< מִשְׁלֵי 12 >
אהב מוסר אהב דעת ושונא תוכחת בער | 1 |
೧ತಿಳಿವಳಿಕೆಯನ್ನು ಪ್ರೀತಿಸುವವನು ಶಿಕ್ಷಣವನ್ನು ಪ್ರೀತಿಸುತ್ತಾನೆ, ಮೂರ್ಖನು ಗದರಿಕೆಯನ್ನು ದ್ವೇಷಿಸುತ್ತಾನೆ.
טוב--יפיק רצון מיהוה ואיש מזמות ירשיע | 2 |
೨ಯೆಹೋವನು ಒಳ್ಳೆಯವನಿಗೆ ದಯೆತೋರಿಸುವನು, ಕುಯುಕ್ತಿಯುಳ್ಳವನನ್ನು ಕೆಟ್ಟವನೆಂದು ನಿರ್ಣಯಿಸುವನು.
לא-יכון אדם ברשע ושרש צדיקים בל-ימוט | 3 |
೩ಯಾರೂ ದುಷ್ಟತನದಿಂದ ಸ್ಥಿರನಾಗನು, ಶಿಷ್ಟನು ಯಾವಾಗಲೂ ದೃಢಮೂಲನೇ.
אשת-חיל עטרת בעלה וכרקב בעצמותיו מבישה | 4 |
೪ಗುಣವತಿಯಾದ ಸ್ತ್ರೀಯು ಪತಿಯ ತಲೆಗೆ ಕಿರೀಟ, ಮಾನ ಕಳೆಯುವವಳು ಪತಿಯ ಎಲುಬಿಗೆ ಕ್ಷಯ.
מחשבות צדיקים משפט תחבלות רשעים מרמה | 5 |
೫ಶಿಷ್ಟರ ಉದ್ದೇಶ ನ್ಯಾಯ, ದುಷ್ಟರ ಆಲೋಚನೆ ಮೋಸ.
דברי רשעים ארב-דם ופי ישרים יצילם | 6 |
೬ಕೆಟ್ಟವರ ಮಾತು ರಕ್ತಕ್ಕೆ ಹೊಂಚು, ಯಥಾರ್ಥವಂತರ ನುಡಿ ಪ್ರಾಣರಕ್ಷಣೆ.
הפוך רשעים ואינם ובית צדיקים יעמד | 7 |
೭ದುರ್ಜನರು ಕೆಡವಲ್ಪಟ್ಟು ನಿರ್ಮೂಲರಾಗುವರು, ಸಜ್ಜನರ ಮನೆಯು ಸ್ಥಿರವಾಗಿ ನಿಲ್ಲುವುದು.
לפי-שכלו יהלל-איש ונעוה-לב יהיה לבוז | 8 |
೮ಬುದ್ಧಿವಂತನನ್ನು ಅವನ ಬುದ್ಧಿಗೆ ತಕ್ಕಂತೆ ಹೊಗಳುವರು, ವಕ್ರಬುದ್ಧಿಯುಳ್ಳವನನ್ನು ತಿರಸ್ಕರಿಸುವರು.
טוב נקלה ועבד לו-- ממתכבד וחסר-לחם | 9 |
೯ಹೊಟ್ಟೆಗಿಲ್ಲದ ಡಾಂಭಿಕನಿಗಿಂತಲೂ ಸೇವಕನುಳ್ಳ ಸಾಧಾರಣ ಮನುಷ್ಯನ ಸ್ಥಿತಿಯೇ ಲೇಸು.
יודע צדיק נפש בהמתו ורחמי רשעים אכזרי | 10 |
೧೦ಶಿಷ್ಟನು ತನ್ನ ಪಶುಗಳ ಕ್ಷೇಮವನ್ನು ಲಕ್ಷಿಸುತ್ತಾನೆ, ದುಷ್ಟನ ವಾತ್ಸಲ್ಯವೋ ಕ್ರೂರತನವೇ.
עבד אדמתו ישבע-לחם ומרדף ריקים חסר-לב | 11 |
೧೧ದುಡಿದು ಹೊಲಗೇಯುವವನು ಹೊಟ್ಟೆತುಂಬಾ ಉಣ್ಣುವನು, ವ್ಯರ್ಥಕಾರ್ಯಾಸಕ್ತನು ಬುದ್ಧಿಹೀನನೇ.
חמד רשע מצוד רעים ושרש צדיקים יתן | 12 |
೧೨ಕೆಡುಕರ ಕೊಳ್ಳೆಯು ದುಷ್ಟರಿಗೆ ಇಷ್ಟ, ಆದರೆ ಶಿಷ್ಟರ ಬುಡ ಫಲದಾಯಕ.
בפשע שפתים מוקש רע ויצא מצרה צדיק | 13 |
೧೩ದುಷ್ಟನು ತನ್ನ ತುಟಿಗಳ ದೋಷದಿಂದ ಬೋನಿಗೆ ಬೀಳುವನು, ಶಿಷ್ಟನು ಇಕ್ಕಟ್ಟಿನಿಂದ ಪಾರಾಗುವನು.
