< מִשְׁלֵי 11 >
מאזני מרמה תועבת יהוה ואבן שלמה רצונו | 1 |
೧ಮೋಸದ ತಕ್ಕಡಿ ಯೆಹೋವನಿಗೆ ಅಸಹ್ಯ, ನ್ಯಾಯದ ತೂಕ ಆತನಿಗೆ ಸಂತೋಷ.
בא-זדון ויבא קלון ואת-צנועים חכמה | 2 |
೨ಎಲ್ಲಿ ಹೆಮ್ಮೆಯೋ ಅಲ್ಲಿ ನಾಚಿಕೆ, ದೀನತೆಯಲ್ಲಿ ಸುಜ್ಞಾನ.
תמת ישרים תנחם וסלף בגדים ושדם (ישדם) | 3 |
೩ಯಥಾರ್ಥವಂತರಿಗೆ ಸರಳತೆಯು ಮಾರ್ಗದರ್ಶಕ, ವಂಚಕರಿಗೆ ವಕ್ರತೆಯು ನಾಶನ.
לא-יועיל הון ביום עברה וצדקה תציל ממות | 4 |
೪ಧನವು ಕೋಪದ ದಿನದಲ್ಲಿ ವ್ಯರ್ಥ, ಧರ್ಮವು ಮರಣವಿಮೋಚಕ.
צדקת תמים תישר דרכו וברשעתו יפל רשע | 5 |
೫ನಿರ್ದೋಷಿಯ ಧರ್ಮವು ಅವನ ಮಾರ್ಗವನ್ನು ಸರಾಗಮಾಡುವುದು, ದುಷ್ಟನು ತನ್ನ ದೋಷದಿಂದಲೇ ಬಿದ್ದುಹೋಗುವನು.
צדקת ישרים תצילם ובהות בגדים ילכדו | 6 |
೬ಧರ್ಮವು ಯಥಾರ್ಥವಂತರನ್ನು ಉದ್ಧರಿಸುವುದು, ವಂಚಕರು ತಮ್ಮ ಆಶಾಪಾಶಕ್ಕೆ ಸಿಕ್ಕಿಬೀಳುವರು.
במות אדם רשע תאבד תקוה ותוחלת אונים אבדה | 7 |
೭ದುಷ್ಟನು ಸಾಯುವಾಗ ಅವನ ನಿರೀಕ್ಷೆಯು ಹಾಳಾಗುವುದು, ಬಲದ ಮೇಲಣ ನಂಬಿಕೆಯು ಬಿದ್ದುಹೋಗುವುದು.
צדיק מצרה נחלץ ויבא רשע תחתיו | 8 |
೮ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು, ದುಷ್ಟನು ಅವನಿಗೆ ಬದಲಾಗಿ ಅದರಲ್ಲಿ ಬೀಳುವನು.
בפה--חנף ישחת רעהו ובדעת צדיקים יחלצו | 9 |
೯ಧರ್ಮಭ್ರಷ್ಟನು ಬಾಯಿಂದ ನೆರೆಯವನನ್ನು ಹಾಳು ಮಾಡುವನು, ಶಿಷ್ಟನು ತಿಳಿವಳಿಕೆಯಿಂದ ಉದ್ಧಾರವಾಗುವನು.
בטוב צדיקים תעלץ קריה ובאבד רשעים רנה | 10 |
೧೦ಸಜ್ಜನರು ಸುಖಿಗಳಾದರೆ ಪಟ್ಟಣಕ್ಕೆ ಉಲ್ಲಾಸ, ದುರ್ಜನರು ಹಾಳಾದರೆ ಜಯಘೋಷ.
בברכת ישרים תרום קרת ובפי רשעים תהרס | 11 |
೧೧ಯಥಾರ್ಥವಂತರ ಆಶೀರ್ವಾದದಿಂದ ಪಟ್ಟಣವು ಉನ್ನತಿಗೆ ಬರುವುದು, ಕೆಟ್ಟವರ ಬಾಯಿಂದ ಕೆಡವಲ್ಪಡುವುದು.
בז-לרעהו חסר-לב ואיש תבונות יחריש | 12 |
೧೨ನೆರೆಯವನನ್ನು ಹೀನೈಸುವವನು ಬುದ್ಧಿಹೀನನು, ವಿವೇಕಿಯು ಮೌನವಾಗಿರುವನು.
הולך רכיל מגלה-סוד ונאמן-רוח מכסה דבר | 13 |
೧೩ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ನಂಬಿಗಸ್ತನು ಸಂಗತಿಗಳನ್ನು ಗುಪ್ತವಾಗಿಡುವನು.
באין תחבלות יפל-עם ותשועה ברב יועץ | 14 |
೧೪ಉಚಿತಾಲೋಚನೆಯಿಲ್ಲದ ಕಡೆ ಪ್ರಜೆಯು ಬಿದ್ದು ಹೋಗುವುದು, ಬಹು ಮಂದಿ ಸಮಾಲೋಚಕರು ಇರುವಲ್ಲಿ ಸಂರಕ್ಷಣೆ ಇರುವುದು.
רע-ירוע כי-ערב זר ושנא תקעים בוטח | 15 |
೧೫ಅನ್ಯನ ಸಾಲಕ್ಕೆ ಹೊಣೆಯಾದರೆ ಹಾನಿ, ಅಪರಿಚಿತನ ಹೊಣೆಗೆ ದೂರವಾದರೆ ನಿರ್ಭಯ.
