು; ಆ ದುಷ್ಟರು ಇನ್ನು ಮುಂದೆ ನಿನ್ನನ್ನು ಮುತ್ತಿಗೆ ಹಾಕಿ ಸೋಲಿಸಲು ಸಾಧ್ಯವಿಲ್ಲ, ಏಕೆಂದರೆ ಅವನು ಸಂಪೂರ್ಣ ನಾಶವಾಗಿದ್ದಾನೆ.