< מִשְׁלֵי 16 >
לאדם מערכי-לב ומיהוה מענה לשון | 1 |
ಮನುಷ್ಯನಲ್ಲಿ ತನ್ನ ಹೃದಯದ ಯೋಜನೆಗಳು, ಆದರೆ ಸರಿಯಾದ ಉತ್ತರಕೊಡುವ ಶಕ್ತಿ ಯೆಹೋವ ದೇವರಿಂದಲೇ ಬರುವವು.
כל-דרכי-איש זך בעיניו ותכן רוחות יהוה | 2 |
ಮನುಷ್ಯನ ಮಾರ್ಗಗಳೆಲ್ಲಾ ತನ್ನ ದೃಷ್ಟಿಯಲ್ಲಿ ಶುದ್ಧವಾಗಿವೆ, ಆದರೆ ಯೆಹೋವ ದೇವರು ಅವನ ಉದ್ದೇಶಗಳನ್ನು ಪರೀಕ್ಷಿಸುತ್ತಾರೆ.
גל אל-יהוה מעשיך ויכנו מחשבתיך | 3 |
ನಿನ್ನ ಕಾರ್ಯಗಳನ್ನು ಯೆಹೋವ ದೇವರಿಗೆ ಒಪ್ಪಿಸು, ಆಗ ನಿನ್ನ ಯೋಜನೆಗಳು ಸ್ಥಿರವಾಗುವುವು.
כל פעל יהוה למענהו וגם-רשע ליום רעה | 4 |
ಯೆಹೋವ ದೇವರು ಎಲ್ಲವುಗಳನ್ನು ಅದರದೇ ಆದ ಉದ್ದೇಶಗಳಿಗಾಗಿ ಮಾಡಿದ್ದಾರೆ. ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿದ್ದಾರೆ.
תועבת יהוה כל-גבה-לב יד ליד לא ינקה | 5 |
ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಯೆಹೋವ ದೇವರಿಗೆ ಅಸಹ್ಯ. ದುಷ್ಟನಿಗೆ ಶಿಕ್ಷೆಯು ತಪ್ಪುವುದಿಲ್ಲ.
בחסד ואמת יכפר עון וביראת יהוה סור מרע | 6 |
ಪ್ರೀತಿ ಮತ್ತು ಸತ್ಯತೆಗಳಿಂದ ಪಾಪಕ್ಕೆ ಪ್ರಾಯಶ್ಚಿತ್ತವಾಗುತ್ತದೆ. ಯೆಹೋವ ದೇವರ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.
ברצות יהוה דרכי-איש גם-אויביו ישלם אתו | 7 |
ಮನುಷ್ಯನ ಮಾರ್ಗಗಳು ಯೆಹೋವ ದೇವರನ್ನು ಮೆಚ್ಚಿಸಿದಾಗ, ಅವರು ಅವನ ಶತ್ರುಗಳನ್ನು ಸಹ ಅವನೊಂದಿಗೆ ಸಮಾಧಾನದಲ್ಲಿರುವಂತೆ ಮಾಡುತ್ತಾರೆ.
טוב-מעט בצדקה-- מרב תבואות בלא משפט | 8 |
ಅನ್ಯಾಯದ ದೊಡ್ಡ ಆದಾಯಕ್ಕಿಂತಲೂ ನೀತಿಯೊಂದಿಗಿರುವ ಸ್ವಲ್ಪವೇ ಉತ್ತಮ.
לב אדם יחשב דרכו ויהוה יכין צעדו | 9 |
ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ, ಆದರೆ ಯೆಹೋವ ದೇವರು ಅವನ ಹೆಜ್ಜೆಗಳನ್ನು ಸ್ಥಾಪಿಸುತ್ತಾರೆ.
קסם על-שפתי-מלך במשפט לא ימעל-פיו | 10 |
ಅರಸನ ತುಟಿಗಳಲ್ಲಿ ದೈವೋಕ್ತಿ. ನ್ಯಾಯತೀರ್ಪಿನಲ್ಲಿ ಅವನ ಬಾಯಿಯು ದೋಷ ಮಾಡುವುದಿಲ್ಲ.