אשת-חן תתמך כבוד ועריצים יתמכו-עשר | 16 |
೧೬ದಯಾಳುವಾದ ಹೆಂಗಸು ಗೌರವವನ್ನು ಪಡೆಯುವಳು, ಬಲಾತ್ಕಾರಿಗಳು ಧನವನ್ನು ಮಾತ್ರ ಕೂಡಿಸಿಕೊಳ್ಳುವರು.
גמל נפשו איש חסד ועכר שארו אכזרי | 17 |
೧೭ದಯಾಪರನಿಗೆ ಉಪಕಾರವಾಗುವುದು, ಕ್ರೂರನು ತನ್ನ ಶರೀರವನ್ನು ಹಿಂಸಿಸುವನು.
רשע--עשה פעלת-שקר וזרע צדקה שכר אמת | 18 |
೧೮ಅಧರ್ಮಿಯ ಸಂಬಳವು ಮೋಸ, ನೀತಿಯನ್ನು ಬಿತ್ತುವವನು ಲಾಭವನ್ನು ಪಡೆಯುವನು.
כן-צדקה לחיים ומרדף רעה למותו | 19 |
೧೯ಧರ್ಮನಿರತನಿಗೆ ಜೀವ, ಅಧರ್ಮಾಸಕ್ತನಿಗೆ ಮರಣ.
תועבת יהוה עקשי-לב ורצונו תמימי דרך | 20 |
೨೦ವಕ್ರಹೃದಯರು ಯೆಹೋವನಿಗೆ ಅಸಹ್ಯರು, ಸನ್ಮಾರ್ಗಿಗಳು ಆತನ ದಯೆಗೆ ಪಾತ್ರರು.
יד ליד לא-ינקה רע וזרע צדיקים נמלט | 21 |
೨೧ದುಷ್ಟನಿಗೆ ದಂಡನೆ ಖಂಡಿತ, ಶಿಷ್ಟವಂಶಕ್ಕೆ ರಕ್ಷಣೆ.
נזם זהב באף חזיר-- אשה יפה וסרת טעם | 22 |
೨೨ಹಂದಿಯ ಮೂಗಿಗೆ ಚಿನ್ನದ ಮೂಗುತಿಯು ಹೇಗೋ, ಅವಿವೇಕಳಿಗೆ ಸೌಂದರ್ಯವು ಹಾಗೆ.
תאות צדיקים אך-טוב תקות רשעים עברה | 23 |
೨೩ಸಜ್ಜನರ ಆಶೆಯು ಮಂಗಳಾಸ್ಪದ, ದುರ್ಜನರ ನಿರೀಕ್ಷೆಯು ರೋಷಾಸ್ಪದ.
יש מפזר ונוסף עוד וחשך מישר אך-למחסור | 24 |
೨೪ಒಬ್ಬನು ತನ್ನ ಧನವನ್ನು ಚೆಲ್ಲಿದರೂ ಅವನಿಗೆ ವೃದ್ಧಿ, ಮತ್ತೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನಿಗೆ ಬಡತನ.
נפש-ברכה תדשן ומרוה גם-הוא יורא | 25 |
೨೫ಉದಾರಿಯು ಪುಷ್ಟನಾಗುವನು, ನೀರು ಹಾಯಿಸುವವನಿಗೆ ನೀರು ಸಿಕ್ಕುವುದು.
מנע בר יקבהו לאום וברכה לראש משביר | 26 |
೨೬ಧಾನ್ಯವನ್ನು ಬಿಗಿಹಿಡಿಯುವವನ ಮೇಲೆ ಜನರ ಶಾಪ, ಮಾರುವವನ ತಲೆಯ ಮೇಲೆ ಆಶೀರ್ವಾದ.
שחר טוב יבקש רצון ודרש רעה תבואנו | 27 |
೨೭ಧರ್ಮಕ್ಕೆ ಆತುರಪಡುವವನಿಗೆ ದಯೆ, ಕೇಡನ್ನು ಹುಡುಕುವವನಿಗೆ ಕೇಡೇ.
בוטח בעשרו הוא יפול וכעלה צדיקים יפרחו | 28 |
೨೮ಧನವನ್ನೇ ನಂಬಿದವನು ಬಿದ್ದುಹೋಗುವನು, ಸದ್ಧರ್ಮಿಯು ಕುಡಿಯ ಹಾಗೆ ಚಿಗುರುವನು.
עכר ביתו ינחל-רוח ועבד אויל לחכם-לב | 29 |
೨೯ತನ್ನ ಕುಟುಂಬವನ್ನು ಬಾಧಿಸುವವನಿಗೆ ಗಾಳಿಯೇ ಗಂಟು, ಮೂರ್ಖನು ಜ್ಞಾನವಂತನ ಅಧೀನದಲ್ಲಿ ಬಿದ್ದಿರುವನು;
פרי-צדיק עץ חיים ולקח נפשות חכם | 30 |
೩೦ಧರ್ಮಾತ್ಮನ ಫಲ ಜೀವವೃಕ್ಷ, ಜ್ಞಾನಿಯು ಆತ್ಮಗಳನ್ನು ಆಕರ್ಷಿಸುವನು.
הן צדיק בארץ ישלם אף כי-רשע וחוטא | 31 |
೩೧ಶಿಷ್ಟನು ಭೂಮಿಯಲ್ಲಿ ತನ್ನ ಕ್ರಿಯಾಫಲವನ್ನು ಅನುಭವಿಸುವಲ್ಲಿ, ದುಷ್ಟನೂ, ಪಾಪಿಯೂ ದಂಡನೆಯನ್ನು ಅನುಭವಿಸುವರು ಎಂದು ಹೇಳಬೇಕಾಗಿಲ್ಲ.