< מִשְׁלֵי 13 >
בן חכם מוסר אב ולץ לא-שמע גערה | 1 |
೧ಜ್ಞಾನಿಯಾದ ಮಗನು ತಂದೆಯ ನೀತಿ ಶಿಕ್ಷಣವನ್ನು ಕೇಳುವನು, ಧರ್ಮನಿಂದಕನೋ ಗದರಿಕೆಯನ್ನು ಕೇಳನು.
מפרי פי-איש יאכל טוב ונפש בגדים חמס | 2 |
೨ಬಾಯಿಯ ಫಲವಾಗಿ ಮನುಷ್ಯನು ಸುಖವನ್ನು ಅನುಭವಿಸುವನು, ಬಲಾತ್ಕಾರವೇ ದ್ರೋಹಿಗಳ ಕೋರಿಕೆ.
נצר פיו שמר נפשו פשק שפתיו מחתה-לו | 3 |
೩ಬಾಯನ್ನು ಕಾಯುವವನು ಜೀವವನ್ನು ಕಾಯುತ್ತಾನೆ, ತುಟಿಗಳನ್ನು ತೆರೆದುಬಿಡುವವನು ನಾಶವಾಗುವನು.
מתאוה ואין נפשו עצל ונפש חרצים תדשן | 4 |
೪ಸೋಮಾರಿಯ ಆಶೆಯು ವ್ಯರ್ಥ, ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.
דבר-שקר ישנא צדיק ורשע יבאיש ויחפיר | 5 |
೫ಶಿಷ್ಟನು ಮೋಸಕ್ಕೆ ಅಸಹ್ಯಪಟ್ಟು ಅದನ್ನು ಮಾಡಲಾರನು, ದುಷ್ಟನ ನಡತೆಯು ಹೇಸಿಕೆಗೂ, ನಾಚಿಕೆಗೂ ಆಸ್ಪದ.
צדקה תצר תם-דרך ורשעה תסלף חטאת | 6 |
೬ಧರ್ಮವು ನಿರ್ದೋಷಿಯನ್ನು ಕಾಯುವುದು, ಅಧರ್ಮವು ದೋಷಿಯನ್ನು ಕೆಡವಿಬಿಡುವುದು.
יש מתעשר ואין כל מתרושש והון רב | 7 |
೭ಒಬ್ಬನು ಧನವನ್ನು ಸಂಗ್ರಹಿಸಿದರೂ, ಏನೂ ಇಲ್ಲದ ದರಿದ್ರನ ಹಾಗೆ ವರ್ತಿಸುತ್ತಾನೆ, ಮತ್ತೊಬ್ಬನು ಧನವನ್ನೆಲ್ಲಾ ವೆಚ್ಚಮಾಡಿ ಬಡವನಾದರೂ, ಬಹು ಐಶ್ವರ್ಯವಂತನ ಹಾಗೆ ವರ್ತಿಸುತ್ತಾನೆ.
כפר נפש-איש עשרו ורש לא-שמע גערה | 8 |
೮ಧನವಂತನ ಪ್ರಾಣರಕ್ಷಣೆಗೆ ಅವನ ಧನವೇ ಕ್ರಯ, ಬಡವನಿಗೆ ಯಾವ ಬೆದರಿಕೆಯೂ ಇಲ್ಲ.
אור-צדיקים ישמח ונר רשעים ידעך | 9 |
೯ಶಿಷ್ಟರ ಬೆಳಕು ಬೆಳಗುವುದು, ದುಷ್ಟರ ದೀಪವು ಆರುವುದು.
רק-בזדון יתן מצה ואת-נועצים חכמה | 10 |
೧೦ಹೆಮ್ಮೆಯ ಫಲವು ಕಲಹವೇ, ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.
הון מהבל ימעט וקבץ על-יד ירבה | 11 |
೧೧ಸುಮ್ಮನೆ ಸಿಕ್ಕಿದ ಸಂಪತ್ತು ಕ್ಷಯಿಸುವುದು, ದುಡಿದು ಕೂಡಿಸಿಕೊಂಡವನಿಗೆ ಅಭಿವೃದ್ಧಿಯಾಗುವುದು.
תוחלת ממשכה מחלה-לב ועץ חיים תאוה באה | 12 |
೧೨ಕೋರಿದ್ದಕ್ಕೆ ತಡವಾದರೆ ಮನಸ್ಸು ಬಳಲುವುದು, ಕೈಗೂಡಿದ ಇಷ್ಟಾರ್ಥವು ಜೀವವೃಕ್ಷವು.