פלס ומאזני משפט--ליהוה מעשהו כל-אבני-כיס | 11 |
ನ್ಯಾಯದ ತೂಕವೂ ತಕ್ಕಡಿಯೂ ಯೆಹೋವ ದೇವರದೇ. ಚೀಲದ ತೂಕಗಳು ಅವರ ಕೈಕೆಲಸವೇ.
תועבת מלכים עשות רשע כי בצדקה יכון כסא | 12 |
ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು. ಏಕೆಂದರೆ ನೀತಿಯಿಂದ ಸಿಂಹಾಸನವು ಸ್ಥಾಪಿಸಲಾಗುತ್ತದೆ.
רצון מלכים שפתי-צדק ודבר ישרים יאהב | 13 |
ನೀತಿಯ ತುಟಿಗಳಲ್ಲಿ ಅರಸರು ಆನಂದಿಸುತ್ತಾರೆ, ಯಥಾರ್ಥವಾದಿಯನ್ನು ಅವರು ಪ್ರೀತಿಸುತ್ತಾರೆ.
חמת-מלך מלאכי-מות ואיש חכם יכפרנה | 14 |
ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ, ಆದರೆ ಜ್ಞಾನಿಯು ಅದನ್ನು ಶಮನಪಡಿಸುವನು.
באור-פני-מלך חיים ורצונו כעב מלקוש | 15 |
ಪ್ರಕಾಶಮಾನವಾದ ಅರಸನ ಮುಖದಲ್ಲಿ ಜೀವ, ಅವನ ದಯೆಯು ಹಿಂಗಾರು ಮಳೆಯ ಮೇಘದಂತಿದೆ.
קנה-חכמה--מה-טוב מחרוץ וקנות בינה נבחר מכסף | 16 |
ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವುದು ಎಷ್ಟೋ ಉತ್ತಮ.
מסלת ישרים סור מרע שמר נפשו נצר דרכו | 17 |
ಯಥಾರ್ಥವಂತರ ಹೆದ್ದಾರಿಯು ಕೆಟ್ಟತನದಿಂದ ಬಹುದೂರ. ತನ್ನ ಮಾರ್ಗವನ್ನು ಕಾಯುವವನು ತನ್ನ ಪ್ರಾಣವನ್ನು ಕಾಪಾಡಿಕೊಳ್ಳುತ್ತಾನೆ.
לפני-שבר גאון ולפני כשלון גבה רוח | 18 |
ನಾಶನಕ್ಕೆ ಮುಂದಾಗಿ ಗರ್ವ ಹೋಗುತ್ತದೆ. ಬೀಳುವಿಕೆಯ ಮುಂಚೆ ಜಂಬದ ಆತ್ಮ.
טוב שפל-רוח את-עניים (ענוים) מחלק שלל את-גאים | 19 |
ಅಹಂಕಾರಿಗಳೊಂದಿಗೆ ಕೊಳ್ಳೆಯನ್ನು ಹಂಚಿಕೊಳ್ಳುವದಕ್ಕಿಂತ, ದೀನರೊಂದಿಗೆ ದೀನ ಆತ್ಮವುಳ್ಳವರಾಗಿ ಇರುವುದು ಉತ್ತಮ.
משכיל על-דבר ימצא-טוב ובוטח ביהוה אשריו | 20 |
ಕಾರ್ಯವನ್ನು ಜ್ಞಾನದಿಂದ ನಡೆಸುವವನು ಒಳ್ಳೆಯದನ್ನು ಪಡೆಯುವನು. ಯೆಹೋವ ದೇವರಲ್ಲಿ ಭರವಸೆ ಇಡುವವನು ಧನ್ಯನು.
לחכם-לב יקרא נבון ומתק שפתים יסיף לקח | 21 |
ಹೃದಯದಲ್ಲಿ ಜ್ಞಾನವಂತರು ವಿವೇಚನೆಯುಳ್ಳವರು ಎಂದು ಕರೆಯಲಾಗುವರು. ತುಟಿಗಳ ಮಾಧುರ್ಯ ಮನವೊಲಿಸುವವು.
מקור חיים שכל בעליו ומוסר אולים אולת | 22 |
ವಿವೇಕವು ವಿವೇಕಿಗಳಿಗೆ ಜೀವನದ ಬುಗ್ಗೆ, ಆದರೆ ಮೂರ್ಖತನವು ಮೂರ್ಖರಿಗೆ ಶಿಕ್ಷೆಯನ್ನು ತರುತ್ತದೆ.