מפרי פי-איש ישבע-טוב וגמול ידי-אדם ישוב (ישיב) לו | 14 |
೧೪ಬಾಯಿಯ ಫಲವಾಗಿ ಮನುಷ್ಯನು ಬೇಕಾದಷ್ಟು ಸುಖವನ್ನು ಅನುಭವಿಸುವನು, ಅವನ ಕೈಕೆಲಸದ ಫಲವು ಅವನಿಗೆ ಪ್ರಾಪ್ತವಾಗುವುದು.
דרך אויל ישר בעיניו ושמע לעצה חכם | 15 |
೧೫ಮೂರ್ಖನ ನಡತೆ ಅವನ ದೃಷ್ಟಿಗೆ ಸರಿ, ಜ್ಞಾನಿಯು ಉಚಿತಾಲೋಚನೆಯನ್ನು ಗಮನಿಸುವನು.
אויל--ביום יודע כעסו וכסה קלון ערום | 16 |
೧೬ಮೂರ್ಖನ ಸಿಟ್ಟು ತಟ್ಟನೆ ರಟ್ಟಾಗುವುದು, ಜಾಣನು ಅವಮಾನವನ್ನು ಮರೆಮಾಡುವನು.
יפיח אמונה יגיד צדק ועד שקרים מרמה | 17 |
೧೭ಸತ್ಯವನ್ನಾಡುವವನು ನ್ಯಾಯವನ್ನು ತೋರ್ಪಡಿಸುವನು, ಸುಳ್ಳುಸಾಕ್ಷಿಯು ಅಸತ್ಯವನ್ನು ನುಡಿಯುವನು.
יש בוטה כמדקרות חרב ולשון חכמים מרפא | 18 |
೧೮ಕತ್ತಿ ತಿವಿದ ಹಾಗೆ ದುಡುಕಿ ಮಾತನಾಡುವವರುಂಟು, ಜ್ಞಾನವಂತರ ಮಾತು ಸ್ವಸ್ಥತೆಯನ್ನು ತರುವುದು.
שפת-אמת תכון לעד ועד-ארגיעה לשון שקר | 19 |
೧೯ಸತ್ಯದ ತುಟಿ ಶಾಶ್ವತ, ಸುಳ್ಳಿನ ನಾಲಿಗೆ ಕ್ಷಣಿಕ.
מרמה בלב-חרשי רע וליעצי שלום שמחה | 20 |
೨೦ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ, ಹಿತೋಪದೇಶಕರ ಮನಸ್ಸಿನಲ್ಲಿ ಉಲ್ಲಾಸ.
לא-יאנה לצדיק כל-און ורשעים מלאו רע | 21 |
೨೧ಸಜ್ಜನರಿಗೆ ಯಾವ ಹಾನಿಯೂ ಸಂಭವಿಸದು, ದುರ್ಜನರಿಗೆ ಕೇಡು ತುಂಬಿ ತುಳುಕುವುದು.
תועבת יהוה שפתי-שקר ועשי אמונה רצונו | 22 |
೨೨ಸುಳ್ಳುತುಟಿ ಯೆಹೋವನಿಗೆ ಅಸಹ್ಯವಾಗಿವೆ. ಸತ್ಯವಂತರು ಆತನಿಗೆ ಆನಂದ ತರುತ್ತಾರೆ.
אדם ערום כסה דעת ולב כסילים יקרא אולת | 23 |
೨೩ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುವನು, ಮೂಢರ ಮನಸ್ಸು ಮೂರ್ಖತನವನ್ನು ಪ್ರಕಟಿಸುವುದು.
יד-חרוצים תמשול ורמיה תהיה למס | 24 |
೨೪ಚುರುಕುಗೈಯವನಿಗೆ ರಾಜ್ಯಾಧಿಕಾರ, ಮೈಗಳ್ಳನಿಗೆ ದಾಸತ್ವದ ಬದುಕು.
דאגה בלב-איש ישחנה ודבר טוב ישמחנה | 25 |
೨೫ಕಳವಳವು ಮನಸ್ಸನ್ನು ಕುಗ್ಗಿಸುವುದು, ಕನಿಕರದ ಮಾತು ಅದನ್ನು ಹಿಗ್ಗಿಸುವುದು.
יתר מרעהו צדיק ודרך רשעים תתעם | 26 |
೨೬ಸನ್ಮಾರ್ಗಿಯು ನೆರೆಯವನಿಗೆ ಮಾರ್ಗತೋರಿಸುವನು, ದುರ್ಮಾರ್ಗಿಯು ಮಾರ್ಗತಪ್ಪಿಸುವನು.
לא-יחרך רמיה צידו והון-אדם יקר חרוץ | 27 |
೨೭ಮೈಗಳ್ಳನು ಹಿಡಿದ ಬೇಟೆಯನ್ನೂ ಅನುಭವಿಸಲಾರನು, ಸನ್ಮಾರ್ಗದಲ್ಲಿ ನಡೆಯುವವನಿಗೆ ಅಮೂಲ್ಯ ಸಂಪತ್ತು ದೊರಕುವುದು.
בארח-צדקה חיים ודרך נתיבה אל-מות | 28 |
೨೮ಧರ್ಮಮಾರ್ಗದಿಂದ ಜೀವಲಾಭವು, ಆ ಮಾರ್ಗದಲ್ಲಿ ಮರಣವಿಲ್ಲ.