בז לדבר יחבל לו וירא מצוה הוא ישלם | 13 |
೧೩ದೇವರ ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು, ಆಜ್ಞೆಯನ್ನು ಭಯಭಕ್ತಿಯಿಂದ ಕೈಕೊಳ್ಳುವವನು ಸಫಲವನ್ನು ಹೊಂದುವನು.
תורת חכם מקור חיים-- לסור ממקשי מות | 14 |
೧೪ಜ್ಞಾನಿಯ ಬೋಧನೆ ಜೀವದ ಬುಗ್ಗೆ, ಅದನ್ನಾಲಿಸುವವನು ಮೃತ್ಯುಪಾಶದಿಂದ ತಪ್ಪಿಸಿಕೊಳ್ಳುವನು.
שכל-טוב יתן-חן ודרך בגדים איתן | 15 |
೧೫ಸುಬುದ್ಧಿಯು ದಯಾಸ್ಪದವು, ದ್ರೋಹಿಯ ಮಾರ್ಗವು ನಾಶಕರ.
כל-ערום יעשה בדעת וכסיל יפרש אולת | 16 |
೧೬ಪ್ರತಿಯೊಬ್ಬ ಜಾಣನು ತನ್ನ ಕೆಲಸವನ್ನು ತಿಳಿವಳಿಕೆಯಿಂದ ನಡೆಸುವನು, ಮೂಢನು ತನ್ನ ಮೂರ್ಖತನವನ್ನು ತೋರ್ಪಡಿಸುವನು.
מלאך רשע יפל ברע וציר אמונים מרפא | 17 |
೧೭ಕೆಟ್ಟ ದೂತನು ಕೇಡಿಗೆ ಬೀಳುವನು, ನಂಬಿಗಸ್ತನಾದ ರಾಯಭಾರಿಯು ಕ್ಷೇಮದಾಯಕನು.
ריש וקלון פורע מוסר ושמר תוכחת יכבד | 18 |
೧೮ಶಿಕ್ಷೆಯನ್ನು ತ್ಯಜಿಸುವವನಿಗೆ ಬಡತನ ಮತ್ತು ಅವಮಾನ, ಗದರಿಕೆಯನ್ನು ಗಮನಿಸುವವನಿಗೆ ಮಾನ.
תאוה נהיה תערב לנפש ותועבת כסילים סור מרע | 19 |
೧೯ಇಷ್ಟಸಿದ್ಧಿ ಮನಸ್ಸಿಗೆ ಸಿಹಿ, ಕೆಟ್ಟದ್ದನ್ನು ಬಿಡುವುದು ಮೂಢರಿಗೆ ಕಹಿ.
הלוך (הולך) את-חכמים וחכם (יחכם) ורעה כסילים ירוע | 20 |
೨೦ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು, ಜ್ಞಾನಹೀನರ ಒಡನಾಡಿ ಸಂಕಟಪಡುವನು.
חטאים תרדף רעה ואת-צדיקים ישלם-טוב | 21 |
೨೧ಅಮಂಗಳವು ಪಾಪಿಗಳನ್ನು ಹಿಂಬಾಲಿಸುವುದು, ಮಂಗಳವು ಸಜ್ಜನರಿಗೆ ಪ್ರತಿಫಲವಾಗುವುದು.
טוב--ינחיל בני-בנים וצפון לצדיק חיל חוטא | 22 |
೨೨ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯ, ಪಾಪಿಯ ಸೊತ್ತು ಸಜ್ಜನರಿಗೆ ಗಂಟು.
רב-אכל ניר ראשים ויש נספה בלא משפט | 23 |
೨೩ಬಡವರಿಗೆ ಬಂಜರು ಭೂಮಿಯೂ ಬಹು ಬೆಳೆಯನ್ನೀಯುವುದು, ಅನ್ಯಾಯದಿಂದ ಹಾಳಾದ ಸುದ್ದಿಯು ಉಂಟು.
חושך שבטו שונא בנו ואהבו שחרו מוסר | 24 |
೨೪ಬೆತ್ತ ಹಿಡಿಯದ ತಂದೆ ಮಗನಿಗೆ ಶತ್ರು, ಸುಶಿಕ್ಷಣವನ್ನು ನೀಡುವ ತಂದೆ ಮಗನಿಗೆ ಮಿತ್ರ.
צדיק--אכל לשבע נפשו ובטן רשעים תחסר | 25 |
೨೫ಶಿಷ್ಟನು ಹೊಟ್ಟೆತುಂಬಾ ಉಣ್ಣುವನು, ದುಷ್ಟನ ಹೊಟ್ಟೆ ಹಸಿದಿರುವುದು.