לב חכם ישכיל פיהו ועל-שפתיו יסיף לקח | 23 |
ಜ್ಞಾನಿಯ ಹೃದಯವು ಅವನ ಬಾಯಿಗೆ ಜಾಣತನವನ್ನೂ, ಅವನ ತುಟಿಗಳಿಗೆ ಉಪದೇಶ ಶಕ್ತಿಯನ್ನೂ ಹೆಚ್ಚಿಸುವುದು.
צוף-דבש אמרי-נעם מתוק לנפש ומרפא לעצם | 24 |
ವಿನಯದ ಮಾತುಗಳು ಜೇನುಗೂಡು ಪ್ರಾಣಕ್ಕೆ ಮಧುರವೂ, ಎಲುಬುಗಳಿಗೆ ಕ್ಷೇಮವೂ ಆಗಿವೆ.
יש דרך ישר לפני-איש ואחריתה דרכי-מות | 25 |
ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು, ಆದರೆ ಅದರ ಅಂತ್ಯವು ಮರಣದ ಮಾರ್ಗವೇ.
נפש עמל עמלה לו כי-אכף עליו פיהו | 26 |
ದುಡಿಯುವವನಿಗೆ ಅವನ ಹಸಿವೇ ದುಡಿಯುವಂತೆ ಮಾಡುವುದು, ಅವನ ಹಸಿವು ಅವನನ್ನು ಒತ್ತಾಯ ಮಾಡುವುದು.
איש בליעל כרה רעה ועל-שפתיו (שפתו) כאש צרבת | 27 |
ಭಕ್ತಿಹೀನನು ಕೇಡಿನ ಕುಣಿ ಅಗೆಯುತ್ತಾನೆ. ಅವನ ತುಟಿಗಳು ಉರಿಯುವ ಬೆಂಕಿಯಂತಿವೆ.
איש תהפכות ישלח מדון ונרגן מפריד אלוף | 28 |
ಮೂರ್ಖನು ಜಗಳವನ್ನು ಬಿತ್ತುತ್ತಾನೆ. ಚಾಡಿಕೋರನು ಪ್ರಮುಖ ಸ್ನೇಹಿತರನ್ನು ಅಗಲಿಸುತ್ತಾನೆ.
איש חמס יפתה רעהו והוליכו בדרך לא-טוב | 29 |
ಬಲಾತ್ಕಾರಿಯು ನೆರೆಯವನನ್ನು ಮರುಳುಗೊಳಿಸಿ, ದುರ್ಮಾರ್ಗಕ್ಕೆ ಎಳೆಯುತ್ತಾನೆ.
עצה עיניו לחשב תהפכות קרץ שפתיו כלה רעה | 30 |
ವಕ್ರಬುದ್ಧಿಯ ಒಳಸಂಚುಗಳಿಗೆ ಅವನು ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುತ್ತಾನೆ. ತನ್ನ ತುಟಿಗಳನ್ನು ಕದಲಿಸುತ್ತಾ ಕೆಟ್ಟದ್ದು ಸಂಭವಿಸುವಂತೆ ಮಾಡುತ್ತಾನೆ.
עטרת תפארת שיבה בדרך צדקה תמצא | 31 |
ನರೆಗೂದಲು ಉಜ್ವಲ ಕಿರೀಟ, ಅದು ನೀತಿಯ ಜೀವಿತದಲ್ಲಿ ಒದಗುತ್ತದೆ.
טוב ארך אפים מגבור ומשל ברוחו מלכד עיר | 32 |
ದೀರ್ಘಶಾಂತನು ಶೂರರಿಗಿಂತಲೂ ಶ್ರೇಷ್ಠ, ತನ್ನ ಮನಸ್ಸನ್ನು ಆಳುವವನು, ಪಟ್ಟಣವನ್ನು ಗೆದ್ದವನಿಗಿಂತಲೂ ಉತ್ತಮನು.
בחיק יוטל את-הגורל ומיהוה כל-משפטו | 33 |
ಉಡಿಯಲ್ಲಿ ಚೀಟು ಹಾಕಬಹುದು, ಆದರೆ ಪ್ರತಿ ತೀರ್ಪು ಯೆಹೋವ ದೇವರದ್ದೇ.